Author: kannadanewsnow05

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರ, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಜುಲೈ.12ರಂದು ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ನಿರ್ಧಾರ ಮಾಡಿದೆ. ಹೌದು ಈ ಒಂದು ವಿಚಾರವಾಗಿ ಇಂದು ಮೈಸೂರಿನಲ್ಲಿ ಬಿಜೆಪಿಯ ಶಾಸಕ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬಿಜೆಪಿಯ ಮುಖಂಡರ ಸಭೆ ನಡೆಯಿತು. ಈ ಒಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ನಗರಾಭಿವೃದ್ಧಿ ಪ್ರಾಧಿಕಾರದ ಅನುಕೂಲ ಪಡೆದು ಸಿದ್ದರಾಮಯ್ಯ ಸೈಟ್ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ. ಸಿಎಂ ಆಗಿ, ವಿಪಕ್ಷ ನಾಯಕನಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಹಿನ್ನಲೆ ಶುಕ್ರವಾರ(ಜು.12) ಮೈಸೂರಿನಲ್ಲಿ ವಿಪಕ್ಷ ನಾಯಕ ಆರ್​.ಅಶೋಕ್ ನೇತೃತ್ವದಲ್ಲಿ ಸಿಎಂ ರಾಜೀನಾಮೆಗೆ ಹಾಗೂ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಮುಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹೇಳಿದರು. ಇನ್ನು ಅವರು ಈ ಪ್ರಕರಣವನ್ನ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಕೆಲವರು ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದು, ಇದಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜೈಲಿನಲ್ಲಿ ನಟ ದರ್ಶನ್ ಗೆ ಯಾವುದೇ ರಾಜಾತಿಥ್ಯ ನೀಡುತ್ತಿಲ್ಲ. ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ನಟ ದರ್ಶನ್ ಗೆ ಉಪಚಾರ ನೀಡಲಾಗುತ್ತಿದೆ ಎಂದು ಗ್ರಹ ಇಲಾಖೆಯ ಸಚಿವ ರಕ್ಷಿಸಿ ಪರಮೇಶ್ವರ್ ಸ್ಪಷ್ಟನೆ ನೀಡಿದರು. ವಿ ಐ ಪಿ ಟ್ರೀಟ್ಮೆಂಟ್ ಆರೋಪದಲ್ಲಿ ಸತ್ಯಾಂಶವಿಲ್ಲ. ಬೇರೆ ಕೈದಿಗಳಂತೆ ಅವರನ್ನು ನೋಡಿಕೊಳ್ಳಲಾಗುತ್ತಿದೆ ಬಹಳ ಜನ ಬಿರಿಯಾನಿ ಕೊಟ್ಟರು ಏನೇನು ಕೊಟ್ಟರು ಅಂತ ಹೇಳಿದರು. ಆದರೆ ಅಲ್ಲಿ ಅಂತದ್ದು ಯಾವುದು ಕೂಡ ನಡೆಯುವುದಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ತಿಳಿಸಿದರು.

Read More

ಬೀದರ್ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇದೀಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ರಾಜ್ಯದ ಗಡಿ ಭಾಗದ ಜಿಲ್ಲೆ ಬೀದರ್ ನಲ್ಲೂ ಕೂಡ ಇಂದು ಆರೋ ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೌದು ರಾಜ್ಯದ ಗಡಿ ಭಾಗದ ಬೀದರ್ ಜಿಲ್ಲೆಯಲ್ಲಿ ಇಂದು 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಔರಾದ್, ಭಾಲ್ಕಿ ಹಾಗೂ ಬಸವಕಲ್ಯಾಣದಲ್ಲಿ ತಲಾ 2 ಪ್ರಕರಣಗಳು ಪತ್ತೆಯಾಗಿವೆ. ಜನವರಿ ಇಂದ ಇಲ್ಲಿಯವರೆಗೆ ಒಟ್ಟು 63 ಪ್ರಕರಣಗಳು ಪತ್ತೆಯಾಗಿವೆ ಎಂದು DHO ತಿಳಿಸಿದ್ದಾರೆ. ಸದ್ಯ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಹಲವು ಮಾರ್ಗ ಸೂಚಿಗಳನ್ನು ಹೊರಡಿಸಿದ್ದು, ಡೆಂಗ್ಯೂ ಜ್ವರ ಬರದಂತೆ ತಡೆಗಟ್ಟಲು ಹಲವು ಕ್ರಮಗಳನ್ನು ಜಾರಿಗೊಳಿಸಿದ್ದು. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.

Read More

ಯಾದಗಿರಿ : ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರದಲ್ಲಿ NDA ಸರ್ಕಾರ ಪತನಗೊಳ್ಳಲಿದ್ದು, ನಂತರ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಭವಿಷ್ಯ ನುಡಿದಿದ್ದಾರೆ. ಹೌದು ಅವರು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಇನ್ನೆರಡು ವರ್ಷದ ನಂತರ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಇರುವುದಿಲ್ಲ. ಖರ್ಗೆ ಪ್ರಧಾನಿ ಆದರೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗಲಿದೆ. ವಿಶೇಷವಾಗಿ ಕಲಬುರ್ಗಿ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ. ಸಮಸ್ತ ಕುಲಬಾಂಧವರಿಗೆ ಒಳ್ಳೆಯ ಕಾಲ ಬರಲಿದೆ ಎಂದು ಗುರುಮಠಕಲ್ ನಲ್ಲಿ ಮಾಜಿ ಸಚಿವ ಬಾಬುರಾವ ಚಿಂಚನಸೂರ್ ಅವರು ಹೇಳಿಕೆ ನೀಡಿದರು.

Read More

ಬೆಂಗಳೂರು : ಇದೀಗ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಬೆಂಗಳೂರಿನ ಎರಡು ಕಡೆ 7 ವರ್ಷದ ಬಾಲಕ ಹಾಗೂ ಇನ್ನೊಬ್ಬ ವ್ಯಕ್ತಿಗೆ ಹುಚ್ಚುನಾಯಿ ಕಡಿತದಿಂದ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ನೆಲಮಂಗಲದ ಮೈಲೆನಹಳ್ಳಿಯಲ್ಲಿ 7 ವರ್ಷದ ಬಾಲಕ ಚಿರಾಯು ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಶಾಲೆಯಿಂದ ವಾಪಸ್ ಆಗುತ್ತಿದ್ದ ವೇಳೆ 7 ವರ್ಷದ ಚಿರಾಯು ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ. ಅದೇ ರೀತಿಯಾಗಿ ಭೋವಿ ಪಾಳ್ಯದಲ್ಲಿ ಹನುಮಂತರಾಜು ಎನ್ನುವ ವ್ಯಕ್ತಿಗೆ ಹುಚ್ಚು ನಾಯಿ ದಾಳಿ ಮಾಡಿದೆ. ಸದ್ಯ ಇಬ್ಬರಿಗೂ ಗಂಭೀರವಾದ ಗಾಯಗಳಾಗಿದ್ದು, ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುಚ್ಚುನಾಯಿ ನಿಯಂತ್ರಿಸುವಂತೆ ಇದೀಗ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗವು ದಂಡ ವಿಧಿಸಿದೆ. ಇದಕ್ಕೆ ಪ್ರಮುಖ ಕಾರಣ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿರುವುದನ್ನು ಗಮನಿಸಿ ಇದೀಗ ರಾಜ್ಯದ ಸರ್ಕಾರಿ ಹಾಗೂ ಖಾಸಗಿಯ ಒಟ್ಟು 27 ಕಾಲೇಜುಗಳಿಗೆ ಆಯೋಗ ದಂಡ ವಿಧಿಸಿದೆ. ಹೌದು ಮೆಡಿಕಲ್ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ದಂಡ ವಿಧಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು ರಾಜ್ಯದ ಸರ್ಕಾರಿ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ದಂಡ ವಿಧಿಸಿದೆ. ಒಟ್ಟು 27 ಮೆಡಿಕಲ್ ಕಾಲೇಜುಗಳಿಗೆ ಆಯೋಗದ ದಂಡ ವಿಧಿಸಿದೆ ಎನ್ನಲಾಗಿದೆ. 11 ಖಾಸಗಿ ಕಾಲೇಜು ಸೇರಿ 27 ಕಾಲೇಜು ಗಳಿಗೆ ದಂಡ ವಿಧಿಸಲಾಗಿದೆ ಒಟ್ಟು 2 ಲಕ್ಷದಿಂದ 15 ಲಕ್ಷದವರೆಗೆ ದಂಡ ವಿಧಿಸಲಾಗಿದೆ. ಯಾವ್ಯಾವ ಕಾಲೇಜುಗಳಿಗೆ ದಂಡ? 1) ಬೆಂಗಳೂರಿನ ESI ಆಸ್ಪತ್ರೆ, ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಮತ್ತು ಅಂಬೇಡ್ಕರ್ ಮೆಡಿಕಲ್ ಕಾಲೇಜು. 2) ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ,ESI ಆಸ್ಪತ್ರೆ, ಮಹದೇವಪ್ಪ…

Read More

ಶಿವಮೊಗ್ಗ : ಕೊಲೆ ಆರೋಪಿ ಒಬ್ಬನನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಯ ಕಾಲಿಗೆ ಗುಂಡೇಟು ಬಿದ್ದಿದೆ. ವಿನೋಬ ನಗರ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.ರಜಾಕ್ ಎಂಬಾತ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಆರೋಪಿಯಾಗಿದ್ದ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕೊಲೆ ಪ್ರಕರಣದಲ್ಲೂ ಈತನ ವಿರುದ್ಧ ಪ್ರಕರಣಗಳಿವೆ. ಆರೋಪಿ ಮೇಲೆ ಐದು ಪ್ರಕರಣಗಳಿದ್ದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ‌ಅನೇಕ ದಿನಗಳಿಂದ ನ್ಯಾಯಾಲಯಕ್ಕೂ ಹಾಜಾರಾಗಿರಲಿಲ್ಲ. ಇದೇ ತನಿಖೆಯಲ್ಲಿದ್ದ ಹೊಳೆಹೊನ್ನೂರು ಪೊಲೀಸ್ ಠಾಣೆ ಪಿಐ ಲಕ್ಷ್ಮಿಪತಿ ಅವರಿಗೆ ಆರೋಪಿ ಕುಂಸಿ ಪೊಲೀಸ್​ ಠಾಣೆ ವ್ಯಾಪ್ತಿಯ ತ್ಯಾಜುವಳ್ಳಿಯ ಕಾಡಿನಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿಖರ ಮಾಹಿತಿ ಬೆನ್ನಲ್ಲೇ ಆತನನ್ನು ಬಂಧಿಸಲು ಪಿಐ ಮತ್ತು ಸಿಬ್ಬಂದಿ ತೆರಳಿದ್ದರು. ಈ…

Read More

ಮೈಸೂರು : ‘ಮುಡಾ’ ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ. ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಿದ್ದರಾಮಯ್ಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣರಿಂದ ಇದೀಗ ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧವು ದೂರು ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಡಿಸಿ, ತಹಸಿಲ್ದಾರ್, ಉಪನೊಂದಣಾಧಿಕಾರಿ ಮುಡಾ ಅಧಿಕಾರಿಗಳ ಶಾಮೀಲು ಎಂದು ದೂರು ದಾಖಲಿಸಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ…

Read More

ಶಿವಮೊಗ್ಗ : ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಪಿಸಿ ಹಾಗು ವ್ಯಾಪಾರಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸಂಚಾರಿ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ರಮೇಶ್ ಬೀದಿ ಬದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣ ಹಲ್ಲೆಗೆ ಒಳಗಾದ ವ್ಯಾಪಾರಿಯನ್ನು ಮೆಗಾನ್ ಆಸ್ಪತ್ರೆಗೆ ದಾಖಲೆ ಸಿಹಿ ಚಿಕಿತ್ಸೆ ನೀಡಲಾಗುತ್ತಿದೆ. ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದವನ ಜೊತೆ ಪಿಸಿ ವಾಗ್ವಾದ ನಡೆಸಿದ್ದಾರೆ. ಬಸವರಾಜ ಎನ್ನುವ ವ್ಯಾಪಾರಿ ಮೇಲೆ ಪಿಸಿ ರಮೇಶ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ಬೀದಿ ಬದಿ ವ್ಯಾಪಾರಿ ಬಸವರಾಜ್ ತಲೆಯಿಂದ ರಕ್ತ ಸೋರುತ್ತಿದೆ. ಗಾಯಾಳು ಬಸವರಾಜ ನಾನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪಿ ಸಿ ರಮೇಶ್ ವರ್ತನೆಯನ್ನು ಖಂಡಿಸಿ, ಇದೀಗ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹಲ್ಲೆ ನಡೆಸಿದ ಕಾನ್ಸ್ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಎಸ್ ಪಿ ಭರವಸೆಯ…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುತ್ತಿದ್ದು ಅಲ್ಲಿನ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೇ ರೀತಿಯಾಗಿ ಭಾರಿ ಮಳೆ ಮುಂದುವರೆದರೆ ಇನ್ನೂ ಕೆಲವು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಉಡುಪಿಯಲ್ಲಿ ಜನ ಜೀವನ ಅಸ್ತವ್ಯಸ್ಥ ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ…

Read More