Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಒಂದೆಡೆ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇನ್ನೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿತ್ತು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಮಾಜಿಕ ಜಾಲತಾಣ ಟ್ವೀಟ್ ನಲ್ಲಿ, ನಿಮ್ಮ ಸಾಧನಾ ಸಮಾವೇಶ ಮಾಡಿದ್ದು ಸಾಕು, ನಿಮ್ಮ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ನಾಟಕವು ಸಾಕು. ಮೊದಲು ರಾಜ್ಯದ ಉದ್ದಗಲಕ್ಕೂ ಭಾರಿ ಮಳೆ ಸುರಿಯುತ್ತಿದ್ದು, ಹಲವಾರು ಅವಾಂತರ ಸೃಷ್ಟಿಯಾಗಿವೆ. ಮೊದಲು ಮಳೆಯ ಅನಾಹುತದ ಕಡೆ ಗಮನ ಕೊಡಿ ಎಂದು ಕಿಡಿಕಾರಿದ್ದಾರೆ. ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ. ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ.…
ಕೊಪ್ಪಳ : ರಾಜ್ಯದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೆ ಇವೆ. ಇದೀಗ ಹಾಡಹಗಲೇ ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಕ್ಷೇತ್ರದಲ್ಲಿ ಇಂತಹ ನೀತಿ ಕೃತ್ಯ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಬಸ್ ನಿಲ್ದಾಣದ ಬಳಿಗಿದ್ದ ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಎತ್ತಿಸಿಯತ್ನಿಸಿದ್ದಾನೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಮಾನಸಿಕ ಅಶ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ ಯತ್ನಿಸಿದ ದೃಶ್ಯ ಮೊಬೈಲ್ ನಲ್ಲಿ ಸ್ಥಳೀಯರು ಚಿತ್ರೀಕರಿಸಿದ್ದಾರೆ. ಶಿವರಾಜ್ ತಂಗಡಗಿ ಪ್ರತಿನಿಧಿಸುವ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಒಂದು ಕೃತ್ಯ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ಈ ಒಂದು ಅಭದ್ರತೆ ಕಾಡುತ್ತಿದೆ. ಕನಕಗಿರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ವಾ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ವಿರುದ್ಧ…
ಕಲಬುರ್ಗಿ : ರಾಜ್ಯದಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದುವರೆಗೂ ರಾಜ್ಯದಲ್ಲಿ ಮಹಾಮಳೆಗೆ ಒಟ್ಟು ಐದು ಜನರು ಬಲಿಯಾಗಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಸಿಡಿಲು ಬಡಿದು ರೈತ ಸಾವನಪ್ಪಿದ್ದಾರೆ. ಹೌದು ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ರೈತ ನಬಿಲಾಲ್ ಚೌದರಿ ಇದೀಗ ಸಾವನ್ನಪ್ಪಿದ್ದಾರೆ. ಅಫ್ಜಲ್ ಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ರಾಜ್ಯದಲ್ಲಿ ಇದುವರೆಗೂ ಮಹಾಮಳೆಗೆ ಬಲಿಯಾದವರ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ.
ಮಂಗಳೂರು : ಮಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಇದೀಗ ಮಂಗಳೂರಿನ ಬಜೆಪಯ ಆದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಮಂಗಳೂರು ಏರ್ಪೋರ್ಟ್ ಭಾಗದಿಂದ ಮಣ್ಣು ಮತ್ತು ನೀರು ಹರಿದು ಬಂದಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಹೌದು ಮಳೆಯಿಂದ ಬಜಪೆ ಬಳಿ ಆದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದ್ದು, ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ ಆದ್ಯಪಾಡಿಯಲಿ ಏರ್ಪೋರ್ಟ್ ಭಾಗದಿಂದ ಮಣ್ಣು ಮತ್ತು ನೀರು ಹರಿದು ಬಂದಿದೆ. ಯಾವ ಪ್ರಮಾಣದಲ್ಲಿ ನೀರು ಮಣ್ಣು ಹರಿದು ಬಂದಿದೆ ಎಂದರೆ, ಉಮಾನಾಥ ಸಾಲ್ಯಾನ್ ಎಂಬುವವರ ಮನೆ ಆವರಣ ಸಂಪೂರ್ಣವಾಗಿ ಕೆಸರಿನಲ್ಲಿ ಮುಳುಗಿದೆ. ಮನೆಯ ಮುಂದಿನ ಅಂಗಳದಲ್ಲಿ ಸಂಪೂರ್ಣವಾಗಿ ಕೆಸರು ತುಂಬಿಕೊಂಡಿದೆ. ಈ ಕುರಿತು ಮನೆಯ ಮಾಲೀಕ ಉಮಾನಾಥ ಅವರು ಪ್ರತಿಕ್ರಿಯೆ ನೀಡಿ, ಇತರ ಮಣ್ಣು ನೀರು ಬರುವುದು ಮೊದಲೇನಲ್ಲ, ಕಳೆದ ವರ್ಷದಲ್ಲಿ ಕೂಡ ಇದೇ ರೀತಿ ಮಣ್ಣು ನೀರು ಬಂದು ಸಮಸ್ಯೆ ಉಂಟಾಗಿತ್ತು. ಏರ್ಪೋರ್ಟ್ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದರು ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಮಳೆ ಬಂದಾಗಲೂ ನಮಗೆ ಈ…
ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿತ್ತು. ಈ ಒಂದು ಸಾಧನ ಸಮಾವೇಶದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ,ಭಾರತ ಪಾಕಿಸ್ತಾನದ ನಡುವೆ ಸಣ್ಣಪುಟ್ಟ ಯುದ್ಧಗಳು ನಡೆದಿವೆ ಎಂದು ಹೇಳಿಕೆ ನೀಡಿದರು. ಭಾರತ ಪಾಕಿಸ್ತಾನದ ನಡುವೆ ಸಣ್ಣಪುಟ್ಟ ಯುದ್ಧಗಳು ನಡೆದಿವೆ. ನಮ್ಮ ಪಾಕ್ ವಿರುದ್ಧ ನಾವೇನು ಘರ್ಷಣೆ ಮಾಡ್ತಿದ್ದೇವೆ. ಪಾಕಿಸ್ತಾನ ಕೆಲಸ ಭಾರತದ ಮೇಲೆ ಗೂಬೆ ಕೂರಿಸುವುದು. ಚೀನಾ ಬೆಂಬಲ ಪಡೆದು ಭಾರತದ ಮೇಲೆ ಪಾಕಿಸ್ತಾನ ದಾಳಿ ನಡೆಸುತ್ತಿದೆ. ಇದನ್ನು ಎಂದು ಕೂಡ ನಮ್ಮ ದೇಶ ಸಹಿಸುವುದಿಲ್ಲ ಎಂದು ಹೇಳಿದರು. ಈ ಘಟನೆ ಬಳಿಕ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಹೇಳಿದ್ದೆ. ನಮ್ಮ ವಿರುದ್ಧ ಬಂದರೆ ಒಕ್ಕಟ್ಟಾಗಿ ಹೋರಾಟ ಮಾಡೋಣ. ನಮಗೆ ದೇಶ ಮುಖ್ಯ ಜಾತಿ ಧರ್ಮ ಆಮೇಲೆ. ಆದರೆ ಈಗ ಮೋದಿ ಮೊದಲು ದೇಶ ಆಮೇಲೆ ಆಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರ…
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಅರೆಸ್ಟ್ ಮಾಡಿದ್ದಾರೆ. ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯಗೌಡ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಐಶ್ವರ್ಯ ಗೌಡ ಅರ್ಜಿಯ ವಿಚಾರಣೆ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ಇಂದು ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯ ಗೌಡ ಅರ್ಜಿ ಸಲ್ಲಿಸಿದ್ದು, ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ಅರೆಸ್ಟ್ ಆಗಿದ್ದಾರೆ. ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ಐಶ್ವರ್ಯ ಗೌಡ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು. ವಂಚನೆ ಸೇರಿದಂತೆ ಹಲವು ಆರೋಪಗಳನ್ನು ಐಶ್ವರ್ಯ ಕೂಡ ಎದುರಿಸುತ್ತಿದ್ದಾಳೆ. ಈ ಸಂದರ್ಭದಲ್ಲಿ ಇಡಿ ಪರ ವಕೀಲರಿಂದ ವಾದ ಮಂಡನೆಗೆ ಕಾಲಾವಕಾಶ ಕೋರಲಾಯಿತು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮೇ 22ಕ್ಕೆ ಮುಂದೂಡಿತು.
ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಅಂತೂ ವರುಣ ಅಬ್ಬರಿಸುತ್ತಿದ್ದು ರಸ್ತೆಯಲ್ಲಿ ನೀರು ನಿಂತು ಸಂಪೂರ್ಣವಾಗಿ ನದಿಯಂತೆ ಬದಲಾಗಿವೆ. ಇದೀಗ ಹವಾಮಾನ ಇಲಾಖೆಯು ಮುಂದಿನ ಏಳು ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಕುರಿತು @karnatakaSNDMC ಟ್ವೀಟ್ ಮಾಡಿದ್ದು, ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಗಳು ನೀಡಿದ್ದು, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ ರೆಡ್ಅಲರ್ಟ್ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. https://twitter.com/KarnatakaSNDMC/status/1924656493439418801?t=fFvL6AkxcaOBYwPNXuubug&s=19
ಬೆಂಗಳೂರು : ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವ ದಹಿಸಿರುವ ಘಟನೆಯೊಂದು ಕಡುಬೀಸನಹಳ್ಳಿಯ ಕರಿಯಮ್ಮನ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಇಜುಲ್ ಹಕ್ (25) ಎಂದು ಗುರುತಿಸಲಾಗಿದೆ.ಪ್ರಕರಣ ಸಂಬಂಧ ಡೆಲಿವರಿ ಏಜೆಂಟ್ ಆಗಿದ್ದ ಮುನಾವರ್ ಅಲಿ (22) ಎಂಬಾತನನ್ನು ಪೊಲೀಸರು ಬಂದನಕ್ಕೊಳಪಡಿಸಿದ್ದಾರೆ. ಮೃತ ಇಜುಲ್ ಹಕ್ ಹಾಗೂ ಆರೋಪಿ ಅಲಿ ಇಬ್ಬರೂ ಅಸ್ಸಾಂ ಮೂಲದವರಾಗಿದ್ದಾರೆ. ಮೃತ ವ್ಯಕ್ತಿ ವಿವಾಹಿತನಾಗಿದ್ದು, 6 ತಿಂಗಳ ಹೆಣ್ಣು ಮಗುವಿದೆ. ಪತ್ನಿ ಹಾಗೂ ಮಗು ಅಸ್ಸಾಂನಲ್ಲೇ ವಾಸವಿದ್ದು, ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ. ಸಲಾವುದ್ದೀನ್ ಎಂಬುವವರ ಶೆಡ್ ನಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ. ಆರೋಪಿ ಅಲಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಹಕ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಿಸಿದ್ದಾನೆ. ಇದರಂತೆ ಕಳೆದ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಹಕ್ ಅವರ ಇಬ್ಬರು ಸ್ನೇಹಿತರಾದ ಶಹನೂರ್ ರೆಹಮಾನ್ ಮತ್ತು ಫರೀದುಲ್ ಇಸ್ಲಾಂ ಬೆಂಬಲಕ್ಕೆ ಬಂದಿದ್ದು, ಈ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾಟ್೯ನಲ್ಲಿ ಮೂರು ಜನ ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು ಎಂದಿದ್ದಳು. ಈ ಪ್ರಕರಣದಲ್ಲಿ ಸಾಕೀಬ್ ಎಂಬಾತನನ್ನು ಒಳಗೊಂಡಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಸ್ನೇಹಿತನಾಗಿದ್ದ ಒಬ್ಬ ಅಪ್ರಾಪ್ತ ಆರೋಪಿಯು ಆಕೆಯನ್ನು ರೆಸಾರ್ಟ್ಗೆ ಕರೆತಂದಿದ್ದಾನೆ. ಸಾಕೀಬ್ ಈ ಮೊದಲೇ ರೆಸಾರ್ಟ್ನಲ್ಲಿ ರೂಮ್ ಬುಕ್ ಮಾಡಿದ್ದರು. ಆಕೆಯನ್ನು ರೆಸಾರ್ಟ್ಗೆ ಕರೆತಂದ ನಂತರ, ಮೂವರು ಆರೋಪಿಗಳು ಸಾಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಮಗನೊಬ್ಬ ಶಾಮಿಲಾಗಿದ್ದಾನೆ. ಅವನನ್ನು ಹೊರತು ಪಡಿಸಿ ಇಬ್ಬರು ಬಾಲಕರನ್ನು ಪೊಲೀಸರು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಕೇಜಿ ಹಳ್ಳಿ ಸಬ್ ಇನ್ಸ್ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಜಿಹಳ್ಳಿ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಪತ್ನಿ ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಮನೆಯಲ್ಲಿ ನಾಗರಾಜ್ ಪತ್ನಿ ಶಾಲಿನಿ ಅವರು ನೇಣಿಗೆ ಶರಣಾಗಿದ್ದಾರೆ. ನಾಗರಾಜ್ ಅವರನ್ನು ಶಾಲಿನಿ ಎರಡನೇ ಮದುವೆಯಾಗಿದ್ದರು. ಘಟನೆ ಕುರಿತು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಶಾಲಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.














