Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ರಾಜ್ಯದಲ್ಲಿ ಭೀಕರ ಮಳೆ ಯಾಗುತ್ತಿದ್ದು ಅಪಾರ ಪ್ರಮಾಣದ ಮಳೆಯಿಂದ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿವೆ.ಇದೀಗ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಹೌದು ರಾಜ್ಯದಲ್ಲಿ ಯಾವಾಗ ಮುಂಗಾರು ಮಳೆ ಆರಂಭವಾಯಿತೊ ಅಂದಿನಿಂದ ಇವತ್ತಿನವರೆಗೂ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಪ್ರಮಾಣದ ಮಳೆಯಿಂದ ಅನೇಕ ಜನರ ಸಾವು ನೋವಾಗಿದೆ.ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಗುಡ್ಡ ಕುಸಿದು ಸಾಕಷ್ಟು ಹಾನಿಯಾಗಿವೆ. ಕೆಲ ರಸ್ತೆ ಮತ್ತು ರೈಲು ಸಂಪರ್ಕ ಬಂದ್ ಆಗಿವೆ. ಇನ್ನೂ ಉತ್ತರಕರ್ನಾಟಕ ಭಾಗಕ್ಕೆ ಬರುವುದಾದರೆ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿನ ಪ್ರಮುಖ 7 ನದಿಗಳು ತುಂಬಿ ಹರಿಯುವುತ್ತಿರುವುದರಿಂದ ಕೆಲ ಗ್ರಾಮಗಳಿಗೆ ನೀರು ನುಗ್ಗಿದೆ. ಹಾಗೆ ಬಾಗಲಕೋಟೆ ಜಿಲ್ಲೆಯಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಇದರಿಂದ ಜನರು ಹೈರಾಣಾಗಿದ್ದಾರೆ. ಆರೈಕೆ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ…
ಬೆಂಗಳೂರು : ಮುಡಾ ಸೇರಿದಂತೆ ವಿವಿಧ ಭ್ರಷ್ಟಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ವಾಗ್ದಾಳಿ ಮುಂದುವರಿಸಿದೆ. ಹೌದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಕುರಿತು ವ್ಯಂಗ್ಯವಾಡಿದ್ದು, ಒಲಂಪಿಕ್ಸ್ ಜತೆ ಹೋಲಿಸಿ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ಲೇವಡಿ ಮಾಡಿದೆ. ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ ಎಂದು ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಫೋಟೊವನ್ನು ಬಿಜೆಪಿ ಪೋಸ್ಟ್ ಮಾಡಿದೆ. ಇದರಲ್ಲಿ ಸಿದ್ದರಾಮಯ್ಯ ಚಿನ್ನದ ಪದಕ, ನಾಗೇಂದ್ರ ಬೆಳ್ಳಿ ಹಾಗೂ ದದ್ದಲ್ ಕಂಚಿನ ಪದಕ ಧರಿಸಿರುವಂತೆ ಫೊಟೊ ಎಡಿಟ್ ಮಾಡಿ ಹಂಚಿಕೊಂಡಿದೆ.. https://twitter.com/BJP4Karnataka/status/1818161879312707842?t=m_-2yPaVBKMGINPBhik4mA&s=19
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಂತಹ ಅಕ್ರಮ ಸೈಟ್ ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೆಚ್‍ಡಿ ಕುಮಾರಸ್ವಾಮಿ ನೀಡಿದ್ದಾರೆ. ಟ್ವಿಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿಯ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು, 40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ.ದೇವೇಗೌಡರ ಕುಟುಂಬದವರು ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ? ಎಂದು ಪ್ರಶ್ನಿಸಿದ್ದಾರೆ. https://twitter.com/siddaramaiah/status/1818169384504037644?t=s9NlUeXaAxrB-iJkgDQmHw&s=19 ಇನ್ನೂ ಮೇಕೆದಾಟು ಯೋಜನೆಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು ಈ ಕುರಿತು ಸಿಎಂ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು. ಜೊತೆಗೆ ವಿದ್ಯುತ್…
ಬೆಂಗಳೂರು : ಮೇಕೆದಾಟು ಯೋಜನೆಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು ಈ ಕುರಿತು ಸಿಎಂ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು. ಜೊತೆಗೆ ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು. ಮಂಡ್ಯದ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ. ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ. https://twitter.com/siddaramaiah/status/1818165341878710347?t=M2G3gTi7JyZD7nAsb0Md8g&s=19
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸಿನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಇದೀಗ ಹೆಚ್ಚುವರಿ 7 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ಹೀಗಾಗಿ ನಟ ದರ್ಶನ್ ಇರುವ ಸೆಲ್ ಗೆ ಭಾರಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಹೌದು ಹೊರಗಿನಿಂದ ನಟ ದರ್ಶನ್ ಅವರನ್ನು ಯಾರೇ ಭೇಟಿ ಮಾಡಲು ಬಂದರೂ ಸಹ ಈ 7 ಸಿಬ್ಬಂದಿಗಳು ಅವರ ಜೊತೆಯಲ್ಲಿ ಇರುತ್ತಾರೆ.ಈ ಹಿಂದೆ ಸಿದ್ದಾರೂಡ ಎಂಬ ಕೈದಿ ಜೈಲಿನಿಂದ ಹೊರಗಡೆ ಬಂದ ಬಳಿಕ ತಾನು ಕೂಡ ದರ್ಶನ್ ಅವರನ್ನು ಭೇಟಿ ಮಾಡಿದ್ದೆ ಎಂದು ಹೇಳಿದ್ದನು. ಆದ್ದರಿಂದ ಇಂತಹ ಘಟನೆ ಮರುಕಳಿಸದಂತೆ ಹೆಚ್ಚುವರಿ ಭದ್ರತೆ ನೀಡಲಾಗಿದೆ. ದರ್ಶನ್ ಗೆ ಜೈಲೂಟವೇ ಗತಿ ಇನ್ನೂ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೀಡುವಂತಹ ಆಹಾರ ಜೀರ್ಣವಾಗುತ್ತಿಲ್ಲ ಹೀಗಾಗಿ ಅವರು ಮನೆ ಊಟ, ಬಟ್ಟೆ ಸೇರಿದಂತೆ ಇತರೆ ವಸ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ಅಜೀರ್ಣ, ಅತಿಸಾರವಾಗುತ್ತಿದೆ. ಹೀಗಾಗಿ ಮನೆಯೂಟ ನೀಡಲು ಅವಕಾಶ…
ತುಮಕೂರು : ಇನ್ಸ್ಟಾಗ್ರಾಮ್ ನಲ್ಲಿ ತನ್ನ ಮಾಜಿ ಪ್ರಿಯಕರನ ಪರಿಚಯ ವಾಗಿದ್ದೇ ತಡ ಪತ್ನಿಯೊಬ್ಬಳು ಸುಪಾರಿ ನೀಡಿ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನೇ ಕೊಲೆ ಮಾಡಿಸಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪ್ರಕಾಶ್ (30) ಕೊಲೆಯಾದ ದುರ್ದೈವಿಯಾಗಿದ್ದು, ಹರ್ಷಿತ (28) ಗಂಡನನ್ನು ಕೊಲೆ ಮಾಡಿಸಿದ ಹೆಂಡತಿ ಎಂದು ತಿಳಿದುಬಂದಿದೆ. ಕೊಲೆಯಾದ ಪ್ರಕಾಶ್ 3 ವರ್ಷದ ಹಿಂದೆ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ನಂತರ ಹರ್ಷಿತ ಪ್ರಕಾಶ್ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಪ್ರಕಾಶ ಹೆಂಡತಿಯ ಮನೆಯಲ್ಲಿ ವಾಸವಿದ್ದ.ಅವರಿಗೆ ಒಂದೂವರೆ ವರ್ಷದ ಮಗು ಕೂಡ ಇತ್ತು. ಆದ್ರೆ ಇತ್ತೀಚಿಗೆ ಹರ್ಷಿತಾಳಿಗೆ ಇನ್ ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಸಿಕ್ಕಿದ್ದನು. ಈ ವೇಳೆ ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರು ಪ್ರೇಮಾಂಕುರವಾಗಿದೆ. ಕಳೆದ 2 ತಿಂಗಳ ಹಿಂದೆ ಹರ್ಷಿತಾ ಮನೆಬಿಟ್ಟು ಗುಂಡನ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದನು.…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ (PIL) ಅರ್ಜಿ ದಾಖಲಾಗಿದೆ. ಹೌದು ಲೋಕಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು. ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಮಾಸ್ ರೇಪ್ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.ಇದರ ವಿಡಿಯೋ ಹಿಡಿದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮು ಅವರು ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ಬಾಗಲಕೋಟೆ : ಅತ್ತ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ಇತ್ತ ರಾಜ್ಯದಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಪ್ರವಾಹದ ಭೀತಿ ಕೂಡ ಹೆಚ್ಚಾಗಿದೆ. ಇದರಿಂದ ಉತ್ತರಕರ್ನಾಟಕದ ಹಲವು ಜಿಲ್ಲೆಗಳ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದರಿಂದ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು ಇದೀಗ ಬಾಗಲಕೋಟೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಈಗಾಗಲೇ ರೈತರು ಮುಂಗಾರಿನಲ್ಲಿ ಬಿದ್ದಂತಹ ಮಳೆಗೆ ಬಿತ್ತನೆ ಮಾಡಿದ್ದು, ಸುಮಾರು ರಾಜ್ಯದಲ್ಲಿ 66 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಗಿದಿದೆ. ಆದರೆ ಇದೀಗ ಅತಿಯಾದ ಮಳೆಯಿಂದ ಹೊಲದಲ್ಲಿ ಗದ್ದೆಗಳಲ್ಲಿ ನೀರು ನಿಂತುಕೊಂಡಿದ್ದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸುಲುಕಿಕೊಂಡಿದ್ದಾರೆ. ಈ ಕುರಿತು ರೈತರೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರ ಈ ಕೂಡಲೇ ಬೆಳೆ ನಷ್ಟಕ್ಕೆ ಶಾಶ್ವತ ಪರಿಹಾರ ನೀಡಲೇಬೇಕು. ಬೀಜಗಳನ್ನು ಕೊಂಡು ಅದನ್ನು ಬಿತ್ತನೆ ಮಾಡಿದಾಗಲೇ ಸಾಕಷ್ಟು ಖರ್ಚಾಗಿರುತ್ತದೆ. ಆದರೆ ತಾತ್ಕಾಲಿಕ ಪರಿಹಾರದಿಂದ ನಮಗೆ ಯಾವುದೇ ಪ್ರಯೋಜನ ಆಗುವುದಿಲ್ಲ. ಆದ್ದರಿಂದ…
ಕೇರಳ : ಇಂದು ಕೇರಳದ ವಯನಾಡ್ ನಲ್ಲಿ ಭೂಕುಸಿತ ದುರಂತದಿಂದ ಮೃತಪಟ್ಟವರ ಸಂಖ್ಯೆ ಇದೀಗ 41ಕ್ಕೆ ಏರಿಕೆಯಾಗಿದೆ. ಐವರು ಮಕ್ಕಳು ಸೇರಿ ಈವರೆಗೂ 41 ಜನರ ಮೃತದೇಹ ಪತ್ತೆಯಾಗಿದೆ. ನೆಪ್ಪಾಡಿ, ಮುಂಡಕೈ, ಚುರಲ್, ಮಲ ಗ್ರಾಮದಲ್ಲಿ ಈ ಒಂದು ಭೂಕುಸಿತ ದುರಂತ ನಡೆದಿದೆ. 180ಕ್ಕೂ ಅಧಿಕ ಜನ ಸಿಲುಕಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಎನ್ ಡಿ ಆರ್ಎಫ್ ಸಿಬ್ಬಂದಿ, ಅಗ್ನಿಶಾಮಕದಳ ಸಿಬ್ಬಂದಿ ಜೊತೆಗೆ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಇದೀಗ ಮುಂದುವರೆದಿದೆ. ರಾಜ್ಯ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಸಹಾಯ ಬಯಸುವವರಿಗಾಗಿ ನಿಯಂತ್ರಣ ಕೊಠಡಿ ಮತ್ತು ಸಹಾಯವಾಣಿ ಸಂಖ್ಯೆಗಳನ್ನು (9656938689 ಮತ್ತು 8086010833) ಬಿಡುಗಡೆ ಮಾಡಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ವಯನಾಡ್ ಗೆ ತೆರಳಲು ಆದೇಶಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ…