Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ರಾಮನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ರಾಮನಗರದ ಮಾಗಡಿ ಪೊಲೀಸರಿಂದ ಇದೀಗ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ವಿಕಾಸ್ ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಪ್ರೀತಿಯ ನೆನಪಲ್ಲಿ ವಿಕಾಸ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ ನಂತರ ಯುವತಿಯ ಜೊತೆಗೆ ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದಾರೆ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ವಿಕಾಸ್ ಬೆದರಿಕೆ ಹಾಕಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಅಂತ ಬೆದರಿಕೆ ಹಾಕಿದ್ದಾನೆ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾನೆ. ಆನಂತರ ಪ್ರಶಾಂತ್ ಚೇತನ್ ಜೊತೆಗೆ ಸೇರಿಸಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ನೆನ್ನೆ ರಾಮನಗರದ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ, ವಿದ್ಯಾರ್ಥಿನಿಯ ದೂರಿನ ಅನ್ವಯ ಇದೀಗ ಪೊಲೀಸರು ವಿಕಾಸ್ ಪ್ರಶಾಂತ್ ಮತ್ತು…
ಶಿವಮೊಗ್ಗ : ಶಿವಮೊಗ್ಗದಲ್ಲಿ ಪಾಪಿ ಪೋಷಕರು ನವಜಾತಾ ಶಿಶುವನ್ನು ಬಿಟ್ಟು ಹೋಗಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ಸಾಸ್ಟೆಹಳ್ಳಿ ಗ್ರಾಮದ ಕುಶ ಎಂಬವರು ತಮ್ಮದೊಡ್ಡಪ್ಪನ ಪುತ್ರನಿಗೆ ಆನಾರೋಗ್ಯದ ಕಾರಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹಿಂದಿರುವಾಗ ಸಮೀಪದ ಮಲ್ಲಾಪುರ ಗ್ರಾಮದ ಬಳಿ ಮಗು ಅಳುವ ಶಬ್ದ ಕೇಳಿಸಿದೆ. ಬಳಿಕ ತಮ್ಮ ಅತ್ತಿಗೆ ಸಹಾಯದೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ 2-3 ದಿನದ ಗಂಡು ಮಗು ಪತ್ತೆಯಾಗಿದೆ. ಸುತ್ತಮುತ್ತಲಿನ ಮನೆಗಳಲ್ಲಿ ವಿಚಾರಿಸಿದಾಗ ಆ ಮಗುವು ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ದೃಢಪಡಿಸಿಕೊಂಡ ಅವರು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.
ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್‌ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ…
ಬೆಳಗಾವಿ : ಸಿದ್ದರಾಮಯ್ಯ ಔಟ್ ಗೋಯಿಂಗ್ ಚೀಫ್ ಮಿನಿಸ್ಟರ್ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆ ಅಧಿವೇಶನ ಎಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಪಾಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ ಮುಖ್ಯಮಂತ್ರಿಗಳ ಪಾಲಿನ ದಾಟಿ ನೋಡಿದರೆ ನಿಮಗೆ ಅರ್ಥ ಆಗುತ್ತದೆ ಸದನದಲ್ಲಿ ಚರ್ಚಿಸುವುದಕ್ಕೆ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾ ಭಾವನೆ ಇಲ್ಲ. ನೀವು ಸಿಎಂ ಆಗಿ ಎಷ್ಟು ದಿನ ಇರುತ್ತೀರಿ ಅನ್ನೋದು ಮುಖ್ಯ ಅಲ್ಲ ಆ ಸ್ಥಾನದಲ್ಲಿದ್ದು ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ ಎನ್ನುವುದು ಮುಖ್ಯವಾಗುತ್ತದೆ ಎರಡುವರೆ ವರ್ಷಗಳಿಂದ ಏನು ಮಾಡದೆ ಇರುವವರು ಈ ಎರಡು ವಾರದಲ್ಲಿ ಏನು ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು : 2023ರಲ್ಲಿ 134 ಸ್ಥಾನ ಪಡೆದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂತು. ಅಧಿಕಾರ ವಹಿಸಿಕೊಂಡ ಕೂಡಲೇ ರಾಜ್ಯದ ಜನರಿಗೆ ಭರವಸೆ ನೀಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರು. ಆದರೆ ಇದೀಗ ಈ ಒಂದು ಗ್ಯಾರೆಂಟಿ ಯೋಜನೆಗಳೇ ರಾಜ್ಯ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿವೆ ಎಂದು ಹೇಳಲಾಗುತ್ತಿದೆ. ಹೌದು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಆದ್ರೆ ಇದೇ ಗ್ಯಾರಂಟಿ ಯೋಜನೆಗಳು ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆಯಾ? ಅನ್ನೋ ಪ್ರಶ್ನೆ ಎದ್ದಿದೆ. ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಗೃಹಲಕ್ಷ್ಮಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದಕ್ಕೆ ಪೂರಕವೆಂಬಂತೆ ನಿನ್ನೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು…
ಬಾಗಲಕೋಟೆ : ಬೆಳಗಾವಿಯಲ್ಲಿ ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾನಪದ ಕಲಾವಿದ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಮಹಾಲಿಂಗಪುರ ಪೊಲೀಸರು, ಮೈಲಾರಿಯನ್ನು ಬಂಧಿಸಿದ್ದು, ಸದ್ಯ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಬಳಿಕ ಮಾತನಾಡಿದ ಮೈಲಾರಿ, ಇದರಲ್ಲಿ ಎಷ್ಟೋ ಜನರ ಕೈವಾಡವಿದೆ. ಮ್ಯೂಸಿಕ್ ಮೈಲಾರಿ, ಟ್ರೆಂಡಿಂಗ್ ಸ್ಟಾರ್ ಆಗಬೇಕ ಅಂದ್ರ ಎಷ್ಟು ಕಷ್ಟಪಟ್ಟೀವಿ. ಬಡತನದಿಂದ ಎಷ್ಟು ಸ್ಟ್ರಗಲ್ ಮಾಡಿ ಬಂದೀನಿ ಅದು ನನಗೆ ಗೊತ್ತು. ಸುಮಾರು ಬಾರಿ ನನ್ನ ಮೇಲೆ ಆರೋಪ ಹೊರಿಸುವ ಪ್ರಯತ್ನಗಳು ಆಗಿವೆ. ಕಾನೂನು ಇದೆ. ಕಾನೂನಾತ್ಮಕವಾಗಿ ನಾನು ಹೋರಾಟ ಮಾಡ್ತೇನೆ ಎಂದಿದ್ದಾನೇ. ನನ್ನ ಏಳಿಗೆ ಸಹಿಸಲಾಗದೇ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನವಿದೆ, ಸಂವಿಧಾನದಲ್ಲಿ ಎಲ್ಲರಿಗೂ ನ್ಯಾಯ ಸಿಗುತ್ತೆ. ನನಗೂ ನ್ಯಾಯ ಸಿಗುತ್ತೆ. ನನ್ನದು ಯಾವುದೇ ರೀತಿಯ ತಪ್ಪಿಲ್ಲ. ಕಾನೂನಿನ ಮೂಲಕ ನಾನು ಹೋರಾಟ ಮಾಡಿ,…
ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾಮಗಾರಿಯ ವೇಳೆ ಭಾರೀ ಕ್ರೇನ್ ಒಂದು ರೈಲ್ವೆ ಹಳಿಯ ಮೇಲೆ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ರೈಲು ಸಂಚಾರಕ್ಕೂ ಅಡಚಣೆ ಉಂಟಾಯಿತು. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಸಮೀಪ ಬುಧವಾರ ಕಾಮಗಾರಿ ನಡೆಸಲು ಹಳಿಯ ಪಕ್ಕದಲ್ಲಿ ಕ್ರೇನ್ ಬಳಸಲಾಗುತ್ತಿತ್ತು. ಈ ವೇಳೆ ತಾಂತ್ರಿಕ ದೋಷ ಅಥವಾ ನೆಲದ ಕುಸಿತದಿಂದ ಸಮತೋಲನ ಕಳೆದುಕೊಂಡ ಪರಿಣಾಮ ಕ್ರೇನ್ ಏಕಾಏಕಿ ಪಲ್ಟಿಯಾಗಿ ನೇರವಾಗಿ ರೈಲ್ವೆ ಹಳಿಯ ಮೇಲೆ ಉರುಳಿದೆ. ಘಟನೆ ಸಂಭವಿಸಿದ ತಕ್ಷಣ ರೈಲ್ವೆ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಹಳಿಯ ಮೇಲೆ ಮಗುಚಿ ಬಿದ್ದ ಕ್ರೇನ್‌ನ್ನು ತೆರವುಗೊಳಿಸಲು ಮತ್ತೊಂದು ಯಂತ್ರದ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾತ್ರವಲ್ಲದೇ ಈ ವೇಳೆ, ಯಾವುದೇ ರೈಲುಗಳು ಆಗಮಿಸದ ಹಿನ್ನೆಲೆಯಲ್ಲಿ ಭಾರಿ ದುರಂತವೊಂದು ತಪ್ಪಿದೆ.
ಬೆಂಗಳೂರು : ಕಳೆದ ಜೂನ್ 4 ರಂದು ಚೊಚ್ಚಲ IPL ಟ್ರೊಫಿ ಗೆದ್ದು ಬೀಗಿತ್ತು. ಈ ಹಿನ್ನೆಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಿತ್ತು. ಈ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಇದೆ ಕಾರಣಕ್ಕೆ ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸಿದ ಇರಲು ನಿರ್ಧರಿಸಲಾಗಿತ್ತು. ಅದೊಂದು ದುರ್ಘಟನೆಯ ಬಳಿಕ ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವ ಕ್ರಿಕೆಟ್ ಪಂದ್ಯವೂ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಕೊನೆಗೂ ಶುಭ ಸುದ್ದಿಯೊಂದು ಸಿಕ್ಕಿದೆ. ಆದರೆ ಇದೀಗ ಬಿಸಿಸಿಐ ಬೆಂಗಳೂರಲ್ಲಿ 2026 ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ KSCA ಅಧ್ಯಕ್ಷ ವೆಂಕಟೇಶ್, ಬಿಸಿಸಿಐ ಕಾರ್ಯದರ್ಶಿಯನ್ನು ಭೇಟಿಯಾಗಿದ್ದು, ಅವರು 2026 ರ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ಮಾತ್ರವಲ್ಲದೆ ಅಂತರರಾಷ್ಟ್ರೀಯ ಪಂದ್ಯಗಳು ಕೂಡ…
ಚಾಮರಾಜನಗರ : ಇತ್ತೀಚಿಗೆ ಬೆಂಗಳೂರಿನಲ್ಲಿ ATM ವಾಹನದಲ್ಲಿ ಇದ್ದಂತ ಕೋಟ್ಯಂತರ ಹಣ ಕಳ್ಳತನ ನಡೆದಿತ್ತು. ಇದೀಗ ಆ ಪ್ರಕರಣ ಬೆನ್ನಲ್ಲೇ ಚಾಮರಾಜನಗರದಲ್ಲಿ ಸಹಕಾರ ಸಂಘದ ಕಚೇರಿ ಬೀಗ ಒಡೆದು 14.12 ಲಕ್ಷ ನಗದು ಹಣವನ್ನು ಕಳ್ಳತನ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರಿನಲ್ಲಿ ಈ ಒಂದು ದರೋಡೆ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡುಗೂರಿನಲ್ಲಿ ಇರುವಂತಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯ ಬೀಗ ಒಡೆದು 14.12 ಲಕ್ಷ ನಗದು ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ಕುರಿತು ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಬೆಳಗಾವಿ : ಇಂದು ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ವಿಶ್ರಾಂತಿ ಪಡೆಯಲು ಸರ್ಕ್ಯೂಟ್ ಹೌಸ್ ಗೆ ತೆರಳಿದರು. ಈ ವೇಳೆ ಹಲವು ಸಚಿವರು ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಸರ್ಕ್ಯೂಟ್ ಹೌಸ್ ಗೆ ಭೇಟಿ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಆರೋಗ್ಯದ ಕುರಿತು ಪುತ್ರ ಯತೀಂದ್ರ ಅವರು ತಂದೆಯವರ ಆರೋಗ್ಯ ಚೆನ್ನಾಗಿದೆ ವೈದ್ಯರು ಮಾತ್ರೆಗಳನ್ನು ಕೊಟ್ಟಿದ್ದಾರೆ. ಗ್ಯಾಸ್ಟ್ರೊಕೇಶನ್ ಇನ್ಫೆಕ್ಷನ್ ಆಗಿದೆ ಡೇರಿಯ ಸಮಸ್ಯೆ ತರ ಆಗಿದೆ. ತಂದೆಯವರು ವಿಶ್ರಾಂತಿ ಪಡೆಯುತ್ತಿದ್ದಾರೆ ನಾಳೆ ಅಧಿವೇಶನಕ್ಕೆ ಬರುತ್ತಾರೆ ಸಿಎಂ ಗೆ ಅನಾರೋಗ್ಯ ಹಿನ್ನಲೆ ಯತೀಂದ್ರ ಅವರು ಕೂಡ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿದ್ದರು.














