Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಖಜಾನೆ ಇಲಾಖೆಯಿಂದ ಬೇರೆ ಖಾತೆಗಳಿಗೆ ರೂ.180 ಕೋಟಿ ವರ್ಗಾವಣೆ ಆಗಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ.ಡಿ. ಹೀಗೆ ಮೂರು ಸಂಸ್ಥೆಗಳ ಮೂಲಕ ತನಿಖೆಗಳಾಗುತ್ತಿದೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೇ ನೀಡಿದರು. ಮೈಸೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜೀನಾಮೆ ನೀಡಬೇಕಲ್ಲ. ಜಿ.ಟಿ ದೇವೇಗೌಡರು ಅವರ ರಾಜೀನಾಮೆ ಕೇಳಿದ್ದಾರ? ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ, ಅಂತಿಮ ವರದಿಯಾಗಲಿ ಯಾವುದೂ ಬಂದಿಲ್ಲ.ಖಜಾನೆಯಿಂದ ಹಣ ವರ್ಗಾವಣೆ ಆಗುವಾಗ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ರಾಜ್ಯ ಬಿಜೆಪಿ ನಾಯಕರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಗೊತ್ತಿರುವುದಲ್ಲ,…
ಆಂಧ್ರಪ್ರದೇಶ : ದೇಶದಲ್ಲಿ ಮತ್ತೊಂದು ಪೈಸಾಚಿತ ಕರ್ತ ನಡೆದಿದ್ದು ಮೂರನೇ ತರಗತಿಯ ಬಾಲಕಿಯ ಮೇಲೆ ಮೂವರು ಬಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿ ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ. ಹೌದು ಆಂಧ್ರಪ್ರದೇಶದಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕರು ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ನಗರವೇ ಬೆಚ್ಚಿ ಬಿದ್ದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯೊಬ್ಬಳನ್ನು ಮೂವರು ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್‌ಮರಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೂವರು ಬಾಲಕರು ಸೇರಿ ಶಾಲಾ ರಜಾದಿನವಾದ ಭಾನುವಾರ ಈ ಕೃತ್ಯವೆಸಗಿದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದರೆ ಇಬ್ಬರು 6ನೇ ತರಗತಿ, ಇನ್ನೊಬ್ಬ ಬಾಲಕ 7ನೇ ತರಗತಿಯಲ್ಲಿ ಓದುತ್ತಿದ್ದ. ಸಂತ್ರಸ್ತೆ ಮತ್ತು ಆರೋಪಿ…
ಹುಬ್ಬಳ್ಳಿ : ಕಲಘಟಗಿ ತಾಲೂಕು ಮಿಶ್ರಿಕೋಟಿ ಕ್ರಾಸ್ ಹತ್ತಿರದ ಪಾಟೀಲ್ ಎಂಬವರ ಗೋದಾಮಿನ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ಕಲಘಟಗಿ ಠಾಣೆ ಪೊಲೀಸರು, ಸುಮಾರು 32 ಲಕ್ಷ ರೂ. ಮೌಲ್ಯದ ನಕಲಿ ಮದ್ಯ ವಶಪಡಿಸಿಕೊಂಡಿದ್ದಾರೆ. ಗೋದಾಮಿನಲ್ಲಿ ನಕಲಿ ಮದ್ಯಕ್ಕೆ ಅಮಲು ಬರುವ ಪದಾರ್ಥ, ಬಣ್ಣ ಮಿಶ್ರಣ ಮಾಡಿ ಖಾಲಿ ಬಾಟಲ್‌ಗಳಿಗೆ ತುಂಬಿ ದುಬಾರಿ ಬ್ರಾಂಡ್‌ನ ಸಿದ್ದಿ ಲೇಬಲ್ ಅಂಟಿಸಿ ನಕಲಿ ಮದ್ಯ ತಯಾರಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗೋದಾಮಿಗೆ ದಾಳಿ ನಡೆಸಿದ ಕಲಘಟಗಿ ಪೊಲೀಸರು, 32 ಲಕ್ಷ ರೂ. ಮೌಲ್ಯದ ನಕಲಿ ಮದ್ಯ ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿನಾಯಕ ಮನೋಹರ ಜಿತೂರಿ, ಆನಂದ ನಗರದ ವಿನಾಯಕ ಅಶೋಕ ಸಿದ್ದಿಂಗ, ಚನ್ನಪೇಟೆಯ ಈಶ್ವರ ಅರ್ಜುನ ಪವಾರ ಹಾಗೂ ನೇಕಾರ ನಗರದ ರೋಹಿತ ರಾಜೇಶ್ ಅರಸಿದ್ಧಿ ಎಂಬವರನ್ನು ಬಂಧಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಅವರನ್ನು ಇದೀಗ ಇಡೀ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸುದೀರ್ಘ 24 ಗಂಟೆಗಳ ಪರಿಶೀಲನೆಯ ಬಳಿಕ ವಶಪಡಿಸಿಕೊಳ್ಳಲಾಗಿದೆ. ವಿಡಿಯೋ ಅಧಿಕಾರಿಗಳು ಪಂಪಣ್ಣ ಅವರನ್ನು ರಾಯಚೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಎನ್ನುವವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಸುದೀರ್ಘ 24 ಗಂಟೆಗಳ ಪರಿಶೀಲನೆಯ ನಂತರ ಈಗ ಮತ್ತೆ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರು ಮೊಬೈಲ್ ಎಂಬ ಮಾಯಾಲೋಕಕ್ಕೆ ಒಗ್ಗಿಕೊಂಡು ಪ್ರಪಂಚವನ್ನೇ ಮರೆಯುತ್ತಿದ್ದಾರೆ. ಅದರ ಜೊತೆಗೆ ತಮ್ಮ ಪ್ರಾಣಕ್ಕೂ ಕೂಡ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ಯುವಕನೊಬ್ಬ ಹಣ ಕಳೆದುಕೊಳ್ಳುವುದಷ್ಟೇ ಅಲ್ಲದೆ ಆತ್ಮಹತ್ಯೆಗೆ ಶರಣಾಗಿ ತನ್ನ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾನೆ. ಹೌದು ನೇಣಿಗೆ ಶರಣಾದ ಯುವಕನು ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.ಮೃತ ಯುವಕನನ್ನು ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಎಂದು ತಿಳಿದುಬಂದಿದೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದನು ಎನ್ನಲಾಗುತ್ತಿದೆ. ರಾಕೇಶ್ ಪ್ರತಿದಿನವೂ ಆನ್ಲೈನ್ ಗೇಮ್ ಆಡುತ್ತಿದ್ದನು. ಆನ್ಲೈನ್ ಗೇಮ್ನಿಂದ ಹಣ ಕಳೆದುಕೊಂಡಿದ್ದ ರಾಕೇಶ್ ಮನನೊಂದು ತಾನು ಇದ್ದ ಕೋಣೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದಲ್ಲಿದ್ದ ಮುರುಘಾಶ್ರೀಗಳ ಬೆಳ್ಳಿ ಪುತ್ತಳಿಯನ್ನು ಖದಿಮರು ಕಳ್ಳತನ ಮಾಡಿದ್ದಾರೆ. ಶ್ರೀಗಳ ಸುಮಾರು 20 ಕೆಜಿ ತೂಕದ 20 ಲಕ್ಷ ಮೌಲ್ಯದ ಪುತ್ತಳಿಯನ್ನ ಕಳ್ಳತನ ಮಾಡಿದ್ದಾರೆ. ಈ ಕುರಿತು ಮಠದ ಬಸವಪ್ರಭು ಶ್ರೀ ಮಾತನಾಡಿದ್ದು ಜೂನ್ 26 ರಿಂದ ಮಠದ ದರ್ಬಾರ ಹಾಲ್ ಸಿಸಿಟಿವಿ ಆಫ್ ಆಗಿದೆ. ದರ್ಬಾರ್ ಹಾಲಿನಲ್ಲಿದ್ದ ಬೆಳ್ಳಿ ಪುತ್ತಳಿ ಕಳ್ಳತನ ಆಗಿದೆ. ಬೆಳ್ಳಿ ಪುತ್ಥಳಿ ಕಳ್ಳತನದ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ. ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಶ್ರೀ ದೂರು ನೀಡುತ್ತಾರೆ ಎಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ಬಸವಪ್ರಭುಶ್ರೀ ಹೇಳಿಕೆ ನೀಡಿದರು. ಇನ್ನು ಫೋಕ್ಸೋ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಮುರುಘಾಶ್ರೀ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಅಲ್ಲದೆ, ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ, ಮುರುಘಾ ಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್…
ರಾಯಚೂರು : ಹುಚ್ಚುನಾಯಿ ದಾಳಿಯಿಂದ ಮೂವರುರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಯಾರಗೇರಾ ಗ್ರಾಮದಲ್ಲಿ ನಡೆದಿದೆ.ತಕ್ಷಣ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತೆ ನೀಡಲಾಗುತ್ತಿದೆ. ಹೌದು ಯಾರಗೇರಾ ಗ್ರಾಮದಲ್ಲಿ ಪಾವನಿ, ಅಸಿಯಾ, ಅನ್ಸಿಯ ಎಂಬ ಮಕ್ಕಳ ಮೇಲೆ ಹುಚ್ಚುನಾಯಿ ದಾಳಿ ನಡೆಸಿದೆ. ಮಧ್ಯಾಹ್ನದಲ್ಲಿ ಮನೆಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಹುಚ್ಚುನಾಯಿ ಕಚ್ಚಿದೆ.ಈ ವೇಳೆ ಗಾಯಗೊಂಡ ಮೂವರು ಮಕ್ಕಳನ್ನು ತಕ್ಷಣ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಕಚ್ಚಿ ನಂತರ ಜಾನುವಾರುಗಳ ಮೇಲು ಹುಚ್ಚುನಾಯಿ ದಾಳಿ ಮಾಡಿದೆ ಈ ವೇಳೆ ಗ್ರಾಮಸ್ಥರು ರಚ್ಚು ಗೆದ್ದು ಹುಚ್ಚುನಾಯಿಯನ್ನು ಕೊಂದು ಹಾಕಿದ್ದಾರೆ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಚಾಮರಾಜನಗರ : ರಸ್ತೆ ದಾಟುತ್ತಿದ್ದ ವೇಳೆ KSRTC ಬಸ್ ಒಂದು ಡಿಕ್ಕಿ ಹೊಡೆದು 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಮಮದಾಪೂರ ಬಳಿ ನಡೆದಿದೆ. ಹೌದು ಚಾಮರಾಜನಗರ ತಾಲೂಕಿನ ಮಾದಾಪುರದ. ತನಿಷ್ಕಾ(6) ಮೃತ ರ್ದುದೈವಿ ಬಾಲಕಿ ಎಂದು ಹೇಳಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ : ರಾಜ್ಯದಲ್ಲಿ ಡೆಂಘಿ ಅಬ್ಬರ ಮುಂದುವರೆದಿದ್ದು, ಇದೀಗ ಶಿವಮೊಗ್ಗದ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಜ್ವರದಿಂದ ಬಳಲುತ್ತಿದ್ದ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಜ್ವರದಿಂದ ಬಳಲುತ್ತಿದ್ದ ಒಂಬತ್ತು ತಿಂಗಳ ಮಗುವೊಂದನ್ನು ಜು.2ರಂದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣ ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವಿಗೀಡಾಗಿದೆ. ಇನ್ನೂ ಕಳೆದ ಎರಡು ದಿನಗಳ ಹಿಂದೆ ರಿಪ್ಪನ್‌ಪೇಟೆಯ ರಶ್ಮಿ ಆರ್.ನಾಯಕ್ (42), ಶಿರಾಳಕೊಪ್ಪದಲ್ಲಿ ಒಂಬತ್ತು ತಿಂಗಳ ಮಗು ಹಾಗೂ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಟೋ ಚಾಲಕ ಅರುಣ (22) ಮೃತಪಟ್ಟವರು. ಕಳೆದ ಹದಿನೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ರಶ್ಮಿ ಅವರು ಮಂಗಳವಾರ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ತೀವ್ರ ನಿಗಾ ಘಟಕದಲ್ಲಿದ್ದ ಚಿಕಿತ್ಸೆ ನೀಡಲಾಗುತ್ತಿತ್ತು. ರಶ್ಮಿ ಅವರಿಗೆ ಡೆಂಘೀ ದೃಢಪಟ್ಟಿದ್ದರೂ ಬೇರೆ ಆರೋಗ್ಯ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.
ಮೈಸೂರು : ಸಿಬಿಐನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ. ಹೀಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಆಗ್ರಹಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಎಂಡಿಎ) ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐನವರಿಂದ ಮಾತ್ರ ಇದರ ತನಿಖೆ ನಡೆಸಲು ಸಾಧ್ಯ. ಹೀಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಆಗ್ರಹಿಸಿದರು. ಬದಲಿ ನಿವೇಶನ ಪಡೆದಿದ್ದೇನೆ ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಎಂಡಿಎ ಅಕ್ರಮದಲ್ಲಿ ನನ್ನ ಪಾಲು ಇದೆ ಎಂದಿದ್ದಾರೆ. ನನ್ನ ಪತ್ನಿಗೆ ದೇವನೂರು 3ನೇ ಹಂತದಲ್ಲಿ ನೀಡಿದ್ದ ನಿವೇಶನದ ಬಳಿ ವರುಣ ನಾಲೆ ಹಾದು ಹೋಗಿದೆ. ಆ ಸ್ಥಳ ಮನೆ ನಿರ್ಮಿಸಲು ಯೋಗ್ಯವಾಗಿರಲಿಲ್ಲ. ಹೀಗಾಗಿ, ಬೇರೆಡೆ ನಿವೇಶನ ನೀಡಿದ್ದಾರಷ್ಟೇ ಎಂದು ಅವರು…