Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು. ನಿನ್ನೆ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದ. ಇದೀಗ ಇಂದು ಸಹ ಸಮೀರ್ 2ನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಮುರ್ಡರ್ ನಡೆದಿದ್ದು, ಯುವಕನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೀರಾಪುರ ಕಾಲೋನಿ ಅಲ್ಲಿ ಮರಿಯಪ್ಪ ಕಟ್ಟಿಮನಿ (24) ಎಂನುಗ ಯುವಕನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಕಲಬುರ್ಗಿ ತಾಲೂಕಿನ ಮೈನಾಳ ಗ್ರಾಮದ ನಿವಾಸಿಯಾಗಿರುವ ಮಾರಪ್ಪ, ಕೊಲೆ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡ್ಯಾನ್ಸ್ ಮಾಸ್ಟರ್ ಒಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾವೇರೀ ಜಿಲ್ಲೆಯ ಮೋಟೆ ಬೆನ್ನೂರು ಎಂಬಲ್ಲಿ ಚಿತ್ರದುರ್ಗ ಮೂಲದ ಲಿಂಗೇಶ ಎಂಬ ಡಾನ್ಸ್ ಮಾಸ್ಟರ್ ನನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.ಹಂತಕರು ಕೊಲೆ ಬಳಿಕ ಶವದ ಬಳಿ ಬೈಕ್ ಚಾಕು ನೀರಿನ ಬಾಟಲ್ ಎಸೆದು ಪರಾರಿ ಆಗಿದ್ದಾರೆ.
ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಮಹಾ ಎಡವಟ್ಟು : ಗಂಟಿನ ಆಪರೇಷನ್ ವೇಳೆ ವ್ಯಕ್ತಿಯ ಕರುಳು ಕಟ್ ಮಾಡಿದ ವೈದ್ಯರು!
ಬೆಳಗಾವಿ : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆಯ ವೈದ್ಯರು ಮಹಾ ಎಡವಟ್ಟು ಒಂದನ್ನು ಮಾಡಿದ್ದಾರೆ ವ್ಯಕ್ತಿಯ ಗಂಟಿನ ಆಪರೇಷನ್ ವೇಳೆ ಕರುಳು ಕಟ್ ಮಾಡಿರುವ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ಹೊಟ್ಟೆ ನೋವೆಂದು ವ್ಯಕ್ತಿಯೊಬ್ಬರು ಜೂನ್ 20ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ವೈದ್ಯರು ವ್ಯಕ್ತಿಯ ಹೊಟ್ಟೆಯಲ್ಲಿ ಗಂಟು ಇರೋದು ಕಂಡು ಬಂದಿದೆ. ಬಳಿಕ ವ್ಯಕ್ತಿಗೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಈ ವೇಳೆ ವೈದ್ಯರು ವ್ಯಕ್ತಿಗೆ ಆಪರೇಷನ್ ಮಾಡುವಾಗ ಗಂಟು ಸಮೇತ ಕರುಳು ಸಹ ಕಟ್ ಮಾಡಿದ್ದಾರೆ. ಮಹೇಶ್ ಮಾದರ್ ಎನ್ನುವ ವ್ಯಕ್ತಿಯ ಕರುಳು ಕಟ್ ಮಾಡಿದ್ದಾರೆ ಜೂನ್. 20 ರಂದು ಹೊಟ್ಟೆ ನೋವು ಎಂದು ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನವೇ ಬಿಮ್ಸ್ ವೈದ್ಯರು ಆಪರೇಷನ್ ಮಾಡಿದ್ದಾರೆ ಕರುಳು ಕಟ್ ಮಾಡಿ ವೈದ್ಯರು ಹೊಲಿಗೆ ಹಾಕಿ ಕಳುಹಿಸಿದ್ದಾರೆ ಮನೆಗೆ ಹೋದ ಬಳಿಕ ಮಹೇಶ್ ಗೆ ಮತ್ತೆ ವಿಪರೀತ ಹೊಟ್ಟೆ ನೋವು ಕಂಡು ಬಂದಿದೆ ಸ್ಕ್ಯಾನ್…
ಕೇರಳ : ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್ಕೂಟತಿಲ್ ರಾಜೀನಾಮೆ ನೀಡಿದ ಒಂದು ದಿನದ ನಂತರ, ಇದೀಗ ಶಾಸಕ ರಾಹುಲ್ ನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ. ಹೌದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಾಹುಲ್ ಮಮಕೂಟತಿಲ್ ನನ್ನ ಇದೀಗ ಕಾಂಗ್ರೆಸ್ ಅಮಾನತು ಗೊಳಿಸಿದೆ. ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಹುಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಇದೀಗ ಕಾಂಗ್ರೆಸ್ ಅಮಾನತುಗೊಳಿಸಿದೆ.
ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ನಿಲ್ಲುತ್ತಿಲ್ಲ.ಇದೀಗ BMTC ಬಸ್ ಡಿಕ್ಕಿಯಾಗಿ ವ್ಯಕ್ತಿಯ ಸ್ಥಿತಿ ಗಂಭೀರ ಆಗಿರುವ ಘಟನೆ ತಾವರೆಕೆರೆ ನಿಲ್ದಾಣದಲ್ಲಿ ನಡೆದಿದೆ.ವ್ಯಕ್ತಿಗೆ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಈ ಒಂದು ಅಪಘಾತ ಸಂಭವಿಸಿದೆ. AK 7024 ನಂಬರ್ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಇನ್ನು ಇಂದು ಬೆಳಿಗ್ಗೆ ತಾನೇ ನಗರದಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು 11 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ತಂದೆ ಜೊತೆಗೆ ದ್ವಿಚಕ್ರ ವಾಹನದಲ್ಲಿ ಬಾಲಕ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಸ್ಥಾನದ ಪೂಜಾರಿ ದಿಲೀಪ್ ಕುಮಾರ್ ಪುತ್ರ ಶಬರೀಶ್(11) ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಅಪಘಾತ ನಡೆದಿದೆ. ಬೈಕ್ನಲ್ಲಿದ್ದ ಫಾರೆಸ್ಟ್ ಗಾರ್ಡ್ ಕೆಂಪರಾಜು, ಸೆಂಟ್ರಿಂಗ್ ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ ವಿಚಾರವಾಗಿ ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಬ್ಬ ಹಿಂದು. ಹಿಂದುತ್ವ ದೇಗುಲಗಳ ಬಗ್ಗೆ ಬಿಜೆಪಿಗಿಂತ ನಮಗೆ ಹೆಚ್ಚು ಗೌರವವಿದೆ. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಸಂದರ್ಭ ಬಂದಾಗ ಸಿಎಂ ಆಗುತ್ತಾರೆ ಎಂದು ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂದುತ್ವದಲ್ಲಿ ರಾಜಕಾರಣ ಮಾಡುತ್ತಾರೆ. ನಾವು ಧರ್ಮ ಸಮುದಾಯ ಇಟ್ಟುಕೊಂಡು ರಾಜಕಾರಣ ಮಾಡಲ್ಲ. ಡಿಕೆ ಶಿವಕುಮಾರ್ ಬಿಜೆಪಿಗೆ ಹೋಗುವುದಾದರೆ ಯಾವಾಗಲೂ ಹೋಗುತ್ತಿದ್ದರು ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ದಟ್ಟಿ ನೆಲ ಕಂಡುಕೊಂಡಿದ್ದಾರೆ ಡಿಕೆ ಶಿವಕುಮಾರ್ ಹಾಗೆ ಬಿಜೆಪಿಗೆ ಹೋಗುತ್ತಾರೆ ಕಾಂಗ್ರೆಸ್ ಅಧ್ಯಕ್ಷರಾಗಿ ಉತ್ತಮವಾಗಿ ಡಿಕೆ ಶಿವಕುಮಾರ್ ಕೆಲಸ ಮಾಡಿದ್ದಾರೆ ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ನಮಗೆ ಡಿಕೆ ಶಿವಕುಮಾರ್ ಅವರ ಬಗ್ಗೆ ಪ್ರಶಂಸೆ ಇದೆ ಎಂದರು. ಹಾಗಿದ್ರೆ ಡಿಸಿಎಂ…
ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಇಡಿ ವಶಕ್ಕೆ ಪಡೆದುಕೊಂಡಿದೆ. ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆನ್ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ. ಹೌದು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು. ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು…