Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಇದೀಗ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 381 ಹೊಸ ಪ್ರಕಾರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಹೌದು ಇದೀಗ ಸದ್ಯ ರಾಜ್ಯದಲ್ಲಿ 88 ಡೆಂಘಿ ಕೇಸ್ ಗಳು ಸಕ್ರಿಯವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 171 ಕೇಸ್ ಸಕ್ರಿಯವಾಗಿದ್ದ ಪ್ರಸ್ತುತ ರಾಜ್ಯದಲ್ಲಿ ಇಲ್ಲಿಯವರೆಗೆ 8221 ಪ್ರಕರಣಗಳು ಇಲ್ಲಿವರ್ಗೆ ಏರಿಕೆಯಾಗಿ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಬಹಿರಂಗವಾಗಿದೆ. ಅಲ್ಲದೆ ರಾಜ್ಯದ ಗಡಿ ಭಾಗದಲ್ಲಿ ಕೂಡ ಡೆಂಘಿ ಪ್ರಕರಣಗಳು ಹೆಚ್ಚಿದ್ದು, ಬೀದರ್ ಜಿಲ್ಲೆಯಲ್ಲಿ ಕಳೆದ 2 ದಿನಗಳಲ್ಲಿ 6 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಬೆಂಗಳೂರು : ಬೆಂಗಳೂರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಮುಖ್ಯ ರಸ್ತೆಯ ಪಾರಿಜಾತ ಆಸ್ಪತ್ರೆ ಎದುರು ಸಂಭವಿಸಿದೆ. ಹೌದು ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಈ ಸರಣಿ ಅಪಘಾತ ನಡೆದಿದ್ದು, 2 ಬೈಕ್, ಗೂಡ್ಸ್ ವಾಹನ, ಥಾರ್ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಬಸ್, 4 ವಾಹನಗಳಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ಆಂಧ್ರಪ್ರದೇಶ ಮೂಲದ ಪ್ರಸಾದ್ ರಾವ್(60) ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಪಾದಚಾರಿ, ಇಬ್ಬರು ಬೈಕ್ ಸವಾರರು ಹಾಗೂ ಬಸ್ಸಿನಲ್ಲಿದ್ದ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಗೊಂಡವರನ್ನು ಸ್ಥಳೀಯರು ಸೇರಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ರೇನ್ ಮೂಲಕ ಬಿಎಂಟಿಸಿ ಬಸ್ ಹಾಗೂ ಬೈಕ್, ಗೂಡ್ಸ್ ವಾಹನವನ್ನು ತೆರವು ಮಾಡಿ, ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಇಡಿ ಪರಿಶೀಲನೆ ಜೋರಾಗಿಯೇ ಇದೆ. ಈ ಮಧ್ಯೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದು, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಮನವಿ ಮಾಡಿದ್ದಾರೆ. ಹೌದು ವಾಲ್ಮೀಕಿ ಹಗರಣದ ಕುರಿತಂತೆ ಕೇಂದ್ರ ಅವರು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಪತ್ರದ ಮೂಲಕ, ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ಹಣಕಾಸು ಸಂಸ್ಥೆಗಳಿಂದ ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆ ತೀವ್ರಗೊಳ್ಳಬೇಕು. ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ. ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವನ್ನು ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಆ ಮೂಲಕ ಚಂದ್ರಶೇಖರ್…
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ ವಿಮಲ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ತಹಶೀಲ್ದಾರ್ ಚಂದ್ರಶೇಖರ್ ನಾಯಕ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಾಗರ ತಾಲೂಕಿನ ಅರಹ ಗ್ರಾಮದ ವಿಎ ವಿಮಲಾರಿಂದ ಆರೋಪ ಕೇಳಿ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ವಿಮಲಾ (33) ಆತ್ಮಹತ್ಯೆಗೆ ಯತ್ನಿಸಿದವರು.ಅಸ್ವಸ್ಥ va ವಿಮಲಾಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ಶಿವಮೊಗ್ಗ : ಶಿಕ್ಷಕ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದು ನೀಡಿದ್ದು, ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ರಿಂದ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್‍ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ 2022-23 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 3 ಮತ್ತು ತಾಲ್ಲೂಕುಗಳಿಂದ ತಲಾ 3 ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು ಹಾಗೂ 2023-24 ನೇ ಸಾಲಿನಲ್ಲಿ ಎಸ್‍ಎಸ್…
ಶಿವಮೊಗ್ಗ : ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು 8ನೇ ತರಗತಿವರೆಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿವರೆಗೆ ವಿಸ್ತರಿಸಲಾಗಿದೆ. ರಾಗಿ ಮಾಲ್ಟ್ ನೀಡಲಾಗುತ್ತಿದೆ. ಹಾಗೂ ವಾರದಲ್ಲಿ ಒಂದು ನೀಡುತ್ತಿದ್ದ ಮೊಟ್ಟೆಯನ್ನು 2 ದಿನಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರದಲ್ಲಿ 6 ದಿನವೂ ಮೊಟ್ಟೆ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದರು. ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇತ್ತು. ಕಡಿಮೆ ಕಾಲಮಿತಿಯಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿ ಶಿಕ್ಷಣ ನೀಡಲಾಗುತ್ತಿದೆ. ಶಿಥಿಲಾವಸ್ಥೆಯಲ್ಲಿ ಇರುವ ಶಾಲಾ ಕಟ್ಟಡ ಮತ್ತು ಕೊಠಡಿಗಳನ್ನು ಹಂತ ಹಂತವಾಗಿ ರಿಪೇರಿ ಮಾಡಲಾಗುತ್ತಿದೆ. 1600 ಕೊಠಡಿ ರಿಪೇರಿ ಮತ್ತು ಅವಶ್ಯವಿರುವೆಡೆ ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲೇ ಮಂಜೂರಾತಿ ದೊರೆಯಲಿದೆ. ರಾಜ್ಯದಲ್ಲಿ ಹೊಸದಾಗಿ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು, ಉನ್ನತೀಕರಿಸಲಾಗುವುದು ಎಂದು ಹೇಳಿದ್ದ ಪ್ರಕಾರ ಹಂತ ಹಂತವಾಗಿ ಕೆಪಿಎಸ್ ಶಾಲೆ ಉನ್ನತೀಕರಣ ಆಗುತ್ತಿದೆ. ಕೆಪಿಎಸ್ ಶಾಲೆಯಲ್ಲಿ ಕನ್ನಡ, ಇಂಗ್ಲಿಷ್ ಮಾಧ್ಯಮ, ಎಲ್‍ಕೆಜಿ, ಯುಕೆಜಿ, ಲೈಬ್ರರಿ ಸೇರಿದಂತೆ ಉತ್ತಮ ಸೌಲಭ್ಯಗಳು…
ಶಿವಮೊಗ್ಗ : ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್‍ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತಮ ಅಂಕ ಮತ್ತು ಶೇ.100 ಫಲಿತಾಂಶ ಪಡೆದ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿವೆ. ಈ ಬಾರಿ ಜಿಲ್ಲೆ ಎಸ್‍ಎಸ್‍ಎಲ್‍ಸಿ ಯಲ್ಲಿ 3 ನೇ ಸ್ಥಾನಕ್ಕೆ ಏರಿದ್ದು, ಈ ಸಾಧನೆಯನ್ನು ಶಿಕ್ಷಕ ವೃಂದಕ್ಕೆ ಅರ್ಪಿಸುತ್ತೇನೆ.ಗುಣಮಟ್ಟದ…
ಬೆಂಗಳೂರು : ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣದ ವಿಚಾರ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಹೌದು ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿಗೆ ಈ ಒಂದು ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಅವರು ಪ್ರತಿಭಟನೆ ಮಾಡಿದ್ದರು. ಜುಲೈ 8ರಂದು ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಹಳಾ ಜನರಿಗೆ ಹೊಟ್ಟೆಯುರಿ ಉಂಟುಮಾಡಿದೆ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ನನ್ನ 4 ದಶಕಗಳ ರಾಜಕೀಯ ಜೀವನದಲ್ಲಿ ಇಂಥಾ ಬಹಳಷ್ಟು ಪಿತೂರಿ, ಷಡ್ಯಂತ್ರ ನೋಡಿ, ಎದುರಿಸಿ ಬಂದಿದ್ದೀನಿ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 2014 ರಲ್ಲಿ ಮೂಡಾ ಜಮೀನು ಅಲ್ಲದೆ ಹೋದರೂ ಕೂಡ ನಮ್ಮ ಜಮೀನಲ್ಲಿ ನಿವೇಶನ ಮಾಡಿ ಹಂಚಿದ್ದಾರೆ. ಅದಕ್ಕೆ ನಾವು ಸುಮ್ಮನೆ ಬಿಡಬೇಕಾ? ಬದಲಿ ನಿವೇಶನ ಕೇಳಿದೆವೇ ಹೊರತು ಇಂಥಾ ಜಾಗದಲ್ಲಿಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಆಗ ಮೂಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು? ಬಿಜೆಪಿ ಸರ್ಕಾರವೇ ಇತ್ತು ಆಗ. ಕಾನೂನು ಪ್ರಕಾರ ನಮಗೆ ಬೇರೆ ಜಮೀನು ಕೊಡಬೇಕು ಎಂದರು. ಇದೇ ರೀತಿಯಲ್ಲಿ ಸುಂದರಮ್ಮ ಪ್ರಕರಣದಲ್ಲಿ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಉಚ್ಚ ನ್ಯಾಯಾಲಯ ಅಷ್ಟು ಜಾಗವನ್ನೂ ಕೊಡಲು…
ಬೆಂಗಳೂರು : ಕಳೆದ ವರ್ಷ ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಇದೀಗ ಅತ್ಯುತ್ತಮ ಮಳೆಯಾಗುತ್ತಿದ್ದು, ಇದರ ಮೇಲೆ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಹರಿಸುವಂತೆ ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC) ಆದೇಶ ಮಾಡಿದೆ. ಹೌದು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಆದೇಶ ನೀಡಿದೆ ಎನ್ನಲಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಇದೀಗ ಶಿಫಾರಸು ಮಾಡಿದೆ. ಪ್ರತಿನಿತ್ಯ ಒಂದು ಟಿಎಂಸಿ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ. ಜುಲೈ 12 ರಿಂದ 31 ರವರೆಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ ಇದೀಗ ಶಿಫಾರಸ್ಸು ಮಾಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿ ಡಬ್ಲ್ಯೂ ಆರ್ ಸಿ ಸಿ ಶಿಫಾರಸ್ಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಇದೀಗ ಬಿತ್ತನೆ ಕಾರ್ಯ ಮಾಡುತ್ತಿರುವ ರಾಜ್ಯದ ರೈತರಿಗೆ ಈ ಒಂದು ಆದೇಶದಿಂದ ಮತ್ತೆ ಸಂಕಷ್ಟ…