Author: kannadanewsnow05

ಹಾವೇರಿ : ಮೊಬೈಲ್ ಚಾರ್ಜ್ ಹಾಕುವ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ಕೆಲವೊಂದು ಬಾರಿ ನಮ್ಮ ನಿರ್ಲಕ್ಷತನದಿಂದ ನಮ್ಮ ಪ್ರಾಣಕ್ಕೆ ನಾವೇ ಕುತ್ತು ತಂದುಕೊಳ್ಳುತ್ತೇವೆ. ಇದೀಗ ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮೊಬೈಲ್ ಕೈಯಲ್ಲಿರುವಾಗಲೇ ಬ್ಲಾಸ್ಟ್ ಆಗಿದ್ದು ಸದ್ಯ ಯುವಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಇಬ್ಬರು ಯುವಕರು ಮೊಬೈಲ್​ ಹಿಡಿದುಕೊಂಡು ನೋಡುತ್ತಿದ್ದಾಗ ಕೈಯಲ್ಲಿಯೇ ಬ್ಲಾಸ್ಟ್ ಆಗಿದ್ದು, ಸ್ವಲ್ಪದರಲ್ಲೇ ಯುವಕರು ಅಪಾಯದಿಂದ ಪಾರಾಗಿದ್ದಾರೆ.ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಗಾಯತ್ರಿ ಮೊಬೈಲ್ ಶಾಪ್ ಮುಂದೆ ಈ ಘಟನೆ ನಡೆದಿದೆ. ಮೊಬೈಲ್ ರಿಪೇರಿ ಸಂದರ್ಭದಲ್ಲಿ ಅದನ್ನು ಕೈಯಲ್ಲಿ ಹಿಡಿದುಕೊಂಡು ಇಬ್ಬರು ಯುವಕರು ಪರಿಶೀಲಿಸುತ್ತಿದ್ದರು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕೈಯಲ್ಲೇ ಪಟಾಕಿಯಂತೆ ಮೊಬೈಲ್ ಸಿಡಿದಿದೆ. ಇನ್ನು ಬ್ಲಾಸ್ಟ್ ಆದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆಯುವ ಲಕ್ಷಣ ಕಂಡುಬರುತ್ತಿದೆ. ಹಾಗಾಗಿ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ. ಮುಖ್ಯವಾಗಿ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಮುಂದಿನ ಮೂರ್ನಾಲ್ಕು ದಿನ ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ತಲುಪುಲಿದೆ. ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಅತಿ ಹೆಚ್ಚು ವರ್ಷಧಾರೆ ಸುರಿಯಲಿದೆ. ಹಾಗಾಗಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ರೆಡ್ ಅಲರ್ಟ್ ಕೊಡಲಾಗಿದೆ. ಹಾಗೆಯೇ, ನಾಳೆ ಆರೆಂಜ್ ಮತ್ತು ತದನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್​, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.ಉಳಿದಂತೆ,…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಜನರು ಆಶೀರ್ವದಿಸಿ ಅಧಿಕಾರ ನೀಡಿದ್ದಾರೆ ಆದರೆ ಸರ್ಕಾರ ತೆಗೆಯಲು ಹುನ್ನಾರ ನಡೆಯುತ್ತಿದೆ. ಆದರೆ ಇದು ಯಾವ ಕಾರಣಕ್ಕು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಾನೂನು, ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಗೌರವಾನ್ವಿತ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ಇದೆ ಎಂದರು. ಬಹುಮತದಿಂದ ಆಯ್ಕೆಯಾದ ಸಿಎಂಗೆ ತೊಂದರೆ ಕೊಡಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುತ್ತಿದೆ. ರಾಜ್ಯಪಾಲರ ಪತ್ರಕ್ಕೆ ಸಿಎಸ್ ಉತ್ತರಿಸಿದ್ದಾರೆ. ಸಿದ್ಧರಾಮಯ್ಯ ಕೂಡ ಗೌರವ ಕೊಟ್ಟಿದ್ದಾರೆ ಎಂದರು. ಪ್ರಜಾಪ್ರಭುತ್ವಕ್ಕೆ ಮಾರಕ ಸ್ಥಿತಿ ಬಂದು ಒದಗಿದೆ. ಸಂವಿಧಾನದ ಕಗ್ಗೊಲೆ ಆಗಿದೆ. ರಾಜ್ಯಪಾಲರು ಸಿಎಸ್‌ಗೆ ಪತ್ರ ಬರೆಯುತ್ತಾರೆ.ಶಾಸಕಾಂಗ ಸಭೆ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮಾಡಿದೆ. ಕಾನೂನಿಗೆ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ರಾಜ್ಯ ಪಾಲರನ್ನು ಕೇಂದ್ರ ಸರ್ಕಾರ ಬಳಸಿಕೊಂಡಿದೆ.…

Read More

ಬೆಂಗಳೂರು : ಮೈಸೂರು ಜಿಲ್ಲೆಯ ಕೆಆರ್​ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು. ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಎಸ್‌ಐಟಿ ಮತ್ತು ಅರ್ಜಿದಾರರ ಪರ ವಾದ ಆಲಿಸಿ ತೀರ್ಪು ಕಾಯ್ದಿರಿಸಿತು. ಈಗಾಗಲೇ ಕೆಆರ್​ ನಗರ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣಗೆ ಜೈಲು ಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್‌ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದಾರೆ. ಪ್ರಕರಣದ ಹಿನ್ನೆಲೆ? ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಂತ್ರಸ್ತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಲ್ಲದೇ, ಅತ್ಯಾಚಾರವೆಸಗಿರುವ ಆರೋಪವಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆಯನ್ನು ಅಪಹರಣ ಮಾಡಲಾಗಿತ್ತು. ಆ ಮೂಲಕ ಸಂತ್ರಸ್ತೆ ಪ್ರಕರಣ ಸಂಬಂಧ…

Read More

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ನಿರ್ಧರಿಸಿವೆ. ಎಚ್.ಡಿ ಕುಮಾರಸ್ವಾಮಿ ಪ್ರೀತಂಗೌಡ ಇದ್ದರೆ ನಾನು ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಈ ವಿಷಯವಾಗಿ ಇಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ನಾಯಕರು ನಿನ್ನೆ ಕರೆ ಮಾಡಿ ಮಾತನಾಡಿದ್ದಾರೆ. ಪಾದಯಾತ್ರೆ ಅವಶ್ಯಕತೆ ಇದೆ ಅಂತ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 3000 ಕೋಟಿ ಹಗರಣ ನಡೆದಿದೆ. ದರೋಡೆ ಮಾಡಿರುವ ಸರ್ಕಾರದ ವಿರುದ್ಧ ಪಾದಯಾತ್ರೆ ಒಳ್ಳೆಯದು ಸಂಸತ್ ನಲ್ಲೂ ಈ ಬಗ್ಗೆ ಚರ್ಚೆಯಾಗಿ ದೇಶಾದ್ಯಂತ ಸುದ್ದಿಯಾಗಿದೆ.ಜೆಡಿಎಸ್ ನಾಯಕರಿಗೆ ಮನವಿ ಮಾಡುತ್ತೇನೆ ಇದಕ್ಕೆ ಲಾಜಿಕಲ್ ಎಂಡ್ ಕೊಡಬೇಕಿದೆ ಪಾದಯಾತ್ರೆಗೆ ಬನ್ನಿ ಅವರ ಜೊತೆ ಮಾತಾಡಿ ಪಾದಯಾತ್ರೆಗೆ ಬರುವಂತೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು. ಪ್ರೀತಂಗೌಡ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು ನೋಡಿದ್ದೇನೆ.…

Read More

ಬೆಂಗಳೂರು : ಮುಡಾದಲ್ಲಿ ನಡೆದಿರುವಂತಹ ಅಕ್ರಮ ಸೈಟ್ ಹಂಚಿಕೆ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದಕ್ಕೆ ಕನ್ನಡ ಹೋರಾಟಗಾರ ವಾಟಾಳ ನಾಗರಾಜ್ ಕಿಡಿ ಕಾರಿದ್ದು, ರಾಜ್ಯಪಾಲರು ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರ ಬದಲಿಸಿದಿದ್ದರೆ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಇಂತಹ ನಡೆ ಸರಿಯಲ್ಲ. ಜೈಲಿಗೆ ಹೋಗಬೇಕಾದವರು ಎಲಾ ಪಕ್ಷಗಳಲ್ಲಿಯೂ ಇದ್ದಾರೆ. ಆಡಳಿತ ಪಕ್ಷದಲ್ಲಿ ಮಾತ್ರವಲ್ಲ, ವಿಪಕ್ಷಗಳಲ್ಲಿಯೂ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ನೋಟೀಸ್ ನೀಡುವ ಮೂಲಕ ರಾಜಕೀಯವಾಗಿ ನಡೆದುಕೊಂಡಿದ್ದಾರೆ.ಹಾಗಾಗಿ ರಾಜ್ಯಪಾಲರು ತಮ್ಮ ನಡೆಯನ್ನು ಇನ್ನೆರಡು ದಿನಗಳೊಳಗಾಗಿ ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು : ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಾತಿಯಿಂದ ಬಿಎಸ್​ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ. ಜೊತೆಗೆ ಯಡಿಯೂರಪ್ಪರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಹೌದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಸಿಐಡಿ ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಸಲ್ಲಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಮಾತ್ರವಲ್ಲದೇ ಸಾಕ್ಷ್ಯ ನಾಶದ ಆರೋಪದ ಮೇಲೆ ವೈ.ಎಂ.ಅರುಣ್, ಎಂ. ರುದ್ರೇಶ್, ಜಿ.ಮರಿಸ್ವಾಮಿ ವಿರುದ್ಧವೂ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಆ.1ರಂದು ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಇತ್ತೀಚೆಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಜಾಮೀನು ವಿಸ್ತರಣೆ ಕೂಡ ಮಾಡಲಾಗಿತ್ತು. ಹೀಗಾಗಿ ಬಿಎಸ್​ವೈ ಬಂಧನ ಭೀತಿಯಿಂದ ಪಾರಾಗಿದ್ದರು.ಇದೀಗ…

Read More

ಬೆಂಗಳೂರು : ರಸ್ತೆ ದಾಟುತ್ತಿದ್ದ ವೇಳೆ  ಕ್ಯಾಂಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಕಲಬುರ್ಗಿ ಮೂಲದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಆನೇಕಲ್ ತಾಲೂಕಿನ ಮರಸೂರು ಬಳಿ ನಡೆದಿದೆ. ಕಲಬುರಗಿ ಮೂಲದ ಆಕಾಶ್, ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದ ತಂದೆ ನೋಡಲು ಬಂದಿದ್ದ. ಅದರಂತೆ ತಂದೆ ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಹೌದು ಆನೇಕಲ್ ತಾಲೂಕಿನ ಮರಸೂರು ಬಳಿ ಕ್ಯಾಂಟರ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇನ್ನು ಡಿಕ್ಕಿ ಹೊಡೆದು ಕ್ಯಾಂಟರ್ ಚಾಲಕ ಪರಾರಿ ಆಗಿದ್ದು, ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಬಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಸ್ಕೇಪ್​ ಆದ ಚಾಲಕನಿಗೆ ಹುಡುಕಾಟ ನಡೆಸಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 14ರ ವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ. ಇನ್ನು ನನಗೆ ಜೈಲು ಊಟ ಸೇರುತ್ತಿಲ್ಲ ಇದರಿಂದ ವಾಂತಿ, ಭೇದಿ ಅತಿಸಾರ ಆಗುತ್ತಿದೆ ಎಂದು ನಟ ದರ್ಶನ ಅವರು ಇತ್ತೀಚಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟ ಬಟ್ಟೆ ಹಾಗೂ ಇತರೆ ವಸ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅವರ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರ ನಡೆಸಿದ ಹೈಕೋರ್ಟ್…

Read More

ಬೆಂಗಳೂರು : ವಾಹನಗಳಿಗೆ HSRP ನಂಬರ್ ಪ್ಲೇಟ್ ಬುಕಿಂಗ್ ಮಾಡುವಾಗ ಜನರು ಇದೀಗ ಬಹಳ ಎಚ್ಚರಿಕೆ ಇಂದ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಬೆಂಗಳೂರಲ್ಲಿ ವ್ಯಕ್ತಿಯೊಬ್ಬರು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬುಕಿಂಗ್ ಮಾಡಿದ ಕೂಡಲೇ ಬರೋಬ್ಬರಿ 95 ಸಾವಿರ ರೂ. ಕಳೆದುಕೊಂಡಿದ್ದಾರೆ. ಹೌದು, HSRP ನಂಬರ್ ಪ್ಲೇಟ್ ಹೆಸರಲ್ಲಿ ಸೈಬರ್ ವಂಚಕ ಜಾಲ ಸಕ್ರಿಯವಾಗಿದೆ. ವೆಬ್‌ಸೈಟ್ ಲಿಂಕ್ ಕ್ಲಿಕ್ ಮಾಡ್ತಿದ್ದಂತೆ ನಿಮ್ಮ ಅಕೌಂಟ್‌ನಲ್ಲಿರೊ ಹಣ ಮಾಯವಾಗಲಿದೆ. HSRP ನಂಬರ್ ಪ್ಲೇಟ್ ಬುಕ್ ಮಾಡಿದ್ದ ವಿಜಿತ್ ಕುಮಾರ್ ಗೆ 95 ಸಾವಿರ ವಂಚನೆ ಮಾಡಲಾಗಿದೆ. ತನಗೆ ವಂಚನೆಯಾಗಿರುವ ಬಗ್ಗೆ ವಿಜಿತ್ ಕುಮಾರ್ ಅವರು ಬಾಗಲೂರು ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ. ವಿಜಿತ್ ಕುಮಾರ್ ತಮ್ಮ ವಾಹನಕ್ಕೆ ನಂಬರ್ ಪ್ಲೇಟ್ ಬುಕ್ ಮಾಡಲು bookmyhsrp.net ಲಿಂಕ್‌ನಲ್ಲಿ ನಲ್ಲಿ ರಿಜಿಸ್ಟರ್ ಮಾಡಿದ್ದರು.ಆದರೆ, ಒಂದು ವಾರದ ನಂತರ ನಿಮ್ಮ ಅಡ್ರೆಸ್ ಸರಿ ಇಲ್ಲ, ಕೆಳಗೆ ಕೊಟ್ಟ ಲಿಂಕ್ ಕ್ಲಿಕ್ ಮಾಡಿ ಅಪ್ಡೇಟ್ ಮಾಡಿ ಎಂದು ಮೇಲ್ ಬಂದಿತ್ತು.…

Read More