Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 22 ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಹೆಚ್ಚಾಗಲಿದೆ. ಈ ಜಿಲ್ಲೆಗಳಲ್ಲಿ ಮೇ 22ರವರೆಗೆ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ. ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಈ ಮಳೆ ಕಾಣಿಸಿಕೊಳ್ಳುತ್ತಿದೆ.ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಧ್ಯಮದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50–60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಮೈಸೂರು : ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರ್ಗಿ : ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು. FAQ ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್ಗೆ 7,280 ರೂ.ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಶಿವಾನಂದ ಪಾಟೀಲ ಅವರು ಹೇಳಿದರು. ಪ್ರತಿ ಎಕರೆಗೆ ನಾಲ್ಕು ಕ್ವಿಂಟಾಲ್ನಂತೆ (ಗರಿಷ್ಠ 20 ಕ್ವಿಂಟಾಲ್) ಖರೀದಿ ಮಾಡಲಿದ್ದು, ಖರೀದಿ ಪ್ರಕ್ರಿಯೆ ಆದೇಶ ಹೊರಡಿಸಿದ ದಿನದಿಂದ 90 ದಿನಗಳವರೆಗೆ ನಡೆಯಲಿದೆ. ರೈತರು ತಮ್ಮ ಸಮೀಪದ ಪ್ಯಾಕ್ಸ್, ಎಫ್ಪಿಒ ಮತ್ತು ಟಿಎಪಿಸಿಎಂಎಸ್ಗಳಲ್ಲಿ ರೈತರು ತಮ್ಮ FID ಸಂಖ್ಯೆ ನೀಡಿ ನೋಂದಣಿ ಮಾಡಿಸಿಕೊಂಡು ಸೂರ್ಯಕಾಂತಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ, ಕದನ ನಡೆಯುತ್ತಿದ್ದರ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಒಂದು ವಾರದ ಬಳಿಕ ಮತ್ತೆ ಐಪಿಎಲ್ ಆರಂಭವಾಗಿದ್ದು, ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲು ಪಾರ್ಕಿಂಗ್ ನಿಷೇಧಿಸಲಾಗಿದ್ದು, ಇಂದು ವೀಕೆಂಡ್ ಇರುವುದರಿಂದ ಹಾಗೂ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ಇರುವುದರಿಂದ ಈ ಭಾಗದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಆಗಿದೆ. ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗಾಗಲೇ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು ಸುಮಾರು 1000 ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಪಂದ್ಯ ನಡೆಯೋದೆ ಡೌಟ್? ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಹಲವು ಕಾರಣಗಳಿಗೆ ಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ. ಆದರೆ ಇವತ್ತಿನ ಮ್ಯಾಚ್ ನಡಿಯೋದೇ ಡೌಟ್ ಎನ್ನುವಂತಹ ಮಾತುಗಳು ಕೇಳಿ…
BREAKING : ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ : ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸೇರಿ ಇಬ್ಬರು ದುರ್ಮರಣ!
ಬೆಂಗಳೂರು : ಬೆಂಗಳೂರಲ್ಲಿ ಆಗಾಗ ಹಿಟ್ ಅಂಡ್ ರನ್ ಪ್ರಕರಣಗಳು ನಡೆಯುತ್ತಿರುತ್ತವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಬಲಿಯಾಗಿದ್ದಾರೆ. ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿದ್ದಾರೆ. ವಿಜಯಪುರ ಬೈಪಾಸ್ನ ಸಿಲ್ಕ್ ಫ್ಯಾಕ್ಟರಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ವಿಜಯಪುರ ಸಿಲ್ಕ್ ಫ್ಯಾಕ್ಟರಿ ಬಳಿ ಬೈಕ್ ಸವಾರ ಮತ್ತು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.ಅಪಘಾತದ ಕುರಿತು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಕನ್ನಡಿಗರ ಭಾವನೆಗಳಿಗೆ ಧಕ್ಕೆ, ಸಮಾಜದಲ್ಲಿ ಪರಸ್ಪರ ವೈ ಮನಸು ಸೃಷ್ಟಿ,ಹಾಗು ಶಾಂತಿ ಭಂಗ ಉಂಟು ಮಾಡಲು ಯತ್ನಿಸಿದ ಆರೋಪದ ಅಡಿ FIR ದಾಖಲಿಸಲಾಗಿದೆ. ಹೌದು ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಜಮ್ಶದ್ ಹಾಗು ಸರ್ಫರಾಜ್ ಎಂಬುವವರ ವಿರುದ್ಧ ಕಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಡಿವಾಳ ಸಬ್ ಇನ್ಸ್ಪೆಕ್ಟರ್ ರಮೇಶ್ ಹೂಗಾರ್ ದೂರಿನ ಮೇರೆಗೆ ಇಬ್ಬರ ವಿರುದ್ಧ ದಾಖಲಾಗಿದೆ. ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ಹಿನ್ನೆಲೆ ಮಡಿವಾಳ ಪೊಲೀಸ್ ಠಾಣೆ ಲಿಮಿಟ್ಸ್ ನಲ್ಲಿ ಬರುವ ಕೋರಮಂಗಲದಲ್ಲಿರುವ ಜಿಎಸ್…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿತ್ತು. ಇದೀಗ ಈ ಒಂದು ಸಿಎಂ ಬದ್ಲಾವಣೆ ವಿಚಾರ ತಣ್ಣಗಾಗಿದ್ದರ ಮಧ್ಯ ಮಾಜಿ ಸಂಸದ ಡಿಕೆ ಸುರೇಶ ಅವರು ಸತ್ಯಕ್ಕೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದು ಮುಂದೆಯೂ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಈ ವಿಷಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆಯೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಚರ್ಚೆಗೆ ಉತ್ತರಿಸಿದ ಮಾಜಿ ಸಂಸದ ಡಿಕೆ ಸುರೇಶ್ ಅದಕ್ಕೆ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸದ್ಯಕ್ಕೆ ಸಿದ್ದರಾಮಯ್ಯನವರು ಸಿಎಂ ಆಗಿದ್ದು ಮುಂದೆಯೂ ಅವರೇ ಆಗಿರುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
ನವದೆಹಲಿ : ಇತ್ತೀಚಿಗೆ ಪಹಲ್ಗಾಂ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಮೂಲಕ ದಾಳಿ ಮಾಡಿ ಉಗ್ರರ ನೆಲೆಗಳನ್ನು ದ್ವಂಸಗೊಳಿಸಿ ಸುಮಾರು ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿದ್ದರು. ಇದರ ಬೆನ್ನಲ್ಲೇ ಪಾಕಿಸ್ತಾನದ ಪರವಾಗಿ ವಿಡಿಯೋ ಮಾಡಿ ಭಾರತದ ಗೌಪ್ಯತೆ ಕುರಿತು ಯೂಟ್ಯೂಬ್ ನಲ್ಲಿ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಪಂಜಾಬ್ ನಲ್ಲಿ ಇಬ್ಬರು ಮಹಿಳಾ ಯೂಟ್ಯೂಬ್ ಗಳನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಹರಿಯಾಣದ ಮಹಿಳಾ ಯೂಟ್ಯೂಬರ್ ಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಹರಿಬಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಾಕಿಸ್ತಾನದ ಪರವಾಗಿ ವಿಡಿಯೋ ಮಾಡುತ್ತಿದ್ದ ಇಬ್ಬರು ಯೂಟ್ಯೂಬರ್ಗಳು ಇದೀಗ ಲಾಕ್ ಆಗಿದ್ದಾರೆ. ಯೂಟ್ಯೂಬ್ ನಲ್ಲಿ ಪಾಕಿಸ್ತಾನ ಪರವಾಗಿ ವಿಡಿಯೋ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗುಝಾಲ ಮತ್ತು ಜ್ಯೋತಿರಾಣಿ ಎಂಬ ಇಬ್ಬರು ಮಹಿಳಾ ಯೂಟ್ಯೂಬರ್ ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭಾರತೀಯ ಸೇನೆಯ ಮಾಹಿತಿ ಮತ್ತು ಹರಿಯಾಣ ಸೇರಿದಂತೆ ಸುತ್ತಮುತ್ತಲು ಇರುವ ಸೇನಾ ನೆಲೆಗಳ…
ಮೈಸೂರು : ಮನೆಯಲ್ಲಿ ಸಿಲಿಂಡರ್ ಬದಲಾಯಿಸುವಾಗ ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಏಕೆಂದರೆ ಇದೀಗ ಮೈಸೂರಲ್ಲಿ ಸಿಲಿಂಡರ್ ಖಾಲಿಯಾಗಿದೆ ಎಂದು ಸಿಲಿಂಡರ್ ಬದಲಾಯಿಸುವ ವೇಳೆಗೆಯಾಗಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರಿನ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ. ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿರುವ ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅಂತ ಪಕ್ಷದ ಮುಖಂಡರು ತೀರ್ಮಾನ ಮಾಡಿದ್ದಾರೆ. ಹಾಗಾಗಿ ಅವರ ಒತ್ತಡಕ್ಕೆ ಮಣಿದು ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಪಕ್ಷದ ಮುಖಂಡರಿಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವು ವಿಚಾರದಲ್ಲಿ ಅವರ ಮಾತಿಗೂ ನಾವು ಗೌರವ ಕೊಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಮಾರ್ಗದರ್ಶನವನ್ನು ಕೊಟ್ಟಿದ್ದಾರೆ. ಅದರಂತೆ ಇವತ್ತು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಮುಂದೆ ನೋಡೋಣ. ಪಕ್ಷದ ಮುಖಂಡರು, ಜಿಲ್ಲೆಯ ನಾಯಕರು ಅವರ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ ಅವರ ಮಾತುಗಳಿಗೆ, ನಾಯಕರ ಸೂಚನೆಗೆ ತಲೆಬಾಗಬೇಕಾಗುತ್ತದೆ ಎಂದು ತಿಳಿಸಿದರು. ನಿಖಿಲ್ ಕುಮಾರಸ್ವಾಮಿ ಕೂಡ ಅಭ್ಯರ್ಥಿ ಆಗ್ತಾರೆ ಎನ್ನುವ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಅರ್ಜಿ ಸಲ್ಲಿಕೆ ಮಾಡೋದಕ್ಕೆ ಎಲ್ಲಾ ಕಾರ್ಯಕರ್ತರು ಮತ್ತು ನಿರ್ದೇಶಕರು, ಮಾಜಿ ನಿರ್ದೇಶಕರು, ಮಾಜಿ ಅಧ್ಯಕ್ಷರು ನಮ್ಮ ಜಿಲ್ಲೆಯ ಶಾಸಕರು ಸೇರಿ ಎಲ್ಲರೂ ಒತ್ತಡ ಹಾಕಿದ್ದಾರೆ…













