Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ರವಿವಾರ ರಾತ್ರಿ ಲಾರಿ-ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿಂತೆ ಇಂದು ಹಲಸೂರು ಗೇಟ್ ಠಾಣೆ ಪೊಲೀಸರು ಇದೀಗ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತ ಲಾರಿ ಚಾಲಕನನ್ನು ಶಿವಶಂಕರ್ (38) ಎಂದು ತಿಳಿದುಬಂದಿದೆ. ರವಿವಾರ ಅಪಘಾತದ ಬಳಿಕ ಚಾಲಕ ಶಿವಶಂಕರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ಚಾಲಕ ಶಿವಶಂಕರ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಚಾಲಕ ಶಿವಶಂಕರ್ ರಕ್ತ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಯಲಿದೆ. ಇನ್ನೂ ಘಟನೆ ಕುರಿತು ಗ್ರಹ ಸಚಿವ ಜಿ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದು, ಈ ಒಂದು ಅಪಘಾತ ನಡೆದಿದ್ದು ದುರಾದೃಷ್ಟಕರ.ಮೃತರ ಕುಟುಂಬಕ್ಕೆ ಬಿಬಿಎಂಪಿ ನೆರವು ನೀಡುತ್ತದೆ ಎಂದು ಡಾ. ಜಿ ಪರಮೇಶ್ವರ್ ತಿಳಿಸಿದರು. ಪ್ರಕರಣದ ಹಿನ್ನೆಲೆ? ರವಿವಾರ ರಾತ್ರಿ 8:45ರ ಸುಮಾರಿಗೆ ಬೆಂಗಳೂರಿನ ಕೆಆರ್ ಸರ್ಕಲ್ ಬಳಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಟಿಸಿಎಸ್…
ಬೆಂಗಳೂರು : ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಹಜ ರೀತಿ ಫೋಟೋ ಹಾಗೂ ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿಯ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅವರನ್ನು ಶಿಕ್ಷಕಿ ಹಾಗೂ ವಿದ್ಯಾರ್ಥಿ ಎನ್ನಬಹುದೇ ಎಂದು ಕಿಡಿ ಕಾರಿದೆ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮುಖ್ಯ ಶಿಕ್ಷಕಿ ಪುಷ್ಪಲತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶೈಕ್ಷಣಿಕ ಪ್ರವಾಸದ ವೇಳೆ ಶಿಕ್ಷಕಿ ವಿದ್ಯಾರ್ಥಿಯೊಬ್ಬನ ಜತೆ ಕೆಲ ಪೋಟೋ ತೆಗೆದುಕೊಂಡ ಕಾರಣ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಪೋಟೋಗಳು ಅಸಹಜವಾಗಿಯೇ ಇವೆ. ಆದರೆ, ಶಿಕ್ಷಕಿ ಮತ್ತು ವಿದ್ಯಾರ್ಥಿ ನಡುವೆ ತಾಯಿ-ಮಗನ ಸಂಬಂಧವಿದೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಪ್ರಕರಣದ ದಾಖಲೆಗಳನ್ನು ಓದಿದ್ದೇನೆ. ಶಿಕ್ಷಕಿ ಏಕೆ ಹಾಗೆ ಮಾಡಿದ್ದಾರೆ? ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ಡ್ಯೂಯೆಟ್ ಹಾಡುತ್ತಿದ್ದರೆ, ಇದು ಶಿಕ್ಷಕಿ…
ಬೆಂಗಳೂರು : ಕಾವೇರಿ ನದಿಗೆ ಅಸ್ಥಿ ವಿಸರ್ಜನೆ ಸೇರಿ ಇತರ ಮಾಲಿನ್ಯಕಾರಕ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಈ ಸಂಬಂಧ ಮಾರ್ಗಸೂಚಿಗಳನ್ನು ರಚನೆ ಮಾಡುವಂತೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು ನಿವಾಸಿ ವಕೀಲ ಕುಶಾಲ್ ಕುಮಾರ್ ಕೌಶಿಕ್ ಸೇರಿ ಆರು ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾ. ಕೆ. ವಿ ಅರವಿಂದ ಅವರಿದ್ದ ವಿಭಾಗೀಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಉಪ ವಿಭಾಗಾಧಿಕಾರಿ, ಶ್ರೀರಂಗಪಟ್ಟಣ ತಹಶೀಲ್ದಾರ್, ಶ್ರೀರಂಗಪಟ್ಟಣ ನಗರಸಭೆಗೆ ನೋಟಿಸ್ ಜಾರಿ ಮಾಡಿ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ವಿಚಾರಣೆಯ ವೇಳೆ ಅರ್ಜಿದಾರರು ಖಾಸಗಿ ಸ್ಥಳಗಳಲ್ಲೂ ಅಸ್ತಿ ವಿಸರ್ಜನೆ ನಡೆಯುತ್ತಿದೆ. ಕಾವೇರಿ ನದಿಯ ನೀರು ಕುಡಿಯಲು ಯೋಗ್ಯವಾಗಿಲ್ಲವೆಂದು ವರದಿ ಇದೆ. ನದಿಯ ದಡಗಳಲ್ಲಿ ನಿಯಂತ್ರಣವಿಲ್ಲದೆ ಅಸ್ತಿ ವಿಸರ್ಜನೆ…
ಬೆಂಗಳೂರು : ಮುಡಾದಲ್ಲಿ ನಡೆದಿರುವಂತಹ ಅಕ್ರಮವನ್ನು ಖಂಡಿಸಿ ಆಗಸ್ಟ್ 3 ರಂದು ಬಿಜೆಪಿ ಹಾಗೂ ಜೆಡಿಎಸ್ ಯಿಂದ ಪಾದಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಸರ್ಕಾರದಿಂದ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಆದರೆ ಅವರ ಪಾದಯಾತ್ರೆಗೆ ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಅಗಸ್ಟ್ 3 ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಬಿಜೆಪಿ ಹಾಗೂ ಜೆಡಿಎಸ್ ನಿರ್ಧರಿಸಿವೆ. ಆಗಸ್ಟ್ 3 ರಂದು ಬೆಂಗಳೂರಿನ ಕೆಂಗೇರಿಯಿಂದ ಪಾದಯಾತ್ರೆಗೆ ಚಾಲನೆ ನೀಡುತ್ತಿದ್ದು, ಆಗಸ್ಟ್ 10 ರಂದು ಬಿಜೆಪಿ ಜೆಡಿಎಸ್ ಪಾದಯಾತ್ರೆ ಮೈಸೂರು ತಲುಪುತ್ತದೆ. ಅಂದೇ ಮೈಸೂರಿನಲ್ಲಿ ಸಮಾರೋಪ ಸಮಾರಂಭಕ್ಕೆ ನಿರ್ಧಾರ ಮಾಡಿದ್ದು ಸಮಾರೋಪಕ್ಕೆ ದೆಹಲಿ ನಾಯಕರನ್ನು ಕರೆತರಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ವಿಜಯಪುರ : ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿಎ ಗ್ರಾಮದಲ್ಲಿ ನಡೆದಿದೆ. ಸಂದೀಪ ಗಿಡ್ಡನಗೋಳ (16) ಮೃತ ವಿದ್ಯಾರ್ಥಿ. ಸಿಂದಗಿ ಪಟ್ಟಣದ ಎಚ್ ಜಿ ಹೈಸ್ಕೂಲ್ ನ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿ. ಇಂದು ಬೆಳಗ್ಗೆ ನಡೆದಿದ್ದ ದುರ್ಘಟನೆ. ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಹಿಂಬದಿ ಚಕ್ರಕ್ಕೆ ಸಿಲುಕಿ ಸಂದೀಪ್ ಗಂಭೀರ ಗಾಯಗೊಂಡಿದ್ದ. ನಂತರ ತಕ್ಷಣ ಆತನನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗಿನಿಂದ ಚಿಕಿತ್ಸೆ ನೀಡುತ್ತಿದ್ದ ವೈದ್ಯರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.ವಿದ್ಯಾರ್ಥಿ ಸಾವಿಗೆ ಚಾಲಕ, ನಿರ್ವಾಹಕರ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ನಟ ದರ್ಶನ್ ಅವರನ್ನು ಭೇಟಿಯಾಗಲು ಕುಟುಂಬಸ್ಥರು, ಸ್ನೇಹಿತರು, ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಕಲಾವಿದರು ಸಹ ಅವರನ್ನು ಭೇಟಿಯಾಗಿ ಮಾತನಾಡಿಸಿ ಬಂದಿದ್ದಾರೆ. ಇದೀಗ ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಟ ರಾಜ ಬಿ.ಶೆಟ್ಟಿ ಅವರು ದರ್ಶನ್ ಅವರನ್ನು ಭೇಟಿಯಾಗುವ ಕುರಿತು ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ದರ್ಶನ್ ಅನ್ನು ನೋಡಲು ಹೋಗುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ನಾನು ನನ್ನ ವೃತ್ತಿ ಜೀವನದಲ್ಲಿ ದರ್ಶನ್ ಅವರನ್ನು ವೇದಿಕೆಯೊಂದರಲ್ಲಿ ಕೇವಲ ಒಮ್ಮೆ ಮಾತ್ರ ಭೇಟಿ ಆಗಿದ್ದೇನೆ. ಅವರೊಂದಿಗೆ ಅಂಥಹಾ ಪರಿಚಯವೂ ಇಲ್ಲ. ಕೇವಲ ಒಮ್ಮೆ ಭೇಟಿ ಆಗಿರುವ ವ್ಯಕ್ತಿ ಈಗ ಜೈಲಿಗೆ ಹೋಗಿದ್ದಾರೆಂದರೆ ನಾನು ಏಕೆ ನೋಡಲು ಹೋಗಲಿ. ಕೇವಲ ಒಂದು ಬಾರಿ ಮಾತ್ರ ಭೇಟಿಯಾದ ವ್ಯಕ್ತಿ ಜೈಲಿಗೆ ಹೋದರೆ ನಾನು ಹೋಗಿ ಭೇಟಿ ಆಗಬೇಕ? ನಾನು ಯಾಕೆ…
ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸದಲ್ಲಿದ್ದು, ತಮ್ಮ ನೆಚ್ಚಿನ ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ ಸೇವಿಸಿದ್ದಾರೆ. ಬಳಿಕ ತೃಪ್ತಿ, ಸಮಾಧಾನವಾಯಿತು ಎಂದು ಹೇಳಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ನಮ್ಮ ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿಂದರೆ ಒಂಥರಾ ಸಮಾಧಾನ, ತೃಪ್ತಿ. ಇಂದು ಕೂಡಾ ಹಾಗೆಯೇ ಆಯಿತು ” ಎಂದಿದ್ದಾರೆ. ಜತೆಗೆ ಉಪಹಾರ ಸೇವಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಈ ಫೋಟೋ ವೈರಲ್ ಆಗುತ್ತಿದ್ದಂತೆ ಹಲವಾರು ಜನ ನೆಟ್ಟಿಗರು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೈಲಾರಿ ಹೋಟೆಲ್‌ನಲ್ಲಿ ಮೃದುವಾದ ದೋಸೆ ಹಾಗೂ ಮಲ್ಲಿಗೆಯಂತಹ ಇಡ್ಲಿ ಸಾಕಷ್ಟು ಫೇಮಸ್. ಪ್ರತಿ ಬಾರಿ ಬಂದಾಗಲೂ ಸಿಎಂ ಬೆಣ್ಣೆ ದೋಸೆ, ಕಾಯಿ ಚಟ್ನಿ, ಆಲೂಗಡ್ಡೆ ಈರುಳ್ಳಿ ಪಲ್ಯ, ಇಡ್ಲಿ ಚಟ್ನಿ ತುಪ್ಪ ಅನ್ನು ಸವಿಯುತ್ತಾರೆ. ಇದಾದ ಬಳಿಕ ಕೆಆರ್‌ಎಸ್ ಡ್ಯಾಮ್ ಗೆ ತೆರಳಿ ಬಾಗಿನ ಅರ್ಪಿಸಿದರು. ಅದಾದ ನಂತರ ಮೈಸೂರು ಜಿಲ್ಲೆಯ ಹೆಚ್‍ಡಿ…
ಮೈಸೂರು : ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು. ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕರ್ನಾಟಕ ರಾಜ್ಯವು ಸಮೃದ್ಧಿಯಿಂದ ಕೂಡಿದೆ. ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಸಹ ಭರ್ತಿಯಾಗಿವೆ. ಕೆ ಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ಡ್ಯಾಮಗಳು ಭರ್ತಿಯಾಗಿವೆ. ತಮಿಳುನಾಡು ನಮಗೂ ನೀರಿನ ಸಮಸ್ಯೆ ಬಂದಿತ್ತು. 47 ಟಿಎಂಸಿ ನೀರು ಬಿಡುವಂತೆ ಆದೇಶಿಸಲಾಗಿತ್ತು. ಈಗ 80 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ ರಾಜ್ಯದಲ್ಲಿ 66 ಲಕ್ಷ ಹೆಕ್ಟರ್ ನಲ್ಲಿ ಬಿತ್ತನೆಯಾಗಿದೆ ಎಂದು ತಿಳಿಸಿದರು. ಇದೆ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಮಾತನಾಡಿ, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ . ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬೇಕಿತ್ತು. ಈಗ…
ಉಡುಪಿ : ಕಳ್ಳರು ಯಾವ ಯಾವ ವೇಷಗಳನ್ನು ತೊಟ್ಟು ಹೇಗೆ ಕಳ್ಳತನ ಮಾಡುತ್ತಾರೆ ಎಂಬುವುದಕ್ಕೆ ಈ ಒಂದು ಘಟನೆ ಸಾಕ್ಷಿಯಾಗಿದೆ. ಹೌದು ಉಡುಪಿಯಲ್ಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆ ದರೋಡೆಗೆ ಯತ್ನಿಸಿದ್ದು ಆದರೆ ದರೋಡೆಕೋರ ಪ್ರಯತ್ನ ಇದೀಗ ವಿಫಲವಾಗಿದೆ. ಹೌದು ಉಡುಪಿ ಜಿಲ್ಲೆಯಲ್ಲಿ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ ಎಂಬುವರ ನಿವಾಸಕ್ಕೆ ಇದೇ ಜುಲೈ 25ರ ಮುಂಜಾನೆ 8:30 ರ ಸುಮಾರಿಗೆ ಗ್ಯಾಂಗ್ ನುಗ್ಗಿತ್ತು. ಆದರೆ ದರೋಡೆ ಯತ್ನ ವಿಫಲಗಿದೆ. ದಿನದ 24 ಗಂಟೆಯೂ ಲೈವ್ ಸರ್ವೆಲೆನ್ಸ್ ಮಾಡುವ ಸಿ ಸಿ ಕ್ಯಾಮೆರಾ ಸೆಕ್ಯೂರಿಟಿ ಸಂಸ್ಥೆಯ ಸಕಾಲದ ಎಚ್ಚರಿಕೆ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಬಂದವರು ಯಾರೆನ್ನುವ ನಿಟ್ಟಿನಲ್ಲಿ ಪೊಲೀಸ್ ತನಿಖೆ ನಡೆಯುತ್ತಿದೆ. ಎರಡು ಪ್ರತ್ಯೇಕ ತಂಡಗಳು ಬೇರೆ ಬೇರೆ ಕಡೆ ಹೋಗಿ ತನಿಖೆ ನಡೆಸುತ್ತಿವೆ. ದರೋಡೆ ಮಾಡುವ ಉದ್ದೇಶವಿತ್ತೇ ಎನ್ನುವುದು ಸದ್ಯದ ಅನುಮಾನ. ಐಟಿ, ಇಡಿ ಮೊದಲಾದ ಸರ್ಕಾರಿ ಇಲಾಖೆ ಅಧಿಕಾರಿಗಳೇ ಆಗಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆಸುತ್ತಿದ್ದರು…
ರಾಮನಗರ : ರಾಮನಗರ ಎಂಬ ಹೆಸರಿದ್ರೆ ಅಭಿವೃದ್ಧಿ ಆಗತ್ತಾ? ಕುಮಾರಸ್ವಾಮಿ ರಾಮನಗರವನ್ನ ಅಭಿವೃದ್ಧಿ ಮಾಡಿದ್ದಾರ? ಜಿಲ್ಲೆ ಮಾಡಿ ನಾಲ್ಕು ಬಿಲ್ಡಿಂಗ್ ಕಟ್ಟಿದ್ದು ಬಿಟ್ರೆ ಇನ್ನೇನಾಗಿದೆ ಅಭಿವೃದ್ಧಿ? ಎಂದು ಕಾಂಗ್ರೆಸ್ ಶಾಸಕ ಎಚ್.ಬಾಲಕೃಷ್ಣ HD ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಅವರು ರಾಮನಗರ ಜಿಲ್ಲೆಗೆ ಭೇಟಿ ನೀಡಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಮನಗರ ಜಿಲ್ಲೆ ಮಾಡಿದ್ದಾಗಿ ಹೇಳ್ತಾರಲ್ಲ, ಅಭಿವೃದ್ಧಿ ಮಾಡಿದ್ದಾರಾ? ನಾಲ್ಕು ಬಿಲ್ಡಿಂಗ್ ಕಟ್ಟಿದ್ದು ಬಿಟ್ರೆ, ಇನ್ನೇನಾಗಿದೆ ಅಭಿವೃದ್ಧಿ. 20 ವರ್ಷ ರಾಜ್ಯಭಾರ ಮಾಡಿ ರಾಮನಗರವನ್ನು ಕಸದ ತೊಟ್ಟಿ ಮಾಡಿದ್ದಾರೆ ಎಂದರು. ಕನಕಪುರಕ್ಕೂ ರಾಮನಗರ ಅಭಿವೃದ್ಧಿ ಹೇಗಿದೆ ಗೊತ್ತ. ನಮಗೂ 20 ವರ್ಷ ಕೊಡಿ ಅಭಿವೃದ್ಧಿ ಮಾಡುತ್ತೇವೆ. ಅಭಿವೃದ್ಧಿ ಮಾಡಲಿಲ್ಲ ಅಂದ್ರೆ ಮತ್ತೆ ಬದಲಾವಣೆ ಮಾಡಿ. ಸಿಎಂ ಈಗಾಗಲೇ ಅನುದಾನ ಬಿಡುಗಡೆ ಮಾಡಿದ್ದಾರೆ. ಇನ್ನ ಸ್ವಲ್ಪ ದಿನದಲ್ಲಿ ರಾಮನಗರ ಹೇಗೆ ಬದಲಾವಣೆ ಆಗಲಿದೆ ಅಂತ ನೋಡಿ ಎಂದು ತಿಳಿಸಿದರು.