Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಚಿತ್ರದುರ್ಗ ಮುರುಘರಾಜೇಂದ್ರ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಎಸ್.ಕೆ.ಬಸವರಾಜನ್ ಖುಲಾಸೆಗೊಂಡಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ನಿನ್ನೆ ಎಸ್. ಕೆ.ಬಸವರಾಜನ್ ಅವರನ್ನು ವಂಚನೆ ಆರೋಪದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಮುರಘಾ ಮಠದ SJM ಕೋ-ಆಪರೇಟಿವ್ ಸುಸೈಟಿ ಹಣದಿಂದ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಆರೋಪಿ ಬಸವರಾಜನ್ ವಿರುದ್ಧ ದೂರು ನೀಡಲಾಗಿತ್ತು. ಮಠದ ಪರವಾಗಿ ವಿಜಯಕುಮಾರ್ ಎನ್ನುವರು 2013ರ ಆಗಷ್ಟ್ 16ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣವನ್ನು ಕೋರ್ಟ್ ವಜಾ ಮಾಡಿದೆ. ಇದರಿಂದ ಮುರುಘರಾಜೇಂದ್ರ ಮಠದ ಹಣಕಾಸು ದುರುಪಯೋಗ, ವಂಚನೆ ಆರೋಪದಿಂದ ಎಸ್.ಕೆ.ಬಸವರಾಜನ್ ಅವರು ಖುಲಾಸೆಗೊಂಡಿದ್ದಾರೆ.ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿದ್ದರು.
ಬಾಗಲಕೋಟೆ : ಕಳೆದ ವರ್ಷ ಮಂಡ್ಯ, ಮೈಸೂರು ಭಾಗದಲ್ಲಿ ಮಕ್ಕಳ ಭ್ರೂಣ ಪತ್ತೆ ಹಾಗೂ ಹತ್ಯೆ ಇಡೀ ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಕೂಡ ಬಂಧಿಸಲಾಗಿತ್ತು.ಆದರೂ ಈ ಒಂದು ಭ್ರೂಣ ಹತ್ಯೆಗಳು ನಿಲ್ಲುತ್ತಿಲ್ಲ. ಹಾಗಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಬಾದಾಮಿ ಪಟ್ಟಣದಲ್ಲಿನ ಪ್ರತಿಷ್ಟಿತ ಆಸ್ಪತ್ರೆಗಳ ಆಸ್ಪತ್ರೆಗಳ ಮೇಲೆ ದೆಹಲಿಯ ಕೇಂದ್ರ ಪ್ರಸವಪೂರ್ವ ಭ್ರೂಣ ಪತ್ತೆ ನಿಷೇಧ ತಂಡ ದಾಳಿ ಮಾಡಿದೆ. ಇತ್ತೀಚೆಗೆ ಆಯಾ ಒಬ್ಬಳು ಮಹಾರಾಷ್ಟ್ರ ಮೂಲದ ಮಹಿಳೆಯ ಗರ್ಭಪಾತ ಮಾಡಿ ಅವಳ ಸಾವಿಗೆ ಕಾರಣಳಾಗಿದ್ದಳು. ಆ ಪಾತಕಿ ಈಗ ಅಂದರ್ ಆಗಿದ್ದಾಳೆ. ಅದು ಮಾಸುವ ಮುನ್ನವೇ ಮತ್ತಿಬ್ಬರು ವೈದ್ಯೆಯರು ಗರ್ಭಪಾತ ದಂಧೆ ಸುಳಿಯಲ್ಲಿ ಸಿಲುಕಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೇಂದ್ರ ತಂಡ ದಾಳಿ ನಡೆಸಿದೆ. ಮುಧೋಳ ನಗರದ ಮಲಘಾಣ್ ಆಸ್ಪತ್ರೆ ಮೇಲೆ ಕೇಂದ್ರದ 10 ಜನರ ತಂಡ ದಾಳಿ ಮಾಡಲಾಗಿದ್ದು, ಡಾ.ಆಶಾ ಮಲಘಾಣ್ ಎಂಬುವವರು ಸ್ಕ್ಯಾನಿಂಗ್ ಸೆಂಟರ್ ಬಳಕೆ ಮಾಡುತ್ತಿದ್ದಾರೆ. ಅದರ ಮೂಲಕ ಬ್ರೂಣ…
ಕೋಲಾರ : ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜೆಡಿಎಸ್ MLC ಸೂರಜ್ ರೇವಣ್ಣ ಅವರು ನಿನ್ನೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ತಾಯಿ ಭವಾನಿ ರೇವಣ್ಣ ಅವರೊಂದಿಗೆ ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಹೌದು ಭವಾನಿ ರೇವಣ್ಣ ಹಾಗೂ ಪುತ್ರ ಸೂರಜ್ ರೇವಣ್ಣ ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ತಿಂಗಳಿಗೊಮ್ಮೆ ನಡೆಯುವ ಸಂಕಷ್ಟ ಚತುರ್ಥಿಯಂದು ಸೂರಜ್ ರೇವಣ್ಣ ಈ ದೇವಸ್ಥಾನಕ್ಕೆ ಬಂದು ಹೋಮ ಹವನ, ಮಹಾ ಮಂಗಳಾರತಿ, ಅಭಿಷೇಕ, ವಿಶೇಷ ಪೂಜೆಸಲ್ಲಿಸುವ ಸಂಪ್ರದಾಯ ಮುಂದುವರೆಸಿಕೊಂಡು ಬರುತ್ತಿದ್ದಾರೆ. ಕಳೆದ ಜೂನ್ ಒಂದು ತಿಂಗಳು ಪೂರ್ತಿ ಜೈಲು ಸೇರಿದ್ದರಿಂದ ಅವರಿಗೆ ದೇವಸ್ಥಾನಕ್ಕೆ ಆಗಮಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಿನ್ನೆ ಜೈಲಿನಿಂದ ಬಿಡುಗಡೆಯಾದ ಬಳಿಕ ತಾಯಿ ಭವಾನಿ ರೇವಣ್ಣ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ನ್ಯಾಯಾಲಯದಿಂದ ಬೇಲ್ ಸಿಕ್ಕಿದ ಮೇಲೆ ತಾಯಿಯೊಂದಿಗೆ ದೇವಸ್ಥಾನಕ್ಕೆ ಬಂದು…
ಬೆಂಗಳೂರು : ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನ ನೀಡಿದ್ದು, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆ ಹಾನಿಯಾದ 39 ಲಕ್ಷ ರೈತರಿಗೆ ಸುಮಾರು 3535.30 ಕೋಟಿ ರು.ಗಳ ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ನಿನ್ನೆ ಕೇಶವ್ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಲದೆ ಹಿಂಗಾರು ಹಂಗಾಮಿನಲ್ಲಿ ಕೂಡ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅತಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿತ್ತು.ಈ ಎರಡು ಜಿಲ್ಲೆಗಳ 4859 ರೈತರಿಗೆ 5.66 ಕೋಟಿ ರು.ಗಳ ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ತಿಳಿಸಿದರು. ಹಿಂದಿನ ವರ್ಷಗಳಿಗೆ ಹೋಲಿಸಿದರೆ 2023-24ನೇ ಸಾಲಿನಲ್ಲಿ ಅತಿ ಹೆಚ್ಚು ಪರಿಹಾರ ನೀಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಹೋದ ನಂತರ ಕೇಂದ್ರ ಸರ್ಕಾರ 3454.22 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಈ ಪೈಕಿ 32.66.42 ಕೊಟಿ ರು.ಗಳನ್ನು ಬೆಳೆಹಾನಿ ಪರಿಹಾರ ಹಾಗೂ 232.42 ಕೋಟಿ…
ಬೆಂಗಳೂರು: ಪ್ರಸಕ್ತ ವರ್ಷ ಸುರಿದ ಭಾರೀ ಮಳೆಗೆ ಜುಲೈ ಮುಕ್ತಾಯಕ್ಕೆ ಒಂದು ವಾರ ಬಾಕಿ ಇರುವಂತೆಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಮೂಲಕ ಎರಡು ವರ್ಷಗಳ ಬಳಿಕ ಡ್ಯಾಂ ತುಂಬಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ. ಕಳೆದ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಡುವು ಕೊಟ್ಟಿದ್ದ ವರುಣದೇವ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಪರಿಣಾಮ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. ಇದರಿಂದ ಹಳೇ ಮೈಸೂರು ಭಾಗದ ಜನರಿಗೆ ಮತ್ತು ಕಾವೇರಿ ಕೊಳ್ಳದ ರೈತರಲ್ಲಿ ಮಂದಹಾಸ ಮನೆ ಮಾಡಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಾವೇರಿ ಸೇರಿದಂತೆ ಬಹುತೇಕ ಜಲಾಶಯಗಳು ಭರ್ತಿಯಾಗಲಿಲ್ಲ. ಈ ವರ್ಷ ಮುಂಗಾರು ಆರಂಭದಿಂದಲೂ ಕಾವೇರಿ ನದಿ ಕಣಿವೆಯಲ್ಲಿ ಉತ್ತಮ ಮಳೆಯಾಗಿದ್ದು, ಕೆಆರ್‌ಎಸ್ ಜಲಾಶಯಕ್ಕೆ ಕಳೆದ 3 – 4 ವಾರಗಳಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿತ್ತು. ಬುಧವಾರ ಸಂಜೆ 6 ಕ್ಕೆ ಜಲಾಶಯವು…
ಧಾರವಾಡ : ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯ ಈ ತಾಲೂಕುಗಳಲ್ಲಿ ರಜೆ ಘೋಷಣೆ ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು ಇದೀಗ ಬೆಳಗಾವಿಯ ಖಾನಾಪುರ ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ಮತ್ತು ನಾಳೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದ ಹಿನ್ನೆಲೆಯಲ್ಲಿ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ನಂದಿನಿ ಹಾಲಿನ ದರದಲ್ಲಿ ಏರಿಕೆ ಮಾಡಿ ಕರ್ನಾಟಕ ಹಾಲು ಒಕ್ಕೂಟ (KMF) ಹೊಸ ದರ ಪರಿಷ್ಕರಣೆ ಮಾಡಿತ್ತು. ಇನ್ನೂ ಈ ಕುರಿತು KMF ನಿರ್ಧಾರ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರದ ನಿವಾಸಿ ಡಾ.ಆರ್.ಅರ್ಮಿತಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಂದಿನಿ ಹಾಲಿನ ಬೆಲೆ ಏರಿಕೆಯೊಂದಿಗೆ ಹಾಲಿನ ದರದ ಪ್ರಮಾಣ ಹೆಚ್ಚಾಗಿದೆ ಎಂದು ತಿಳಿಸಿದರು. ಹೆಚ್ಚುವರಿ 50 ಎಂಎಲ್ ನೀಡುತ್ತಿರುವುದರಿಂದ ಬೆಲೆ ಹೆಚ್ಚಳ ಮಾಡಲಾಗಿದೆ ಎಂಬ ಕೆಎಂಎಫ್ ವಾದ ತರ್ಕಬದ್ಧವಾಗಿಲ್ಲ. ಇದು ವಾಣಿಜ್ಯ ಕೌಶಲ್ಯದ ನಿಯಮಗಳಿಗೆ ವಿರುದ್ಧವಾಗಿದೆ. ಜತೆಗೆ, ಸಂವಿಧಾನದ ಪರಿಚ್ಛೇದ 14(ಸಮಾನತೆ) ವಿರುದ್ಧವಾಗಿದೆ. ದೇಶದ ಯಾವುದೇ ಹಾಲು ಒಕ್ಕೂಟ ಹಾಲಿನ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ, ಬೆಲೆ ಏರಿಕೆ ಮಾಡಿರುವ ಕೆಎಂಎಫ್ ಕ್ರಮ…
ಬೆಂಗಳೂರು : ಕಾಂಗ್ರೆಸ್ ಪುರಸಭಾ ಸದಸ್ಯನನ್ನ ನಡು ರಸ್ತೆಯಲ್ಲಿ ಬರ್ಬರವಾಗಿ ಕೊಲೆಗೈದ ಘಟನೆ ಆನೇಕಲ್ ಪಟ್ಟಣದ ಬಹದ್ದೂರ್ ಪುರ ಬಳಿ ನಿನ್ನೆ ರಾತ್ರಿ ನಡೆದಿದೆ. ಆನೇಕಲ್ ಪುರಸಭಾ ಸದಸ್ಯ ರವಿ ಎಂಬಾತನೇ ಕೊಲೆಯಾದ ದುರ್ದೈವಿ. ಮುಖಕ್ಕೆ ಬಟ್ಟೆ ಸುದ್ದಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಲ್ಲೂಕಿನ ಪುರಸಭೆಯ ಸದಸ್ಯ ರವಿ ಆಲಿಯಾಸ್ ಸ್ಕ್ರಾಪ್ ರವಿ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸಿಕ್ಕ ಸಿಕ್ಕ ಕಡೆ ಮಚ್ಚು ಬೀಸಿ ಕೊಲೆಗೈದಿರುವಂತ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೇ ವೈಷಮ್ಯದಿಂದ ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಂಚು ಹಾಕಿ ರವಿಯನ್ನ ಅಡ್ಡಗಟ್ಟಿ ಮಾರಕಸ್ತ್ರದಿಂದ ಹಲ್ಲೆ ನಡೆಸ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ಗ್ರಾಮಾಂತರ ಎಸ್.ಪಿ.ಸಿ.ಕೆ ಬಾಬಾ ಅವರು, ರಾತ್ರಿ 8.30 ಸುಮಾರಿಗೆ ವ್ಯಕ್ತಿ ಒಬ್ಬ ಬಂದಿದ್ದಾನೆ.…
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣ ಇನ್ನೂ ತನಿಖೆಯಲ್ಲಿರೂವಾಗ್ಲೇ ಇದೀಗ ಬೋವಿ ನಿಗಮದಲ್ಲೂ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಪ್ರಕರಣ ಸಂಬಂಧ ಇದೀಗ ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಹೌದು 2021-22ನೇ ಸಾಲಿನಲ್ಲಿ ಬೋವಿ ಸಮುದಾಯದ ಉದ್ಯಮಿಗಳಿಗೆ ನಿಗಮವು ನೀಡುವ ಆರ್ಥಿಕ ಸಾಲ ಯೋಜನೆಯಲ್ಲಿ ಕೋಟ್ಯಂತರ ಮೊತ್ತದ ಅಕ್ರಮ ನಡೆದೆ ಎಂದು ಆರೋಪಿಸಿ ಬೆಂಗಳೂರಿನ ಸಿದ್ದಾಪುರ, ಕಲಬುರಗಿ ಜಿಲ್ಲೆಯ ಕಾಳಗಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು, ಕೆಲ ದಿನಗಳ ಹಿಂದೆ ಸಿಐಡಿ ತನಿಖೆಗೆ ಆದೇಶಿಸಿತ್ತು. ತನಿಖೆ ಕೈಗೊಂಡ ಸಿಐಡಿ ಅಧಿಕಾರಿಗಳು ನಿಗಮದ ಅಧೀಕ್ಷಕ ಸುಬ್ಬಪ್ಪರನ್ನು ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ 4 ದಿನಗಳು ಕಸ್ಟಡಿಗೆ ಪಡೆದಿದ್ದಾರೆ. ಸಾಲ ಮಂಜೂರಾತಿ ಮಾಡಿರುವ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ನಿಗಮದ ಅಧಿಕಾರಿಗಳು ಸಹ ಕೋಟ್ಯಂತರ ರೂ. ವಂಚಿಸಿರುವ ಆರೋಪ ಕೇಳಿ ಬಂದಿತ್ತು. ಆರೋಪ ಕೇಳಿ ಬಂದ…
ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಅಬ್ಬರ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 443 ಹೊಸ ಡೆಂಘಿ ಪ್ರಕರಣಗಳು ದೃಢವಾಗಿವೆ. ಪ್ರಕರಣಗಳು ದಾಖಲಾಗಿರುವ ಕುರಿತಂತೆ ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,303 ತಲುಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 15,544ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಈವರೆಗೂ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 3,523 ಶಂಕಿತರನ್ನು ಡೆಂಘ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬೆಂಗಳೂರಿನಲ್ಲಿ 203, ಹಾಸನ 33, ಮಂಡ್ಯ 22, ಚಿತ್ರದುರ್ಗ 21, ಬೆಳಗಾವಿ 20 ಸೇರಿ 443 ಮಂದಿ ಡೆಂಘ ಪೀಡಿತರಾಗಿದ್ದಾರೆ. ಡೆಂಘ ಜ್ವರದಿಂದ ಬಳಲುತ್ತಿರುವವರಲ್ಲಿ 2,655 ಮಂದಿ ಮನೆ ಆರೈಕೆಯಲ್ಲಿದ್ದು, 648 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಇವರಲ್ಲಿ 15 ಮಂದಿಯ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.