Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿ ಯಲ್ಲಿ ಇಂದು ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ್ ಮೂಲದ ಯುವಕ ರಾಜಕುಮಾರ(26) ಬಲಿಯಾಗಿದ್ದಾನೆ. ಇನ್ನು ಇದೇ ಫ್ಯಾಕ್ಟರಿಯಲ್ಲಿ ಕೆಲ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಮೃತಪಟ್ಟಿದ್ದ. ಈಗ ಮತ್ತೋರ್ವನ ಬಲಿಯಾಗಿದ್ದಾನೆ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಹೀಗಿದ್ದರೂ ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಇತ್ತ ಅಧಿಕಾರಿಗಳು ಕೂಡ ಪ್ರಕರಣ ಕುರಿತು ಬೇಜವಾಬ್ದಾರಿ ಮತ್ತು ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಅತಿಯಾದ ಮಳೆಯಿಂದ ಹಲವು ಮನೆಗಳು ಹಾಗೂ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಥಳಕ್ಕೆ ಭೇಟಿ ನೀಡಿ ಮನೆ ಕಳೆದುಕೊಂಡವರ ಜೊತೆಗೆ ನಮ್ಮ ಸರ್ಕಾರ ನಿಲ್ಲುತ್ತದೆ ಅವರಿಗೆ ಮನೆ ಕಟ್ಟಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಅವರು, ಮಳೆಯಿಂದ ಮನೆ ಗೋಡೆ ಕುಸಿದು ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು. ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಮಳೆಯಿಂದ ಹಾನಿಯಾದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ್ ಸಿ ಇ ಓ ತಹಶೀಲ್ದಾರ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಸಂಪೂರ್ಣ ಕುಸಿದಿದ್ದರೆ ಕಟ್ಟಿಸುವ ಕೆಲಸ ಮಾಡುತ್ತೇವೆ. ಸರ್ಕಾರದಿಂದ ಈಗ ಒಂದು ಲಕ್ಷ 20,000 ಹಣ ನೀಡುತ್ತೇವೆ ಮನೆ ಕಳೆದುಕೊಂಡವರ ಜೊತೆ ನಮ್ಮ ಸರ್ಕಾರ ನಿಲ್ಲುತ್ತದೆ. ಮಳೆಯಿಂದಾಗಿ ಗುಡ್ಡ ಕುಸಿತ ಪ್ರಕರಣಗಳು…
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಇದೀಗ ಡಿಕೆ ಶಿವಕುಮಾರ್ ಅವರು ಸ್ಪೋಟಕ ವಾದಂತಹ ಹೇಳಿಕೆ ನೀಡಿದ್ದು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಕಾಲದಲ್ಲಿ 300 ಕೋಟಿ ಅಕ್ರಮ ನಡೆದಿದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕಾಲದಲ್ಲಿ ಹಲವು ನಿಗಮಗಳಲ್ಲಿ 300 ಕೋಟಿ ರು.ಗೂ ಹೆಚ್ಚಿನ ಅಕ್ರಮವಾಗಿದ್ದು, ಅವೆಲ್ಲವನ್ನು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರಿದ್ದ ಹಾಗೆ. ಅವರೆಲ್ಲ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ. ಅಲ್ಲದೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸದನದಲ್ಲಿ ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಯಾರ್‍ಯಾರಿದ್ದಾರೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಶಿರೂರು ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು, ಈ ವೇಳೆ ಅಧಿಕಾರಿಗಳಿಂದ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡರು. ಈಗಾಗಲೇ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿರುವವರನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದು ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು ರಕ್ಷಣಾ ಕಾರ್ಯಚರಣೆಯನ್ನು ಸಿದ್ದರಾಮಯ್ಯನವರು ವೀಕ್ಷಿಸುತ್ತಿದ್ದು ಅವರ ಜೊತೆಗೆ ಸಚಿವರಾದ ಕೃಷ್ಣ ಭೈರೇಗೌಡ, ಆರ್.ವಿ ದೇಶಪಾಂಡೆ, ಶಾಸಕ ಮಂಕಾಳು ವೈದ್ಯ ಸಾತ್ ನೀಡಿದ್ದಾರೆ. ಸ್ಥಳಕ್ಕೆ ಈಗಾಗಲೇ ಹಲವು ಸಚಿವರು, ಶಾಸಕರುಗಳು ಭೇಟಿ ನೀಡಿದ್ದು, ಮಣ್ಣು ತೆರುವು ಕಾರ್ಯಾಚರಣೆ ಹಾಗೂ ಮಣ್ಣಿನಲ್ಲಿ ಸಿಲುಕಿರುವ ಇನ್ನೂ ಹಲವರ ಮೃತದೇಹಗಳನ್ನು ಹೊರ ತೆಗೆಯುವ ಕುರಿತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಒಂದು ಕಾಯಾಚರಣೆ ನಡೆಯುವ ಸಂದರ್ಭದಲ್ಲಿ ಇದೀಗ ಜೋರಾಗಿ ಮಳೆ ಆಗುತ್ತಿದ್ದು ಕಾರ್ಯಾಚರಣೆ ವಿಳಂಬಕ್ಕೆ…
ಉತ್ತರಕನ್ನಡ : ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ನಾಪತ್ತೆಯಾಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು, ನಾಪತ್ತೆಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಗೋವಾದಲ್ಲಿ ಬೋಟ್ ರಿಪೇರಿ ಕೆಲಸ ಮಾಡುತ್ತಿದ್ದ ಲೊಕೇಶ್, ಜ್ವರದಿಂದಾಗಿ ರಜೆ ಪಡೆದು ಮನೆಗೆ ಬಂದಿದ್ದರಂತೆ. ಗುಡ್ಡ ಕುಸಿದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ತೆರಳಿದ್ದಾರೆ. ಆದರೆ ಕಳೆದ ಐದು ದಿನಗಳಿಂದಲೂ ಮನೆಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಈಗಾಗಲೇ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆ ಆಗಿರುವ ಹಲವರ ಮೃತ ದೇಹಗಳು ಇದೀಗ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಸ್ ಡಿ ಆರ್ ಎಫ್ ತಂಡದ ಸಿಬ್ಬಂದಿಗಳು ಪತ್ತೆ ಹಚ್ಚಿ ಹೊರ ತೆಗೆದಿದ್ದು, ಇನ್ನೂ ಹಲವರು ಈ ಒಂದು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕುವ ಕಾರ್ಯ ಮುಂದುವರೆದಿದೆ ಘಟನಾ ಸ್ಥಳಕ್ಕೆ ಸಚಿವರು, ಶಾಸಕರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಸರ್ಕಾರದಲ್ಲಿ ಹಗರಣ ಆಗಿದೆ ಅಂತ ಯಾರೂ ತಲೆ ತಗ್ಗಿಸಬೇಕಾಗಿಲ್ಲ. ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅಧಿಕಾರಿಗಳ ತಪ್ಪಿನಿಂದಾಗಿ ಹೀಗಾಗಿದೆ. ಈ ಹಗರಣದಲ್ಲಿ ನಮ್ಮ ಶಾಸಕರ ಪಾತ್ರ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ. KPCC ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಾಲ್ಮೀಕಿ ಹಗರಣದ ಕುರಿತಂತೆ ಮಾತನಾಡಿದ ಅವರು,ಸರ್ಕಾರದಲ್ಲಿ ಹಗರಣ ಆಗಿದೆ ಅಂತ ಯಾರೂ ತಲೆ ತಗ್ಗಿಸಬೇಕಾಗಿಲ್ಲ. ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅಧಿಕಾರಿಗಳ ತಪ್ಪಿನಿಂದಾಗಿ ಹೀಗಾಗಿದೆ. ಈ ಹಗರಣದಲ್ಲಿ ನಮ್ಮ ಶಾಸಕರ ಪಾತ್ರ ಇಲ್ಲ. ನನ್ನ ಬಳಿ ಆಣೆ ಪ್ರಮಾಣ ಮಾಡಿ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಸುಮ್ಮನೆ ಬಿಡೋದಿಲ್ಲ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಹಗರಣ ಆಗಿದೆ ಅಂತ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳಬೇಕಾದ ಅವಶ್ಯಕತೆ ಇಲ್ಲ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.ಕಾರ್ಯಕರ್ತರು ಎಲ್ಲಾ ಕಮಿಟಿಗಳ ರಚನೆ ಮಾಡಬೇಕು. ಯಾವ ಶಾಸಕರು ಸಹ ತಮ್ಮ ಮನೆಗಳಲ್ಲಿ ಮೀಟಿಂಗ್ ಮಾಡಬಾರದು. ಕಾಂಗ್ರೆಸ್ ಕಚೇರಿ ಚಿಕ್ಕದಿದ್ದರೆ, ಕಲ್ಯಾಣ ಮಂಟಪದಲ್ಲಿ ಸಭೆ ಮಾಡಬೇಕು. ಶಾಸಕರ…
ಮಂಗಳೂರು : ನಾವು ಎಷ್ಟೇ ಜಾಗೃತರಾಗಿದ್ದರು ಕೂಡ ಕೆಲವೊಂದು ಬಾರಿ ವಂಚನೆಗೆ ಒಳಗಾಗುತ್ತೇವೆ. ಅದರಲ್ಲೂ ಆನ್ಲೈನ ಷೇರು ಮಾರುಕಟ್ಟೆ ಇರಬಹುದು. ಆನ್ಲೈನ್ ಹಣದ ವ್ಯವಹಾರ ಇರಬಹುದು ಅಥವಾ ಹೂಡಿಕೆ ಇರಬಹುದು ಸುಲಭವಾಗಿ ಮೋಸ ಹೋಗುತ್ತೇವೆ.ಇದೀಗ ಆನ್‌ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ, ಮಂಗಳೂರು ನಗರದ ನಿವಾಸಿಯೊಬ್ಬರಿಂದ 1.50 ಕೋಟಿ ರೂ. ಪಡೆದು ವಂಚಿಸಿರುವ ಪ್ರಕರಣ ನಡೆದಿದೆ. ಹೌದು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 1.50 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ದೂರುದಾರರು ಫೇಸ್‌ಬುಕ್ ಬಳಸುತ್ತಿದ್ದಾಗ ಒಂದು ಪೋಸ್ಟ್ ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಉತ್ತರಿಸಿ, ಮೊಬೈಲ್ ಸಂಖ್ಯೆ ನಮೂದಿಸಿದ್ದರು. ಮೇ 3ರಂದು ಅಪರಿಚಿತ ವ್ಯಕ್ತಿಯೊಬ್ಬ ದೂರುದಾರರನ್ನು ಪೋಸ್ಟ್ ಬಂದಿದ್ದ ಗ್ರೂಪ್ಗೆ ಸೇರ್ಪಡೆಗೊಳಿಸಿದ್ದ. ವಂಚನೆಗೆ ಒಳಗಾದ ವ್ಯಕ್ತಿ ಷೇರು ಮಾರ್ಕೆಟ್‌ಗೆ ಸಂಬಂಧಿಸಿದಂತೆ ಖಾತೆಯೊಂದನ್ನು ತೆರೆದಿದ್ದರು. ಷೇರುಗಳನ್ನು ಖರೀದಿಸಿ ಲಾಭ ಗಳಿಸುವ ಉದ್ದೇಶದಿಂದ ಮೇ 28ರಿಂದ ಜೂನ್ 28ರ ವರೆಗೆ ಹಂತ – ಹಂತವಾಗಿ 73…
ಉಡುಪಿ : ಇತ್ತೀಚಿನ ದಿನಗಳಲ್ಲಿ ಮನುಷ್ಯ ಮನುಷ್ಯತ್ವವನ್ನೇ ಮರೆತಂತೆ ಕಾಣುತ್ತಿದೆ. ಪ್ರಾಣಿಗಳ ಮೇಲೆ ನಡೆಸಿದ ಕ್ರೂರತೆಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ.ಇದೀಗ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಾಯಿಯ ಕಳೇಬರವನ್ನು ಸ್ಕೂಟರ್‌ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ ವಿರುದ್ಧ ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೌದು ಉಡುಪಿಯ ಕಾಪು ಜಿಲ್ಲೆಯ ಶಿರ್ವಾ ಪಟ್ಟಣದಲ್ಲಿ ಈ ಕ್ರೂರ ಘಟನೆ ನಡೆದಿದೆ. ಕಿಲೋಮೀಟರ್ ಗಟ್ಟಲೆ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ಹಾಕಿ ಎಳೆದೊಯ್ಯಲಾಗಿದೆ. ಮಲ್ಲರ್ ನಿವಾಸಿಯಾಗಿರುವ ಈತ ನಾಯಿ ಮೇಲೆ ಕ್ರೂರವಾಗಿ ವರ್ತಿಸಿದ್ದಾನೆ. ನಾಯಿ ಕೊರಳಿಗೆ ಚೈನ್ ಕಟ್ಟಲಾಗಿದೆ. ಬಳಿಕ ನಾಯಿ ಚೈನ್‌ನ್ನು ಸ್ಕೂಟರ್ ಹಿಂಭಾಗಕ್ಕೆ ಕಟ್ಟಿ ಎಳೆದೊಯ್ಯಲಾಗಿದೆ. ಕೊಂಬಗುಡ್ಡೆಯ ನಿವಾಸಿ ಖಾದರ್, ಮೃತಪಟ್ಟ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ಕಟ್ಟಿಕೊಂಡು ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಎಳೆದೊಯ್ದು ವಿಕೃತಿ ಮೆರೆದಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಕ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಶಿರ್ವ ಪೊಲೀಸರು ಆರೋಪಿ ಖಾದರ್…
ಚಿತ್ರದುರ್ಗ : ಹೆಚ್. ಆಂಜನೇಯ ಎರಡು ಸಲ ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದ, ಆದರೂ ನನ್ನ ಸಂಪುಟದಲ್ಲಿ ಸಚಿವ ಆಗಿದ್ದನುಎಸ್ ಸಿಪಿ ಟಿಎಸ್ ಪಿ ಕಾಯ್ದೆ ಮಂಡನೆ ವೇಳೆ ಸೂಟ್ ಹಾಕಿಕೊಂಡು ಬರಲು ಸೂಚಿಸಿದ್ದೆನು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಚಿತ್ರದುರ್ಗ ನಗರದಲ್ಲಿ ನಡೆದ ಹೆಚ್. ಆಂಜನೇಯ ಚಾರಿಟೇಬಲ್ ಟ್ರಸ್ಟ್ ನಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಬದಲಾವಣೆ ಆಗಬೇಕು, ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಮಾದಿಗ ಸಮಾಜಕ್ಕೆ ಸೇರಿದ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು 85ಕ್ಕೂ ಹೆಚ್ಚು ಮಾರ್ಕ್ಸ್ ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ. ವೈಜ್ಞಾನಿಕ, ವೈಚಾರಿಕ ಶಿಕ್ಷಣ ಇರಬೇಕು. ಅನೇಕರು ಮೌಢ್ಯ ಆಚರಣೆ ಮಾಡುತ್ತಾರೆ. ನಮ್ಮ ಹಣೆಬರಹ, ಪೂರ್ವ ಜನ್ಮದ ಕರ್ಮ ಎನ್ನುತ್ತಾರೆ. ಯಾರ ಹಣೆ ಮೇಲೂ ಬ್ರಹ್ಮ ಬರೆಯಲು ಬರುತ್ತಾನೆ. ಯಾವ ದೇವರೂ ಬರೆಯಲ್ಲ. ಇದೆಲ್ಲಾ ನಾವು ನಂಬಿಕೊಂಡಿರುವಂಥದು. ಅಂಬೇಡ್ಕರ್ ಆಗಲು ಸಾಧ್ಯ ಆಗಿಲ್ಲ. ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆಯಿಟ್ಟುಕೊಂಡಿದ್ದೇವೆ ಎಂದು ಹೇಳಿದರು.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಬಸನಗೌಡ ದದ್ದಲ್ ಅವರ ಇಡೀ ವಿಚಾರಣೆ ಇದೀಗ ಅಂತ್ಯವಾಗಿದೆ. ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆ ಅಂತ್ಯವಾದ ಬಳಿಕ ಹೊರಬಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸೂಚಿಸಿಲ್ಲ. ಅಕಸ್ಮಾತ್ ಕರೆದರೆ ನಾಳೆ ವಿಚಾರಣೆಗೆ ಹಾಜರಾಗುವುದಾಗಿ ಶಾಸಕ ಬಸನಗೌಡ ದದ್ದಲ್ ಹೇಳಿದರು.