Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯ ಭೀಕರವಾಗಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಲಾರಿ ಬೈಕ್ ಮಧ್ಯ ಅಪಘಾತ ನಡೆದಿದ್ದು, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೊಡಗರಹಳ್ಳಿಯಲ್ಲಿ ಈ ಒಂದು ಅಪಘಾತ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ರಕ್ಷಿತ್ (27) ಮಂಜು (26) ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ನಿಲ್ಲದ ‘ವೀಲಿಂಗ್’ ಪುಂಡರ ಹಾವಳಿ ಬೆಂಗಳೂರಲ್ಲಿ ನೆಲಮಂಗಲ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹಾವಳಿ ಮುಂದುವರೆದಿದ್ದು, ಹೆದ್ದಾರಿಯಲಿ ವಾಹನಗಳನ್ನು ಪುಂಡರು ಅಡ್ಡಗಟ್ಟಿದ್ದಾರೆ. ಸವಾರರಿಗೆ ಪುಂಡರು ವೀಲಿಂಗ್ ಮಾಡುವ ಮೂಲಕ ಆತಂಕ ಸೃಷ್ಟಿ ಮಾಡುತ್ತಿದ್ದಾರೆ.ಪುಂಡರ ವೀಲಿಂಗೆ ಪೊಲೀಸರು ಬ್ರೇಕ್ ಹಾಕದೆ ಇರುವುದರಿಂದ ಪುಂಡರು ಬಾಲ ಬಿಚ್ಚುತ್ತಿದ್ದಾರೆ.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಗುಡ್ಡ ಕುಸಿತದಲ್ಲಿ ಕೇವಲ 9 ಅಲ್ಲ ಎರಡು ಕುಟುಂಬಗಳು ಸೇರಿದಂತೆ 20 ಜನರು ಸಿಲುಕಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹೌದು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭಾರೀ ಮಳೆಗೆ ಗುಡ್ಡ ಕುಸಿದು 7 ಮಂದಿ ಸಾವನ್ನಪಿದ್ದು ಇಬ್ಬರು ನಾಪತ್ತೆಯಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದ ಮಾಹಿತಿಯ ಪ್ರಕಾರ ಮಣ್ಣಿನ ಅಡಿ ಸಿಲುಕಿದವರು 20 ಮಂದಿ ಎಂದು ಮಾಹಿತಿ ತಿಳಿದು ಬಂದಿದೆ. ಹೌದು ಗುಡ್ಡ ಕುಸಿತದ ಸಂದರ್ಭದಲ್ಲಿ ಮನೆ, ಅಂಗಡಿ ಕಾರಿನಲ್ಲಿದ್ದವರೂ ಸೇರಿದಂತೆ ಒಟ್ಟು 20 ಮಂದಿ ಸಿಲುಕಿದ್ದಾರೆ. ಘಟನೆ ಸಮಯದಲ್ಲಿ 20 ಕ್ಕೂ ಹೆಚ್ಚು ಜನ ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗುಡ್ಡ ಕುಸಿತದಲ್ಲಿ 9 ಮಂದಿ ಅಲ್ಲ 20 ಮಂದಿ ಎಂದು ತಿಳಿದುಬಂದಿದೆ. ಎರಡು ಕುಟುಂಬ ಸೇರಿ 20 ಮಂದಿ ಮಣ್ಣಿನ ಅಡಿ…
ಬೆಂಗಳೂರು : ಬೆಂಗಳೂರಿನ ಶಾಂತಿನಗರದ ಬಸ್ ನಿಲ್ದಾಣದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿಯೇ ಸಿಬ್ಬಂದಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಸ್ ನಿಲ್ದಾಣದ ಮೂರನೇ ಮಹಡಿಯ ಕಚೇರಿಯಲ್ಲಿ ಸಿಬ್ಬಂದಿ ಮಹೇಶ್(42) ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ಮಹೇಶ್ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು ಎಂದು ತಿಳಿದುಬಂದಿದೆ. ಬೆಂಗಳೂರಿನ ಇಡಿ ಕಚೇರಿ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯಲ್ಲಿ ಈ ಒಂದು ದುರ್ಘಟನೆ ನಡೆದಿದೆ.ನೆನ್ನೆ ಬೆಳಿಗ್ಗೆ ಸೆಲ್ಯೂರಿಟಿ ಗಾರ್ಡ್ ಹತ್ತಿರ ರೆಕಾರ್ಡ್ಸ್ ರೂಮಿನ ಕೀಯನ್ನು ಪಡೆದುಕೊಂಡಿದ್ದರು. ನಿನ್ನೆ ಬೆಳಿಗ್ಗೆಯಿಂದ ಮಹೇಶ್ ಅವರು ರೆಕಾರ್ಡ್ಸ್ ರೂಮ್ನಲ್ಲಿಯೇ ಓಡಾಡಿದ್ದರು. ನಿನ್ನೆ ಸಂಜೆ ಯಾರು ಇಲ್ಲದ ವೇಳೆ ಮಹೇಶ್ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಹೇಶ್ ಆತ್ಮಹತ್ಯೆ ಕುರಿತಂತೆ ಅವರ ಕುಟುಂಬ ಸದಸ್ಯರಿಗೆ ಪೊಲೀಸರು ಮಾಹಿತಿ ರವಾನಿಸಿದ್ದಾರೆ.
ಬೆಂಗಳೂರು : ಬಿಪಿಎಲ್ ಕಾರ್ಡ್ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳಿಗೆ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಇಂದು ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, 2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್‌ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ ಎಂದರು. ಇದೆ ವೇಳೆ ಕಲಾಪದ ವೇಳೆ ಬಿಜೆಪಿಯ ಎನ್ ರವಿಕುಮಾರ್, ಶಿಕ್ಷಣ ಇಲಾಖೆಯು ಅಕ್ಷರ ದಾಸೋಹಕ್ಕೆ 1 ಕೆ.ಜಿ ಅಕ್ಕಿಗೆ 29.30 ರೂ. ಕೊಟ್ಟು ಖರೀದಿಸುತ್ತಿದೆ. ಪಡಿತರ ಚೀಟಿಗೆ ನೀಡುವ ಅಕ್ಕಿಯನ್ನು 34.60 ರೂ.ಗೆ ಖರೀದಿಸಲಾಗುತ್ತಿದೆ. ಇದರ ಮಧ್ಯೆ 5.5 ರೂ.ವ್ಯತ್ಯಾವಿದೆ. ಇದು ಹೇಗೆ…
ಬೆಂಗಳೂರು : ಮುಡಾ ಸೈಟ್ ಹಂಚಿಕೆಯಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ಎರಡನೇ ದೂರು ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದ್ದು, 2018-23ರ ಚುನಾವಣಾ ಅಫೀಡಿವೇಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಎನ್ನುವವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯ ವೇಳೆ 3.16 ಎಕರೆ ಕೃಷಿ ಜಮೀನು ಹೊಂದಿದ್ದು, ಪತ್ನಿ ಪಾರ್ವತಿ ಬಳಿ 3 ಕೆರೆ 16 ಗುಂಟೆ ಜಮೀನು ಎಂದು ನಮೂದಿಸಲಾಗಿದೆ. ಆಫೀಡಿವೇಟ್ ಒಟ್ನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮಿನು ಎಂದು ನಮೂದು ಮಾಡಲಾಗಿದೆ.ಇದರ ಮೌಲ್ಯ 25 ಲಕ್ಷ ಎಂದು ಸಿಎಂ ಸಿದ್ದರಾಮಯ್ಯ ಆಫೀಡಿವೇಟ್ ನಲ್ಲಿ ನಮೂದಿಸಿದ್ದರು. 2005ರಲ್ಲಿ ಜಮೀನು ಪರಿವರ್ತನೆ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಬಸನಗೌಡ ದದ್ದಲ್ ಅವರು ನಾಪತ್ತೆಯಾಗಿದ್ದರು ಎಂಬ ವದಂತಿ ಹಬ್ಬಿತ್ತು, ಆದರೆ ನೀನೆ ವಿಧಾನಸೌಧದಲ್ಲಿ ಅಧಿವೇಶನದಲ್ಲಿ ಅವರು ದಿಡೀರ್ ಪ್ರತ್ಯಕ್ಷರಾಗಿದ್ದರು. ಪ್ರಕರಣ ಸಂಬಂಧ ಎಸ್‌ಐಟಿ ಪೊಲೀಸರ ತನಿಖೆ ಎದುರಿಸಿದ ಬಳಿಕ ಇಡಿ ಬಂಧನ ಭೀತಿಯಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ವಿಧಾನಸಭೆಯ ಅಧಿವೇಶನ ವೇಳೆ ಪ್ರತ್ಯಕ್ಷರಾದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಕೆಲಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದದ್ದಲ್, ನಾನು ನಾಪತ್ತೆಯಾಗಿರಲಿಲ್ಲ. ಎರಡು ದಿನಗಳಿಂದ ನನ್ನ ಕ್ಷೇತ್ರಕ್ಕೆ ತೆರಳಿದ್ದೆ ಎಂದು ಸ್ಪಷ್ಟನೆ ನೀಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಾರಿ ನಿರ್ದೇಶಾನಲಯದಿಂದ ಮತ್ತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದರು. ಸದ್ಯ ಬಸನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.ಏಕೆಂದರೆ ಅಧಿವೇಶನ ನಡೆಯುತ್ತಿದ್ದರಿಂದ ಅವರ ಬಂಧನ ಸದ್ಯಕ್ಕೆ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತದಿಂದ ಮಂದಿ ಮಣ್ಣಿನಡಿ ಸಿಲುಕಿ 7 ಜನರು ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ, ಇದೀಗ 9 ಜನರು ಈ ಒಂದು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭಾರೀ ಮಳೆಗೆ ಗುಡ್ಡ ಕುಸಿದು ಏಳು ಮಂದಿ ಸಾವನ್ನಪಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಆದರೆ ಇದೀಗ ಮೃತರ ಸಂಖ್ಯೆ 9ಕ್ಕೆ ಏರಿದೆ. ಕಾರವಾರದಲ್ಲಿ ಗುಡ್ಡ ಕುಸಿದು 9 ಮಂದಿ ಜೀವಂತ ಸಮಾಧಿಯಾಗಿದ್ದು, 9 ಮಂದಿಯಲ್ಲಿ 7 ಮಂದಿ ದುರ್ಮರಣಹೊಂದಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಅಂಕೋಲ ತಾಲೂಕಿನ ಶಿರೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಗುಡ್ಡ ಕುಸಿತದಿಂದ ಗಂಗಾವಳಿ ನದಿಗೆ ಟ್ಯಾಂಕರ್ ಬಿದ್ದಿದೆ. ಈ ವೇಳೆ ಚಾಲಕ ಮತ್ತು ಕ್ಲೀನರ್ ಟೀ ಕುಡಿದಿದ್ದ…
ಬೆಂಗಳೂರು: ವೈದ್ಯಕೀಯ ಪದವಿಯ ಸೀಟು ಕೊಡಿಸುವುದಾಗಿ ಅಮಾಯಕರನ್ನು ನಂಬಿಸುವ ದಲ್ಲಾಳಿಗಳು ಕೋಟ್ಯಂತರ ಮೊತ್ತದ ಹಣ ಪಡೆದು ವಂಚನೆ ಮಾಡುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದ್ದು ಇಂತಹ ಅಪರಾಧಗಳನ್ನು ತಡೆಯಬೇಕಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆಡಳಿತ ಮಂಡಳಿ ಕೋಟಾದಡಿ ವೈದ್ಯಕೀಯ ಪದವಿ ಸೀಟು ಕೊಡಿಸುವುದಾಗಿ ರೂ. 2.12 ಕೋಟಿ ಪಡೆದು ವಂಚಿಸಿದ ಆರೋಪದಡಿ ಬೆಂಗಳೂರಿನ ಪಿಳ್ಳಣ್ಣ ಗಾರ್ಡನ್‌ನ ಎಂ.ಸಿ.ವಿರೂಪಾಕ್ಷಪ್ಪ ವಿರುದ್ಧ ದೂರು ದಾಖಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ನನ್ನ ವಿರುದ್ಧ ವಿ.ವಿ.ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ನಗರದ ಪಿಳ್ಳಣ್ಣ ಗಾರ್ಡನ್‌ನ ಎಂ.ಸಿ.ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ದಲ್ಲಾಳಿಗಳ ಮೂಲಕ ವೈದ್ಯಕೀಯ ಸೀಟು ಕೊಡಿಸುವ ವ್ಯವಹಾರ ಇಂದು ಸಮಾಜದಲ್ಲಿ ವ್ಯಾಪಕವಾಗಿ ಹರಡಿದೆ ಎಂದು ದಿಗ್ಧಮೆ ವ್ಯಕ್ತಪಡಿಸಿತು. ಅರ್ಜಿದಾರರ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಸಾಧ್ಯವೇ ಇಲ್ಲ ಎಂದು ಖಡಕ್ ಎಚ್ಚರಿಕೆ ನೀಡಿತು.
ಬೆಂಗಳೂರು : ಲೋಕಸಭೆ ಚುನಾವಣೆ ವೇಳೆ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾನಹಾನಿಕರ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೆ ನೋಟಿಸ್ ಜಾರಿ ಮಾಡಿದೆ. ಹೌದು ಲೋಕಸಭಾ ಚುನಾವಣೆ ವೇಳೆ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭ್ರಷ್ಟಾಚಾರ ಆರೋಪ ಮಾಡಿದ್ದರು. ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಯತ್ನಾಳ್ ವಿರುದ್ಧ ಖಾಸಗಿ ದೂರು ಸಲ್ಲಿಕೆಯಾಗಿತ್ತು.ಈ ದೂರು ಸಂಬಂಧ ಇದೀಗ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸೂರಜ್ ರೇವಣ್ಣ ಅವರು ತಮ್ಮ ಎರಡನೇ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಜುಲೈ 18ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 18ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಈಗಾಗಲೇ ಸಹೋದರ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇತ್ತೀಚಿಗೆ ಮಕ್ಕಳನ್ನು ನೋಡಲು ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ತಾಯಿ ಭವಾನಿ ರೇವಣ್ಣ ಜೈಲಿಗೆ ಆಗಮಿಸಿದ್ದರು. ಮಕ್ಕಳನ್ನು ಬಿಡುಗಡೆಗೊಳಿಸಲು ಈಗಾಗಲೇ ಎಚ್ ಡಿ ರೇವಣ್ಣ ಅವರು ವಕೀಲರೊಂದಿಗೆ…