Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪ ಚುನಾವಣೆ ಇದೀಗ ಭಾರಿ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಪರವಾಗಿ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಸಲಿದ್ದು,, ಇನ್ನೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಮಗಳು ಅನುಸೂಯ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಸುದ್ದಿ ಹರಿದಾಡಿತ್ತು. ಇದೀಗ ಈ ಒಂದು ಊಹಾಪೋಹಗಳಿಗೆ ಸಂಸದ ಡಾ.ಸಿಎನ್ ಮಂಜುನಾಥ್ ಅವರು ತೆರೆ ಎಳೆದಿದ್ದು, ನೂರಕ್ಕೆ ನೂರರಷ್ಟು ಅನುಸೂಯ ಈ ಒಂದು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಅನುಸೂಯ ಸ್ಪರ್ಧೆ ವಿಚಾರವಾಗಿ ನಾನು ಸ್ಪಷ್ಟಪಡಿಸುತ್ತಿದ್ದೇನೆ ನೂರಕ್ಕೆ ನೂರರಷ್ಟು ಅನುಸೂಯ ಸ್ಪರ್ಧಿಸುವುದಿಲ್ಲ ಎಂದರು. ಬೆಂಗಳೂರಿನಲ್ಲಿ ಬಿಜೆಪಿಯ ಸಂಸದ ಡಾ.ಸಿ. ಮಂಜುನಾಥ್ ಸ್ಪಷ್ಟನೆ ನೀಡಿದ ಅವರು, i ವಿಷಯ ಕೆಲ ಮಾಧ್ಯಮಗಳಲ್ಲಿ ಈ ಸುದ್ದಿ ಬಂದಿದ್ದು ನನಗೆ ತುಂಬಾ ಮುಜುಗರ ತರಿಸಿದೆ ಯಾವುದೇ ಕಾರಣಕ್ಕೂ ಅನುಸೂಯ ಅವರು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ…
ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಶಿವಮೊಗ್ಗ : ರಾಜ್ಯದಲ್ಲಿ ಝೀಕಾ ವೈರಸ್ ನಿಂದ ಇಂದು ಶಿವಮೊಗ್ಗದಲ್ಲಿ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ 74 ವರ್ಷದ ವೃದ್ಧರು ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಇದೀಗ ಅದೆ ಜಿಲ್ಲೆಯಲ್ಲಿ ಯುವಕನಿಗೆ ಝೀಕಾ ಸೋಂಕು ದೃಢವಾಗಿದೆ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಝೀಕಾ ವೈರಸ್ ಪತ್ತೆಯಾಗಿದ್ದು, ಸಾಗರದ ಗಾಂಧಿನಗರದ ಯುವಕನಿಗೆ ಝೀಕಾ ವೈರಸ್ ದೃಢವಾಗಿದೆ ಟ್ರಾವೆಲ್ ಹಿಸ್ಟರಿ ಇಲ್ಲದ ಯುವಕನಿಗೆ ಝೀಕಾ ವೈರಸ್ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಸದ್ಯ ಯುವಕನೇಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು. ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು ಹೋಗಿದ್ದರು. ನಿನ್ನೆ ಮನೆಯಲ್ಲಿ 74 ವರ್ಷದ ವೃದ್ಧರು ಝೀಕಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಶಿವಮೊಗ್ಗದಲ್ಲಿ ಜೀವ…
ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಎಂದು ಕಾರಣ ಹೇಳಿ, ಸುಮಾರು 10 ಗಂಟೆಗಳ ಕಾಲ ಪ್ರಯಾಣಿಕರನ್ನು ವಿಮಾನದಲ್ಲಿ ಕೂಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿಗೆ ಆಗಮಿಸಿದ ನಂತರ ಪ್ರಯಾಣಿಕರು ಸ್ಪೈಸ್ ಜೆಟ್ ಏರ್ಲೈನ್ಸ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಹೌದು ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಊಟ ತಿಂಡಿ ಕೊಡದೆ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ.ಸೈನ್ಸ್ ಜಾಟ್ ನಲ್ಲಿ ಯಾರು ಪ್ರಯಾಣಿಸಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಸತತವಾಗಿ 10 ಗಂಟೆಗಳ ಕಾಲ ವಿಮಾನದಲ್ಲಿ ಕೂರಿಸಿದ್ದಾರೆ ವಿಮಾನದಲ್ಲಿ ವಯಸ್ಸಾದವರು ಮಹಿಳೆಯರು ಸೇರಿದಂತೆ ತುಂಬಾ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಸ್ಪೈಸ್ ಜೆಡ್ ವಿಮಾನದಲ್ಲಿ ಯಾರು ಪ್ರಯಾಣಿಸಬೇಡಿ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಗಡೆ ಬಂದ ನಂತರ ಆಕ್ರೋಶ ಹೊರಹಾಕಿದರು.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಡೆವಿಲ್ ಚಲನಚಿತ್ರದ ನಿರ್ದೇಶಕ ಮಿಲನ ಪ್ರಕಾಶ್ ಅವರು ಪೊಲೀಸರ ಎದುರಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಆದರೆ ಪೊಲೀಸರು ಎಂದು ಕೂಡ ವಿಚಾರಣೆಗೆ ಬರಬೇಕು ಎಂದು ತಿಳಿಸಿದಾಗ ಮಿಲನ ಪ್ರಕಾಶ್ ಅವರು ಇದೀಗ ವಿಚಾರಣೆಗೆ ಆಗಮಿಸಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಬ್ಬರನ್ನು ವಿಚಾರಣೆ ನಡೆಸಲಿರುವ ಪೊಲೀಸರು. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಇಂದು ವಿಚಾರಣೆ ನಡೆಯಲಿದೆ. ಬಿಜೆಪಿ ಶಾಸಕನ ಕಾರು ಚಾಲಕ ಕಾರ್ತಿಕ್ ಪುರೋಹಿತ್ ಹಾಗೂ ನಿರ್ದೇಶಕ ಮಿಲನ ಪ್ರಕಾಶ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ನಿನ್ನೆ ಸುಮಾರು ಒಂದುವರೆ ಗಂಟೆ ವಿಚಾರಣೆಯನ್ನು ಮಿಲನ ಪ್ರಕಾಶ ಅವರು ಎದುರಿಸಿದ್ದರು, ದರ್ಶನ್ ಜೊತೆಗಿನ ಹಣಕಾಸಿನ ವ್ಯವಹಾರದ ಬಗ್ಗೆ ವಿಚಾರಣೆ ಮಾಡಲಾಗುತ್ತದೆ.ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.ಇಂದು ಕೂಡ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ.
ಬಾಗಲಕೋಟೆ : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ್ದು ಇದರಿಂದ ಅನೇಕ ಜನರ ಪ್ರಾಣಕ್ಕೆ ಕುತ್ತು ತಂದೊಡ್ಡುವ ಸಾಧ್ಯತೆಗಳು ಇವೆ ಇದೀಗ ಸ್ಪೋಟಕ ಮಾಹಿತಿ ಒಂದು ಬಹಿರಂಗ ವಾಗಿದ್ದು ಬಾಗಲಕೋಟೆ ಜಿಲ್ಲೆ ಒಂದರಲ್ಲೇ 384 ನಕಲಿ ವೈದ್ಯರು ಇರುವ ಮಾಹಿತಿ ಬಹಿರಂಗವಾಗಿದೆ. ಹೌದು ಬಾಗಲಕೋಟೆ ಜಿಲ್ಲೆಯಲ್ಲಿ ಹೆಚ್ಚಾದ ನಕಲಿ ವೈದ್ಯರ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ.ಬಾಗಲಕೋಟೆ ಜಿಲ್ಲೆಯಲ್ಲಿ 384 ನಕಲಿ ವೈದ್ಯರಿರುವ ಮಾಹಿತಿ ಬಹಿರಂಗವಾಗಿದ್ದು, ನಕಲಿ ವೈದ್ಯರ ವಿರುದ್ಧ ಜಿಲ್ಲಾಡಳಿತದಿಂದ ಇದೀಗ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ವಿದ್ಯಾರ್ಥಿ ದೆಸೆ ಅತ್ಯಂತ ಅಮೂಲ್ಯ. ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್,ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕುವ ಮೂಲಕ ಆತ್ಮಹತ್ಯೆಗೆ ಕಾರಣವಾದ ಶಿಕ್ಷಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ವಿದ್ಯಾರ್ಥಿನಿಯ ಸಾವಿನ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಖಾಸಗಿ ಪ್ರೌಢ ಶಾಲೆ ಶಿಕ್ಷಕರಾದ ರೂಪೇಶ್ ಮತ್ತು ಸದಾನಂದ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವಿದ್ಯಾರ್ಥಿ ದೆಸೆ ಅತ್ಯಂತ ಅಮೂಲ್ಯ. ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯಪಟ್ಟಿದೆ. ಸಹಪಾಠಿ ಒಬ್ಬರಿಗೆ ಚುಂಬಿಸುವ ವಿಡಿಯೋವನ್ನು ಪ್ರಚಾರ ಮಾಡುವುದಾಗಿ ಹೆದರಿಕೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಸಾವಿಗೆ ಕಾರಣರಾಗಿದ್ದ ಆರೋಪದಲ್ಲಿ ದಾಖಲಾದ ಎಫ್ಐಆರ್ ರದ್ದು ಕೋರಿ ಇಬ್ಬರು ಶಿಕ್ಷಕರು ಅರ್ಜಿ ಸಲ್ಲಿಸಿದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಘಟನೆ ಕುರಿತು ವಿಚಾರಣೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ. ಹದಿಹರೆಯದ…
ಬೆಳಗಾವಿ : ಇತ್ತೀಚಿಗೆ ಮಹಾರಾಷ್ಟ್ರದ ಲೊನಾವಾಲಾ ದುರಂತದಲ್ಲಿ ಮಹಿಳೆ ಮಕ್ಕಳು ಸೇರಿ 6 ಜನರು ನೀರು ಪಾಲಾಗಿದ್ದರು.ಇದರ ಬೆನ್ನಲ್ಲೆ ಇದೀಗ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ. ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಹೀಗಾಗಿ ಸಹಜವಾಗಿ ಈ ಒಂದು ಸಮಯದಲ್ಲಿ ಫಾಲ್ಸ್ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗಿದೆ. ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.
ರಾಯಚೂರು : ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಹೌದು ನಿನ್ನೆ ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಮಾನ್ವಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ನೀರು ಶುದ್ಧಿಕರಣಕ್ಕಾಗಿ ಟ್ಯಾಂಕ್ ನಲ್ಲಿ ಪುಡಿ ಬಳಕೆಯೆ ಕಾರಣ ಎಂದು ಆರೋಪ ಕೇಳಿ ಬಂದಿದೆ. ಅಲ್ಲದೆ ಇದೇ ನೀರಿನಿಂದ ಅಡುಗೆ ತಯಾರಿಸಿದ ಸಿಬ್ಬಂದಿಗಳು ಮಕ್ಕಳಿಗೆ ನೀಡಿದ್ದಾರೆ.ಊಟದ ಬಳಿಕ ಮಕ್ಕಳಲ್ಲಿ ವಾಂತಿ ಹೊಟ್ಟೆ ನೋವು ಭೇದಿ ಕಾಣಿಸಿಕೊಂಡಿದೆ. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ಆರು ಮಕ್ಕಳು ಡೆಂಘಿಗೆ ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಕೂಡ ಡೆಂಗಿ ಸೋಂಕಿಗೆ 11 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಹೌದು ಅಂಜನಾಪುರದ 11 ವರ್ಷದ ಬಾಲಕ ಗಗನ್ ಸಾವನ್ನಪ್ಪಿದ್ದಾನೆ. ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಗಗನ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಬಾಲಕ ಗಗನ್ ಓದುತ್ತಿದ್ದ ಚಲನೆಗಳಿಂದ ಗಗನ್ ಡೆಂಗಿ ಜ್ವರದಿಂದ ಬಳಲುತ್ತಿದ್ದ ಎನ್ನಲಾಗಿದೆ. ಇನ್ನೂ ಮೃತ ಬಾಲಕನ ಪೋಷಕರು ಶಾಲೆಯಲ್ಲಿ ಸರಿಯಾದ ರೀತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತಿಲ್ಲ. ಹೀಗಾಗಿ ರೋಗ ಹರಡುವ ಸಾಧ್ಯತೆ ಇದೆ ಹಾಗಾಗಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.