Author: kannadanewsnow05

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಏಳನೇ ಬಜೆಟ್ ಮಂಡಿಸಿದರು. ಒಟ್ಟು 48.21 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದು, ಆಂಧ್ರ ಪ್ರದೇಶ ಹಾಗೂ ಬಿಹಾರ ರಾಜ್ಯಕ್ಕೆ ಬಂಪರ್ ಕೊಡುಗಿಗಳನ್ನು ಘೋಷಣೆ ಮಾಡಲಾಗಿದೆ. ಇದು ಇತರೆ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಜೆಟ್​ನಲ್ಲಿ ಕರ್ನಾಟಕಕ್ಕೆ ಏನು ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಇದಕ್ಕೆ ಪ್ರತಿಯಾಗಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಆಂಧ್ರ, ಬಿಹಾರಕ್ಕೆ ಹೆಚ್ಚು ನೆರವು ಕೊಟ್ಟಿದ್ದಾರೆ ಎಂದು ವಿಪಕ್ಷಗಳು ಟೀಕೆ ಮಾಡುತ್ತಿವೆ. ಹೆಚ್ಚು ಅಭಿವೃದ್ಧಿಗೆ ಒತ್ತು ನೀಡುವುದಕ್ಕೆ‌ ಕಾರಣವೇನು? ರಾಜ್ಯ ಇಬ್ಬಾಗವಾದಗ ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು. ಘೋಷಣೆ ಮಾಡಿದ್ದೇ ಕಾಂಗ್ರೆಸ್ ಆದರೆ ಜಾರಿಗೆ ತಂದಿರಲಿಲ್ಲ. ಈಗ ಪ್ರಧಾನಿ ಮೋದಿಯವರು ಜಾರಿಗೆ ತಂದಿದ್ದಾರೆ. ಕನ್ನಡನಾಡಿನ ಜನತೆಗೆ ನಾನು ಮನವಿ ಮಾಡುತ್ತೇನೆ. ಕಾಂಗ್ರೆಸ್ ನವರು ಮೊದಲು ಟೀಕೆ ಮಾಡುವುದನ್ನು ನಿಲ್ಲಿಸಬೇಕು. ನಾವು ಕರ್ನಾಟಕಕ್ಕೆ ಹೋದಲು ಯಾಕೆ…

Read More

ಬೆಂಗಳೂರು : ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಫಕೀರಪ್ಪ ಎನ್ನುವವರಿಗೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಒಳಗಡೆ ಪ್ರವೇಶ ನಿರಾಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿಟಿ ಮಾಲ್ ಮತ್ತೆ ಓಪನ್ ಆಗಿದ್ದು ಕಾರ್ಯಾಚರಣೆ ಪುನಾರಂಭ ಮಾಡಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಲ್ಲಿ ಪಂಚೇ ಧರಿಸಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಫಕೀರಪ್ಪ ಎನ್ನುವವರಿಗೆ ಮಾಲ್ ಒಳಗಡೆ ಚಲನಚಿತ್ರ ವೀಕ್ಷಣೆಗೆ ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದರು.ಈ ಒಂದು ಘಟನೆ ಇಡೀ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಸದನದಲ್ಲೂ ಕೂಡ ಈ ವಿಷಯ ಚರ್ಚೆಗೆ ಬಂದಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಒಂದು ವಾರ ಜಿಟಿ ಮಾಲ್ ಬಂದ್ ಮಾಡಿಸುವುದಾಗಿ ಘೋಷಿಸಿದ್ದರು. ಇದಾದ ಬಳಿಕ ಫಕೀರಪ್ಪ ಅವರು ಕುಟುಂಬ ಸಮೇತ ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಫಕೀರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು. ಅಲ್ಲದೆ 1.78…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಅಡಳಿತ ವಿಧೇಯಕಕ್ಕೆ ವಿರೋಧ ವ್ಯಕ್ತವಾಗಿದ್ದು, ವಿಧಾನಸಭೆಯಲ್ಲಿ ವಿಧೇಯಕ ಮಂಡನೆಯ ವೇಳೆ ಗಲಾಟೆ ನಡೆದಿದೆ. ವಿಧೆಯಕಕ್ಕೆ ಬಿಜೆಪಿಯ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನ ಜನರು ಈ ವಿಧೇಯಕದ ವಿರುದ್ಧ ಇದ್ದಾರೆ.ಈ ಬಗ್ಗೆ ಚರ್ಚೆ ಆಗಬೇಕು ಇದಕ್ಕೆ ನಮ್ಮ ವಿರೋಧವಿದೆ. ಬೆಂಗಳೂರು ಚಿದ್ರ ಚಿದ್ರ ಮಾಡಿದರೆ ಶಾಪ ತಟ್ಟಲಿದೆ. ನಿಮಗೆ ಕೆಂಪೇಗೌಡರ ಶಾಪ ತಟ್ಟದೇ ಇರುವುದಿಲ್ಲ. ವೈಜ್ಞಾನಿಕವಾಗಿ ವಿಧೇಯಕ ತಂದಿದ್ದಾರೆ ಎಂದು ಬಿಜೆಪಿಯ ಸದಸ್ಯರು ಗಲಾಟೆ ನಡೆಸಿದರು. ಈಗಾಗಲೇ ಬೆಂಗಳೂರು ನಗರ ನರಕ ಆಗಿದೆ. ಸರ್ಕಾರಕ್ಕೆ 1 ರೂಪಾಯಿ ಕೊಡಲು ಯೋಗ್ಯತೆ ಇಲ್ಲ. ಜುಲೈ 27ಕ್ಕೆ ಸಭೆ ಕರೆದಿದ್ದೀರಲ್ಲ ಈ ಬಗ್ಗೆ ಚರ್ಚೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷ ನಾಯಕ ಆರ್.ಅಶೋಕ್, ಅಶ್ವಥನಾರಾಯಣ್, ಸುರೇಶ್ ಕುಮಾರ್ ಆಗ್ರಹಿಸಿದರು. ಅಧಿಕಾರಿಗಳಿಗೆ ಬೆಂಗಳೂರಿನ ಬಗ್ಗೆ ಏನು ಬದ್ಧತೆ ಇದೆ ಅವರು ಏನು ವಿಧೇಯಕ ಮಾಡಿ ಎಲ್ಲೋ ಹೋಗುತ್ತಾರೆ ಬೆಂಗಳೂರನ್ನು ಸರ್ವನಾಶ ಮಾಡಲು ಹೊರಟಿದ್ದೀರಿ ಇದರ ಸಾಧಕ ಬಾಧಕಗಳ…

Read More

ಬೆಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದರು. ಬಜೆಟ್‌ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರು ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮ್‌ ಅವರು ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ…

Read More

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಇಂದು ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ED ಅಧಿಕಾರಿಗಳ ವಿರುದ್ಧ ದಾಖಲಾಗಿರುವ FIR ಗೆ ಹೈಕೋರ್ಟ್ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಡೆಪ್ಯೂಟಿ ಡೈರೆಕ್ಟರ್ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿ ನ್ಯಾ ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಈ ವೇಳೆ ಇಡಿ ಅಧಿಕಾರಿಗಳ ಪರ ಹಾಜರಾದ…

Read More

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್ ಆಗಿರಬಹುದು ಫೇಸ್ಬುಕ್ ಆಗಿರಬಹುದು ಹಲವು ಟ್ರೆಂಡಿಂಗ್ ಆಪ್ ಗಳಲ್ಲಿ ರಿಲ್ಸ್ ಮಾಡುವರನ್ನು ನೋಡಿದ್ದೇವೆ. ಅದೇ ರೀತಿಯಾಗಿ ಪೊಲೀಸ್ ಇಲಾಖೆಯಲ್ಲಿ ಕೂಡ ಹಲವರು ಸಮವಸ್ತ್ರದಲ್ಲಿ ರೀಲ್ಸ್ ಮಾಡಿ ಹರಿಬಿಡುವುದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಅವರು ಇದೀಗ ಆ ರೀತಿ ಪೊಲೀಸ್ ಸಮವಸ್ತ್ರದಲ್ಲಿ ರಿಲೀಸ್ ಮಾಡುವವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಈಗ ರೀಲ್ಸ್ ಅಥವಾ ವಿಡಿಯೋಗಳನ್ನು ಮಾಡುವಂತದ್ದು ಹವ್ಯಾಸ, ಪ್ರವೃತ್ತಿ, ಚಟ ಇದೆಯೋ ಅದೇ ರೀತಿಯಾಗಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಅನೇಕ ಸಂದರ್ಭ ದಲ್ಲಿ ಈ ರೀತಿ ತಮ್ಮ ಕಲಾ ಪ್ರತಿಭೆಯನ್ನು ತೋರಿಸುವಂತಹ ಸಂದರ್ಭ ದಲ್ಲಿ ಸಮವಸ್ತ್ರದಲ್ಲಿ ಅನೇಕ ರೀಲ್ಸ್ ವಿಡಿಯೋ ಮಾಡಿದ್ದಾರೆ. ಇದು ಒಂದು ರೀತಿಯಲ್ಲಿ ಇಲಾಖೆಗೆ ಶೋಭೆ ತರುವಂತಹ ವಿಷಯವಲ್ಲ. ಇದು ಗಮನಕ್ಕೆ ಬಂದಿರುವುದರಿಂದ ಈ ಕುರಿತು ಸುತ್ತೋಲೆ ಹೊರಡಿಸಿದ್ದೇನೆ. ಸಮಸ್ತಕ್ಕೆ ಅದರದೇ ಆದ ಗೌರವ ಪ್ರತಿಷ್ಠೆ ಹಾಗೂ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ದರ್ಶನ್ ಸೇರಿ 17 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಹಲವು ಕಲಾವಿದರು ನಟ ದರ್ಶನವರನ್ನು ಭೇಟಿಯಾಗಿದ್ದಾರೆ. ಇದೀಗ ದರ್ಶನ್ ಭೇಟಿಗೆ ಹಾಸ್ಯ ನಟ ಹಾಗೂ ಸಂಗೀತ ಸಂಯೋಜಕ ಸಾಧು ಕೋಕಿಲ ಅವರು ಅವಕಾಶ ಸಿಗದೇ ವಾಪಸ್ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಾರ ನಟ ದರ್ಶನ್ ಭೇಟಿ ಮಾಡಲು ಇರುವ ಅವಕಾಶಗಳು ಮುಕ್ತಾಯಗೊಂಡಿವೆ. ಈ ಹಿನ್ನೆಲೆಯಲ್ಲಿ ಗುರುವಾರ ದರ್ಶನ್ ಕುಟುಂಬದವರು ಬಂದು ಭೇಟಿ ಮಾಡಲಿದ್ದಾರೆ. ಅವರೊಂದಿಗೆ ನಾನು ಕೂಡ ಬಂದು ದರ್ಶನ್ ಭೇಟಿ ಮಾಡುತ್ತೇನೆ. ಇನ್ನು ಒಬ್ಬೊಬ್ಬರೇ ಬಂದು ನೋಡಿದರೆ ಒಂದು ಭೇಟಿಯ ಸಂಪೂರ್ಣ ಅವಕಾಶವೇ ಮುಗಿದು ಹೋಗಲಿದೆ. ನಾನು ಬೇಟಿ ಆದ್ರೆ‌ ಈ ವಾರದಲ್ಲಿ ಬೇರೆಯವರಿಗೆ ಅವಕಾಶ ಆಗ್ತಿರಲಿಲ್ಲ. ಹಾಗಾಗಿ ಗುರುವಾರ ಬರ್ತೀನಿ ಎಂದು ವಾಪಾಸ್ ತೆರಳಿದರು. ಈಗಾಗಲೇ ನಟ ದರ್ಶನ್‌ ಅವರನ್ನು ಭೇಟಿ ಮಾಡಿವುದಕ್ಕೆ ವಾರಕ್ಕೆ…

Read More

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿದ್ದು ಈ ವೇಳೆ ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಜೀವ ತೆತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಡಿ ಗ್ರಾಮದಲ್ಲಿ ನಡೆದಿದೆ. ಹೌದು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರಾದ ಹಣಮಂತ ರಾಮಚಂದರ ಖೋತ (35) ಖಂಡೋಭಾ ತಾನಾಜಿ ಖೋತ (30) ಮೃತಪಟ್ಟ ಸಹೋದರರು ಎಂದು ತಿಳಿದುಬಂದಿದೆ.ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿತ್ತು. ತಡರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಹಾರಾಷ್ಟ್ರದ ಮೀರಜ್‌ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ್ ಗುಳೇದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಮ್ಮ ಕುಟುಂಬದ ವಿರುದ್ಧ ಷಡ್ಯಂತರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಎಂಎಲ್ಸಿ ಸೂರಜ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ನೀಡಿತ್ತು. ಹಾಗಾಗಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ಮಾತನಾಡಿದರು. ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಬಳಿಕ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ…

Read More

ಬೆಂಗಳೂರು : KIADBಗೆ ಭೂ ಸ್ವಾಧೀನ ವಿರೋಧಿಸಿ ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ರೈತರು ಜಾಥಾ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ರೈತರು ಜಾಥಾ ನಡೆಸಿದರು. ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಪೊಲೀಸರು ಇದೆ ವೇಳೆ ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಕೆಐಎಡಿಬಿ ಗೆ ಭೂ ಸ್ವಾಧೀನ ವಿರೋಧಿಸಿ ಇಂದು ರೈತರು ಜಾಥಾ ನಡೆಸಿದರು. ಸಿಎಂ ಮನೆಗೆ ಮುತ್ತಿಗೆ ಹಾಕಲು ರೈತರು ಹೊರಟಿದ್ದರು.ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಈ ವೇಳೆ ಮಾತಿನ ಚಕಮಕಿ ನಡೆದಿದೆ. ತಕ್ಷಣ ಅನ್ನದಾತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ಪೊಲೀಸರು ರೈತರನ್ನು ಕರೆದುಕೊಂಡು ಹೋಗಿದ್ದಾರೆ, ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಬಿ ಆರ್ ಪಾಟೀಲ್ ರೈತರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಬಿ ಆರ್ ಪಾಟೀಲ್ ಮುಂದೆ ಕೂಡ ರೈತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವಶಕ್ಕೆ ಪಡೆದ ರೈತರನ್ನು ಕರೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Read More