Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಸೂದೆಗಳಿಗೆ ಒಪ್ಪಿಗೆ ನೀಡಲು ಗವರ್ನರ್ ಗಳಿಗೆ ಕಾಲಮಿತಿ ನಿಗದಿ ವಿಚಾರವಾಗಿ, ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಟ್ವೀಟ್ ನಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ @narendramodi ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ. ಸುಪ್ರೀಂ ಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ…
ಚಿಕ್ಕಮಗಳೂರು : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಘೋಷಿಸಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟದಿಂದ ಅವಾಂತರ ಸೃಷ್ಟಿಯಾಗಿದ್ದು, . ಭಾರಿ ಮಳೆಯಿಂದ KSRTC ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಸಂಬಂಧಿಯಾಗಿರುವ ಹೇಮಂತ್ (18) ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೆನಹಳ್ಳಿ ತೋಟದ ಮನೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ಇದುವರೆಗೂ ನಿಖರವಾದ ಕಾರಣ ತಿಳಿದು ಬಂದಿಲ್ಲ ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕಲಬುರ್ಗಿ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದೂರದ ಬೆಂಗಳೂರು, ಧಾರವಾಡಕ್ಕೆ ತೆರಳಲು ಆಗಲ್ಲ ಹಾಗಾಗಿ ಕಲಬುರ್ಗಿಯಲ್ಲೇ ತುಂಬು ಗರ್ಭಿಣಿಗೆ ಪರೀಕ್ಷೆ ಬರೆಯಲು ಅವಾಕಾಶ ಕಲ್ಪಿಸಿ ಎಂದು KPSC ಗೆ ಹೈಕೋರ್ಟ್ ನಿರ್ದೇಶಿಸಿದೆ. ಈ ಕುರಿತಂತೆ ಕಲಬುರ್ಗಿಯವರಾದ ಮಹಾಲಕ್ಷ್ಮಿ ಎಂಬುವವರು ತುಂಬು ಗರ್ಭಿಣಿಯಾಗಿದ್ದು, ಕಲಬುರ್ಗಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಎಂದು KPSC ಗೆ ಮನವಿ ಮಾಡಿದ್ದರು. ಆದರೆ KPSC ಒಬ್ಬರೋಗೋಸ್ಕರ ಈ ವ್ಯವಸ್ಥೆ ಕಲ್ಪಿಸಲು ಆಗಲ್ಲ ಎಂದು ತಿಳಿಸಿತ್ತು. ಹಾಗಾಗಿ ಮಹಾಲಕ್ಷ್ಮಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಚಿಮ್ಮಕೂಡ ಸುಮಲತಾ ಅವರು KPSC ಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪ್ರಮುಖ ಆರೋಪಿ ನಟಿ ರನ್ಯಾ ರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು DRI ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ. ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣದಲ್ಲಿ ಮಾರ್ಚ್ 3ರಂದು ರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಬಂಧಿಸಿ, 14 ಕೆ.ಜಿ. ಚಿನ್ನವನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು.
ಬೆಂಗಳೂರು : ಮಾಜಿ ಸಚಿವ ಬಿ. ನಾಗೇಂದ್ರಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಹೌದು ಬಿ.ನಾಗೇಂದ್ರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ED ಅಧಿಕಾರಿಗಳು ಪ್ರಸಿಕ್ಯೂಶನ್ ಗೆ ಅನುಮತಿ ಕೋರಿದ್ದರು. ಹೀಗಾಗಿ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಸಿಕ್ಯೂಶನ್ ಗೆ ಕಳೆದ ಒಂದು ತಿಂಗಳ ಹಿಂದೆನೇ ಜಾರಿ ನಿರ್ದೇಶನಲಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂತ ಹಂತವಾಗಿ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಎಂದು ಜಾರಿ ಮಾಡಿದ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಸದ್ಯಕ್ಕೆ ಮಾರ್ಚ್ ತಿಂಗಳ ಹಣ ಅಕೌಂಟಿಗೆ ಜಮೆ ಆಗಲ್ಲ ಎಂದು ತಿಳಿದು ಬಂದಿದೆ. ಹೌದು ರಾಜ್ಯ ಸರ್ಕಾರ 16 ನೇ ಕಂತಿನ ಹಣವನ್ನ ಜನವರಿ ತಿಂಗಳಿನಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಕಳೆದ ಮೂರ್ನಾಲ್ಕು ತಿಂಗಳ ಗೃಹಲಕ್ಷ್ಮಿ ಹಣ ಸರಿಯಾಗ ಖಾತಗೆ ಜಮಾ ಆಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯರು ಅಸಮಾಧಾನವನ್ನ ಹೊರಹಾಕಿದ್ದಾರೆ. ಬಳಿಕ ಜನೆವರಿ ಹಾಗು ಫೆಬ್ರವರಿ ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆ ಆಗಿತ್ತು. ಆದರೆ ಇದೀಗ ರಾಜ್ಯಾಧ್ಯಂತ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.…
ಗದಗ : ಇತ್ತೀಚಿಗೆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗದಗದಲ್ಲಿ ಕಾಮುಕ ತಂದೆ ಒಬ್ಬ ಮಗಳ ಮೇಲೆ ಕಳೆದು ಒಂದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಗದಗ ಜಿಲ್ಲೆಯ ಮುಳಗುಂದದಲ್ಲಿ ಈ ಒಂದು ಘಟನೆ ನಡೆದಿದ್ದು, ನನ್ನ ಅತಿ ಕಳೆದ ಒಂದು ವರ್ಷಗಳಿಂದ ತನ್ನ 16 ವರ್ಷದ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಈ ಹಿನ್ನೆಲೆ ಈಗ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ತಾಯಿ ದೂರು ನೀಡಿದ ನಂತರ ಇದೀಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೆಡಿಕಲ್ ಟೆಸ್ಟ್ ಬಳಿಕ ಬಾಲಕಿ ಗರ್ಭಿಣಿ ಆಗಿರುವುದು ತಿಳಿದುಬಂದಿದೆ. ಇದ್ದ ಆರೋಪಿ ತಂದೆಯನ್ನು ಅರೆಸ್ಟ್ ಮಾಡಿರುವ ಮುಳುಗುಂದ ಠಾಣೆ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು : ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ನಾಲ್ವರು ಶಿಕ್ಷಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕುಂಚೆಬೈಲು ಗಣಪತಿ ದೇಗುಲ ಬಳಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಕೊಗ್ರೆ ಸರ್ಕಾರಿ ಶಾಲೆಯ ಶಿಕ್ಷಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಒಂದು ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಬೀದಿ ನಾಯಿ ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಶಂಕರ್ ಬಸವಣ್ಣಪ್ಪ ಪರಸಪ್ಪಗೋಳ್ ಮೃತ ದುರ್ದೈವಿ ಎಂದು ಬಂದಿದೆ. ಶಿವಶಂಕರಿಗೆ ಕಳೆದ 6 ತಿಂಗಳ ಹಿಂದೆ ಬೀದಿ ನಾಯಿ ಕಚ್ಚಿತ್ತು.ಈ ವೇಳೆ ಗಾಯದ ನಂಜು ಹೆಚ್ಚಾಗಿ ಶಿವಶಂಕರ್ ಊಟ ಮತ್ತು ನೀರನ್ನು ಬಿಟ್ಟಿದ್ದ. ನಿನ್ನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಶಿವಶಂಕರ್ ದಾಖಲಾಗಿದ್ದ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಶಂಕರ್ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.