Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು ಇಡಿ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಚಡಿ ಅಂತ್ಯವಾಗಿದ್ದು, ಇಂದು ಇಡಿ ಅಧಿಕಾರಿಗಳು ಅವರನ್ನು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. 6 ದಿನಗಳಿಂದ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆ ನಡೆಸಿತ್ತು. ವಿಚಾರಣೆಯ ವೇಳೆ ನಾಗೇಂದ್ರ ಅವರು ಸಮರ್ಪಕವಾಗಿ ಉತ್ತರ ನೀಡದ ಕಾರಣ ಇಂದು ಮತ್ತೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳ…
ಬೆಂಗಳೂರು : ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಾಲ್ವರು ಸಚಿವರಿಂದ ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್, ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಈ ಒಂದು ಜಂಟಿ ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಒಂದು ಸುದ್ದಿಗೋಷ್ಠಿ ಭಾರಿ ಮಹತ್ವವನ್ನು ಪಡೆದುಕೊಂಡಿದೆ. ಈ ಕುರಿತಂತೆ ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಅಂತ ತಿಳಿಸಿದ್ದಾರೆ. ಕನ್ನಡಿಗರು ಕನ್ನಡದ…
ಬೆಂಗಳೂರು : ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ 5 ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ. ಹೌದು ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ರಾಜ್ಯ ಸರ್ಕಾರ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಆಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು…
ಬಾಗಲಕೋಟೆ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಟುಂಬವೊಂದನ್ನು ನಾಶಪಡಿಸಲು ಗುಡಿಸಲಿಗೆ ಪೆಟ್ರೋಲ್ ಸಿಂಪಡಣೆ ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವ ದಹನವಾಗಿದ್ದು, ಮೂವರು ಪ್ರಾಣಾಪಾಯದಿಂದ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಳಿಯ ಬೆಳಗಲಿಯಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಳಿಯ ಬೆಳಗಲಿಯಲ್ಲಿ ಕಳೆದ ಜುಲೈ 15 ರಂದು ನಸುಕಿನ ಜಾವ ಬೆಳಗಲಿ ಸರಹದ್ದಿನ ಪೆಂಡಾರಿ ಮುಲ್ಲಾ ತೋಟದ ಮನೆಯ ಮಾಲೀಕ ದಸ್ತಗಿರಸಾಬ.ಮೌ.ಪೆಂಡಾರಿ ಅವರ ಮನೆಗೆ ದುಷ್ಕರ್ಮಿಗಳು ಈ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಪೆಂಡಾರಿ ಕುಟುಂಬದ ಜೈಬುನ್ ದಸ್ತಗೀರಸಾಬ ಪೆಂಡಾರಿ (55), ಶಬಾನಾ ದಸ್ತಗೀರಸಾಬ ಪೆಂಡಾರಿ (26) ಸಜೀವ ದಹನಗೊಂಡಿದ್ದಾರೆ. ದುರುಳರು 1ಎಚ್‌ಪಿ ಮೋಟಾರ್ ಪಂಪ್ ಬಳಸಿ ಇಡೀ ಪತ್ರಾಸ್ (ತಗಡಿನ) ಶೆಡ್‌ಗೆ ಪೆಟ್ರೋಲ್ ಸಿಂಪಡಣೆ ಮಾಡಿದ್ದಾರೆ. ಪೆಟ್ರೋಲ್ ವಾಸನೆ ಬರುತ್ತಿದ್ದಂತೆ ದಸ್ತಗೀರಸಾಬ, ಆತನ ಪುತ್ರ ಮತ್ತು ಮೊಮ್ಮಗ ಮೂವರು ಹೊರಗೆ ಓಡಿ ಬಂದಿದ್ದಾರೆ. ಇದೆ ವೇಳೆ ದುಷ್ಕರ್ಮಿಗಳು ಅವರಿಗೂ ಪೆಟ್ರೋಲ್ ಸಿಂಪಡಣೆ…
ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯಾದಗಿರಿಯಲ್ಲಿ 13 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮವೊಂದರಲ್ಲಿ ನಿನ್ನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಹೌದು ಗ್ರಾಮದ ರಾಮರೆಡ್ಡಿ, ಸಂಜೀವಗೌಡ ಎಂಬ ಇಬ್ಬರು ಕಾಮುಕರು ಸೇರಿ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಾಲಕಿ ಬಹಿರ್ದೆಸೆಗಾಗಿ ಬಯಲಿಗೆ ಹೋಗಿದ್ದಳು. ಅದೇ ಗ್ರಾಮದಲ್ಲಿ ಮನೆಯೊಂದು ಖಾಲಿ ಇತ್ತು, ಯಾರು ಇಲ್ಲದಾಗ ಬಾಲಕಿ ಮೇಲೆ ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ. ಇಬ್ಬರೂ ಆರೋಪಿಗಳು ಬಾಲಕಿಯ ಜೊತೆ ಬಹಳ ಸಲುಗೆಯಿಂದ ಇದ್ದರು. ಅದೇ ಸಲುಗೆಯಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕೇಸ್ ನೀಡಲು ಯುವತಿಯ ಪೋಷಕರು ಮುಂದಾಗಿಲ್ಲ. ಹೀಗಾಗಿ ಸ್ವತಃ ಕೇಸ್ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಯಾದಗಿರಿ ಮಹಿಳಾ ಪೋಲಿಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೆ ಸಂಬಂಧಸಿದಂತೆ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಮಾಡಲಾದ ಹಣವನ್ನು ಲೋಕಸಭಾ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಸಿರುವುದು ಕಂಡು ಬಂದಿದೆ ಎಂದು ಇ.ಡಿ. ಬುಧವಾರ ಬಿಡುಗಡೆ ಮಾಡಿದ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಹೌದು ಇತ್ತೀಚೆಗೆ ಮುಕ್ತಾಯ ಗೊಂಡ ಲೋಕಸಭಾ ಚುನಾ ವಣೆಗೂ ನಂಟು ಇರುವುದು ಪತ್ತೆ ಯಾಗಿದೆ ಎಂದು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲ ಯ (ಇ.ಡಿ) ಸೋಟಕ ಮಾಹಿತಿ ನೀಡಿದೆ. ಅಲ್ಲದೆ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ, ವಾಲ್ಮೀಕಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಿದ ವೇಳೆ, ಅಕ್ರಮದ ಹಣವನ್ನು ಲೋಕಸಭಾ ಚುನಾವ ಣೆಗೆ ಬಳಸಿರುವ ಕುರಿತೂ ದಾಖಲೆಗಳು ಸಿಕ್ಕಿವೆ ಎಂದು ಇ.ಡಿ. ಮಾಹಿತಿ ನೀಡಿದೆ. ಈ ಮಾಹಿತಿ, ಪ್ರಕರಣದಲ್ಲಿ ಪಕ್ಷದ ಯಾವುದೇ ಸಚಿವರು, ಶಾಸಕರು ಭಾಗಿಯಾಗಿಲ್ಲ ಎಂದು ವಾದಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ…
ಬೆಂಗಳೂರು : ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ಗೆ ಪಂಚೆ ಧರಿಸಿ ಬಂದಿದ್ದ ರೈತರೊಬ್ಬರನ್ನು ಒಳಗೆ ಬಿಡದೆ ಅವಮಾನ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಲ್ ವಿರುದ್ಧ ಕೆಪಿ ಅಗ್ರಹಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ನಿನ್ನೆ ಹಾವೇರಿ ಮೂಲದ ನಾಗರಾಜ್ ಎಂಬವರು ತಂದೆ ತಾಯಿಗೆ ಸಿನಿಮಾ ತೋರಿಸಲು ಅವರನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಪಂಚೆ ಧರಿಸಿದ್ದಕ್ಕೆ ಅವರನ್ನು ಒಳಗೆ ಬಿಡದೆ ಅವಮಾನಿಸಿದ್ದರು. ಇದೀಗ ರೈತನನ್ನು ಅವಮಾನಿಸಿದ್ದ ಜಿಟಿ ಮಾಲ್ ವಿರುದ್ಧ ಬೆಂಗಳೂರಿನ ಕೆ ಪಿ ಅಗ್ರಹಾರ ಠಾಣೆಯಲ್ಲಿ FIR ದಾಖಲಾಗಿದೆ. ಮಾಲ್ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ. ರೈತ ಫಕೀರಪ್ಪಗೆ ಮಾಲ್ ನ ಸಿಬ್ಬಂದಿ ಅವಮಾನಿಸಿದ್ದರು. ಪಂಚೇ ಧರಿಸಿ ಬಂದಿದ್ದಕ್ಕೆ ರೈತನನ್ನು ಒಳಗೆ ಬಿಟ್ಟಿರಲಿಲ್ಲ. ಸಿಬ್ಬಂದಿ ಅರುಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದೀಗ ದೂರು ಸಲ್ಲಿಕೆಯಾಗಿದೆ. ಧರ್ಮರಾಜಗೌಡ ಎನ್ನುವವರ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಘಟನೆ ಹಿನ್ನೆಲೆ? ಹಾವೇರಿ ಮೂಲದ…
ಬಾಗಲಕೋಟೆ : ಸದ್ಯ ರಾಜ್ಯಾದ್ಯಂತ ವಾಲ್ಮೀಕಿ ನಿಗಮ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಭಾರಿ ಸದ್ದು ಮಾಡತ್ತಿದ್ದು, ಈ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಕಾರ್ಮಿಕ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನೇ 2.83 ರೂ. ಕೋಟಿ ವಂಚಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಹೌದು ದ್ಯಾವಪ್ಪ ತಳವಾರ ವಂಚಕ ಹೊರಗುತ್ತಿಗೆ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು, ಸದ್ಯ ಬಾಗಲಕೋಟೆ ಸಿಇಎನ್ ಪೊಲೀಸರು ವಂಚನೆ ಮಾಡಿದ ನೌಕರನಿಂದ 37 ಲಕ್ಷ ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಅವನ ಬ್ಯಾಂಕ್‌ನಲ್ಲಿದ್ದ 76 ಲಕ್ಷ ಹಣ ವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ವಂಚಿಸಿದ ಇನ್ನೂ 1.70 ಕೋಟಿ ಹಣದ ಮೂಲವನ್ನು ಅಧಿಕಾರಿಗಳು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಕಟ್ಟಡ ಹಾಗೂ ಇತರೆ ನಿರ್ಮಾಣ ನೋಂದಾಯಿತ ಕಾರ್ಮಿಕ ಫಲಾನುಭವಿಗಳ ಮಕ್ಕಳಿಗೆ ಮದುವೆ ಹಾಗೂ ವೈದ್ಯಕೀಯ ವೆಚ್ಚದ ಧನ ಸಹಾಯವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ. ಅವರಿಗೆ ಹಣ ಮಂಜೂರು ಮಾಡುವ…
ಬೆಂಗಳೂರು : ಬಿಲ್ ಪಾವತಿ ಮಾಡದ ಕಾರಣ ಗುತ್ತಿಗೆ ಪಡೆದ ಸಂಸ್ಥೆ ಆಹಾರ ಪೂರೈಕೆ ಮಾಡದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳು ಬುಧವಾರದಿಂದ ಸ್ಥಗಿತಗೊಂಡಿವೆ ಎಂದು ತಿಳಿದುಬಂದಿದೆ. ಈ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆಯ ಕೆಯ ಗುತ್ತಿಗೆಯನ್ನು ಶೆಫ್ ಟಾಕ್ ಸಂಸ್ಥೆ ಪಡೆದು ಕೊಂಡಿದೆ. ಕಳೆದ 1 ವರ್ಷದಿಂದ ಇಂದಿರಾ ಕ್ಯಾಂಟೀನ್‌ಗಳಿಗೆ ಪೂರೈಕೆ ಮಾಡಿದ ಬಿಲ್ ಪಾವತಿ ಮಾಡಿಲ್ಲವೆಂದು ಬುಧವಾರದಿಂದ ಆಹಾರ ಪೂರೈಕೆಯನ್ನು ಏಕಾಏಕಿ ಸ್ಥಗಿತಗೊಳಿದೆ. ಸುಮಾರು 47 ಕೋಟಿ ರು. ಬಿಲ್ ಬಾಕಿ ಇದ್ದು, ಹಣ ಬಿಡುಗಡೆ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹಲವು ಬಾರಿ ಮನವಿ ಮಾಡಿದರೂ ಹಣ ಬಿಡುಗಡೆ ಮಾಡಿಲ್ಲ ಎಂಬ ಕಾರಣಕ್ಕೆ ಆಹಾರ ಪೂರೈಕೆ ನಿಲ್ಲಿಸಿದೆ. ಹಲವು ದಿನಗಳ ಹಿಂದೆಯೇ ಈ 11 ಇಂದಿರಾ ಕ್ಯಾಂಟೀನ್‌ನಲ್ಲಿ ರಾತ್ರಿ ಊಟವನ್ನು ಸ್ಥಗಿತಗೊ ಳಿಸಲಾಗಿತ್ತು. ಬುಧವಾರದಿಂದ ಸಂಪೂರ್ಣ ವಾಗಿ ಬಂದ್ ಮಾಡಲಾಗಿದೆ. ಅಲ್ಲದೆ ಗುತ್ತಿಗೆ ಒಪ್ಪಂದದಲ್ಲಿ ಇಂದಿರಾ ಕ್ಯಾಂಟೀನ್ ಗಳ ನೀರಿನ ಬಿಲ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಫರ್ನಿಚರ್ ಶಾಪ್ನಲ್ಲಿ ಆಕಸ್ಮಿಕ ಬೆಂಕಿಯಿಂದ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ಆದರೆ ಅದೃಷ್ಟಪಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೌದು ಬೆಂಗಳೂರಿನ ವಿಜ್ಞಾನ ನಗರದ ಬಸ್ ನಿಲ್ದಾಣದ ಬಳಿ ಇರುವ ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿ ಪೂರ್ತಿ ಬೆಂಕಿಗೆ ಆಹುತಿಯಾಗಿದೆ. ಶಾಪ್ ಕ್ಲೋಸ್ ಮಾಡಿದ ಬಳಿಕ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟಪಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತಂತೆ ಭೈಯಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.