Author: kannadanewsnow05

ನವದೆಹಲಿ : ಕಾಂಗ್ರೆಸ್ ಮಾಜಿ ಪ್ರಧಾನಿಗೆ ಬಿಜೆಪಿ ಪ್ರಧಾನಿ ಗೌರವಿಸಿದ್ದಾರೆ.ಭಾರತ ರತ್ನ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸಂಭ್ರಮಿಸಬೇಕು. ಆದರೆ ದುರಾದೃಷ್ಟವಶಾತ್ ಅವರು ಸಂತೋಷ ಪಡುತ್ತಿಲ್ಲ ಎಂದು ರಾಜ್ಯಸಭೆಯಲ್ಲಿ ಪಿಯುಷ್ ಗೊಯಲ್ ಲೇವಡಿ ಮಾಡಿದ್ದಾರೆ. ರಾಜ್ಯ ಸಭೆಯಲ್ಲಿ ಕಾಂಗ್ರೆಸ್ ನಾಯಕರು ವಿರುದ್ಧ ಆಕ್ರೋಶ ಅವರ ಹಾಕಿದ ಅವರು, ಕಾಂಗ್ರೆಸಿಗರು ಭಾರತ ರತ್ನ ಘೋಷಿಸಿದ್ದಕ್ಕೆ ಸಂಭ್ರಮಿಸುತ್ತಿಲ್ಲ. ಯಾಕೆಂದರೆ ಅವರ ಹೆಸರಿನ ಮುಂದೆ ಗಾಂಧಿ ನೆಹರು ಇಲ್ಲ ಭಾರತ ರತ್ನ ಪುರಸ್ಕೃತರ ಹೆಸರಲ್ಲಿ ಗಾಂಧಿ ಮತ್ತು ನೆಹರು ಇಲ್ಲ ಎಂದು ಅವರು ಲೇವಡಿ ಮಾಡಿದರು. ಗಾಂಧಿ ಹಾಗೂ ನೆಹರು ಎಂಬ ಹೆಸರು ಇಲ್ಲದ್ದಕ್ಕೆ ಕಾಂಗ್ರೆಸ್ ನವರಿಗೆ ಅತೃಪ್ತಿ ಇದೆ. ಅವರು ಸ್ವಯಂ ಭಾರತರತ್ನ ಪಡೆಯುವುದರಲ್ಲಿ ಅವರು ತಲ್ಲೀನರಾಗಿದ್ದಾರೆ ಎಂದು ರಾಜ್ಯಸಭೆಯಲ್ಲಿ ಪಿಯೂಷ್ ಗೋಯಲ್ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು. ತೊಂಬತ್ತರ ದಶಕದಲ್ಲಿ ಭಾರತದ ಪ್ರಧಾನಿಯಾಗಿದ್ದ ದಿವಂಗತ ಪಿ.ವಿ. ನರಸಿಂಹರಾವ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಿದೆ. 1991ರಿಂದ 1996ರವರೆಗೂ ಪಿ.ವಿ. ನರಸಿಂಹ ರಾವ್…

Read More

ಶಿವಮೊಗ್ಗ : ರಾಷ್ಟ್ರಧ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಹೇಳಿಕೆ ಕುರಿತಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ದಾವಣಗೆರೆ ಪೊಲೀಸರು ನೋಟಿಸ್ ಜಾರಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಶ್ವರಪ್ಪ ಅವರು ಹೇಳಿರುವಂತಹದ್ದು ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಅಂತ ಹೇಳಿದ್ದು, ಅದರಿಂದ ಇವತ್ತು ಅವರ ವಿರುದ್ಧ ಟಿಕೆ ಟಿಪ್ಪಣಿಗಳ ನಡೆಯುತ್ತಿವೆ. ಅವರು ಹೇಳಿರುವದಕ್ಕೂ ಇದಕ್ಕೂ ಏನು ಸಂಬಂಧ ಇಲ್ಲ ಎಂದು ಅವರು ತಿಳಿಸಿದರು. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಅಪಾರ್ಥ ಕಲ್ಪಿಸುವ ಕೆಲಸ ಮಾಡುತ್ತಿದೆ. ಅವರ ವಿರುದ್ಧ FIR ಹಾಕಿದರೆ ಏನು ತೊಂದರೆ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಏನಿದ್ದರೂ ಅದನ್ನು ಎದುರಿಸುತ್ತಾರೆ. ತಪ್ಪು ಕಲ್ಪನೆ ಅವರ ಹೇಳಿಕೆಯನ್ನ ಅಪಾರ್ಥವಾಗಿ ತಿಳಿದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ ಅವರು ಹೇಳಿದ್ದನ್ನ ಹೇಳಿದ್ದೆ ಸರಿ ಎನ್ನುವಂತಹವರು. ದೆಹಲಿಗೆ ತೆರಳಿ ಎಲ್ಲ…

Read More

ದಕ್ಷಿಣಕನ್ನಡ : ಹಿಂದು ಜಾಗರಣ ವೇದಿಕೆ ಮುಖಂಡರ ಗಡಿಪಾರು ನೋಟಿಸ್ ಗೆ ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ದಿನೇಶ್ ಪಂಜಿಗ ಹಾಗೂ ಯಶೋದರ ಎನ್ನುವ ಹಿಂದೂ ಮುಖಂಡರ ಗಡಿಪಾರು ನೋಟಿಸ್ ಗೆ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ. ಗಡಿಪಾರಿಗೆ ಪುತ್ತೂರು ಎಸಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಇದೀಗ ಗಡಿಪಾರಿಗೆ ತಡೆಯಾಜ್ಞೆ ನೀಡಿದೆ ಎಂದು ಹೇಳಲಾಗುತ್ತಿದೆ ಎಸಿ ನೋಟಿಸ್ ಪ್ರಶ್ನಿಸಿ ಈ ಹಿಂದೆ ಹಿಂದೂ ಮುಖಂಡರು ಕೋರ್ಟ್ ಮೆಟ್ಟಿಲೇರಿದ್ದರು. ಹಿಂದೂ ಮುಖಂಡ ಪರ ನ್ಯಾಯವಾದಿ ಮಹೇಶ್ ಕಜೆ ಈ ವೇಳೆ ವಾದ ಮಂಡಿಸಿದರು. ವಾದವನ್ನು ಪುರಸ್ಕರಿಸಿ ಗಡಿಪಾರು ನೋಟಿಸ್ ಗೆ ನ್ಯಾಯಾಲಯ ಇದೀಗ ತಡೆಯಾಜ್ಞೆ ನೀಡಿದೆ. ಆಪಾದಿತರ ವಿರುದ್ಧದ ಎಲ್ಲಾ ಕಡತಗಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಕೋರ್ಟ್ ಸೂಚಿಸಿದೆ ಎಂದು ತಿಳಿದುಬಂದಿದೆ.

Read More

ಶಿವಮೊಗ್ಗ : ರಾಷ್ಟ್ರದ್ರೋಹಿಗಳನ್ನು ಹಾಗೂ ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಮಾಜಿ ಶಿವಾಜಿಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ ಇಂದು ಮತ್ತೆ ಅವರು ತಾವು ನೀಡಿರುವ ಹೇಳಿಕೆ ಪುನರುಚ್ಚಿಸಿದ್ದು, ಈ ರೀತಿ ಕಾನೂನು ತರುವ ಕುರಿತು ಕೇಂದ್ರದ ನಾಯಕರಿಗೆ ಪತ್ರ ಬರೆಯುತ್ತೇನೆ ಎಂದು ಗುಡುಗಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ನವರಿಗೆ ದೇಶದ ರಾಷ್ಟ್ರಪತಿಗಳ ಬಗ್ಗೆಯೂ ಗೌರವ ಇಲ್ಲ. ಮುಖ್ಯಮಂತ್ರಿಗಳು ತಮ್ಮ ಭಾಷೆಯನ್ನು ಸ್ವಲ್ಪ ಸುಧಾರಿಸಿಕೊಳ್ಳಬೇಕು. ಕಾನೂನು ತರುವ ಕುರಿತು ಕೇಂದ್ರದ ನಾಯಕರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು. ತಿಹಾರ್ ಜೈಲಿನಿಂದ ಬಂದಿರುವವರು ಇಂದು ಉಪ ಮುಖ್ಯಮಂತ್ರಿ ಆಗಿದ್ದಾರೆ. ಹತ್ತು ಸಾವಿರ ರೂ ದಂಡ ಕಟ್ಟಿರುವವರು ಮುಖ್ಯಮಂತ್ರಿ ಆಗಿದ್ದಾರೆ. ದೇಹದ್ರೋಹಿ ರಕ್ಷಣೆ ಕೊಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ನಾನು ಇಲ್ಲಿಯವರೆಗೆ ಒಂದು ಬಾರಿಯೂ ದಂಡ ಕಟ್ಟಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ರೀತಿ ನಾನು ಜೈಲಿಗೆ ಹೋಗಿ ಬಂದಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ…

Read More

ಶಿವಮೊಗ್ಗ : ಪ್ರಿಯಾಂಕ ಖರ್ಗೆ ಏನ್ ಏನೋ ಹೇಳಿಕೆ ನೀಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಹೊಟ್ಟೆಯಲ್ಲಿ ಪ್ರಿಯಾಂಕ್​ ಎಂಬ ಕೆಟ್ಟ ಹುಳು ಹುಟ್ಟಿದ್ದು ವಿಪರ್ಯಾಸ. ಪ್ರಿಯಾಂಕ ಖರ್ಗೆ ಅಂತವರನ್ನ ಕಾಂಗ್ರೆಸ್​ನವರು ಅಂತ ಒಪ್ಪಲ್ಲ. ಕಾಂಗ್ರೆಸ್ ಹೆಸರಿನಲ್ಲಿ ಅಧಿಕಾರ ಹಂಚಿಕೊಂಡವರು ಇವರು ಎಂದು ಬಿಜೆಪಿ ನಾಯಕ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ ಮಾಡಿದರು. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ.ಸುರೇಶ್‌ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್​​ ಗೊಂದಲ ಸೃಷ್ಟಿಸುತ್ತಿದೆ. ನಾನು ಎಲ್ಲೂ ಸಂಸದ ಡಿಕೆ ಸುರೇಶ್ ಅವರಿ​ಗೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿಲ್ಲ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್​ಚಿಟ್ ಸಿಗುವ ವಿಶ್ವಾಸ ಇದೆ ಎಂದರು. ನನ್ನ ವಿರುದ್ಧ ಇಂತಹ ನೂರು ಎಫ್​ಐಆರ್​ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್…

Read More

ಕೋಲ್ಕತ್ತಾ : ವಾರಣಾಸಿಯ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡಿದೆ. ಇದು ಸಜಂಜಸವಲ್ಲ. ಯೋಗಿ ಆದಿತ್ಯನಾಥ್ ಅವರು ಪಶ್ಚಿಮ ಬಂಗಾಳಕ್ಕೆ ಬಂದರೆ ನಾವು ಅವರನ್ನು ಸುತ್ತುವರಿಯುತ್ತೇವೆ ಎಂದು TMC ನಾಯಕ ಸಿದ್ದಿಕುಲ್ಲಾ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಮಸೀದಿಯಲ್ಲಿ ಪೂಜೆಯನ್ನು ನಿಷೇಧಿಸುವಂತೆ ಕೋಲ್ಕತ್ತಾದಲ್ಲಿ ಜಮಿಯತ್ ಉಲೇಮಾ-ಎ-ಹಿಂದ್ ರ‍್ಯಾಲಿಯಲ್ಲಿ ಚೌಧರಿ ಭಾಗವಹಿಸಿದ್ದರು.ನಾವು ಪ್ರಾರ್ಥನೆ ಸಲ್ಲಿಸಲು ಯಾವುದೇ ದೇವಸ್ಥಾನಕ್ಕೆ ಹೋಗುವುದಿಲ್ಲ. ಹೀಗಿರುವಾಗ ಅವರು ಯಾಕೆ ನಮ್ಮ ಮಸೀದಿಗಳಿಗೆ ಬರುತ್ತಿದ್ದಾರೆ? ಎಂದು ಪ್ರಶ್ನಿಸಿದರು. ಮಸೀದಿ ಎಂದರೆ ಅದು ಮಸೀದಿ ಅಷ್ಟೇ ಆಗಿರುತ್ತದೆ. ಯಾರಾದರೂ ಮಸೀದಿಯನ್ನು ದೇವಸ್ಥಾನವಾಗಿ ಪರಿವರ್ತಿಸಲು ಬಯಸಿದರೆ ನಾವು ಸುಮ್ಮನೆ ಕುಳಿತುಕೊಳಲ್ಲ. ಜ್ಞಾನವಾಪಿ ಮಸೀದಿಗೆ ಸುಮಾರು 800 ವರ್ಷಗಳ ಇತಿಹಾಸವಿದೆ. ಅವರು ಅದನ್ನು ಹೇಗೆ ಕೆಡವುತ್ತಾರೆ ಎಂದು ಪ್ರಶ್ನಿಸಿದರು. ಹಿಂದೂ ಆರಾಧಕರು ಬಲವಂತವಾಗಿ ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಪ್ರಾರಂಭಿಸಿದ್ದಾರೆ. ಹೀಗಾಗಿ ಅವರು ತಕ್ಷಣವೇ ಅಲ್ಲಿಂದ ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ಈ ಕ್ರಮಕ್ಕೆ ಏನಾದರೂ ಅರ್ಥ ಇದೆಯಾ…

Read More

ಶಿವಮೊಗ್ಗ : ರಾಷ್ಟ್ರ ದ್ರೋಹಿಗಳು ಹಾಗೂ ದೇಶ ವಿಭಜನೆ ಹೇಳಿಕೆ ನೀಡುವಂತಹವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಇಂದು ದಾವಣಗೆರೆಯ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅವರು ಮೊದಲು ಸಂಸದ ಡಿಕೆ ಸುರೇಶ್ ಗೆ ನೋಟಿಸ್ ಜಾರಿ ಮಾಡಲಿ ಎಂದು ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ನೋಟಿಸಿ ಕೊಟ್ಟಿದ್ದಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಕ್ರೋಶ ಹೊರ ಹಾಕಿದ್ದು, ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ ಎಂದು ಈಶ್ವರಪ್ಪ ಕೆಂಡಕಾರಿದ್ದಾರೆ. ಇಡೀ ಸರ್ಕಾರ ಡಿ.ಕೆ ಸುರೇಶ್ ಹೇಳಿಕೆಯನ್ನು ಸಮರ್ಥಿಸಿದೆ. ರಾಷ್ಟ್ರ ದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು. ಗುಂಡಕ್ಕಿ ಕೊಲ್ಲುವ ಕಾನೂನು ತರಬೇಕೆಂದು ನನ್ನ ಮನವಿ. ಇಂತಹ ಕಾನೂನು ತರಲು ನಾನು ಪ್ರಧಾನಿ ಮೋದಿಗೆ…

Read More

ಮೈಸೂರು : ಶಾಲಾ ಬಸ್ ವಾಹನಕ್ಕೆ ಟ್ಯಾಂಕರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಕುರುಬಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಭೈರ್ಯ ಗ್ರಾಮದಿಂದ ಟ್ಯಾಂಕರ್ ಸಾಲಿಗ್ರಾಮಕ್ಕೆ ತೆರಳುತ್ತಿತ್ತು, ಕುರುಬ ಹಳ್ಳಿಯಿಂದ ಭೈರ್ಯ ಗ್ರಾಮಕ್ಕೆ ಸ್ಕೂಲ್ ಬಸ್ ಹೊರಟಿತ್ತು, ಇದೆ ವೇಳೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತು. ಸಾಲಿಗ್ರಾಮ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಥಿತಿ ಶಿಕ್ಷಕನ ಬರ್ಬರ ಕೊಲೆ ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನನ್ನು ಬರಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನ ಪಾಳ್ಯದಲ್ಲಿ ಮರಿಯಪ್ಪ (47) ಎನ್ನುವ ಅಥಿತಿ ಶಿಕ್ಷಕನನ್ನು ಕೊಲೆಗಯ್ಯಲಾಗಿದೆ ಸಂಭವಿಸಿದೆ. ಮಚ್ಚಿನಿಂದ ಕೊಚ್ಚಿ…

Read More

ಬೆಂಗಳೂರು : ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅವರಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ನಿನ್ನೆ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ಇದೆ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು. ಕೆಎಸ್​ ಈಶ್ವರಪ್ಪ ಅವರ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ನಿನ್ನೆ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇನ್ನು ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿರುವ ಕೆ.ಎಸ್​.ಈಶ್ವರಪ್ಪ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಇದೀಗ ಕೆಎಸ್​ ಈಶ್ವರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ದಾವಣಗೆರೆ ಪೊಲೀಸರಿಂದ…

Read More

ಶಿವಮೊಗ್ಗ : ದಾವಣಗೆರೆ ಪೊಲೀಸರಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ನೋಟಿಸ್ ಜಾರಿ ಮಾಡಿದ್ದೂ, ಶಿವಮೊಗ್ಗದ ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಆಗಮಿಸಿ ನೋಟಿಸ್ ಜಾರಿ ಮಾಡಿದ್ದಾರೆ.ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಷ್ಟ್ರದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಅಂತ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಖಂಡಿಸಿ ದಾವಣಗೆರೆಯಲ್ಲಿ ಕೇಸ್ ದಾಖಲಾಗಿತ್ತು. ದೇಶದ ವಿಭಜನೆ ವಿಚಾರವಾಗ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಇದೇ ಸಮಯದಲ್ಲಿ ಅಂದರೆ ನಿನ್ನೆ ಕೆಎಸ್ ಈಶ್ವರಪ್ಪ, ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ಗುಡುಗಿದ್ದರು. ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದರು. ಸದ್ಯ ಇದೇ ವಿಚಾರವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ದಾವಣಗೆರೆ‌‌ ನಗರದ ನಿಜಲಿಂಗಪ್ಪ ಬಡಾವಣೆ…

Read More