Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ಹಲವಾರು ಜನರು ಮಣ್ಣಿನ ಅಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇನ್ನು ಹಲವಾರು ಜನರು ನಿರಾಶ್ರಿತರಾಗಿದ್ದು, ಅಪಾರ ಸಾವು, ನೋವುಗಳು ಸಂಭವಿಸಿವೆ. ಹಾಗಾಗಿ ಇದೀಗ ಕರ್ನಾಟಕ ರಾಜ್ಯ ನೆರೆಯ ಕೇರಳ ರಾಜ್ಯಕ್ಕೆ ಬೆಂಬಲವಾಗಿ ನಿಂತಿದ್ದು, ಕನ್ನಡಿಗರು ಕೂಡ ಇದಕ್ಕೆ ಸಹಕರಿಸಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ. ಕೇರಳ ರಾಜ್ಯಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಅವರು ಮನವಿ ಮಾಡಿಕೊಂಡಿದ್ದು, ಜುಲೈ 30, 2024 ರ ಮುಂಜಾನೆ, ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತಗಳು ಸಂಭವಿಸಿದವು, ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲಾ ಮತ್ತು ನೂಲ್ಪುಳದಲ್ಲಿ ದೊಡ್ಡ ಪ್ರದೇಶಗಳು ಅವಶೇಷಗಳ ಅಡಿಯಲ್ಲಿ ಹೂತುಹೋದವು. ಭೂಕುಸಿತವು ಹಲವಾರು ಸಾವುನೋವುಗಳಿಗೆ ಕಾರಣವಾಗಿದ್ದು, ಇನ್ನೂ ಅನೇಕರು ನಾಪತ್ತೆಯಾಗಿದ್ದಾರೆ. ನಮ್ಮ ನೆರೆಯ ರಾಜ್ಯವಾದ ಕೇರಳದಲ್ಲಿ ತೆರೆದುಕೊಳ್ಳುತ್ತಿರುವ ವಿನಾಶವು ಆಳವಾದ ಹೃದಯ ವಿದ್ರಾವಕವಾಗಿದೆ. ಕನಾ೯ಟಕದ ಮಾನ್ಯ ಮುಖ್ಯಮಂತ್ರಿಗಳು ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ, ನಾನು ಜೀವಹಾನಿಗೆ ಸಂತಾಪ ಸೂಚಿಸಿದ್ದೇನೆ.…
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್ ಹಾವಳಿ ಹೆಚ್ಚಾಗಿದ್ದು, ಈ ಕುರಿತು ಕ್ರಮಕೈಗೊಳ್ಳದ ಬಿಬಿಎಂಪಿ, ಪೊಲೀಸ್ ಇಲಾಖೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದೀಗ ಪೊಲೀಸ್ ಆಯುಕ್ತಾರಾದ ಬಿ. ದಯಾನಂದ ಅವರು ಬಿಬಿಎಂಪಿ ಆಯುಕ್ತರ ಜೊತೆ ಸಭೆ ನಡೆಸಿದ್ದು ಅಕ್ರಮ ಫ್ಲೆಕ್ಸ್ ಬ್ಯಾನರ್ ಗಳು ಸಂಪೂರ್ಣ ಬ್ಯಾನ್ ಮಾಡಲಾಗಿದೆ ಎಂದರು. ಫ್ಲೆಕ್ಸ್ಗಳನ್ನು ಹಾಕದಂತೆ ಹಾಗೂ ತೆರವಿನ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಜೊತೆ ಪೊಲೀಸ್ ಕಮಿಷನರ್ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಮಾತನಾಡಿದ ಕಮಿಷನರ್, ಫ್ಲೆಕ್ಸ್, ಬ್ಯಾನರ್ಗಳ ಅಳವಡಿಕೆ ವಿರುದ್ಧ ಯಾವ ರೀತಿ ಕಾರ್ಯಾಚರಣೆ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ. ಅಕ್ರಮ ಚಟುವಟಿಕೆಗಳ ಮಟ್ಟಹಾಕಲು ಚರ್ಚೆ ಮಾಡಲಾಗಿದೆ ಎಂದರು. ಫ್ಲೆಕ್ಸ್ ಹಾಕುವ ವೇಳೆ ಅದನ್ನು ಪೂರ್ವ ನಿರ್ಧರಿತ ನಂಬರ್ಗೆ ಮಾಹಿತಿ ನೀಡುವುದು. ಅವುಗಳ ಮೇಲೆ ಎಫೆಕ್ಟಿವ್ ಆಕ್ಷನ್ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಪೊಲೀಸರಿಗೆ ಬಿಬಿಎಂಪಿಯವರು ನೀಡಿರುವ ನಂಬರ್ಗೆ ಮಾಹಿತಿ ನೀಡಲಾಗುತ್ತದೆ.ಈ ವೇಳೆ…
ಬೆಳಗಾವಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಸದ್ಯಕ್ಕೆ ಏನೂ ತೊಂದರೆ ಕಾಣುತ್ತಿಲ್ಲ ಎಂದು ಅವರು ತಿಳಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಿಯವರೆಗೆ ಮತಗಳನ್ನು ಮಾರಾಟ ಮಾಡುತ್ತಾರೋ ಅಲ್ಲಿಯವರೆಗೆ ಲಾಭ – ನಷ್ಟ ಇರುತ್ತದೆ. ಹಿಂದಿನ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ, ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ. ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕುತ್ತಾನೋ. ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ ಎಂದು ಹೇಳಿದರು. ಇದು ಕ್ರೋಧಿನಾಮ ಸಂವತ್ಸರ. ಕ್ರೋಧ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ. ಪ್ರಾಕೃತಿಕ ದೋಷ ಮುಂದುವರೆಯುತ್ತದೆ. ಅಮವಾಸ್ಯೆವರೆಗೆ ಒಂದು ಭಾಗಕ್ಕೆ ನಿಲ್ಲುತ್ತದೆ. ನಂತರ ಮತ್ತೊಂದು ಭಾಗಕ್ಕೆ ಹೋಗುತ್ತದೆ. ಮುಂದೆ ಅನಿಷ್ಠ ಜಾಸ್ತಿ ಇದೆ. ಕತ್ತಲು ಬೆಳಕು ಎರಡು ಇರುತ್ತದೆ.…
ಬೆಂಗಳೂರು : ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪುನೀತ್ ಕೆರೇಹಳ್ಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.ಬಿಡುಗಡೆ ಬಳಿಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಜೊತೆಗೆ ಮುಂದೆ ಇಂತಹದ್ದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪ್ರತಿ ತಿಂಗಳ ಮೊದಲ ಭಾನುವಾರದಂದು ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ವಿಚಾರಣೆ ಮುಗಿಯುವವರೆಗೂ ದೇಶಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ ಕೋರ್ಟ್. ಪುನೀತ್ ಕೆರೆಹಳ್ಳಿ ಪರ ವಕೀಲ ಪ್ರಕಾಶ್ ಶೆಟ್ಟಿ ವಾದಿಸಿದರು. ಪ್ರಕರಣದ ಹಿನ್ನೆಲೆ ಏನು? ರಾಜಸ್ಥಾನದ ಶಿಖರ್ ಜಿಲ್ಲೆಯಲ್ಲಿರುವ ಗೋಡೌನ್ನಿಂದ ಮಾಂಸದ ಬಾಕ್ಸ್‌ಗಳು ಜೈಪುರ ರೈಲ್ವೆ ನಿಲ್ದಾಣಕ್ಕೆ ಅಲ್ಲಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿತ್ತು. ಹೀಗೆ ತರುವ ಮಾಂಸದ ಬಾಕ್ಸ್‌ಗಳಲ್ಲಿ ಮಟನ್…
ಬೆಂಗಳೂರು : ನಾನು ಹೋರಾಟದ ಮೇಲೆ ಎರಡು ಸಲ ಜೈಲಿಗೆ ಹೋಗಿದ್ದೆ. ಜೈಲಲ್ಲಿ ಊಟ ನನಗೆ ಏನು ಸಮಸ್ಯೆ ಅನಿಸಿಲ್ಲ. ಜೈಲೂಟ ನನಗೆ ಇಷ್ಟ ಆಯ್ತು. ನನ್ನ ಹುಟ್ಟುಹಬ್ಬ ಒಂದು ಬಾರಿ ಜೈಲಲ್ಲಿ ಇದ್ದಾಗ ಬಂದಿತ್ತು. ಆಗ ಪುಳಿಯೋಗರೆ ಕೊಟ್ಟಿದ್ರು ಆಗ ತುಂಬಾ ಚೆನ್ನಾಗಿತ್ತು. ಪುಳಿಯೋಗರೆ ಚಿತ್ರಾನ್ನ, ಅನ್ನ ಸಾಂಬಾರು , ಮುದ್ದೆ ಎಲ್ಲವೂ ನನಗೆ ಇಷ್ಟ ಆಯ್ತು ಎಂದು ನಟ ಚೇತನ್ ಅಹಿಂಸಾ ತಿಳಿಸಿದರು. ಇಂದು ಅವರು ಸುದ್ದಿಗರರೊಂದಿಗೆ ಮಾತನಾಡುತ್ತ ನಟ ದರ್ಶನ್ ಅವರು ಜೈಲು ಸೇರಿರುವ ವಿಚಾರವಾಗಿ ಮಾತನಾಡುತ್ತಾ, ದರ್ಶನ್ ರನ್ನು ಒಂದೆರಡು ಬಾರಿ ಮಾತ್ರ ಬೇಟಿಯಾಗಿದ್ದೇನೆ ಅಷ್ಟೇ. ಅವರ ವಿಚಾರ ಮಾಧ್ಯಮದಿಂದ ಮಾತ್ರ ಗೊತ್ತಾಗಿದೆ. ಅವರ ಸಿನಿಮಾದಲ್ಲಿ ಕಂಟೆಂಟ್ ಗಿಂತ ಬಾಕ್ಸ್ ಆಫೀಸ್ ಕಲೆಕ್ಷನ್ ಗೆ ಅವರು ಹೆಚ್ಚು ಸಿನಿಮಾ ಮಾಡುತ್ತಾರೆ. ಸಿನಿಮಾದಲ್ಲಿ ಹೀರೋ ದರ್ಶನ್ ಬಿಟ್ಟು ಬೇರೆ ಯಾರು ಆ ಜಾಗದಲ್ಲಿ ಮಾಡಿದ್ರು, ಸಿನಿಮಾ ಸಕ್ಸಸ್ ಆಗುತ್ತೆ ಅಥವಾ ಸಕ್ಸಸ್ ಆಗಲ್ಲ ಅಂದ್ರೆ ಯಾರು ಇದ್ರು…
ಬಾಗಲಕೋಟೆ : ಸದ್ಯ ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ನದಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ನದಿ ಪಾತ್ರದಲ್ಲಿರುವ ಜನರಿಗೂ ಕೂಡ ಈಗಾಗಲೇ ಅಲ್ಲಿಂದ ಸುರಕ್ಷಿತ ಪ್ರದೇಶಕ್ಕೆ ತೆರಳಲು ಎಚ್ಚರಿಕೆ ನೀಡಿದ್ದು, ಹಲವು ಕಡೆ ಪ್ರವಾಹದಿಂದ ಅನೇಕ ಅವಾಂತರ ಸೃಷ್ಟಿಯಾಗಿವೆ.ಈ ಮಧ್ಯ ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು ಬಾಗಲಕೋಟೆ ಜಿಲ್ಲೆಯ ಭೂಗೋಳ ತಾಲೂಕಿನಲ್ಲಿ ಇಂದು ಅವರು ಮಾತನಾಡಿ, ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ. ರಾಜ್ಯದ ಜನತೆ ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರು ಪರವಾಗಿಲ್ಲಾ. ಅಧಿಕಾರಿಗಳ ಮಾತು ಕೇಳದೆ ನದಿಗೆ ಹೇಳಿದರೆ ಲಾಠಿ ಪ್ರಯೋಗಿಸಿ ಎಂದು ಖಡಕ್ ಸೂಚನೆ ನೀಡಿದರು. ಮೀನು ಹಿಡಿಯುವುದು, ಕೃಷಿ ಚಟುವಟಿಕೆ ಎಂದು ಇಳಿಯುವುದು, ಸೆಲ್ಫಿಗಾಗಿ ನದಿ ಒಳಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ. ನಮ್ಮ ರಾಜ್ಯದಲ್ಲಿ ಪ್ರಾಣ ಹಾನಿಯಾಗುವುದಕ್ಕೆ ನಾವು ಬಿಡುವುದಿಲ್ಲ. ಒಳ್ಳೆ ಮಾತಿಗೆ ಗೌರವ ಕೊಡಲಿಲ್ಲ ಅಂದರೆ ಲಾಠಿ ಏಟು…
ಬಾಗಲಕೋಟೆ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗೆ ಇಡಿ ಅಧಿಕಾರಿಗಳು ಸ್ವತಃ ತಾವೇ ಬಂದು ತನಿಖೆ ಮಾಡುತ್ತಿದ್ದಾರೋ, ಅದೇ ರೀತಿ ಮುಡಾದಲ್ಲೂ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಬಂದು ತನಿಖೆ ಮಾಡಲಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸವಾಲು ಹಾಕಿದರು. ಇಂದು ಅವರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಬಿಜೆಪಿ ಜೆಡಿಎಸ್ ನಾಯಕರ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮುಡಾ ವಿಚಾರದಲ್ಲಿ ಯಾರೂ ತಪ್ಪು ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಜಮೀನು ಹೋಗಿದ್ದು ಮೂರು ಎಕರೆ ಅದಕ್ಕೆ ಬದಲಿಯಾಗಿ ಒಂದು ಎಕರೆಗಿಂತ ಕಡಿಮೆ ಜಮೀನು ಸಿಕ್ಕಿದೆ. ಭೂಮಿ ಕಳೆದುಕೊಂಡವರಿಗೆ ಪರಿಹಾರವಾಗಿ ನಿವೇಶನ ಕೊಟ್ಟಿದ್ದಾರೆ. ಬಿಜೆಪಿ ಅವಧಿಯಲ್ಲಿ ನಿವೇಶನ ಕೊಟ್ಟಿದ್ದು, ಪರ್ಯಾಯವಾಗಿ ನಿವೇಶನ ನೀಡಿದ್ದು ಕಾನೂನಾತ್ಮಕವಾಗಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆಯನ್ನು ಇಡಿಹೆ ಕೊಟ್ಟಿದ್ವಾ?ಇಡಿ ಅಧಿಕಾರಿಗಳೇ ಬಂದು ಪ್ರಕರಣದ ತನಿಖೆ ಮಾಡುತ್ತಿದ್ದಾರೆ. ಹಾಗೆಯೇ ಮುಡಾ ಪ್ರಕರಣ ಮಾಡಲಿ ಎಂದು ಕೃಷ್ಣಬೈರೇಗೌಡ ಸವಾಲು…
ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತು. ಇದೀಗ ಇಂದು ಮತ್ತೆ ಭಾರಿ ಬಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು 6 ವಾಹನಗಳು ಸಿಲುಕಿರುವ ಘಟನೆ ನಡೆದಿದೆ. ಹೌದು ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಚಾರ ಸಂಪೂರ್ಣ ಬಂದ್ ಹಾಸನದಲ್ಲಿ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು…
ಕಲಬುರಗಿ : ಕಲ್ಬುರ್ಗಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಲ್ಬುರ್ಗಿ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೇಯರ್ ಹಾಗೂ ಉಪಮೇಯರ್ ವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಿದೆ. ಹೌದು ಇಂದು ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗು ಉಪಮೇಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಯಲ್ಲಪ್ಪ ನಾಯಿಕೋಡಿ ಅವರು ಮೇಯರ್ ಆಗಿ ಹಾಗೂ ಹೀನಾ ಬೇಗಂ ಅವರು ಉಪಮೆಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ ಹಿನ್ನೆಲೆಯಲ್ಲಿ ಯಲ್ಲಪ್ಪ ನಾಯಿಕೋಡಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನು ಉಪಮೇಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಮೈತ್ರಿ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. ಹೀಗಾಗಿ ಉಪಮೇಯರಾಗಿ ಅವಿರೋಧವಾಗಿ ಹೀನಬೇಗಂ ಆಯ್ಕೆಯಾಗಿದ್ದಾರೆ. ಕಲಬುರ್ಗಿ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಅವಿರೋಧ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಆವರಿಗೆ ಜೈಲಿನ ಊಟ ಸರಿ ಹೊಂದುತ್ತಿಲ್ಲ ಎಂಬ ಕಾರಣದಿಂದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾ ಗೊಳಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೌದು ನಟ ದರ್ಶನ್ ಅವರಿಗೆ ಜೈಲಿನ ಊಟದಿಂದ ಆರೋಗ್ಯದಲ್ಲಿ ಇರುತೇರು ಉಂಟಾಗುತ್ತಿದ್ದು ಅಲ್ಲದೆ ಅತಿಸಾರ ಭೇದಿ ಆಗುತ್ತಿದೆ ಎಂದು ಇತ್ತೀಚಿಗೆ ಬೆಂಗಳೂರಿನ ಮ್ಯರಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಾದ ಪ್ರತಿವಾದಗಳನ್ನು ಆಲಿಸಿ ದರ್ಶನ್ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು. ಮನೆಯಿಂದ ಊಟ ಬಟ್ಟೆ ಹಾಸಿಗೆ ಪಡೆಯಲು ಅನುಮತಿ ನಿರಾಕರಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಪರ…