Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೌದು ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಈ ವೇಳೆ ಇಡಿ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲ ಮಧುಕರ್ ದೇಶಪಾಂಡೆ, ಅರ್ಜಿದಾರರು ಇಡಿ ಅಧಿಕಾರಿಗಳಾಗಿದ್ದಾರೆ, ಅವರು ತಮ್ಮ ಅಧಿಕೃತ ಕರ್ತವ್ಯವನ್ನಷ್ಟೇ ನಿರ್ವಹಿಸಿದ್ದಾರೆ. ಹೀಗಿದ್ದರೂ ಇಡಿ ವಿಚಾರಣೆಗೆ ಹಾಜರಾಗಿದ್ದ ದೂರುದಾರರು, ವಿಚಾರಣೆ ಮುಗಿದ ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಇ.ಡಿ. ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.…
ಬೆಂಗಳೂರು : ಇಂದು ಬೆಳಿಗ್ಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಆರೋಪಿಯೊಬ್ಬ ವಕೀಲೆಗೆ ಚಾಕು ಇರಿದು ಭೀಕರವಾಗಿ ಕೊಲೆಗೆ ಯತ್ನಿಸಿದ್ದಾನೆ. ಹೌದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಎಂಬ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು. ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ…
ರಾಮನಗರ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತವರು ಕ್ಷೇತ್ರವಾದ ಕನಕಪುರದಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದ್ದು, ಕನಕಪುರ ನಗರದ ಮಳಗಾಳಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಒಬ್ಬನ ಕೈ ಕತ್ತರಿಸಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಹೌದು ಈ ಒಂದು ಘಟನೆಯಲ್ಲಿ ಮಳಗಾಳಿನ ಅನಿಶ್ ಕುಮಾರ್ ಎಡಗೈ ತುಂಡಾಗಿದೆ, ಇವರ ಸಂಬಂಧಿ ಲಕ್ಷ್ಮಣ್ ಮತ್ತು ಗೊಂವಿಂದರಾಜುಗೆ ಭುಜ ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ.ಪ್ರಕರಣದ ಆರೋಪಿಗಳನ್ನು ರೌಡಿ ಶೀಟರ್ ಹರ್ಷ ಅಲಿಯಾಸ್ ಕೈಮಾ, ಈತನ ಸಹಚರರಾದ ಕರ್ಣೇಶ್ ಅಲಿಯಾಸ್ ಕನ್ನು, ಶಿವ, ರಾಹುಲ್, ಶಶಾಂಕ್ ಸೇರಿದಂತೆ 6 ಮಂದಿ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಭೀರ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈ ಕಳೆದುಕೊಂಡಿರುವ ಅನಿಶ್ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದು, ತಲೆ ಮತ್ತು ಭುಜದಲ್ಲಿ ಗಾಯಗೊಂಡಿರುವ ಲಕ್ಷ್ಮಣ್, ಗೋವಿಂದರಾಜು ಅವರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಡಿವೈಎಸ್ಪಿ ಗಿರಿ, ನಗರ…
ಶಿವಮೊಗ್ಗ : ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯಲ್ಲಿ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ನಡೆದಿದೆ.ಆದರೆ ಪೊಲೀಸರ ಸಮಯ ಪ್ರಜ್ಞೆಯಿಂದ ಮೂವರು ಬದುಕುಳಿದಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳಾದ ತಾಯಿ ಸಂಗೀತ (33) ಮಕ್ಕಳಾದ ಪ್ರೀತಿ (13) ಪ್ರಜ್ವಲ್ (9) ಎಂದು ತಿಳಿದುಬಂದಿದೆ. ಈ ವೇಳೆ ತಳಕ್ಕೆ ಬಂದ ಪೊಲೀಸರು ತಾಯಿ ಹಾಗೂ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೆ ಯತ್ನಿಸಿದ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಮಹಿಳೆ ಮತ್ತು ಮಕ್ಕಳನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ಹಾವೇರಿಯಲ್ಲಿ ಘೋರ ದುರಂತ ಸಂಭವಿಸಿದ್ದು ಬೃಹತ್ ಬೇವಿನಮರ ಬಿದ್ದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಹಿರೇಕೆರೂರು-ಮಾಸೂರು ಮಾರ್ಗಮಧ್ಯೆ ನಡೆದಿದೆ. ಹಿರೇಕೇರೂರು ತಾಲೂಕು ಯತ್ತಿನಹಳ್ಳಿ ಗ್ರಾಮದ ನಿವಾಸಿ ಹನುಮಂತ (28) ಮತ್ತು ಚಿನ್ನಮುಳಗುಂದ ಗ್ರಾಮದ ನಿವಾಸಿ ಮಂಜುನಾಥ್ (29) ಮೃತರು. ಹಿರೇಕೇರೂರು ಪಟ್ಟಣದಿಂದ ಮಾಸೂರು ಕಡೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹಿರೇಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೆಂಗಳೂರು : ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ದಿನಕರ್ ತೂಗುದೀಪ್ ಕುಟುಂಬದ ಜೊತೆಯೇ ತೆರಳಿ ವಿನೋದ್ ರಾಜ್ ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಕ್ಕೆ ವಿನೋದ್ ರಾಜ್ ಮಾತನಾಡಿ, ದರ್ಶನ್‌ರನ್ನು ಜೈಲಿನಲ್ಲಿ ನೋಡಿ ಬೇಸರ ಆಯಿತು ಎಂದು ಮಾತನಾಡಿದ್ದಾರೆ. ದರ್ಶನ್ ನೋಡಿದಾಗ ಮನಸ್ಸಿಗೆ ತುಂಬಾ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಮಾತನಾಡಿದ್ದಾರೆ. ದರ್ಶನ್‌ರನ್ನು ನಂಬಿ ತಮ್ಮ ಸಿನಿಮಾಗೆ ಹಣ ಹಾಕಿದ ನಿರ್ಮಾಪಕರನ್ನು ನೋಡಿದರೆ ನೋವಾಗುತ್ತದೆ. ಎಲ್ಲವನ್ನೂ ಕಳೆದುಕೊಂಡು ನೋಡೋದು ಕಷ್ಟದ ಕೆಲಸ ಎಂದಿದ್ದಾರೆ. ಕಾರಾಗೃಹದಲ್ಲಿ ಅಷ್ಟು ದಿನಗಳ ಕಾಲ ಸಮಯ ಕಳೆಯೋದು ಸುಲಭವಲ್ಲ. ಅಣ್ಣಾ ಎಂದು ಬಾಯಿ ತುಂಬಾ ಹೇಳುವ ದರ್ಶನ್ ಹೀಗೆ ಆಯ್ತಲ್ಲ ನೋವು ಆಗ್ತಿದೆ ಎಂದು ವಿನೋದ್ ರಾಜ್ ಮಾತನಾಡಿದ್ದಾರೆ. ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ…
ವಿಜಯಪುರ : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಬಿಜೆಪಿಯ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು ರಾಜ್ಯ ಬಿಜೆಪಿಯಲ್ಲಿ ಪಕ್ಷ ಶುದ್ಧೀಕರಣ ಆಗಬೇಕಿದೆ ಎಂದು ತಿಳಿಸಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿರುವ ಕೆಲಗೊಂದಲಗಳು ಬಗೆಹರಿಯಬೇಕು. ರಾಜ್ಯ ಬಿಜೆಪಿಯಲ್ಲಿ ಸ್ವಲ್ಪ ಶುದ್ಧೀಕರಣ ಆಗಬೇಕು. ವರಿಷ್ಠರು ರಾಜ್ಯ ನಾಯಕರು ಆರ್ ಎಸ್ ಎಸ್ ನವರು ಗಮನಿಸಬೇಕು.ಈ ಕಾರಣದಿಂದ ನಾನು ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಆದರೆ ಸುಮ್ಮನೆ ಹೋಗುವುದಲ್ಲ ಏನಾಗಬೇಕೆಂಬುದನ್ನು ಕುಳಿತು ಚರ್ಚಿಸುತ್ತೇನೆ ಎಂದರು. ಇನ್ನೂ ಯಡಿಯೂರಪ್ಪ ಕುಟುಂಬದ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ವಿಜಯಪುರದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಕೇಂದ್ರ ಚುನಾವಣ ಸಮಿತಿಯ ಸದಸ್ಯರು. ಬಿಎಸ್ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಸಂಸದ. ಮತ್ತೊಬ್ಬ ಮಗ ವಿಜಯೇಂದ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದಾರೆ. ಮೋದಿ ಕುಟುಂಬ ಮುಕ್ತ…
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಕೇಸ್ ನಲ್ಲೂ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. ಹೌದು ಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಅವರು, ಪರಪ್ಪನ ಅಗ್ರಹಾರ ಸೇರಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೂರಜ್ ರೇವಣ್ಣ ಅವರ ವಿರುದ್ಧದ 2ನೇ ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನು ನೀಡಿ ಆದೇಶ ನೀಡಿದ್ದಾರೆ. ಅಸಹಜ ಲೈಂಗಿಕ ದೌರ್ಜನದ 2ನೇ ಪ್ರಕರಣದಲ್ಲೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಒಂದು ಆದೇಶ ಹೊರ ಬಿದ್ದಿದೆ. ನಿರೀಕ್ಷಣ ಜಾಮೀನು ನೀಡಿ ಸಂತೋಷ ಗಜಾನನ ಭಟ್ ಈ ಒಂದು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎರಡನೇ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು…
ಬೆಂಗಳೂರು : ಐದು ಗ್ಯಾರಂಟಿ ಕೊಟ್ಟು ಐವತ್ತು ಕಡೆ ಕಿತ್ತುಕೊಂಡಿದ್ದಾರೆ. ಹಾಲು ಮತ್ತು ಆಲ್ಕೋಹಾಲ್ ಗೂ ದರ ಏರಿಕೆ ಮಾಡಿದ್ದಾರೆ. ಪಹಣಿ, ಬರ್ತ್ ಸರ್ಟಿಫಿಕೇಟ್, ಡೆತ್ ಸರ್ಟಿಫಿಕೇಟ್, ಪೆಟ್ರೋಲ್, ಡೀಸಲ್ ದರ ಏರಿಕೆ ಮಾಡಿದ್ದಾರೆ. ಸ್ಟ್ಯಾಂಪ್ ಡ್ಯೂಟಿ ಹೆಚ್ಚು ಮಾಡಿದ್ದಾರೆ. ಈಗ ಬಸ್ ದರ ಏರಿಕೆ ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಇನ್ನು ಅವರಿಗೆ ಉಳಿದಿರೋದು ಗಾಳಿಗೆ ಟ್ಯಾಕ್ಸ್ ಹಾಕಬೇಕು, ಸತ್ತವರ ಮೇಲೆ ಟ್ಯಾಕ್ಸ್ ಹಾಕಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಇಂದು ಅವರು ಸುದ್ಧಿಗಾರರೊಂದಿಗೆ ಮಾತನಾಡಿ,ಸಿಎಂ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಜನ ಮತ ಹಾಕಿಲ್ಲ ಅಂತ ಜನರ ಮೇಲೆ ಬೆಲೆ ಏರಿಕೆ ಬರೆ ಹಾಕಿದ್ದಾರೆ.ದಿನ ಬೆಳಗಾಗೋದ್ರೊಳಗೆ ವಸ್ತುಗಳ ಎಲ್ಲಾ ಬೆಲೆ ಏರಿಕೆ ಆಗಿದೆ. ಹಣ ದುಬ್ಬರದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿ ಇದೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಜಾಸ್ತಿಯಾಗಿದೆ. ಹಗರಣ ಮುಚ್ಚಿ ಹಾಕಲು ಶಾಸಕರನ್ನ ಜೊತೆ ನಿಲ್ಲಲು ಒತ್ತಡ ಹಾಕುತ್ತಿದ್ದಾರೆ. ವಾಲ್ಮೀಕಿ ಹಗರಣ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಊಟ ಸೇರದಕ್ಕೆ ಅವರು ಇತ್ತೀಚೆಗೆ ಮನೆಯಿಂದ ಊಟ, ಹಾಸಿಗೆ, ಪುಸ್ತಕ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಜುಲೈ 25ರಂದು ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಧೀಶರಾದ ವಿಶ್ವನಾಥ ಸಿ ಗೌಡರ್ ಅವರು ಜುಲೈ 25ಕ್ಕೆ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್ ನಲ್ಲಿ ನಟ ದರ್ಶನ್ ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜೈಲು ಅಧಿಕಾರಿಗಳಿಂದ ಕೋರ್ಟಿಗೆ ಇ-ಮೇಲ್ ಮೂಲಕ ವರದಿ ಸಲ್ಲಿಸಲಾಗಿದೆ ಎಂದು ದರ್ಶನ್ ಪರ ವಕೀಲ ರಾಘವೇಂದ್ರ ವಾದ ಮಂಡನೆ ಮಾಡಿದರು.ಮೊದಲನೆಯದಾಗಿ ಕಾನೂನಿನಲ್ಲಿ ಮನೆ ಊಟಕ್ಕೆ ಅವಕಾಶವಿದೆಯೇ? ಜೈಲಿನಲ್ಲಿ ಇದ್ದಾಗ ಆಹಾರದ ಹಕ್ಕು ಇರುವುದಿಲ್ಲವೇ? ಯಾವ ವರ್ಗದ ಆರೋಪಿಗಳು ಇದಕ್ಕೆ ಅರ್ಹರು? ಯಾವ ಷರತ್ತುಗಳನ್ನು ವಿಧಿಸಬಹುದೆಂಬ ಬಗ್ಗೆ…