Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೊಬೈಲ್ ಚಾರ್ಜಿಂಗ್ ಹಾಕಿದ ಸಂದರ್ಭದಲ್ಲಿ ಅನೇಕ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಿದರು ಸಹ ನಿರ್ಲಕ್ಷಕ್ಕೆ ತಮ್ಮ ಜೀವ ಕಳೆದುಕೊಳ್ಳುತ್ತಾರೆ. ಇದೀಗ ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ಗೆ ಯುವಕ ಸಾವನ್ನಪ್ಪಿದ್ದಾನೆ. ಹೌದು ಬೀದರ್ ಮೂಲದ ಶ್ರೀನಿವಾಸ್ ಎನ್ನುವ ವಿದ್ಯಾರ್ಥಿ ಸಾವನಪ್ಪಿದ್ದಾನೆ ಮೃತ ಶ್ರೀನಿವಾಸ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಎನ್ನಲಾಗಿದೆ. ಮೊಬೈಲ್ ಚಾರ್ಜಿಂಗ್ ವೈರ್ ಇಂದ ವಿದ್ಯುತ್ ಪ್ರವಹಿಸಿ ಶ್ರೀನಿವಾಸ್ ಎನ್ನುವ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ವೇಳೆ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ. ಕರೆಂಟ್ ಶಾಕ್ ನಿಂದ ರೂಮ್ನಲ್ಲಿ ವಿದ್ಯಾರ್ಥಿ ಶ್ರೀನಿವಾಸ ಬಿದ್ದಿದ್ದ. ಈ ವೇಳೆ ಊಟಕ್ಕೆ ಕರೆಯಲು ಬಂದಿದ್ದ ಮತ್ತೊಬ್ಬ ವಿದ್ಯಾರ್ಥಿಗೂ ಕರೆಂಟ್ ಶಾಕ್ ತಗುಲಿದೆ. ಅದೃಷ್ಟವಶತ ಪ್ರಾಣಾಪಾಯದಿಂದ ಪರಗಿದ್ದಾನೆಮ್ ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಪಿಜಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿ…
ಉತ್ತರಪ್ರದೇಶ : ಉತ್ತರಪ್ರದೇಶದ ಹತ್ರಾಸ್ ನಲ್ಲಿ ಎರಡು ದಿನಗಳ ಹಿಂದೆ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಾ ದುರಂತದಿಂದ 120ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಅನೇಕ ಜನರು ಗಾಯಗೊಂಡಿದ್ದರು. ಘಟನೆ ಬಳಿಕ ಇಂದು ಬೋಲೇ ಬಾಬಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಒಂದು ದುರಂತದಿಂದ ನನಗೆ ಬಹಳ ಸಂಕಟವಾಗಿದೆ ಎಂದು ತಿಳಿಸಿದರು. ನಾಲ್ಕು ದಿನಗಳ ಬಳಿಕ ಬೋಲೇ ಬಾಬಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮೃತರ ಕುಟುಂಬಗಳು ಗಾಯಾಳುಗಳಿಗೆ ಸಹಾಯ ಮಾಡುತ್ತೇನೆ. ಈ ಘಟನೆಗೆ ಕಾರಣರಾದವರನ್ನ ಸರ್ಕಾರ ಬಿಡುವುದಿಲ್ಲ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಕಾಲ್ತುಳಿತದ ದೊರೆತದ ಬಗ್ಗೆ ಬೋಲೇ ಬಾಬಾ ಮೊದಲ ಪ್ರತಿಕ್ರಿಯೆ ನೀಡಿದರು. ಆರೋಪಿ ಶರಣಾಗತಿ 121 ಜನರ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಎಸ್ಐಟಿ, ಎಸ್ಟಿಎಫ್ ಮತ್ತು ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಅವರ ವಕೀಲ ಎಪಿ ಸಿಂಗ್ ಶುಕ್ರವಾರ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. “ಹತ್ರಾಸ್ ಪ್ರಕರಣದಲ್ಲಿ ಎಫ್ಐಆರ್ನಲ್ಲಿ ಹೆಸರಿಸಲಾದ ದೇವ್…
ಶಿವಮೊಗ್ಗ : ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು. ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು ಹೋಗಿದ್ದರು. ನಿನ್ನೆ ಮನೆಯಲ್ಲಿ 74 ವರ್ಷದ ವೃದ್ಧರು ಝೀಕಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಶಿವಮೊಗ್ಗದಲ್ಲಿ ಜೀವ ವೈರಸ್ ಗೆ 74 ವರ್ಷದ ವೃದ್ಧರು ಮೊದಲ ಬಲಿಯಾಗಿದ್ದಾರೆ.ಶಿವಮೊಗ್ಗದ ಗಾಂಧಿನಗರದ ಮನೆಯಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇಷ್ಟು ದಿನ ಮಹಿಳೆಯರಿಗೆ 2000 ನೀಡುತ್ತಾ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಇನ್ನು ಮುಂದೆ ಅವರ ಖಾತೆಗೆ 2,000 ಹಣ ಬರಲಿದೆ. ಹೌದು ಈ ಕುರಿತು ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಅದರಂತೆ ಇನ್ನು ಮುಂದೆ ಮಹಿಳೆಯರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಅಡಿ ಅವರ ಖಾತೆಗೆ 2000 ಹಣ ಬಂದು ಬೀಳಲಿದೆ. ಅದರಿಂದ ಸಹಜವಾಗಿ ಲಿಂಗತ ಅಲ್ಪಸಂಖ್ಯಾತರ ಆರ್ಥಿಕ ಮಟ್ಟ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ. ಅರ್ಜಿ ಸಲ್ಲಿಸುವುದು ಹೇಗೆ? ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ…
ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ಬಹುಮುಖ್ಯ ಹಕ್ಕಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿಪಾಸ್ತಿಗಳಿಗೆ ಹಾನಿಯಾಗುವುದು ಸಹಜ ಹಾಗಂತ ಪ್ರತಿಭಟನೆಗಳನ್ನು ಪ್ರಯೋಗ ಶಾಲೆಯಲ್ಲಿ ನಡೆಸಲು ಆಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿತು. ಜೂನ್ 20ರಂದು ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ವಿಚಾರಣೆ ನಡೆಸಿದ ಕೋರ್ಟ್ ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು. ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ…
ಉಡುಪಿ : ಉಡುಪಿ ಜಿಲ್ಲೆಯ ಆದ್ಯಂತ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಆದರೆ ಯುಜಿ, ಪಿಜಿ, ಐಟಿಐ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇರಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಉತ್ತರ ಕನ್ನಡದಲ್ಲಿ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಗಂಗೂಬಾಯ್ ಮಾನಕರ್ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ,ಅಣ್ಣಾವರ,ಹಾಗೂ ಅಂಕೋಲ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ದಾಪುರ,ಮುಂಡಗೋಡ ತಾಲೂಕಿನ ಕಾಲೇಜಿಗೆ ಕೂಡ ರಜೆ ಘೋಷಿಸಲಾಗಿದೆ.
ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಇಂದಿನಿಂದ ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ ಆರಂಭಿಸಲಾಗುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹೌದು ಇಂದಿನಿಂದ ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸುತ್ತಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲು ಸೇರ್ಪಡೆಗೊಳಿಸಲಾಗಿದೆ. ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು.ಇಂದಿನಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಿಗೆ ಹೆಚ್ಚುವರಿ 15 ಮೆಟ್ರೋ ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತದೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು, ಅಗ್ರಹಾರದ (ಐಟಿಪಿಎಲ್) ವರೆಗೆ, 4 ರೈಲುಗಳು ವೈಟ್‌ಫೀಲ್ಡ್ ಮತ್ತು 1 ರೈಲು ಬೈಯಪ್ಪನಹಳ್ಳಿ ಕಡೆಗೆ ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರ ಬೇಡಿಕೆ ಪೂರೈಸಲು ಪ್ರಸ್ತುತ, ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14…
ಬೆಂಗಳೂರು : ಆರು ತಿಂಗಳಿಗೊಮ್ಮೆ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸುತ್ತಾರೆ. ಆದರೆ ಕಾರಣಾಂತರಗಳಿಂದ ದಿನಾಂಕ ಮುಂದೂಡಲಾಗಿದ್ದು ಇದೀಗ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಇಂದು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದು, 6 ತಿಂಗಳಿಗೊಮ್ಮೆ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಐಡಿಜಿಪಿ ಕಚೇರಿಯಲ್ಲಿ ಸಿಎಂ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ನೇತೃತ್ವದಲ್ಲಿ ಈ ಒಂದು ಸಭೆ ನಡೆಯಲಿದೆ. ಈ ಹಿಂದೆ ನಿಗದಿ ಮಾಡಿದ ಸಭೆ ಮುಂದೂಡಲಾಗಿತ್ತು. ಇದೀಗ ಇಂದು ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.ಕಾನೂನು ಸುವ್ಯವಸ್ಥೆ ಸೇರಿದಂತೆ ಇಲಾಖೆಯ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ನವದೆಹಲಿ : ನಿನ್ನೆ ದೆಹಲಿಯಲ್ಲಿ ಸ್ಪೈಸ್ ಜೆಟ್ ಏರ್ಲೈನ್ಸ್ ಸಿಬ್ಬಂದಿಗಳ ಎಡವಟ್ಟಿನಿಂದ ಪ್ರಯಾಣಿಕರು ವಿಮಾನದಲ್ಲೇ 10 ಗಂಟೆ ಕಾಲ ಕಳೆದು ಪ್ರಯಾಣಿಕರನ್ನು ವಿಮಾನದಲ್ಲಿ ಕೂಡಿಟ್ಟು ಕಾಟ ನೀಡಿದ್ದಾರೆ ಎನ್ನಲಾಗಿದೆ.SG8151 ವಿಮಾನದಲ್ಲಿ ಈ ಒಂದು ಘಟನೆ ನಡೆದಿದೆ. ತಾಂತ್ರಿಕ ದೂರ ಎಂದು ಏರ್ಪೋರ್ಟ್ ನಲ್ಲಿ ವಿಮಾನ ನಿಂತಿದೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಆಗಮಿಸಬೇಕಿತ್ತು. ಆದರೆ ತಾಂತ್ರಿಕ ದೋಷ ಎಂದು ಏರ್ಪೋರ್ಟ್ ನಲ್ಲಿ ವಿಮಾನ ನಿಂತಿದೆ. ನಿನ್ನೆ ರಾತ್ರಿ 7.40ಕ್ಕೆ ದೆಹಲಿಯಿಂದ ಟೆಕ್ ಆಫ್ ಆಗಬೇಕಿತ್ತು. ಆದರೆ 10 ಗಂಟೆಗಳು ಕಳೆದರೂ ಇನ್ನೂ ವಿಮಾನ ಟೆಕ್ ಆಫ್ ಆಗಿಲ್ಲ. ವಿಮಾನದಲ್ಲೇ ಕುಳಿತು 60 ಮಂದಿ ಪ್ರಯಾಣಿಕರು ಸುಸ್ತಾಗಿದ್ದಾರೆ. ಬೋರ್ಡಿಂಗ್ ಪಾಸ್ ಮಾಡಿ ಸಿಬ್ಬಂದಿ ಕೂರಿಸಿದ್ದಾರೆ. ಸೂಕ್ತ ಮಾಹಿತಿ ನೀಡಿದೆ ಕೂರಿಸಿದ್ದಕ್ಕೆ ಪ್ರಯಾಣಿಕರು ಆಕ್ರೋಶ.
ಬೆಂಗಳೂರು : ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಕಡೆಗೂ ನೂರಡಿ ದಾಟಿದೆ. ಸಾಮಾನ್ಯವಾಗಿ ಮೇ, ಜೂನ್‌ನಲ್ಲೇ ನೂರು ಅಡಿ ತಲುಪುತ್ತಿದ್ದ ಕನ್ನಂಬಾಡಿ ಕಟ್ಟೆಯ ನೀರಿನ ಮಟ್ಟ ಈ ವರ್ಷ ಜುಲೈ ಮೊದಲ ವಾರದಲ್ಲಿ ಮುಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡುತ್ತಿದ್ದು ಜುಲೈ 8 ರಿಂದ ವಿಸಿ ನಾಲೆಗಳಿಗೆ ನೀರ್ಹರಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಹೌದು ಜುಲೈ 8 ರಿಂದ ವಿಸಿ ನಾಲೆಗಳಿಗೆ ನೀರು ಹರಿಸಲು ಪ್ಲಾನ್ ಮಾಡಲಾಗಿದ್ದು, ಹಾಗಾಗಿ ಇಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ನೀರು ಹರಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಸಿ ನಾಲೆಗಳಿಗೆ ನೀರು ಹರಿಸುವ ಕುರಿತಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿಯವರು ಮಾಹಿತಿ ನೀಡಲಿದ್ದಾರೆ. ಕಳೆದ ವರ್ಷ ಬರಗಾಲ ಹಿನ್ನೆಲೆಯಲ್ಲಿ ನೀರು ಹರಿಸಲು ಆಗಿಲ್ಲ ಈಗ ಡ್ಯಾಮ್…