Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಖಾಸಗಿ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕು ಎಂಬ ಮಸೂದೆ ಜಾರಿಗೊಳಿಸಲು ಮುಂದಾಗಿದ್ದ ಕರ್ನಾಟಕ ಸರ್ಕಾರ, ಕಂಪೆನಿ ಮಾಲೀಕರ ಒತ್ತಡದಿಂದ ಹಿಂದೆ ಸರಿದಿದೆ. ಈಗ ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರದ ಯೋಜನೆಯು ಸಂವಿಧಾನ ವಿರೋಧಿ ಎಂದು ಆರೋಪಿಸಲಾಗಿದೆ. ನಗರದ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ ಲೆಕ್ಕ ಪರಿಶೋಧಕಿ ಆರ್.ಅಮೃತಲಕ್ಷ್ಮಿ ಸಲ್ಲಿಸಿರುವ ಅರ್ಜಿ ಕುರಿತಂತೆ ವಕೀಲರು, ಇದೊಂದು ತುರ್ತು ವಿಚಾರ. ತಕ್ಷಣ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವನ್ನು ಒತ್ತಾಯಿಸಿದರು. ಇದಕ್ಕೆ ನ್ಯಾಯಪೀಠ, ಆಗಸ್ಟ್ 7ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು. ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಯು ಸಂವಿಧಾನದ 19 (1) (ಡಿ), 19 1 (ಇ), ಜಿ ಮತ್ತು 14ನೇ ವಿಧಿಗಳಿಗೆ ವಿರುದ್ಧವಾಗಿದೆ. ಈ ಮಸೂದೆ ಅನುಷ್ಠಾನಗೊಂಡಲ್ಲಿ ಸ್ವಾಭಾವಿಕ ನ್ಯಾಯತತ್ವಗಳ ಉಲ್ಲಂಘನೆಯಾಗುತ್ತದೆ. ಇಂಥ ಕಾಯ್ದೆಯನ್ನು ಜಾರಿಗೊಳಿಸುವ ಅಧಿಕಾರ ರಾಜ್ಯ ಶಾಸನ ಸಭೆಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.…
ಮಂಗಳೂರು : ಮಂಗಳೂರಿನ ಜೈಲಿನ ಮೇಲೆ ಇಂದು ನಸುಕಿನ ಜಾವದಲ್ಲಿ ಸುಮಾರು ಏಕಕಾಲದಲ್ಲಿ 150 ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದು ಗಾಂಜಾ, ಡ್ರಗ್ಸ್, ಮೊಬೈಲ್ ಫೋನ್ಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಹೌದು ಇಂದು ಬೆಳ್ಳಂ ಬೆಳಿಗ್ಗೆ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದೆ. ಜೊತೆಗೆ ಮೊಬೈಲ್ ಫೋನ್ಗಳು, ಡಿವೈಸ್ಗಳು ಪತ್ತೆಯಾಗಿವೆ. ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿದ್ದು ಅಲ್ಲಿ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ.ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ…
ನಮ್ಮಲ್ಲಿ ಅನೇಕರು ನಾವು ಮಾಡಿದ ಸಾಲವನ್ನು ತೀರಿಸಲಾಗದ ಪರಿಸ್ಥಿತಿಯಲ್ಲಿದ್ದೇವೆ. ಎಷ್ಟೇ ಕಷ್ಟವಾದರೂ ಅನುಭವಿಸುತ್ತೇವೆ. ಎಷ್ಟು ಸಾಧ್ಯವೋ ಅಷ್ಟು ಸಂಪಾದಿಸೋಣ. ಸಾಲವನ್ನು ಮರುಪಾವತಿಸಲು ಸ್ವಲ್ಪಮಟ್ಟಿಗೆ ಚಿಪ್ ಮಾಡುವ ಮೂಲಕ ಹಣವನ್ನು ಉಳಿಸೋಣ. ಆದರೆ ಕೊನೆಗೆ ಸಾಲ ಮರುಪಾವತಿಗೆ ಹಣ ಬಳಕೆಯಾಗುತ್ತಿಲ್ಲ. ಬೇರೆ ಯಾವುದಾದರೂ ನಿಮಗೆ ವೆಚ್ಚವಾಗುತ್ತದೆ. ಸಾಲ ತೀರಿಸಲಾಗದೆ ಬಡ್ಡಿ ಕಟ್ಟಲಾಗದೆ ನರಳುತ್ತಿರುವವರು ಬಹಳ ಮಂದಿ ಇದ್ದಾರೆ. ಒಂದು ಲಕ್ಷ ರೂಪಾಯಿ ಸಾಲಕ್ಕೆ ಒಂದು ಲಕ್ಷ ರೂಪಾಯಿ ಬಡ್ಡಿ ವಿಧಿಸಲಾಗುತ್ತದೆ. ಆದರೆ ಮೂಲ ಮೊತ್ತದ ಒಂದು ಲಕ್ಷ ರೂಪಾಯಿ ಹಿಂತಿರುಗಿಸಲಾಗದ ಪರಿಸ್ಥಿತಿ ಇರುತ್ತದೆ. ಆದಾಯವನ್ನು ಸರಿಯಾಗಿ ಉಳಿಸುವುದು ಮತ್ತು ಸಾಲವನ್ನು ಮರುಪಾವತಿ ಮಾಡುವುದು ಪರಿಹಾರವಾಗಿದೆ ಎಂದು ಆಧ್ಯಾತ್ಮಿಕವಾಗಿ ಹೇಳಲಾಗುತ್ತದೆ. ಅದು ಏನು ಎಂಬುದನ್ನು ನಾವು ಈ ಪೋಸ್ಟ್‌ನಲ್ಲಿ ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಊಟ ಒಗ್ಗದ ಕಾರಣದಿಂದ ಅವರು ಮನೆ ಊಟ, ಬಟ್ಟೆ, ಪುಸ್ತಕ ಸೇರಿದಂತೆ ಹಲವು ವಸ್ತುಗಳ ಬೇಡಿಕೆಗೆ ರಿಟ್ ಅರ್ಜಿ ಸಲ್ಲಿಸಿದರು. ಇಂದು ಮನೆ ಊಟಕ್ಕೆ ಸಲ್ಲಿಸಿದ ಅರ್ಜಿಯ ಕುರಿತು ತೀರ್ಪು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಲಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಹಲವಾರು ರೀತಿಯಲ್ಲಿ ತನಿಖೆ ನಡೆಸಿದ್ದು, ಹಲವು ಸಾಕ್ಷಾಧಾರಗಳನ್ನು ಕೂಡ ಸಂಗ್ರಹಿಸಿದ್ದಾರೆ. ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಊಟ ಸೇರುತ್ತಿಲ್ಲ. ಹಾಗಾಗಿ ಅವರು ಮನೆ ಊಟಕ್ಕಾಗಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಒಂದುವರೆ ತಿಂಗಳಿನಿಂದ ಜೈಲಿನಲ್ಲಿ ಇರುವುದರಿಂದ ಸಹಜವಾಗಿ ಅವರು ತೂಕ ಕಳೆದುಕೊಂಡಿದ್ದಾರೆ ಎಂದು ಜೈಲಾಧಿಕಾರಿಗಳು ಕೂಡ ತಿಳಿಸಿದ್ದಾರೆ. ನಟ ದರ್ಶನ್ ಅವರು ಸಲ್ಲಿಸಿರುವ ರಿಟ್ ಅರ್ಜಿಗೆ ಜೈಲಾಧಿಕಾರಿಗಳು ಹಾಗೂ ಸರ್ಕಾರದ ಎಸ್ಪಿಪಿ…
ಬೆಂಗಳೂರು : ದುಬೈನಿಂದ ಸುಮಾರು 1.68 ಕೋಟಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕಸ್ಟಂ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ಮಾಡಿದ್ದು, 1.68 ಕೋಟಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಚಿನ್ನ ಸಾಗಿಸುತ್ತಿದ್ದ ಮುರ್ತಾಜಿಂ ಹಾಗೂ ಶೇಕ್ ಮಹಮ್ಮದ್ ಇಮ್ರಾನ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈ ನಿಂದ ಬೆಂಗಳೂರಿಗೆ EK 564 ವಿಮಾನದಲ್ಲಿ ಈ ಇಬ್ಬರು ಬಂದಿದ್ದರು ಎಂದು ತಿಳಿದುಬಂದಿದೆ. ವಿದೇಶದಿಂದ ಬಟ್ಟೆಗಳಲ್ಲಿ ಮರೆಮಾಚಿ ಚಿನ್ನ ಸಾಗಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ಇದೀಗ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಬಳಿಕ ಪೊಲೀಸರಿಗೆ ಒಪ್ಪಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ವಾಹನಗಳ ಎಮಿಷನ್ ಟೆಸ್ಟಿಂಗ್ ದರದಲ್ಲಿ ಕೂಡ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ದ್ವಿಚಕ್ರ ವಾಹನ, ಆಟೋ, ಕಾರು, ಲಾರಿ, ಬಸ್ಸು ಯಾವುದೇ ವಾಹನದ ಚಾಲಕರಾಗಿರಲಿ, ಮಾಲೀಕರಾಗಿರಲಿ ಎಮಿಷನ್ ಟೆಸ್ಟ್ ಮಾಡಿಸಿರುವುದು ಅನಿವಾರ್ಯ. ಇದೀಗ ಯಾವುದೇ ಸಮಯದಲ್ಲಿ ಎಮಿಷನ್ ಟೆಸ್ಟ್ ದರ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಸುಳಿವು ದೊರೆತಿದೆ. 2021 ರಲ್ಲಿ ಎಮಿಷನ್ ಟೆಸ್ಟಿಂಗ್ ದರವನ್ನ ಹೆಚ್ಚು ಮಾಡಲಾಗಿತ್ತು. ಈಗ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈ ಒಂದು ವಿಷಯ ಕುರಿತಂತೆ ಸಾರಿಗೆ ಇಲಾಖೆಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್ ಒತ್ತಾಯ ಮಾಡಿದೆ. ಸರ್ಕಾರ ಹಿಂದಿನ ದರಕ್ಕಿಂತ ನಾಲ್ಕರಷ್ಟು ಹೆಚ್ಚು ಪಡೆಯಲು ತೀರ್ಮಾನ ಮಾಡಿದೆ ಎನ್ನಲಾಗಿದೆ. ಪೆಟ್ರೋಲ್, ಡಿಸೇಲ್ ದರ ಹೆಚ್ಚಳವಾಗಿದೆ. ಕೆಲಸಗಾರರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಸರ್ಕಾರ ದರ ಏರಿಕೆ ಮಾಡಬೇಕೆಂದು ಎಮಿಷನ್…
ಬೆಂಗಳೂರು : ಮುಡಾದಲ್ಲಿ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ವಿಧಾನಸೌಧದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾ ಅರವಿಂದ ಬೆಲ್ಲದ ಮಾತನಾಡಿ, ಜುಲೈ 29ಕ್ಕೆ ಅಂದರೆ ಸೋಮವಾರದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ. ಮೂಡ ಹಗರಣದ ಚರ್ಚೆಗೆ ಇಂದು ಕೂಡ ಮನವಿ ಮಾಡುತ್ತೇವೆ ಈ ಒಂದು ಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದಾರೆ ಅಧಿವೇಶನದಲ್ಲಿ ಚರ್ಚೆಯಾದರೆ ಸತ್ಯ ಸತ್ಯತೆ ಹೊರಬರಲಿದೆ. ಈ ಹಿಂದೆ ಅರ್ಕಾವತಿ ಹಗರಣ ಆಗಿದ್ದಾಗ ಸಿಎಂ ಸಿದ್ದರಾಮಯ್ಯ ಧರಣಿ ಮಾಡಿದ್ದರು. ಹಾಗಾಗಿ ನಾವು ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ ಎಂದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ. ಹಗರಣ ಖಂಡಿಸಿ ಪಾದಯಾತ್ರೆ ಮಾಡುತ್ತೇವೆ. ಇಂದು…
ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ಅಹೋರಾತ್ರಿ ಧರಣಿಗೆ ಸಂಬಂಧಿಸಿದಂತೆ ನಿನ್ನೆ ರಾತ್ರಿಯಿಂದ ಬಿಜೆಪಿ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಭಜನೆ, ಜಾಗರಣೆ ನಡೆಸಿದರು. ಬೆಳಗ್ಗೆ ಯೋಗ ವ್ಯಾಯಾಮ ಕೂಡ ಮಾಡಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇನ್ನೂ ಮುಡಾ ಹಗರಣಕ್ಕೆ ಚರ್ಚೆಗೆ ಅವಕಾಶ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಧಿವೇಶನವನ್ನು ಮುಂದುವರೆಸುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅಧಿವೇಶನ ಮುಂದುವರೆಸುವುದು ಬಿಡುವುದು ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟಿದ್ದು. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿವೇಶನ ಮುಂದುವರಿಸಬೇಕು ಬೇಡವೋ ಎಂಬುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.ನಾವು ಕೇವಲ ಟೀಚರ್ ಇದ್ದಂಗೆ ರಾಜ್ಯ ಸರ್ಕಾರ ಹೇಳಿದಂತೆ ನಾವು ಕೇಳುತ್ತೇವೆ ಎಂದು ಬಸವರಾಜ್ ಹೊರಟ್ಟಿ ತಿಳಿಸಿದರು. ಇನ್ನೂ ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು,…
ವಿಜಯಪುರ : ಕಾಲುವೆಗೆ ಬಿದ್ದಂತಹ ಮೇಕೆ ಮರಿಯನ್ನು ರಕ್ಷಿಸಲು ಕಾಲುವೆಗೆ ಜಿಗಿದ ಕುರಿಗಾರಿ ಒಬ್ಬ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ನಾಗಬೇನಾಳ ಬಳಿ ನಡೆದಿದೆ. ನೀರುಪಾಲಾದ ಕುರಿಗಾಹಿಯನ್ನು ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ(28) ಎಂದು ಗುರುತಿಸಲಾಗಿದೆ. ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ. ಆ ಮರಿಯನ್ನು ರಕ್ಷಣೆ ಮಾಡಲು ಮಂಜುನಾಥ ಕಾಲುವೆ ಜಿಗಿದಿದ್ದು, ಕುರಿ ಮರಿಯನ್ನು ರಕ್ಷಣೆ ಮಾಡಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಘಟನಾ ಸ್ಥಳದಲ್ಲಿ ಬಾಗೇವಾಡಿಯ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ಅಗ್ನಿಶಾಮಕ ದಳ ತಂಡದವರು ಕೂಡ ಆಗಮಿಸಿ ಮಂಜುನಾಥನ ಶುಭ ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಂಡಿದೆ. ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡುತ್ತಿದ್ದ ಬಿಜೆಪಿ, ಜೆಡಿಎಸ್ ಸದಸ್ಯರು ಬುಧವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಧರಣಿ ಮುಂದುವರಿಸಿದ ಬಿಜೆಪಿ, ಜೆಡಿಎಸ್ ಸದಸ್ಯರು ಭಜನೆ, ಹಾಡಿನ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದರು. ಕಂಜಿರಾ, ತಾಳ ಬಡಿಯುತ್ತಾ ಭಜನೆ ಜೊತೆಗೆ ಸಿನಿಮಾದ ಹಾಡುಗಳನ್ನೂ ಹಾಡಿದ್ದಾರೆ. ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ಸದಸ್ಯರು ವಿಧಾನಸೌಧದ ಕಾರಿಡಾರ್ನಲ್ಲಿ ಭಜನೆ ಮಾಡುತ್ತಾ ಹೆಜ್ಜೆ ಹಾಕಿದರು. ಇನ್ನು ಹಗರಣಗಳ ಕುರಿದಂತೆ ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ. ಅಶ್ವತ್ಥನಾರಾಯಣ್ ವಾಲ್ಮೀಕಿಯ ಕರ್ಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಚರ್ಚೆಗೆ ಅವಕಾಶ ನೀಡುವವರಿಗು ಧರಣಿ ಮಾಡುತ್ತೇವೆ ವಿಧಾನಸಭದಲ್ಲಿ ಶಾಸಕ ಅಶ್ವಥ್ ನಾರಾಯಣ ಆಗ್ರಹಿಸಿದರು…