Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಕ್ರೀಡಾಪಟುಗಳು (ಅಥ್ಲೀಟ್‌ಗಳು) ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಲು ನಿಷೇಧಿತ ಉದ್ದೀಪನ ಮದ್ದು ಸೇವಿಸುವ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ದೇಶದ ಕ್ರೀಡಾ ಕ್ಷೇತ್ರದ ಘನತೆಗೆ ಕಪ್ಪುಚುಕ್ಕೆ ತರುತ್ತಿರುವ ಈ ಪಿಡುಗಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಈಗ ಕಠಿಣ ಕಾನೂನು ಜಾರಿಗೆ ತರಲು ಗಂಭೀರ ಹೆಜ್ಜೆ ಇಟ್ಟಿದೆ. ಡೋಪಿಂಗ್ ನಿಯಮಗಳಲ್ಲಿ ಮಹತ್ವದ ತಿದ್ದುಪಡಿಗಳನ್ನು ತರಲು ನಿರ್ಧರಿಸಲಾಗಿದ್ದು, ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ಕುರಿತ ಹೊಸ ಮಸೂದೆಯನ್ನು (ಬಿಲ್) ಮಂಡಿಸಲು ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ. ಜೈಲು ಶಿಕ್ಷೆ ಮತ್ತು ಭಾರಿ ದಂಡದ ಅಸ್ತ್ರ: ಪ್ರಸ್ತಾಪಿತ ಹೊಸ ನಿಯಮಗಳ ಪ್ರಕಾರ, ಕೇವಲ ಉದ್ದೀಪನ ಮದ್ದು ಸೇವಿಸಿದ ಕ್ರೀಡಾಪಟುಗಳು ಮಾತ್ರವಲ್ಲದೆ, ಅವರಿಗೆ ನಿಷೇಧಿತ ಪದಾರ್ಥಗಳನ್ನು ಪೂರೈಸುವ ಜಾಲದ ಮೇಲೂ ಸರ್ಕಾರ ಮುಗಿಬೀಳಲಿದೆ. ಡ್ರಗ್ಸ್ ಪೂರೈಕೆದಾರರು, ಕ್ರೀಡಾಪಟುಗಳ ಕೋಚ್‌ಗಳು (ತರಬೇತುದಾರರು) ಹಾಗೂ ಈ ಕೃತ್ಯಕ್ಕೆ ಸಾಥ್ ನೀಡುವ ಸಹ ಅಥ್ಲೀಟ್‌ಗಳಿಗೂ ಕಾನೂನಿನ ಉರುಳು ಬಿಗಿಯಾಗಲಿದೆ. ಈ ಅಪರಾಧ ಸಾಬೀತಾದಲ್ಲಿ ತಪ್ಪಿತಸ್ಥರಿಗೆ ಗರಿಷ್ಠ 5 ವರ್ಷಗಳವರೆಗೆ ಜೈಲು…

Read More

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ. ಇನ್ನೂ ಯುಬಿ ಸಿಟಿಯ ಸದರ್ನ್‌ ಸ್ಟಾರ್‌ ಹೋಟೆಲ್‌ ಮುಂಭಾಗ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಕುಸಿದು, ಅಲ್ಲೇ ನಿಂತಿದ್ದ ಇನ್ನೋವಾ ಕಾರು ಸಿಲುಕಿಕೊಂಡಿದೆ. ಕುಸಿದ ರಸ್ತೆ ಕಂಡು ಜನ ಒಂದು ಕ್ಷಣ ಗಾಬರಿಗೊಂಡಿದ್ದಾರೆ. ಬಳಿಕ ಕಳಪೆ ಕಾಮಗಾರಿ ಅಂತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಂದಿನಿ ಲೇಔಟ್‌ನ 4ನೇ ಬ್ಲಾಕ್‌ನ ಒಂದೇ ರಸ್ತೆಯಲ್ಲಿ ಐದಾರು ಮರಗಳು ನೆಲಕಲ್ಕುರುಳಿ ಬಿದ್ದಿವೆ. 5 ಕ್ಕೂ ಹೆಚ್ಚು ವಾಹನಗಳು…

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ಬೇಗೆ ಹಾಗೂ ಉಷ್ಣಾಂಶದಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ವರುಣದೇವ ತಂಪು ಎರೆದಿದ್ದಾನೆ. ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಪ್ರೀ-ಮಾನ್ಸೂನ್ (ಮುಂಗಾರು ಪೂರ್ವ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಒಟ್ಟು 8 ಪ್ರಮುಖ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್. ರಾಜ್ಯದ ಒಟ್ಟು ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ವರುಣನ ಅಬ್ಬರ ಜೋರಾಗಿರಲಿದೆ. ಮಳೆಯ ತೀವ್ರತೆ ಕೊಂಚ ಕಡಿಮೆ ಇರಲಿರುವ ಜಿಲ್ಲೆಗಳೆಂದರೆ ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ. ಈ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Read More

ನವದೆಹಲಿ : ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೀಗ ಚುನಾವಣಾ ದಿನಾಂಕ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗವು ಅಧಿಕೃತವಾಗಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 18 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದೆ. ಈ ಮಹತ್ವದ ಚುನಾವಣೆಯಲ್ಲಿ ಕರ್ನಾಟಕದ 4 ಪ್ರಮುಖ ಸ್ಥಾನಗಳೂ ಸೇರಿರುವುದರಿಂದ ರಾಜ್ಯ ರಾಜಕಾರಣದಲ್ಲೂ ಸಂಚಲನ ಮೂಡಿಸಿದೆ. ಜೂನ್ 1 ರಿಂದ ಪ್ರಕ್ರಿಯೆ ಆರಂಭ: ಚುನಾವಣಾ ಆಯೋಗದ ವೇಳಾಪಟ್ಟಿಯ ಪ್ರಕಾರ, ಜೂನ್ 1 ರಂದು ರಾಜ್ಯಸಭಾ ಚುನಾವಣೆಗೆ ಅಧಿಕೃತ ಅಧಿಸೂಚನೆ (Notification) ಹೊರಬೀಳಲಿದೆ. ಅಧಿಸೂಚನೆ ಪ್ರಕಟಗೊಳ್ಳುತ್ತಿದ್ದಂತೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಬಹುದಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಈಗಾಗಲೇ ತೆರೆಮರೆಯ ಕಸರತ್ತು ನಡೆಸಿವೆ. ನಾಮಪತ್ರ ಸಲ್ಲಿಕೆ ಮತ್ತು ಪರಿಶೀಲನೆ: ಚುನಾವಣಾ ಕಣಕ್ಕಿಳಿಯುವ ಆಕಾಂಕ್ಷಿಗಳಿಗೆ ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ತದನಂತರದ ಪ್ರಕ್ರಿಯೆಯಾಗಿ, ಸಲ್ಲಿಕೆಯಾಗಿರುವ ಎಲ್ಲಾ ನಾಮಪತ್ರಗಳ…

Read More

ಕಲಬುರಗಿ: ಪ್ರೀತಿಸಿ ಕೈಹಿಡಿದ ಪತಿಯೇ ನಿರಂತರವಾಗಿ ನೀಡುತ್ತಿದ್ದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು, ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಕರುಣಾಜನಕ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ಸಂಭವಿಸಿದೆ. ಹೊಟ್ಟೆಯಲ್ಲಿದ್ದ ಕಂದಮ್ಮನೊಂದಿಗೆ ಗೃಹಿಣಿ ಪ್ರಾಣ ಕಳೆದುಕೊಂಡಿರುವುದು ಇಡೀ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣವನ್ನು ಸೃಷ್ಟಿಸಿದೆ. ಔರಾದ್ (ಬಿ) ಗ್ರಾಮದ ನಿವಾಸಿಯಾದ ಶೃತಿ (೨೨) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಶೃತಿ ಅವರು ಸುಮಾರು ಎರಡು ವರ್ಷಗಳ ಹಿಂದೆ ಗೋಪಾಲ್ ಎಂಬಾತನನ್ನು ಪ್ರೀತಿಸಿ, ಆತನ ಗುಣನಡತೆಗಳನ್ನು ನಂಬಿ ವಿವಾಹವಾಗಿದ್ದರು. ಮದುವೆಯ ಆರಂಭದ ದಿನಗಳಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತಾದರೂ, ದಿನ ಕಳೆದಂತೆ ಪತಿ ಗೋಪಾಲ್‌ನ ಅಸಲಿ ಮುಖವಾಡ ಕಳಚಿ ಬಿದ್ದಿತ್ತು. ವಿವಾಹದ ನಂತರ ಗೋಪಾಲ್ ಕುಡಿತ, ಜೂಜಾಟ ಸೇರಿದಂತೆ ಹಲವು ಕೆಟ್ಟ ದುಶ್ಚಟಗಳಿಗೆ ದಾಸನಾಗಿದ್ದ ಎನ್ನಲಾಗಿದೆ. ಇದರಿಂದಾಗಿ ಆತ ಸಾಲದ ಸುಳಿಗೆ ಸಿಲುಕಿದ್ದು, ತನಗಿದ್ದ ಸಾಲವನ್ನು ತೀರಿಸುವ ಸಲುವಾಗಿ ಇದ್ದ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿನ್ನಡೆಯಾಗದಂತೆ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಪ್ರತಿಯಾಗಿ ಒಟ್ಟಾರೆ 6,086 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಇಲಾಖೆಯು ಅಧಿಕೃತವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ. ಹೆಚ್ಚುವರಿ ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆ: ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶನಾಲಯವು ಈ ಬಾರಿ ಶೈಕ್ಷಣಿಕ ಅಗತ್ಯತೆಗಳನ್ನು ಮನಗಂಡು ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಕೋರಿಕೆ ಸಲ್ಲಿಸಿತ್ತು. ಪ್ರಸಕ್ತ ಸಾಲಿನಲ್ಲಿ 100 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಹೊಸದಾಗಿ ಗಣಕ ವಿಜ್ಞಾನ (Computer Science) ವಿಷಯವನ್ನು ಆರಂಭಿಸಲು ಅನುಮತಿ ನೀಡಿರುವುದು ಹಾಗೂ 60 ಸರ್ಕಾರಿ ಪಿಯು ಕಾಲೇಜುಗಳನ್ನು ‘ಆದರ್ಶ ಕಾಲೇಜುಗಳಾಗಿ’ ಉನ್ನತೀಕರಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿತ್ತು. ಇದರೊಂದಿಗೆ ಹಾಲಿ ಇರುವ ಬಡ್ತಿ ಹಾಗೂ ವಯೋನಿವೃತ್ತಿ ಹಿನ್ನೆಲೆಯಲ್ಲಿ ಖಾಲಿಯಾಗುವ ಹುದ್ದೆಗಳನ್ನು ಪರಿಗಣಿಸಿ, ಒಟ್ಟು 6,687 ಅತಿಥಿ ಉಪನ್ಯಾಸಕರ ನೇಮಕಾತಿಗೆ ಮತ್ತು ಅವರ…

Read More

ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರ್ಕಾರವು ಮತ್ತೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆಯೇ ಎಂಬ ಬಲವಾದ ಅನುಮಾನ ಹಾಗೂ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಗುರುವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಲಾಡ್ಲೆ ಮಶಾಕ್ ದರ್ಗಾ ಗಲಾಟೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಲಿಖಿತ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದಾಗಿ ಗಲಾಟೆಯಲ್ಲಿ ಭಾಗಿಯಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಪ್ರಮುಖ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ 2022ರ ಮಹಾಶಿವರಾತ್ರಿಯ ಸಂದರ್ಭದಲ್ಲಿ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಪೂಜೆ ನೆರವೇರಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಭಾರಿ ಸಂಘರ್ಷ ಏರ್ಪಟ್ಟಿತ್ತು. ಕೆಲವು ಕಿಡಿಗೇಡಿಗಳು ಪವಿತ್ರ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂಬ ಆರೋಪ ಕೇಳಿಬಂದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಈ…

Read More

ಬೆಂಗಳೂರು : ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚಿತವಾಗಿರುವ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾ೧ಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಸಂಬಂಧ ಕೇಂದ್ರ ತನಿಖಾ ವಿಭಾಗ (ಸಿಬಿಐ) ಅಥವಾ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್‌ಗೆ ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಗೃಹ ಹಾಗೂ ಕಾನೂನು ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸರ್ಕಾರ ಸಮಾಲೋಚನೆ ನಡೆಸಿದೆ. ಪ್ರಕರಣದ ವಿಚಾರಣೆ ಮುಂದಿನ ವಾರ ಮತ್ತೆ ಸುಪ್ರೀಂ ಕೋರ್ಟ್‌ ಮುಂದೆ ಬರಲಿದ್ದು, ಅಷ್ಟರಲ್ಲಿ ಕೋರ್ಟ್‌ಗೆ ತನ್ನ ನಿಲುವು ಏನೆಂದು ಸರ್ಕಾರ ಸ್ಪಷ್ಟಪಡಿಸಲಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ಸೌಜನ್ಯ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪು ಬಳಿಕ ಮಗಳ ಹತ್ಯೆ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೃತ ಸೌಜನ್ಯ ತಾಯಿ ಕುಸುಮಾವತಿ ಗೌಡ ಮೊರೆ ಹೋಗಿದ್ದರು.…

Read More

ಬೆಳಗಾವಿ: ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಮಂಡೋಳಿ ರಸ್ತೆಯಲ್ಲಿರುವ ಗೋಡ್ಸೆವಾಡಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ, ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು. ಸ್ಥಳಕ್ಕೆ ಟಿಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ನಿಖರವಾದ ಕಾರಣ ಪೊಲೀಸರ ತನಿಖೆಯಿಂದಲೇ ಸ್ಪಷ್ಟವಾಗಲಿದೆ.

Read More

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ನ ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ಪ್ರವೇಶ ಕಲ್ಪಿಸುವ ಡಿಸಿಇಟಿ ಹಾಗೂ ಎಂ.ಟೆಕ್/ಎಂಇ ಪ್ರವೇಶ ಪರೀಕ್ಷೆಗಳು ಮೇ 23ರಂದು ನಡೆಯಲಿದ್ದು ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಎರಡೂ ಪರೀಕ್ಷೆಗಳು ಅಂದು ಬೆಂಗಳೂರು, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕಲ್ಬುರ್ಗಿ, ಮೈಸೂರು ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ. ಡಿಸಿಇಟಿ ಪರೀಕ್ಷೆಯನ್ನು 51 ಕೇಂದ್ರಗಳಲ್ಲಿ ಒಟ್ಟು 21,095 ಹಾಗೂ ಎಂ.ಟೆಕ್ ಪರೀಕ್ಷೆಯನ್ನು 26 ಕೇಂದ್ರಗಳಲ್ಲಿ ಒಟ್ಟು 12,116 ಅಭ್ಯರ್ಥಿಗಳು ಬರೆಯುತ್ತಿದ್ದಾರೆ. ಈ ಎರಡೂ ಕೋರ್ಸ್ ಗಳಿಂದ ಒಟ್ಟು 34,211 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.. ಇದಲ್ಲದೆ ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ಕೂಡ‌ ಬೆಂಗಳೂರಿನಲ್ಲಿ ಅಂದು ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

Read More