Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಳಿ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ 8 ದಿನಗಳ ಹಿಂದೆ ಗುಡ್ಡ ಕುಸಿದು ಹಲವರು ನಾಪತ್ತೆಯಾಗಿದ್ದರು. ಈ ವೇಳೆ ನಿನ್ನೆಯವರೆಗೂ ಎಂಟು ಜನರ ಮೃತ ದೇಹಗಳನ್ನು ಪತ್ತೆಹಚ್ಚಲಾಗಿತ್ತು. ಇನ್ನು ಹಲವರು ಮಣ್ಣಿನಲ್ಲಿ ಹುದುಗಿ ಹೋಗಿದ್ದು ಅವರ ಶವಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದರ ಮಧ್ಯೆ ಮತ್ತೊಂದು ದುರಂತ ಸಂಭವಿಸಿದ್ದು, ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಮರ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ- ಶಿರಸಿ ರಸ್ತೆಯ ಬಾಚನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಮೃತನನ್ನು ಯಲ್ಲಾಪುರದ ಯುವಕ ವಿನಯ ಗಾಡಿಗ(25) ಎಂದು ಗುರುತಿಸಲಾಗಿದ್ದು, ಯಲ್ಲಾಪುರದ ಹಾಸಣಗಿ ಪಂಚಾಯತ್ ವ್ಯಾಪ್ತಿಯ ಕಬ್ಬಿನಗದ್ದೆ ನಿವಾಸಿಯಾಗಿದ್ದಾನೆ. ಯಲ್ಲಾಪುರದಿಂದ ಮಂಚಿಕೇರಿ ಕಡೆ ತೆರಳುತ್ತಿದ್ದನು. ಈ ವೇಳೆ ಸ್ಕೂಟಿಯಲ್ಲಿ ನಿಧಾನವಾಗಿ ಹೋಗುತ್ತಿದ್ದಾಗ ಧೊಪ್ಪನೇ ಮೈಮೇಲೆ ಮರ ಮುರಿದು ಬಿದ್ದಿದೆ. ಬೃಹತ್ ಗಾತ್ರದ ಮರದಡಿ ಸಿಲುಕಿದ ವಿನಯ್ ಹಾಗೂ ಸ್ಕೂಟರ್ ಅಪ್ಪಚ್ಚಿಯಾಗಿದೆ. ಈ ದುರ್ಘಟನೆಯಲ್ಲಿ ವಿನಯ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಕೂಟರ್…
ಬೆಂಗಳೂರು : ಸರ್ಕಾ ಹುದ್ದೆಗಳಿಗಾಗಿ ಕಾಯುತ್ತಿರುವ ಆಕಾಕ್ಷಿಗಳಿಗೆ ಆರೋಗ್ಯ ಇಲಾಖೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸುತ್ತೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಆರೋಗ್ಯ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ಎರಡು ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇವೆ ಅದಾದ ಬಳಿಕ ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಜೀವ ದಿನೇಶ್ ಗುಂಡೂರಾವ್ ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇನ್ಸ್ಪೆಕ್ಷನ್ ಆಫೀಸರ್, ಪಿಹೆಚ್ಸಿಗಳಲ್ಲಿ ಸಿಬ್ಬಂದಿ ಸೇರಿದಂತೆ ಇನ್ನೂ ಹಲವು ಹುದ್ದೆಗಳು ಖಾಲಿ ಇವೆ. ಹಾಗಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸುತ್ತೇವೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು…
ಕಲಬುರ್ಗಿ : ಗಾಯಗೊಂಡ ರೋಗಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯನ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕು ಆಸ್ಪತ್ರೆಯಲ್ಲಿ ibಘಟನೆ ನಡೆದಿದೆ. ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ರಾತ್ರಿ ರೋಗಿಯ ಸಂಬಂಧೀಕರಿಂದ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ವ್ಯಕ್ತಿ ದಾಖಲಾಗಿದ್ದ. ವೈದ್ಯನ ಮೇಲೆ ಹಲ್ಲೆಯ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಯನ್ನು ಖಂಡಿಸಿ ಸೇಡಂ ತಾಲೂಕು ಆಸ್ಪತ್ರೆ ವೈದ್ಯರು ಸಿಬ್ಬಂದಿಯಿಂದ ಇದೀಗ ಪ್ರತಿಭಟನೆ ನಡೆಯಿಸಲಾಗುತ್ತಿದ್ದು, ಆರೋಪಿಗಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವೈದ್ಯರು ಆಗ್ರಹಿಸುತ್ತಿದ್ದಾರೆ.
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯುವತಿಯೊರ್ವಳ ಭೀಕರ ಕೊಲೆ ನಡೆದಿದ್ದು, ಮದುವೆಯಾಗು ಎಂದಿದ್ದಕ್ಕೆ ಪ್ರಿಯತಮೆಯನ್ನ ಕತ್ತು ಹಿಸುಕಿ ಪ್ರಿಯಕರ ಭೀಕರವಾಗಿ ಕೊಲೆ ಮಾಡಿ ಶವವನ್ನು ಹೂತಿಟ್ಟ ಘಟನೆ ಹೊಸನಗರದ ಹೆದ್ದಾರಿಪುರ ಬಳಿ ನಡೆದಿದೆ. ಕೊಲೆಯಾದ ಯುವತಿಯನ್ನ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೊಲದ ಸೌಮ್ಯ ಎಂದು ತಿಳಿದುಬಂದಿದ್ದು, ಮದುವೆ ಆಗುವಂತೆ ಹೇಳಿದ್ದಕ್ಕೆ ಸೌಮ್ಯಳನ್ನು ಸೃಜನ್ ಎನ್ನುವ ಯುವಕ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಸೌಮ್ಯ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಸೃಜನ್ ಫೈನಾನ್ಸ್ ಅಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಪರಿಚಯದ ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು. ಕೊಪ್ಪದಲ್ಲಿ ಆಗಾಗ ಹೋಗಿ ಬರುತ್ತಿದ್ದ. ಈ ವೇಳೆ ಇಬ್ಬರ ಪರಿಚಯವಾಗಿದೆ ಪರಿಚಯ ಪ್ರೀತಿಗೆ ತಿರುಗಿದೆ.ಯುವತಿ ಜಾತಿ ಬೇರೆ ಎಂದು ಯುವಕನ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸೃಜನ್ ಮನೆಯವರು ಮದುವೆಗೆ ವಿರೋಧಿಸಿದ್ದರು. ಮನೆಗೆ ಕರೆದೊಯ್ಯುವಂತೆ ಸೌಮ್ಯ ಸೃಜನನಿಗೆ ಒತ್ತಡ ಹಾಕಿದ್ದಾಳೆ.…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ದಿನಕ್ಕೊಂದು ಕೊಲೆ, ದರೋಡೆ, ಸುಲಿಗೆ ಪ್ರಕರಣಗಳ ಸಂಖ್ಯೆ ಜಾಸ್ತಿ ಆಗುತ್ತಿವೆ. ಪೊಲೀಸರು ಎಷ್ಟೇ ಕಠಿಣವಾದ ಕ್ರಮ ಕೈಗೊಂಡರು ಸಹ ಇಂತಹ ಘಟನೆಗಳು ನಿಲ್ಲುತ್ತಿಲ್ಲ.ಇದೀಗ ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನ ಪಿಜಿ ಒಂದರಲ್ಲಿ ಯುವತಿ ವಾಸಿಸುತ್ತಿದ್ದಳು. ಟೆಕ್ ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ್ ಮೂಲದ ಕೃತಿ ಕುಮಾರಿ (24) ಎನ್ನುವ ಯುವತಿಯನ್ನು ಆತನ ಪ್ರಿಯಕರ ಬೀಜಿಗೆ ನುಗ್ಗಿ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ನಿನ್ನೆ ಲಗೇಜ್ ತೆಗೆದುಕೊಂಡು ಬಂದಿದ್ದ ಯುವಕನನ್ನ ಪಿಜಿ ಸೆಕ್ಯೂರಿಟಿ ಒಳ ಬಿಡುವುದಿಲ್ಲ ಎಂದಿದ್ದನಂತೆ. ನಂತರ ಪಿಜಿ ಸೆಕ್ಯುರಿಟಿ ಬಳಿ ನನ್ನ ಸಹೋದರ ಎಂದು ಹೇಳಿ ಬೇಗ ಕಳುಹಿಸುತ್ತೇನೆ ಎಂದು ಒಳ ಕರೆದುಕೊಂಡು ಕೃತಿ ಕುಮಾರಿ ಹೋಗಿದ್ದಳು.ರಾತ್ರಿ 11:10ರ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದಿದ್ದಾನೆ.…
ಬೆಂಗಳೂರು : ಸದ್ಯ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು ಡೆಂಘಿ ಪ್ರಕರಣಗಳ ಸಂಖ್ಯೆ 15,000 ಗಡಿ ದಾಟಿದೆ. ಹೌದು ರಾಜ್ಯದಲ್ಲಿ ಮಂಗಳವಾರ 469 ಡೆಂಘಿ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,384 ತಲುಪಿದೆ. ಇದರೊಂದಿಗೆ ಈವರೆಗಿನ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 15 ಸಾವಿರ ಗಡಿ ದಾಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 3,371 ಶಂಕಿತ ಡೆಂಘಿ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಬೆಂಗಳೂರಿನಲ್ಲಿ 229, ಹಾಸನ 28, ವಿಜಯಪುರ 23, ಬೆಳಗಾವಿ 21, ಚಿತ್ರದುರ್ಗ 20 ಸೇರಿ 469 ಮಂದಿ ಡೆಂಘಿ ಪ್ರಕರಣಗಳು ವರದಿಯಾಗಿದ್ದು, ಈವರೆಗೂ 15,101 ಮಂದಿ ಡೆಂಘ ಜ್ವರದಿಂದ ಬಳಲಿದ್ದಾರೆ. 640 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 2,744 ಮಂದಿ ಮನೆ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹುಬ್ಬಳ್ಳಿ : ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗರ ಕೊಲೆ ನಂತರ ನಿನ್ನೆ ಹುಬ್ಬಳ್ಳಿಯಲ್ಲಿ ನಗರದ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ವನಹಳ್ಳಿ ಎನ್ನುವ ಪೂಜಾರಿ ಯನ್ನು ಹತ್ಯೆಗೈದ ಹಂತಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಹುಬ್ಬಳ್ಳಿ ಧಾರವಾಡ ಕಮಿಷನರ್ ಎನ್. ಶಶಿಕುಮಾರ್ ಅವರು, ಕಮರಿಪೇಟೆ ನಿವಾಸಿ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಬಂಧಿತ ವ್ಯಕ್ತಿಯಾಗಿದ್ದು, ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಚೆನ್ನಮ್ಮ ವೃತ್ತದಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು. ಈ ಹಿಂದೆಯು ದೇವೇಂದ್ರಪ್ಪನ ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೃತ್ಯವೂ ಸಹ ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.ದೇವೇಂದ್ರಪ್ಪನನ್ನು ಕೊಲೆ ಮಾಡಬೇಕೆಂದು ಕಳೆದ ಆರೂವರೆ ವರ್ಷದಿಂದ ಹೊಂಚು ಹಾಕಿಕೊಂಡು ಕೊಲೆ ಮಾಡಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಅವರು ತಿಳಿಸಿದರು. ಮಾಟ-ಮಂತ್ರ, ವಶೀಕರಣವೇ ಹತ್ಯೆಗೆ ಕಾರಣ ಎಂಬುವುದು ತನಿಖೆ ವೇಳೆ ತಿಳಿದು…
ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಹತ್ಯೆಗೈದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆದಿದೆ. ಹೌದು ಜುಲೈ 20 ರಂದು ತಾರೀಖಿನಂದು ಸಂಜೆ ಬಾಲಕಿಯ ಪೋಷಕರು ಎಲ್ಲೆಡೆ ತಮ್ಮ ಮಗಳನ್ನು ಹುಡುಕುತ್ತಿದ್ದರು. ಮನೆ ಅಕ್ಕ-ಪಕ್ಕ, ಅವಳು ಹೋಗುತ್ತಿದ್ದ ಜಾಗ, ಆಟವಾಡುತ್ತಿದ್ದ ಸ್ಥಳಗಳಲ್ಲಿ ಎಷ್ಟೇ ಹುಡುಕಿದರೂ ತಮ್ಮ ಮಗಳು ಪತ್ತೆ ಆಗಲಿಲ್ಲ. ಕೂಡಲೇ ಮಾಗಡಿ ಪೊಲೀಸ್ ಠಾಣೆಗೆ ಹೋಗಿ ತಮ್ಮ ಮಗಳು ನಾಪತ್ತೆ ಆಗಿರುವ ಕುರಿತು ಪ್ರಕರಣ ದಾಖಲು ಮಾಡಿದ್ದಾರೆ. ಮಗಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ವಿಚಾರ ಪೊಲೀಸರು ಪೋಷಕರಿಗೆ ತಿಳಿಸುತ್ತಿದ್ದಂತೆ ತಂದೆ-ತಾಯಿಗೆ ಕಂಗಾಲಾಗಿದ್ದರು. ಆಗಾಗ ತಮ್ಮ ಮನೆಗೆ ಬಂದು ಹೋಗುತ್ತಿದ್ದ ಬೆಂಗಳೂರಿನ ಆ ಸಂಬಂಧಿ ಇರ್ಫಾನ್, ಆವತ್ತು ಕೂಡ ತಮ್ಮ ಮನೆಗೆ ಬಂದಿದ್ದ. ಮನೆಯಲ್ಲಿದ್ದ ಮಕ್ಕಳನ್ನು ಅಂಗಡಿಗೆ ಕರೆದುಕೊಂಡು ಹೋಗಿ, ಚಾಕಲೇಟ್ ಕೊಡಿಸಿದ್ದ. ಬಳಿಕ ವಾಪಾಸ್ ತೆರಳಿದ್ದ ಆರೋಪಿ 4 ವರ್ಷದ ಬಾಲಕಿಯನ್ನೂ ತನ್ನ ದ್ವಿಚಕ್ರವಾಹನದಲ್ಲಿ ಕರೆದುಕೊಂಡು ಹೋಗಿದ್ದ.…
ಶಿವಮೊಗ್ಗ : ರಾಜ್ಯಾದ್ಯಂತ ಮಲೆನಾಡು, ಕರಾವಳಿ ಜಿಲ್ಲೆಗಳು ಸೇರಿದಂತೆ ಭಾರಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ತವರು ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆ ಕುಸಿತವಾಗಿದೆ. ಹೌದು ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆ ಕುಸಿತವಾಗಿದೆ. ತರಗತಿ ನಡೆಯುವ ವೇಳೆಯೇ ಶಾಲಾ ಗೋಡೆ ಕುಸಿತವಾಗಿದ್ದು, ಮಕ್ಕಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯಾರ್ಥಿಗಳು ತರಗತಿ ಕೋಣೆಯಲ್ಲಿ ಪಾಠ ಕೇಳುವಾಗಲೇ ವಿದ್ಯಾರ್ಥಿಗಳು ಕುಳಿತುಕೊಂಡಿದ್ದ ಹಿಂಬದಿ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೊರಬ ತಾಲೂಕಿನ ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಕುಸಿತವಾಗಿದೆ. ತರಗತಿಯಲ್ಲಿ 31 ವಿದ್ಯಾರ್ಥಿಗಳಿದ್ದರು. ಆದರೆ, ವಿಶ್ರಾಂತಿ ಸಮಯವಾಗಿದ್ದರಿಂದ ಕೆಲವು ವಿದ್ಯಾರ್ಥಿಗಳು ಮಾತ್ರ ತರಗತಿ ಕೋಣೆಯಲ್ಲಿದ್ದು,…
ಬೆಂಗಳೂರು : ಕಳೆದ ಎಂಟು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ನಾಪತ್ತೆಯಾಗಿರುವವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಅಲ್ಲದೆ ಇಂದು 8ನೆ ಶವ ಪತ್ತೆಯಾಗಿದ್ದು, ಇದು ಓರ್ವ ವೃದ್ದೆಯ ಶವ ಎಂದು ಗುರುತಿಸಲಾಗಿದೆ. ಇದರ ಮಧ್ಯ ಸರ್ಕಾರದ ವಿರುದ್ಧ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬದಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿದು ಇಂದಿಗೆ 7 ದಿನ ಕಳೆದಿದೆ. ನಿರಂತರವಾಗಿ ನೂರಾರು ಸಿಬ್ಬಂದಿಗಳು ಕಾರ್ಯಾಚರಣೆ ಮಾಡುತ್ತಿದ್ದಾರೆ. ಇನ್ನು 4 ಜನರ ಮೃತದೇಹಗಳು ಪತ್ತೆಯಾಗಬೇಕಿದೆ.ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು ಅರ್ಜಿ ಸಲ್ಲಿಸಲಾಗಿದೆ. ಘಟನಾ ಸ್ಥಳದಲ್ಲಿ ಲಾರಿಯ ಜಿಪಿಆರ್ಎಸ್ ಲಾಸ್ಟ್ ಲೊಕೇಶನ್ ಪತ್ತೆ ಹಿನ್ನೆಲೆ ಕಾರ್ಯಾಚರಣೆ ಅವೈಜ್ಞಾನಿಕವಾಗಿ, ವಿಳಂಬವಾಗಿ ನಡೀತಿದೆ ಎಂದು ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಆರೋಪಿಸಲಾಗಿದೆ. ಹಾಗಾಗಿ ರಾಜ್ಯ…