Subscribe to Updates
Get the latest creative news from FooBar about art, design and business.
Author: kannadanewsnow05
ಆಂಧ್ರಪ್ರದೇಶ : ಹೋಟೆಲ್ ನಲ್ಲಿ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅಂಬೇಡ್ಕರ್ ಕೋನಸಿಮಾ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡ 16 ಜನರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಪಹಾರ ಸೇವಿಸಿದ ಬಳಿಕ ವಾಂತಿ ಭೇಧಿ ಕಾಣಿಸಿಕೊಂಡು ಗ್ರಾಹಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಎರಡು ದಿನಗಳ ಹಿಂದೆ ಜನರು ಈ ಹೋಟೆಲ್ನಲ್ಲಿ ಉಪಹಾರ ಸೇವಿಸಿದ್ದರು. ಅಂಬಾಜಿಪೇಟೆ ಮಂಡಲದ ಮಹಾಚವರಂ ನಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಆವರಣಗಳಲ್ಲಿ RSS ಸೇರಿದಂತೆ ಯಾವುದೇ ಸಂಘಟನೆಗಳು ಖಾಸಗಿ ಕಾರ್ಯಕ್ರಮ ನಡೆಸಬೇಕೆಂದರೆ ಇನ್ಮುಂದೆ ಅನುಮತಿ ಪಡೆಯೋದು ಕಡ್ಡಾಯ ಎಂದು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ಇದೀಗ ಇದೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಹಾಗೂ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಆಗ್ರಹಿಸಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಟ್ವೀಟ್ ನಲ್ಲಿ ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ. https://twitter.com/BasanagoudaBJP/status/1979102508816429269?t=53V2LbGDJexKpV1PvTV6kA&s=19
ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಶ್ರೀರಾಂಪುರ ಠಾಣೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಿಘ್ನೇಶ್ ಜೊತೆಗೆ ಹರೀಶನನ್ನ ಬಂಧಿಸಲಾಗಿದೆ. ಕೊಲೆಯ ಬಳಿಕ ವಿಘ್ನೇಶ್ ನನ್ನು ಬೈಕ್ ನಲ್ಲಿ ಹರೀಶ್ ಕರೆದೋಯ್ದಿದ್ದ. ಬೈಕ್ ನಲ್ಲಿ ಸೋಲದೇವನಹಳ್ಳಿ ಕಡೆಗೆ ಕರೆದುಕೊಂಡು ಹೋಗಿದ್ದ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಪೊಲೀಸರು, ಸೋಲದೇವನಹಳ್ಳಿ ಮನೆಯೊಂದರಲ್ಲಿ ಇದ್ದಾರೆ ಎಂಬ ಮಾಹಿತಿ ಬಂದಿದೆ. ಕೊಲೆ ನಡೆದ 14 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಮೃತ ಯುವತಿಗೆ ಬಲವಂತವಾಗಿ ಮಾಂಗಲ್ಯ ಕೂಡ ಕಟ್ಟಿದ್ದನಂತೆ. ಈ ವಿಚಾರ ಮನೆಯಲ್ಲಿ ತಿಳಿಸಿದ್ರೆ ಕೊಲೆ ಮಾಡ್ತೇನೆ ಎಂದು ಬೆದರಿಸಿದ್ದನಂತೆ. ಇನ್ನೂ ಇಬ್ಬರು ಒಂದೇ…
ಕಲಬುರ್ಗಿ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿರುವ ಮತಗಳ್ಳತನ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು,ರಾಷ್ಟ್ರ ರಾಜ್ಯಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಈ ಸಂಬಂಧ ದೇಶಾದ್ಯಂತ ಬಿಜೆಪಿ ವಿರುದ್ಧ ಆರಂಭಿಸಿರುವ ಮತಗಳ್ಳತನ ಆಭಿಯಾನಕ್ಕೆ ಪ್ರಮುಖ ಸಾಕ್ಷಿಯಾಗಿ ಬಳಕೆಯಾಗಿದ್ದ ಕರ್ನಾಟಕದ ಆಳಂದ ಕ್ಷೇತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕು ಪಡೆದುಕೊಂಡಿದೆ. ಇದೀಗ ಆಳಂದ ಕ್ಷೇತ್ರದ ಬಿಜೆಪಿ ಶಾಸಕನ ಮನೆ ಮೇಲೆ ಎಸ್ಐಟಿ ದಾಳಿ ಮಾಡಿದೆ. ಹೌದು ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮನೆಯ ಮೇಲೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್ಐಟಿ ಎಸ್ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್ ಐಟಿ ಕೈಹಾಕಿದ್ದು ತನಿಖೆ…
ಉಡುಪಿ : ಉಡುಪಿಯಲ್ಲಿ ಘೋರವಾದ ದುರಂತ ನಡೆದಿದ್ದು, ಯುವಪ್ರೇಮಿಗಳಿಬ್ಬರು ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಈ ಘಟನೆ ನಡೆದಿದೆ. ಲೇಬರ್ ಕಾಲೋನಿಯ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಹಾಗು ಬಾಲಕಿ ಪವಿತ್ರಾ (17) ಎಂದು ತಿಳಿದುಬಂದಿದೆ. ನಗರ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಎರಡು ಮೃತದೇಹಗಳನ್ನು ತೆರವುಗೊಳಿಸಿ ಆ್ಯಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಮಡಿಕೇರಿ ತಾಲ್ಲೂಕಿನ ತಲಕಾವೇರಿಯಲ್ಲಿರುವ ಬ್ರಹ್ಮ ಕುಂಡಿಕೆಯಲ್ಲಿ ಭಕ್ತರಿಗೆ ದರ್ಶನ ತಾಯಿ ಕಾವೇರಿ ದರ್ಶನ ನೀಡಿದಳು. ಈ ಒಂದು ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ನಡೆಸಿದ್ದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು ಇದೀಗ ಸಿಡಿದೆದ್ದಿದೆ. ಸರ್ಕಾರದಲ್ಲಿ ಇದೀಗ ಕಮಿಷನ್ ಜಾಸ್ತಿ ಆಗಿದೆ ಎಂದು ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಗಂಭೀರವಾದ ಆರೋಪ ಮಾಡಿದ್ದಾರೆ 60% 80% ಅಂತ ಹೇಳಿಲ್ಲ ಒಟ್ನಲ್ಲಿ ಇದೀಗ ಸರ್ಕಾರದಲ್ಲಿ ಕಮಿಷನ್ ಹೆಚ್ಚಳ ಆಗಿದೆ. ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು 33,000 ಕೋಟಿ ಹಣ ಬರಬೇಕಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆರೋಪ ಮಾಡಿದ್ದು ಸರ್ಕಾರದ ವಿರುದ್ಧ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಸರ್ಕಾರ ಬಂದ ಮೇಲೆ ಬಾಕಿ ಹಣ ಬಿಡುಗಡೆ ಮಾಡುತ್ತಿವೆ ಅಂತ ಹೇಳಿದರು. ಎಲ್ಲೋಸೆ ರಿಲೀಸ್ ಗೆ ಕಮಿಷನ್ ತಗೋತೀರಾ ಅಂತ ಹೇಳಿದ್ದೇವೆ ಹೊರತು 60% 80% ಕಮಿಷನ್ ತಗೋತಿದ್ದಾರೆ ಅಂತ ಹೇಳಿಲ್ಲ ಆತರ ಹೇಳಿಲ್ಲ ಎಂದು ಮಂಜುನಾಥ್ ಹೇಳಿದರು. ದೀಪಾವಳಿ ಹಬ್ಬದ ನಂತರ ನಾವು ಹೋರಾಟ ಶುರು ಮಾಡುತ್ತೇವೆ ಮುಷ್ಕರ ನಡೆಸಿ ದೊಡ್ಡದಾಗಿ ಹೋರಾಟ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ…
ಮೈಸೂರು : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸಮೀಕ್ಷೆ ಕಾರ್ಯಾ ಪೂರ್ಣಗೊಂಡಿದೆ. ನಿನ್ನೆ ಸುಧಾಮೂರ್ತಿ ಜಾತಿಗಣತಿಯಲ್ಲಿ ಭಾಗವಹಿಸಲ್ಲ ಎಂದು ಹಿಂಬರಹ ತೆಗೆದುಕೊಂಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದವರು ಜಾತಿಗಣತಿ ಮಾಡುವಾಗ ಆಗ ಸುಧಾಮೂರ್ತಿಯವರು ಏನು ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದು ಸುಧಾಮೂರ್ತಿ ಹಿಂಬರಹ ವಿಚಾರವಾಗಿ ಇದು ಕೇವಲ ಹಿಂದುಳಿದವರ ಸರ್ವೆ ಅಲ್ಲ ಎಲ್ಲರ ಸರ್ವೆ ಆಗಿದೆ. ಶಕ್ತಿ ಯೋಜನೆ ಮಾಡಿದ್ದೇವೆ ಮೇಲ್ಜಾತಿ ಅವರು ಬಸ್ ನಲ್ಲಿ ಹೋಗಲ್ವಾ? ಕೇಂದ್ರ ಜಾತಿಗಣತಿ ಮಾಡುವಾಗ ಸುಧಾ ಮೂರ್ತಿ ಆಗ ಏನು ಹೇಳುತ್ತಾರೆ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯಾಗಿದೆ ಈ ಸಮೀಕ್ಷೆ ಒಂದು ಜಾತಿ, ಧರ್ಮದವರಿಗೆ ಸೀಮಿತವಲ್ಲ. ಇದು ಎಲ್ಲಾ ಜಾತಿ ಧರ್ಮದವರು ಒಳಗೊಂಡು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ…
ಬೆಂಗಳೂರು : ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಇನ್ನು ಈ ಒಂದು ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ತೆರಳಲಿದ್ದರು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ. ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ವ್ಯವಸ್ಥೆ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್ ಗಳ ವ್ಯವಸ್ಥೆಯೂ ಇದೆ.
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಪಟಾಕಿ ವಿತರಿಸದಂತೆ ಶಾಸಕರ ಕಚೇರಿಗೆ ಬೀಗ ಹಾಕಲಾಗಿದೆ. ಆರ್ ಆರ್ ನಗರ ಶಾಸಕ ಮುನಿರತ್ನ ಕಚೇರಿಗೆ ಪೊಲೀಸರು ಬೀಗ ಹಾಕಿದ್ದಾರೆ. ಬೆಂಗಳೂರಿನ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಕಚೇರಿಗೆ ಬೀಗ ಹಾಕಲಾಗಿದೆ. ಆರ್ ಆರ್ ನಗರ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿ ನಗರದಲ್ಲಿ ಶಾಸಕರ ಕಚೇರಿ ಇದ್ದು ಕಚೇರಿಯ ಮುಂದೆ ವೇದಿಕೆ ನಿರ್ಮಿಸಿ ಪಟಾಕಿ ವಿತರಣೆಗೆ ಸಿದ್ಧತೆ ನಡೆದಿದೆ ಸ್ಥಳಕ್ಕೆ ಶಾಸಕ ಮುನಿರತ ಆಗಮಿಸುವ ಮುನ್ನವೇ ಪೊಲೀಸ್ರು ಕಚೇರಿಗೆ ಬೀಗ ಹಾಕಿದ್ದಾರೆ ಪ್ರತಿವರ್ಷ ಶಾಸಕರು ಇದೇ ಸ್ಥಳದಲ್ಲಿ ಪಟಾಕಿ ವಿತರಿಸುತ್ತಿದ್ದರು.














