Author: kannadanewsnow05

ಮಂಗಳೂರು : ಪ್ಲ್ಯಾಟ್​ನಲ್ಲಿ 12 ಕೆ.ಜಿ ಗಾಂಜಾ ಶೇಖರಿಸಿಟ್ಟು ಸರಬರಾಜು ಮಾಡಲು ಯೋಜಿಸಿದ್ದ ಕೇರಳದ 11 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಪ್ಸಿನ್, ಮುಹಮ್ಮದ್ ಸ್ವಾನೀದ್, ನಿಬಿನ್.ಟಿ. ಕುರಿಯನ್, ಮುಹಮ್ಮದ್ ಕೆ.ಕೆ., ಮುಹಮ್ಮದ್ ಹನಾನ್, ಮುಹಮ್ಮದ್ ಶಾಮಿಲ್, ಅರುಣ್ ತೋಮಸ್, ಮುಹಮ್ಮದ್ ನಿಹಾಲ್ ಸಿ, ಮೊಹಮ್ಮದ್ ಜಾಸೀಲ್ ವಿ ಮತ್ತು ಸಿದಾನ್.ಪಿ. ಎಂದು ತಿಳಿದುಬಂದಿದೆ. ಸೆ.26ರಂದು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಫ್ಸಿನ್, ಮೊಹಮ್ಮದ್ ಸ್ವಾನೀದ್ ಹಾಗೂ ಇತರರು ಗಾಂಜಾವನ್ನು ವಾಣಿಜ್ಯ ಪ್ರಮಾಣದಲ್ಲಿ ಖರೀದಿಸಿಕೊಂಡು ಬಂದಿದ್ದರು. ಇದನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ಮಂಗಳೂರು ನಗರದ ಅತ್ತಾವರ ಕಾಪಿಗುಡ್ಡೆ ಮಸೀದಿ ಬಳಿಯಿರುವ ಕಿಂಗ್ಸ್ ಕೋರ್ಟ್ ಅಪಾರ್ಟ್‌ಮೆಂಟ್‌ನ ಪ್ಲಾಟ್​ನಲ್ಲಿ ಇರಿಸಿದ್ದರು. ಈ ಕುರಿತು ಮಾಹಿತಿ ಪಡೆದ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಬಿ.ಎ ವ್ಯಾಸಂಗ ಮಾಡುತ್ತಿದ್ದಾರೆ. ಒಡಿಶಾ ಮೂಲಕ ಖರೀದಿಸಿ ತಂದಿದ್ದ 2,45,280 ರೂ. ಅಂದಾಜು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಂತ್ರಕ್ಕೆ ಸಿಲುಕಿ ಬಿಹಾರ ಮೂಲದ ರಾಜು ಪಾಸ್ವಾನ್ (23) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸಂತೋಷ್ ಎಂಬವರಿಗೆ ಸೇರಿದ ಪೌಡರ್ ಕಂಪನಿಯಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ 12:30 ಕಂಪನಿಯಲ್ಲಿ ರಾಜು ಕೆಲಸ ಮಾಡುತ್ತಿದ್ದ ವೇಳೆ ಪೌಡರ್ ಮಿಕ್ಸಿಂಗ್ ಮಾಡುವ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಗಲಕುಂಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಬಾಗಲಕೋಟೆ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇದೀಗ ಬಾಗಲಕೋಟೆಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಸಾವನಪ್ಪಿದ್ದಾರೆ. ನಗರದ ಕಿಲ್ಲಾ ಓಣಿಯಲ್ಲಿ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಮೇಲ್ಚಾವಣಿ ಕುಸಿದು ವೃದ್ದೆ ಒಬ್ಬರಿಗೆ ತಲೆಗೆ ಮತ್ತು ಕೈಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಶಶಿಕಲಾ ದಾಬಡೆ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿದ್ದು, ಪುತ್ರ ವೆಂಕಟೇಶ್ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯ ಅದ್ಯಂತ 340ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ ಎಂದು ವರದಿಯಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಕಲ್ಬುರ್ಗಿ ಸುತ್ತಮುತ್ತಲಿನ ನದಿಗಳು ಸಹ ಭಾರಿ ಪ್ರಮಾಣದಲ್ಲಿ ತುಂಬಿ ಹರಿಯುತ್ತಿವೆ ಇದೀಗ ಕಲ್ಬುರ್ಗಿ ಜಿಲ್ಲೆಯಲ್ಲಿ ಕಾಗಿನಾ ನದಿ ತುಂಬಿ ಹರಿಯುತ್ತಿದ್ದರಿಂದ ಜಿಲ್ಲೆಯ ಮಳಕೇಡದಉತ್ತರಾದಿ ಮಠದಲ್ಲಿರುವ ಜಯತೀರ್ಥರ ಮೂಲ ಬೃಂದಾವನ ಸಂಪೂರ್ಣವಾಗಿ ಜಲಾವೃತವಾಗಿದೆ. ಹೌದು ಕಲ್ಬುರ್ಗಿಯಲ್ಲಿ ಭಾರಿ ಪ್ರವಾಹಕ್ಕೆ ಮಳಖೇಡದ ಉತ್ತರಾದಿ ಮಠದ ಜಯತೀರ್ಥರ ಮೂಲ ಬೃಂದಾವನ ಜಲಾವೃತವಾಗಿದೆ. ಕಾಗಿನಾ ನದಿ ತಡದಲ್ಲಿರುವ ಈ ಒಂದು ಉತ್ತರಾದಿ ಮಠಕ್ಕೆ ಮಠದ ಆವರಣದಲ್ಲಿ ಸಂಪೂರ್ಣವಾಗಿ ನದೀ ನೀರು ತುಂಬಿ ಹರಿಯುತ್ತಿದೆ ಈ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿ ವಿಜಯಪುರ, ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಕಲಬುರ್ಗಿಯಲ್ಲಿ ನದಿ ದಡದಲ್ಲಿರುವ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ನದಿ ದಡದಲ್ಲಿರುವ ಹಲವು ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ತಕ್ಷಣ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಬೇಕು, ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಶೀಘ್ರದಲ್ಲೇ ನಾನೂ ಸಹ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಗಳ ಬಗ್ಗೆ ಪರಿಶೀಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.

Read More

ಕಲಬುರ್ಗಿ : ಕಲ್ಬುರ್ಗಿ ವಿಜಯಪುರ, ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಕಲಬುರ್ಗಿಯಲ್ಲಿ ನದಿ ದಡದಲ್ಲಿರುವ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಇದೀಗ ಕಲ್ಬುರ್ಗಿಯಲ್ಲಿ ಪ್ರವಾಹದ ನೀರು ಕೊಟ್ಟಿಗೆಗೆ ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿರುವ ಘೋರ ದುರಂತ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಟ್ಟೂರ್ ಗ್ರಾಮದಲ್ಲಿ ನಡೆದಿದೆ. ಹೌದು ಹಳ್ಳದ ನೀರು ಕೊಟ್ಟಿಗೆಗೆ ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಹಳ್ಳದ ನೀರು ಕೊಟ್ಟಿಗೆಗೆ ನೀರಿಗೆ ನುಗ್ಗಿದೆ. ಚಿಂಚೋಳಿ ತಾಲೂಕಿನ ಜಟ್ಟೂರ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಕೊಟ್ಟಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಸುಮಾರು 42ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಏಕಾಏಕಿ ಪ್ರವಾಹದ ರೀತಿಯಲ್ಲಿ ನೀರು ನುಗ್ಗಿದ್ದರಿಂದ ಜಾನುವಾರುಗಳನ್ನ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. 42ಕ್ಕೂ ಹೆಚ್ಚು ಹಸುಗಳು ಎತ್ತುಗಳು ಸಾವನ್ನಪ್ಪಿರುವ ಹಿನ್ನೆಲೆ ರೈತ ಕಂಗಾಲಾಗಿದ್ದಾನೆ.

Read More

ನವದೆಹಲಿ : ಆರ್‌ಎಸ್‌ಎಸ್‌ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ “ಮನ್ ಕಿ ಬಾತ್” ನ 126 ನೇ ಆವೃತ್ತಿಯಲ್ಲಿ ರಾಷ್ಟ್ರಕ್ಕೆ ಸ್ಪೂರ್ತಿದಾಯಕ ಸಂದೇಶವನ್ನು ನೀಡಿದರು. ಈ ಬಾರಿ ಅವರು ಗಾಂಧಿ ಜಯಂತಿ, ಭಗತ್ ಸಿಂಗ್, ಲತಾ ಮಂಗೇಶ್ಕರ್ ಮತ್ತು ಆರ್ಎಸ್ಎಸ್ನ ಶತಮಾನೋತ್ಸವವನ್ನು ನೆನಪಿಸಿಕೊಂಡರು. ಸ್ವಾವಲಂಬನೆ ಮತ್ತು ಸ್ಥಳೀಯ ಉತ್ಪನ್ನಗಳ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಹಬ್ಬದ ಸಮಯದಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವುದು ಸಂಪ್ರದಾಯಗಳನ್ನು ಬಲಪಡಿಸುವುದಲ್ಲದೆ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು. ಛಠ್ ಹಬ್ಬವನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯಲ್ಲಿ ಸೇರಿಸುವ ಉಪಕ್ರಮ, ದೇಶದ ಕರಕುಶಲ ಮತ್ತು ಕೈಮಗ್ಗ ಉದ್ಯಮಗಳಲ್ಲಿನ ನಾವೀನ್ಯತೆಗಳು ಮತ್ತು ಯುವಕರಿಗೆ ಭಗತ್ ಸಿಂಗ್ರಂತಹ ವೀರರ ಸ್ಫೂರ್ತಿಯನ್ನು ಅವರು ಹಂಚಿಕೊಂಡರು. ದೀಪಾವಳಿಗೆ ಮುಂಚಿತವಾಗಿ, ಪ್ರಧಾನಿ ಪ್ರತಿಯೊಬ್ಬ ನಾಗರಿಕರೂ…

Read More

ಬೆಂಗಳೂರು : ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಗಣೇಶ ಮೆರವಣಿಗೆಯ ಮೇಲೆ ಕಲ್ಲೆಸೆತ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮದ್ದೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್ ಸಹ ನಡೆಸಿದ್ದರು. ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಿ ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮದ್ದೂರಿನಲ್ಲಿ ನಡೆದಂತಹ ಗಣೇಶ ಮೆಸವಣಿಗೆ ವೇಳೆ ಕಲ್ಲೇಸೆತ ಹಾಗೂ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತ್ಯಶೋಧನಾ ಸಮಿತಿ ಬಿ.ವೈ ವಿಜಯೇಂದ್ರ ಗೆ ವರದಿ ಸಲ್ಲಿಸಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವರದಿ ಸಲ್ಲಿಸಲಾಯಿತು. ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ನೇತೃತ್ವದ ಈ ಒಂದು ಸತ್ಯಶೋಧನಾ ಸಮಿತಿಯಲ್ಲಿ…

Read More

ಬೆಂಗಳೂರು : ಸೆಪ್ಟೆಂಬರ್ 29ರಿಂದ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಸೀಸನ್ 12 ಶುರುವಾಗಲಿದೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಇವರೇ ಈ ಬಾರಿಯ ಬಿಗ್ ಬಾಸ್ ಸ್ಪರ್ಧಿಗಳು ಅಂತ ಹೆಸರು ಫೋಟೋ ವೈರಲ್ ಆಗಿವೆ. ಆದರೆ ಇದರ ಮಧ್ಯ ಕಿಡಿಗಿಡಿ ಒಬ್ಬ ಬಿಗ್ ಬಾಸ್ ಗೆ ನನ್ನನ್ನು ಕರೆಯಲಿಲ್ಲ ಅಂದರೆ ಬಾಂಬ್ ಇಡುತ್ತೇನೆ ಎಂದು ಹೇಳಿಕೆ ನೀಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ಇನ್ಸ್ಟಾಗ್ರಾಮ್ ಅಲ್ಲಿ ಯುವಕನಿಂದ ಬೆದರಿಕೆ ವಿಡಿಯೋ ವೈರಲ್ ಆಗಿದ್ದು ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಆದರೆ ನಾನು ಬಾಂಬ್ ಇಡುತ್ತೇನೆ ಮಮ್ಮಿ ಅಶೋಕ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಒಂದು ವಿಡಿಯೋ ಪೋಸ್ಟ್ ಮಾಡಿದ್ದು ವಿಡಿಯೋ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಸ್ವಯಂ ಪ್ರೇರಿತವಾಗಿ NCR ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಶೋಕ್ ಎಂಬ ಯುವಕನನ್ನು ಕರೆದು ಪೊಲೀಸರು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈ ರೀತಿ…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ರಹಸ್ಯವೊಂದು ಬಯಲಾಗಿದ್ದು, ಡಿಎನ್‌ಎ ಪರೀಕ್ಷೆಯಲ್ಲಿ ಆತನೇ ಮಗುವಿನ ತಂದೆ ಎಂದು ದೃಢಪಟ್ಟಿದೆ. ಹೌದು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಪ್ರಕರಣ ಈಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ ಕೃಷ್ಣ ಜೆ.ರಾವ್ ಎಂಬುದು ಡಿಎನ್​ಎ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ಯುವತಿಯ ಕುಟುಂಬದವರು ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆಪಿ ನಂಜುಂಡಿ ತಿಳಿಸಿದ್ದಾರೆ. ಆರೋಪಿ ಕೃಷ್ಣ ಜೆ ರಾವ್ ಹಾಗೂ ಸಂತ್ರಸ್ತೆ ಶಾಲಾ ದಿನಗಳಿಂದಲೂ ಪರಿಚಿತರು ಎನ್ನಲಾಗಿದೆ. ಮದುವೆಯಾಗುವ ಭರವಸೆ ನೀಡಿ ಆರೋಪಿಯು ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಪರಿಣಾಮವಾಗಿ ಆಕೆ ಗರ್ಭವತಿಯಾಗಿದ್ದಳು. ನಂತರ ಕುಟುಂಬದವರು ಮಾತುಕತೆ ನಡೆಸಿ ಮದುವೆ ಮಾಡುವ ಭರವಸೆ ನೀಡಿದ್ದರು.…

Read More