Author: kannadanewsnow05

ಮಂಡ್ಯ : ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗುತ್ತಿದ್ದು, ಸದ್ಯ ಈಗ ಮೊದಲ ಬೆಳೆ ಬೆಳೆಯಲು ಯಾವುದೇ ತೊಂದರೆ ಇಲ್ಲ. ನಾಳೆಯಿಂದ ಬಿತ್ತನೆ ಬೀಜ ವಿತರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಇಲ್ಲ ಎಂದು ನಾಗಮಂಗಲದಲ್ಲಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ಮಂಡ್ಯದ ನಾಗಮಂಗಲದಲ್ಲಿ ಮಾತನಾಡಿದ ಅವರು ತಮಿಳುನಾಡಿಗೆ ನೀರು ಬಿಡಲು ಸಿಡಬ್ಲ್ಯೂಆರ್‌ಸಿ ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಸಿಡಬ್ಲ್ಯೂಆರ್‌ಸಿ ಶಿಫಾರಸ್ಸನ್ನು ಪ್ರಶ್ನಿಸಿ, ಸಿಡಬ್ಲ್ಯೂಎಂಎ ಮುಂದೆ ಮೇಲ್ಮನವಿ ಹೋಗಲು ತೀರ್ಮಾನಿಸಿದ್ದೇವೆ. ಈಗ ಕಬಿನಿ ಜಲಾಶಯದಿಂದ 30,000 ಕ್ಯೂ ಸೇಕ್ ನೀರು ಹೋಗುತ್ತಿದೆ. ಕೆಆರ್‌ಎಸ್‌ ಅಣೆಕಟ್ಟಿಗೆ 35,000 ಕ್ಯೂಸೆಕ್ ಒಳಹರಿವು ಇದೆ ಕಬಿನಿಯಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಈಗ ಬಿಡುವ ಪ್ರಶ್ನೆ ಇಲ್ಲ. ಕೆ ಆರ್ ಎಸ್ ಡ್ಯಾಮ್ ನಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ಮಳೆ ಮುಂದುವರೆದರೆ ಕೆಆರ್‌ಎಸ್‌ ಡ್ಯಾಮ್ ಭರ್ತಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

Read More

ದಾವಣಗೆರೆ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಲೂಟಿ ಸರ್ಕಾರ ಎಂದು ಆರೋಪಿಸಿದರು. ಇಂದು ದಾವಣಗೆರೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಪ್ರಕರಣದ ಕುರಿತು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100% ಸರ್ಕಾರ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳ ಮೂಗಿನ ಅಡಿಯಲ್ಲಿ ಎಲ್ಲಾ ಹಣ ವರ್ಗಾವಣೆ ಆಗಿದೆ. ಮುಡಾದಲ್ಲಿ 5,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಮುಡಾ ಹಗರಣ ಸಿಬಿಐಗೆ ಕೊಡಬೇಕು. ತಮ್ಮ ಕುರ್ಚಿಗೋಸ್ಕರ ಕೀಳು ಮಟ್ಟದ ಆಡಳಿತ ನಡೆಸುತ್ತಿದ್ದಾರೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್…

Read More

ಹಾಸನ : ರಾಜ್ಯದಲ್ಲಿ ಇದೀಗ ಮುಂಗಾರು ಜೋರಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಅಲ್ಲದೆ ಮಳೆಯಿಂದ ಹಲವಾರು ಕಡೆ ಅವಾಂತರ ಸೃಷ್ಟಿಯಾಗಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಭೂ ಕುಸಿತ ಉಂಟಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮಲೆನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಸಕಲೇಶಪುರ ಸಮೀಪದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿದೆ. ಈ ಮೂಲಕ ವಾಹನ ಸವಾರರು ಭಯದಿಂದಲೇ ಸಂಚಾರ ನಡೆಸಬೇಕಿದೆ. ಭಾರೀ‌ ಮಳೆಯಿಂದ ಕೊಲ್ಲಹಳ್ಳಿ ಬಳಿ ತಡೆಗೋಡೆ ಕುಸಿತವಾಗಿದೆ. ಸುಮಾರು 25 ಅಡಿಗೂ ಹೆಚ್ಚು ಪ್ರಮಾಣದ ಮಣ್ಣು ಹಾಕಿ ನಿರ್ಮಿಸಿದ್ದ ರಸ್ತೆ ಇದಾಗಿತ್ತು. ಸೂಕ್ತ ತಡೆಗೋಡೆ ನಿರ್ಮಿಸದೆ ಇದ್ದ ಕಾರಣ ಮಣ್ಣು ಕೊಚ್ಚಿ ಹೋಗುತ್ತಿದೆ. 500 ಮೀಟರ್ ಉದ್ದಕ್ಕೆ ರಸ್ತೆಗೆ ಹೊಂದಿಕೊಂದ‌ ತಡೆಗೋಡೆ ಕುಸಿಯುತ್ತಿದ್ದು, ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗುವ ಆತಂಕ ಎದುರಾಗಿದೆ. ಅಲ್ಲದೆ ನಿನ್ನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟೀಯ ಹೆದ್ದಾರಿ…

Read More

ಉತ್ತರಕನ್ನಡ : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತದಿಂದ ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. X ಪೋಸ್ಟ್ ನಲ್ಲಿ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ; ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ…

Read More

ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಸೇತುವೆ ಮೇಲಿಂದ ಬಿದ್ದ ಮಹಿಳೆಯ ಶವ ಇದೀಗ ಪತ್ತೆಯಾಗಿದ್ದು, ಸಂಧ್ಯಾರಾಣಿ (28) ಮೃತ ಮಹಿಳೆ ಎಂದು ತಿಳಿದುಬಂದಿದೆ. ಹೌದು ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಬ್ರಿಡ್ಜ್ ಎರಡು ದಿನಗಳ ಬಳಿಕ ಸಂಧ್ಯಾರಾಣಿ ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಸತತ ಪರಿಶ್ರಮದಿಂದ ಅಗ್ನಿಶಾಮಕ ಸಿಬ್ಬಂದಿಗಳ ತಂಡದಿಂದ ಕಾರ್ಯಾಚರಣೆ ಇದೀಗ ಯಶಸ್ವಿಯಾಗಿದೆ. ಜುಲೈ 15 ರಂದು ಕಲಬುರ್ಗಿ ಜಿಲ್ಲೆಯ ಕುರಿಕೋಟ ಬ್ರಿಡ್ಜ್ ಮೇಲಿಂದ ಸಂಧ್ಯಾರಾಣಿ ಹಾರಿದ್ದರು.ಬಳಿಕ ಆಕೆಯ ಹಿಂದೆಯೇ ಅನಿಲ್ ಕುಮಾರ್ ಕೂಡ ನದಿಗೆ ಹಾರಿದ್ದ. ಬೆಣ್ಣೆತೋರ ನದಿಯಲ್ಲಿ ಅನಿಲ್ ಕುಮಾರ್ ಶವ ಪತ್ತೆಯಾಗಿತ್ತು.ಆದರೆ ಸಂಧ್ಯಾರಾಣಿ ಮೃತದೇಹ ಪತ್ತೆಯಾಗಿಲ್ಲ ಆದರೆ ಇದೀಗ ಇಂದು ಅವರ ಮೃತದೇಹ ಪತ್ತೆಯಾಗಿದೆ. ಮೃತ ಸಂಧ್ಯಾರಾಣಿ ಕಲ್ಬುರ್ಗಿ ನಗರದ ಫಿಲ್ಟರ್ ಬೆಡ್ ನಿವಾಸಿ ಎಂದು ಹೇಳಲಾಗುತ್ತಿದೆ. ಮದುವೆಯ ಬಳಿಕ ಮೃತ ಸಂಧ್ಯಾರಾಣಿ ಪತಿಯನ್ನು ತೊರೆದಿದ್ದಳು. ಬ್ರಿಡ್ಜ್ ಮೇಲೆ ನಿಂತು ಒಮ್ಮೆಲೇ…

Read More

ಹುಬ್ಬಳ್ಳಿ : ಮುಡಾ ಅಕ್ರಮ ಹಗರಣ ಪ್ರಕರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿಯ ಸಂಸದ ಗೋವಿಂದ ಕಾರಜೋಳ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಸಿಎಂ ಸಿದ್ದರಾಮಯ್ಯ ಓಟ್ ಬ್ಯಾಂಕಿಗೆ ದಲಿತರ ಹಣ ಬಳಕೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಿಂದ ಹೆಸರು ಉಪಯೋಗ ಮಾಡಿಕೊಂಡು ಮೇಲೆರಿದ್ದಾರೆ. ಇದು ಸರ್ಕಾರದ ಖಜಾನೆಯ ಹಗಲು ದರೋಡೆ. ಬಿ ನಾಗೇಂದ್ರ ರಾಜಿನಾಮೆಯಿಂದ ನನಗೆ ಸಮಾಧಾನ ಆಗಿಲ್ಲ.ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಒಳಗಾಗಬೇಕು ಎಂದು ಆಗ್ರಹಿಸಿದರು. ಮುಡಾ ನಿವೇಶನ ಯಾರು ಕೊಟ್ಟಿದ್ದಾರೆ ಎಂಬುದು ಮುಖ್ಯವಲ್ಲ. ಅಧಿಕಾರದ ದುರುಪಯೋಗದ ಪ್ರಶ್ನೆ ಇದು ಎಂದ ಕಾರಜೋಳ ಸ್ವಾತಂತ್ರ್ಯ ಬಂದ ಮೇಲೆ ನೂರಾರು ಆಯೋಗ ರಚನೆ ಆಗಿವೆ.ಅದರ ದಾಖಲೆಗಳೆಲ್ಲ ರೆಕಾರ್ಡ್ ರೂಂನಲ್ಲಿವೆ. ಯಾವ ಕಾಲದಲ್ಲಿ ಹಗರಣ ಆಗಿದೆ ಅದೆಲ್ಲವೂ ತನಿಖೆ ಆಗಲಿ ಎಂದು ಹುಬ್ಬಳ್ಳಿಯಲ್ಲಿ ಬಿಜೆ

Read More

ಬೆಂಗಳೂರು: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ (ಡಿಡಿಯುಟಿಎಲ್) ಸುಮಾರು 47.10 ಕೋಟಿ ಅವ್ಯವಹಾರ ಆರೋಪ ಪ್ರಕರಣದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್‌. ವೀರಯ್ಯ ಜೈಲು ಸೇರಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಳೆದ ಎರಡು ದಿನಗಳ ಹಿಂದೆ ಈ ಒಂದು ಆರೋಪ ವೀರಯ್ಯ ಅವರ ಬಂದಿತ್ತು. ಈ ಹಿನ್ನೆಲೆ CID ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.ಆರೋಪಿ ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತು. ಬಳಿಕ ಸಿಐಡಿ ಅಧಿಕಾರಿಗಳು ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದರು. ಜುಲೈ 12ರಂದು ಸಿಐಡಿ ವೀರಯ್ಯ ಅವರನ್ನು ಬಂಧಿಸಿತ್ತು ಟರ್ಮಿನಲ್‌ನ ಗುತ್ತಿಗೆ ಅವ್ಯವಹಾರದಲ್ಲಿ ಅಂದಿನ ಅಧ್ಯಕ್ಷರಾಗಿದ್ದ ಡಿ. ಎಸ್. ವೀರಯ್ಯ ಅವರು ಗುತ್ತಿಗೆದಾರರಿಂದ ಮೂರು ಕೋಟಿ ರೂ. ಕಿಕ್ ಬ್ಯಾಕ್ ಪಡೆದು ಅಕ್ರಮದಲ್ಲಿ ಶಾಮೀಲಾಗಿದ್ದರು. ಕಿಕ್ ಬ್ಯಾಕ್ ಹಣದಲ್ಲಿ ಜ್ಞಾನಭಾರತಿ ಉಲ್ಲಾಳುವಿನಲ್ಲಿ ನಿವೇಶನ ಖರೀದಿಸಿದ್ದರು. ಬಳಿಕ ಈ ನಿವೇಶನವನ್ನು ಮಗಳಿಗೆ ದಾನ ಕೊಟ್ಟಿದ್ದರು…

Read More

ಬೆಂಗಳೂರು : ಪತ್ನಿಯ ಮೇಕಪ್ ಹಾಗೂ ಅತಿಯಾದ ಮೊಬೈಲ್ ಬಳಕೆಯಿಂದ ಬೇಸತ್ತ ಪತಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಗುಲ್ಜಾರ್ ಹುಸೈನ್ ಚೌಧರಿ(20) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ.ಮೃತ ಗುಲ್ಜಾರ್ ಹುಸೈನ್ ಚೌಧರಿ ಲಾರಿ ಚಾಲಕನಾಗಿದ್ದನು. ಅಸ್ಸಾಂ ಮೂಲದ ಲಾರಿ ಚಾಲಕ ಗುಲ್ಜಾರ್ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ರೋಸಿ ಹೋಗಿದ್ದನು ಎಂದು ಹೇಳಲಾಗುತ್ತಿದೆ. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ರು ಹೆಂಡತಿ ಶೋಕಿಯಲ್ಲಿದ್ದಳು. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಇಂದು ರಾಜ್ಯಾದಂತ್ಯ ಮೊಹರಂ ಹಬ್ಬ ಅತ್ಯಂತ ವಿಜೃಂಭಣೆಯಿಂದ ನಡೆಯಿತ್ತಿದ್ದೂ, ಕೆಲವು ದುರಂತಗಳು ಕೂಡ ಸಂಭವಿಸಿವೆ. ವಿಜಯಪುರದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವು ವಾಹನ ಚಾಲಕ ಮೊಹಮ್ಮದ್ ಇನಾಂದಾರ್ (40) ಎನ್ನುವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಜಯಪುರದ ನಗರದ ಮೆಹತರ್ ಮಹಲ್ ಎದುರು ನಡೆದಿದೆ. ಎದುರಿಗೆ ಬರುತ್ತಿದ್ದ ಕಾರಿಗೆ ದಾರಿ ಬಿಡಲು ಚಾಲಕ ಸೈಡ್ ಗೆ ವಾಹನ ತೆಗೆದುಕೊಂಡಿದ್ದ, ಈ ವೇಳೆ ಟ್ರಾನ್ಸ್ಫರ್ ಮರ್ಗೆ ವಾಹನ ತಗುಲಿದರಿಂದ ವಿದ್ಯುತ್ ತಗುಲಿ ಸಾವನಪ್ಪಿದ್ದಾನೆ. ವಿದ್ಯುತ್ ಸ್ಪರ್ಶದಿಂದ ಮತ್ತೊರ್ವ ಸಾದಿಕ್ ಎಂಬಾತ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗದ್ದು, ಸ್ಥಳಕ್ಕೆ ಗೋಲಗುಂಬಜ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಹಾಗೂ ಎಲ್ಲಾ 17 ಆರೋಪಿಗಳನ್ನು ತಕ್ಷಣ ಬಂಧಿಸಿದ್ದಾರೆ. ಆದರೆ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಈ ರೀತಿ ಕ್ರಮ ಯಾಕೆ ಆಗಲಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು,ಕೊಲೆ ಮಾಡಿದರು ಅಂತ ದರ್ಶನ ಅಂಡ್ ತಂಡವನ್ನು ಬಂಧಿಸಿದರು. ಆದರೆ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂದಿಸಿದಂತೆ ಏಕೆ ಈ ರೀತಿ ತಕ್ಷಣ ಬಂದಿಸುವ ಕ್ರಮ ಆಗಲಿಲ್ಲ ಎಂದು ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಪ್ರಶ್ನಿಸಿದರು. ಹಗರಣ ಬೆಳಕಿಗೆ ಬಂದ ಬಳಿಕ 40 ದಿನಗಳ ಕಳೆದರೂ ಕೂಡ ಯಾರನ್ನು ಬಂಧನ ಮಾಡಿಲ್ಲ ಯಾಕೆ? ನಮ್ಮ ಹೋರಾಟ ಬಳಿಕ ನಾಗೇಂದ್ರ ರಾಜೀನಾಮೆ ಪಡೆದರು. ನಂತರ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು. ಸರ್ಕಾರ ಯಾಕೆ ಹಳಿ ತಪ್ಪಿತೋ ಗೊತ್ತಿಲ್ಲ ಸಿಎಂ ಸಿದ್ದರಾಮಯ್ಯರ ಮೇಲೆ ಭಾರಿ ನಂಬಿಕೆ ಇತ್ತು ಎಂದರು ಯಾಕೆ…

Read More