Author: kannadanewsnow05

ಕೋಲಾರ : ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆ, ಪತಿಯೊಬ್ಬ ತನ್ನ ಸಹಚರರ ಜೊತೆಗೂಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಪ್ರಶಾಂತನಗರದಲ್ಲಿ ಈ ಒಂದು ಕೊಲೆ ಘಟನೆ ನಡೆದಿದೆ. ಇರ್ಫಾನ್ ಹಾಗೂ ಆತನ ಸಹಚರರಿಂದ ಅಮೀನ್ (30) ಎನ್ನುವ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಅಮೀನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವನು ಎಂದು ತಿಳಿದುಬಂದಿದೆ. ಇರ್ಫಾನ್ ಪತ್ನಿ ಹುಸ್ನಾ ಜೊತೆಗೆ ಅಮಿನ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗುತ್ತಿದೆ. ಈ ವಿಚಾರವಾಗಿ ಹುಸ್ನಾ ಅಕ್ಕ ರಾಜಿ ಪಂಚಾಯಿತಿಯ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಮಚ್ಚಿನಿಂದ ಕೊಚ್ಚಿ ಇರ್ಫಾನ್ ಮತ್ತು ಸಹಚರರು ಅಮೀನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇಲಿನ ಆದೇಶ ನೀಡಿದೆ. ವಿಚಾರಣೆ ವೇಳೆ ಹರೀಶ್ ಪೂಂಜಾ ಪರ ವಕೀಲರು ವಾದ ಮಂಡಿಸಿ, ಇಡೀ ದೂರನ್ನು ಓದಿದರೆ ದಾಖಲಿಸಿರುವ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ. ಧರ್ಮಗಳ ನಡುವೆ ದ್ವೇಷ ಹರಡುವಂಥ ಕೆಲಸವನ್ನು ಪೂಂಜಾ ಅವರು ಮಾಡಿಲ್ಲ. ಸರ್ಕಾರದ ಪರ ವಕೀಲರು ಆರೋಪ ಪಟ್ಟಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆರೋಪ ಪಟ್ಟಿ ವಜಾಗೊಳಿಸಲು ಮನವಿ ಮಾಡಿದರು.

Read More

ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಇದೀಗ ಪೊಲೀಸರು ಮನುವನ್ನು ಅರೆಸ್ಟ್ ಮಾಡಿದ್ದಾರೆ.

Read More

ಹಾಸನ : ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಚಿಕ್ಕ ಮಕ್ಕಳೂ ಸಹ ನಿಂತಲೇ ಕೂತಲ್ಲೇ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ. ಇದೀಗ ಹಾಸನದಲ್ಲಿ ಬಾತ್ರೂಂನಲ್ಲಿ ಇದ್ದಾಗಲೇ ಯುವತಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ನಡೆದಿದೆ. ಹೌದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ಚೆಲ್ಲಿದ್ದಳು.

Read More

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಬಳಿ ಮತ್ತೆ ಭದ್ರತಾ ಲೋಪ ಕಂಡು ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಬಳಿ ಯುವಕನೊಬ್ಬ ಸಲ್ಮಾನ್ ಖಾನ್ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಹೌದು ಯುವಕನೊಬ್ಬ ಸಲ್ಮಾನ್ ಖಾನ್ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಮೇ 26 ಸಂಜೆ 7.15 ರ ಸಮಯದಲ್ಲಿ ಯುವಕ ಅಕ್ರಮವಾಗಿ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. 23 ವರ್ಷದ ಜಿತೇಂದ್ರ ಕುಮಾರ್ ಸಿಂಗ್ ನನ್ನು ಇದೀಗ ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಭೇಟಿ ಮಾಡುವ ಉದ್ದೇಶದಿಂದ ಬಂದಿದ್ದೇನೆ ಎಂದು ಬಂಧಿತ ಜಿತೇಂದ್ರ ಕುಮಾರ್ ಸಿಂಗ್ ಈ ವೇಳೆ ಹೇಳಿದ್ದಾನೆ. ಸಲ್ಮಾನ್ ಖಾನ್ ಮನೆ ಆವರಣದಲ್ಲಿ ಇದೀಗ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.

Read More

ಬೆಂಗಳೂರು : ಇಂದಿನ ದಿನಮಾನಗಳಲ್ಲಿ ಯುವಕರಲ್ಲೇ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಸವೇಶ್ವರನಗರದಲ್ಲಿ ಕೆ.ಆರ್.ಅಭಿಷೇಕ್ ಎಂಬ ಯುವಕ ಸಾವನಪ್ಪಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನವ ಎಂದು ತಿಳಿದುಬಂದಿದೆ. ಅನಸೂಯ ರಾಮಕೃಷ್ಣ ದಂಪತಿ ಪುತ್ರ ಕೆ.ಆರ್ ಅಭಿಷೇಕ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲೂಕಿನ ಕಾಡನೂರಿನ ನಿವಾಸಿ ಎಂದು ತಿಳಿದುಬಂದಿದೆ. ಅಭಿಷೇಕ್, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಸವೇಶ್ವರ ನಗರದಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಅಭಿಷೇಕ್ ಸಾವನ್ನಪ್ಪಿದ್ದಾನೆ. ತಕ್ಷಣ ಅಭಿಷೇಕ್ ನನ್ನು ಸ್ಥಳಿಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಭಿಷೇಕ್ ಮೃತಪಟ್ಟಿದ್ದಾನೆ.

Read More

ಬೆಂಗಳೂರು : ನಟಿ ತಮನ್ನಾ ಭಾಟಿಯ ಅವರು ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಸುಮಾರು 2 ವರ್ಷದ 2 ದಿನಗಳ ಮಟ್ಟಿಗೆ ಅವರನ್ನು ನೇಮಿಸಲಾಗಿದ್ದು, ಬರೋಬ್ಬರಿ 6.20 ಕೋಟಿ ಸಹಾಯಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ. ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(2)໖ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಿಸ ದರದಲ್ಲಿ ಸಂಗ್ರಹಿಸುವುದನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಸರ್ಕಾರ ಸೂಚನೆ ಹೊರಡಿಸಿದೆ. ಮುಂದಿನ ಎರಡು ವರ್ಷಗಳ ಮೈಸೂರು ಸ್ಯಾಂಡಲ್ ಸೋಪ್ ತಮನ್ನಾ ಫೋಟೋ ಇರಲಿದೆ. ಮೈಸೂರು ಸ್ಯಾಂಡಲ್ ಸೋಪ್ ಅನ್ನು 1916 ರಲ್ಲಿ ಮೈಸೂರಿನ ರಾಜ ಕೃಷ್ಣ ರಾಜ ಒಡೆಯರ್ IV ಬೆಂಗಳೂರಿನಲ್ಲಿ ಸರ್ಕಾರಿ ಸೋಪ್…

Read More

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳಾದ ಅಬ್ದುಲ್ ಹುಲಿ ಕಂಪ್ಯೂಟರ್ ಆಪರೇಟರ್ ಸ್ವಾಮಿಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆ ಎನ್ನುವವರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಬ್ದುಲ್ ವಲಿ ಮತ್ತು ಸೌಮ್ಯ ಶಕುಂತಲಾ ಬಳಿ 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 15000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ವೇಳೆ ಸೌಮ್ಯ ಬಡಿಗೇರ್ ಅಸ್ವಸ್ಥರಾಗಿದ್ದಾರೆ. ತಕ್ಷಣ ಕಚೇರಿಗೆ ವೈದ್ಯರೇನ್ನು ಕರೆಸಿ ಸೌಮ್ಯ ಅವರಿಗೆ ಚಿಕಿತ್ಸೆ ಕೊಡಿಸಲಾಗಿತು. ಲೋಕಾಯುಕ್ತ ಪೊಲೀಸರು ಸದ್ಯಕ್ಕೆ ಅಬ್ದುಲ್ ವಲಿ ಮತ್ತು ಸೌಮ್ಯ ಬಡಿಗೇರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯು ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಲಾಯಿತು. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಜಾತಿಗಣತಿ ವಿಚಾರವನ್ನು ಪ್ರಸ್ತಾಪಿಸಲಾಯಿತು. ಈ ವೇಳೆ ಕೆಲವು ಸಚಿವರ ಅಭಿಪ್ರಾಯ ಸಂಗ್ರಹಿಸಿದ ಕುರಿತಂತೆ ಮತ್ತೆ ಈ ವಿಷಯವನ್ನು ಮುಂದೂಡಲಾಯಿತು. ಹೌದು ಇಂದು ನಡೆದ ಕ್ಯಾಬಿನೆಟ್ ನಲ್ಲಿ ಜಾತಿಗಣತಿ ವಿಚಾರ ನಿರ್ಧಾರವಾಗಿಲ್ಲ. ಜಾತಿಗಣತಿ ಜಾರಿ ವಿಷಯವನ್ನು ಇದೀಗ ಸಂಪುಟ ಸಭೆ ಮತ್ತೆ ಮುಂದೂಡಿದೆ. ಸಂಪುಟ ಸಭೆಯಲ್ಲಿ ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಚಿವರ ಅಭಿಪ್ರಾಯ ಮಂಡನೆ ಬಳಿಕ ಜಾತಿಗಣತಿ ಜಾರಿ ವಿಷಯ ಮುಂದೂಡಿಕೆ ಮಾಡಲಾಯಿತು.

Read More

ಕೊಪ್ಪಳ : ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಹಾಡಹಗಲೇ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸರು ಆರೋಪಿ ಪ್ರಕಾಶ್ ರಾಮಣ್ಣ ಬೋವಿ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಗಲಲ್ಲೆ ಕಾಮುಕನೊಬ್ಬ ಮಾನಸಿಕ ಅಸ್ವಸ್ಥೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ. ಸದ್ಯ ಪ್ರಕಾಶ ರಾಮಣ್ಣ ಭೋವಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಘಟನೆ ಹಿನ್ನೆಲೆ? ಬಸ್ ನಿಲ್ದಾಣದ ರಕ್ಷಣಾ ಗೋಡೆ ಒಳಗೆ ನಿರ್ಮಾಣವಾಗುತ್ತಿರುವ ಹೈಟೆಕ್ ಶೌಚಾಲಯಗಳ ಹಿಂಭಾಗದಲ್ಲಿ ಪ್ರಕಾಶ ಭೋವಿ 30ರಿಂದ35 ವರ್ಷದ ಮಾನಸಿಕ ಅಸ್ವಸ್ಥೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಟಂ ಟಂ ನಲ್ಲಿ ಹೋಗುತ್ತಿರುವ ಯುವಕರು ಇದನ್ನು ವಿಡಿಯೋ ತೆಗೆಯಲು ಮುಂದಾಗಿದ್ದಾಗ ಅಲ್ಲಿಂದ ಮೊಬೈಲ್‌ನಲ್ಲಿ ಮಾತನಾಡುತ್ತಾ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದರಿಂದ ಎಚ್ಚೇತ್ತ ಪೊಲೀಸರು…

Read More