Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಮರ್ಡರ್ ಆಗಿದ್ದು ಯುವಕನನ್ನು ಐದಾರು ಜನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನಿಖಿಲ್ ಎಂದು ತಿಳಿದುಬಂದಿದ್ದು , ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಐದಾರು ದುಷ್ಕರ್ಮಿಗಳಿಂದ ನಿಖಿಲ್ ನನ್ನು ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಈ ಒಂದು ಘಟನೆ ನಡೆದಿದೆ.ಕೊಲೆಯಾದ ನಿಖಿಲ್ ಮೃತದೇಹವನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಚಿವ ಕೆ ಎನ್ ರಾಜಣ್ಣ ಹನಿ ಟ್ರಾಪ್ ಹಾಗೂ ಅವರ ಪುತ್ರ ಎಂಎಲ್ಸಿ ರಾಜೇಂದ್ರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು  ಪ್ರತಿಕ್ರಿಯೆ ನೀಡಿದ್ದು ತನಿಖೆ ವೇಳೆ ಯಾವುದೇ ವಿಷಯವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತನಿಖೆ ವೇಳೆ ಯಾವುದೇ ವಿಚಾರ ಬಹಿರಂಗ ಪಡಿಸುವುದಿಲ್ಲ. ರಾಜೇಂದ್ರ ಅವರ ಹತ್ಯೆ ಕುರಿತು ಆಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯ ವರದಿ ಬಂದ ಬಳಿಕವಷ್ಟೇ ಮಾಹಿತಿ ನೀಡುತ್ತೇನೆ. ಹನಿಟ್ರ್ಯಾಪ್ ಮತ್ತು ಹತ್ಯೆಗೆ ಸುಪಾರಿ ನೀಡಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ ಎಂದು ಜಿ.ಪರಮೇಶ್ವರ್ ತಿಳಿಸಿದರು.

Read More

ಮಕ್ಕಳ ಶಿಕ್ಷಣವನ್ನು ಸುಧಾರಿಸಲು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಓದಬೇಕೆಂದು ಬಯಸುತ್ತಾರೆ. ನೀವು ಉತ್ತಮ ಅಂಕಗಳನ್ನು ಪಡೆಯಬೇಕು. ಅವರಿಗೆ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆಂಬ ಆಸೆ ಮಾತ್ರ. ಓದುವ ಎಲ್ಲಾ ಮಕ್ಕಳು ಮೊದಲ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ಆದರೆ ಅವರಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ತಮ್ಮ ಕೈಲಾದಷ್ಟು ಮಾಡಲು ಒಂದು ಪ್ರೇರಕ ಶಕ್ತಿಯ ಅಗತ್ಯವಿದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಮಕ್ಕಳಿಗೆ ಪ್ರೇರಣೆ ನೀಡಲು ಮತ್ತು ಅವರ ಅಧ್ಯಯನದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲು ಗಣೇಶನನ್ನು ಹೇಗೆ ಪೂಜಿಸಬೇಕೆಂದು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…

Read More

ಕೊಡಗು : ರೆಸಾರ್ಟ್ ಮಾಲೀಕರು ಮತ್ತು ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಲೈವ್ ನಲ್ಲಿ ವಿಡಿಯೋ ಮಾಡಿ ರೆಸಾರ್ಟ್ ನ ಮಾಜಿ ನೌಕರರ ಒಬ್ಬ ಲೈವ್ ವಿಡಿಯೋ ದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಕೊಟ್ಟು ಎಂಬಲ್ಲಿ ನಡೆದಿದೆ. ಹೌದು ರೆಸಾರ್ಟ್ ನ ಮಾಜಿ ನೌಕರ ಲೈವ್ ಸೂಸೈಡ್ ಮಾಡಿಕೊಂಡಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆಯ ಮಾಕೋಟ್ಟು ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದ್ದು, ವರದಿಯಾಗಿದೆ. ಮ್ಯಾಗ್ನೋಲಿಯ ರೆಸಾರ್ಟ್ ಮಾಜಿ ನೌಕರ ಪ್ರವೀಣ್ ಆತ್ಮಹತ್ಯೆಗೆ ಯತ್ನಿಸಿದ್ದು, ರೆಸಾರ್ಟ್ ಮಾಲೀಕರು ಮತ್ತು ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ರೆಸಾರ್ಟ್ ಮಾಲೀಕರಿಂದ ನನಗೆ ಅನ್ಯಾಯವಾಗಿದೆ. ಅರಣ್ಯ ಒತ್ತುವರಿಯಾಗಿದೆ. ಲೈಸೆನ್ಸ್ ಇಲ್ಲದೆ ವಿಲ್ಲಾ ನಿರ್ಮಾಣ ಮಾಡಿದ್ದಾರೆ. ನಾನು ನನ್ನ ಹೆಂಡತಿ ಮತ್ತು ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನ್ನ ದೇಹ ತೆಗೆಯುವ ಮೊದಲು ಮಾಲೀಕನನ್ನು ಬಂಧಿಸಿ ಎಂದು ಪ್ರವೀಣ್ 15 ನಿಮಿಷಗಳ ಕಾಲ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಮತ್ತು ಟಿಟಿ ವಾಹನದ ಮಧ್ಯ ಭೀಕರವಾದ ಅಪಘಾತ ಸಂಭವಿಸಿ ಕಾರಿನಲ್ಲಿ ಚಲಿಸುತ್ತಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಕೇರಳ ಮೂಲದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಕುರಿತು ಪೊಲೀಸರು ಇದೀಗ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ನಡೆಸಿದ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಬೆಂಗಳೂರಿನಲ್ಲಿ ಮತ್ತೊಂದು ಹನಿಟ್ರ್ಯಾಪ್ ಜಾಲ ಪತ್ತೆಯಾಗಿದೆ. ಪ್ರಿಸ್ಕೂಲ್‌ ನಡೆಸುತ್ತಿದ್ದ ಶಿಕ್ಷಕಿ ಒಬ್ಬಳು ಪೋಷಕರನ್ನೆ ಟಾರ್ಗೆಟ್ ಮಾಡಿ ಹನಿಟ್ಯಾಪ್ ಬಲೆಗೆ ಬೀಳಿಸಿ ಲಕ್ಷ ಲಕ್ಷ ಹಣ ಪ್ರೀತಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಶಿಕ್ಷಕಿ ಸೇರಿ ಮೂವರನ್ನು ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಆರೋಪಿ ಶಿಕ್ಷಕಿಯನ್ನು ಶ್ರೀದೇವಿ ಎಂದು ತಿಳಿದುಬಂದಿದ್ದು, ಮಹಾಲಕ್ಷ್ಮೀ ಲೇಔಟ್‌ ಬಳಿ ಪ್ರಿಸ್ಕೂಲ್‌ ನಡೆಸುತ್ತಿದ್ದಳು. ಇಲ್ಲಿಗೆ ತನ್ನ ಮಕ್ಕಳನ್ನು ಬಿಡಲು ರಾಕೇಶ್‌ ಬರುತ್ತಿದ್ದರು. 2023 ರಲ್ಲಿ ರಾಕೇಶ್ ಶ್ರೀದೇವಿ ನಡುವೆ ಆದ ಪರಿಚಯ ಕ್ರಮೇಣ ಸಲುಗೆಗೆ ತಿರುಗಿ ಡೇಟಿಂಗ್‌ ಹಂತಕ್ಕೂ ತಲುಪಿತ್ತು. ರಾಕೇಶ್‌ ಗೆ ಒಂದು ಬಾರಿ ಚುಂಬಿಸಲು 50 ಸಾವಿರ ರೂ. ಹಣಕ್ಕೆ ಬೇಡಿಕೆ ಇಡುತ್ತಿದ್ದ ಶ್ರೀದೇವಿ, ಅದರ ಫೋಟೋಗಳನ್ನೂ ತೆಗೆದಿರಿಸಿಕೊಳ್ಳುತ್ತಿದ್ದಳು. ರಾಕೇಶ್‌ ನಿಂದ 4 ಲಕ್ಷ ರೂ. ಹಣ ಸಾಲ ಎಂದು ಪಡೆದು ಬಳಿಕ ವಾಪಸ್‌…

Read More

ತುಮಕೂರು : ತ್ರಿವಿಧ ದಾಸೋಹಿ ತುಮಕೂರಿನ ಲಿಂಗೈಕ್ಯ ಪೂಜ್ಯ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಶ್ರೀಗಳ ಗದ್ದುಗೆ ದರ್ಶನ ಪಡೆದು ಹೊರ ಬರುವಾಗ ಬಿಜೆಪಿ ಕಾರ್ಯಕರ್ತರು ಮುಂದಿನ ಸಿಎಂ ವಿಜಯೇಂದ್ರ ಸಿದ್ದಗಂಗಾ ಮಠದಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಘೋಷಣೆ ಕೂಗಲಾಯಿತು. ಈ ವೇಳೆ ಸುಮ್ಮನೆ ಇರುವಂತೆ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಶ್ರೀಗಳ ಗದ್ದುಗೆ ಪೂಜೆ ಸಲ್ಲಿಸಿ ವಾಪಸ್ ಆಗುವ ವೇಳೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

Read More

ಚಿತ್ರದುರ್ಗ : ರಾಜ್ಯದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳುಗಳಿಗೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಅಪಘಾತದ ಕುರಿತು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಗೃಹಿಣಿ ಒಬ್ಬರ ಶವ ಅನುಮಾನಾಸ್ಪದ ರೀತಿಯಾಗಿ ಪತ್ತೆಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾಳೆ ಎಂಬ ಕಾರಣದಿಂದ ಪತಿಯೇ ಪತ್ನಿಯನ್ನು ಹೊಂದಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ನಗರದ ಆಡುಗೋಡಿಯ ನಂಜಪ್ಪ ಲೇಔಟ್‍ನಲ್ಲಿ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಪತಿಯ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು ಹೇಮಾ (44) ಎಂದು ಗುರುತಿಸಲಾಗಿದೆ. ಪತಿಗೆ ಅಕ್ರಮ ಸಂಬಂಧ ಇದೆ, ಮನೆ ಸಮೀಪವೇ ಬೇರೆ ಮಹಿಳೆಗೂ ಮನೆ ಮಾಡಿಕೊಟ್ಟಿದ್ದ ಎಂದು ಮಹಿಳೆ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳಂತೆ. ಇನ್ನೂ ಜನವರಿಯಲ್ಲಿ ಹೇಮಾ ವಿಷ ಕುಡಿದು ಆತ್ಮಹತ್ಯೆಗೂ ಯತ್ನಿಸಿದ್ದಳಂತೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕಳೆದ ಶನಿವಾರ ಹೇಮಾ ಸಾವನ್ನಪ್ಪಿದ್ದು, ಮಗಳ ವಿದ್ಯಾಭ್ಯಾಸದ ವಿಚಾರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗಂಡ ಹೇಳಿದ್ದ. ಆದರೆ ಹೇಮಾ ನೇಣು ಬಿಗಿದ ಸ್ಥಿತಿಯಲ್ಲಿರೋದನ್ನು ಯಾರು ನೋಡಿಲ್ಲ. ಹೇಮಾ ಮೃತದೇಹವನ್ನು ಆಸ್ಪತ್ರೆಯಲ್ಲಿ ನೋಡಿರೋ ಕುಟುಂಬಸ್ಥರು ಪತಿಯೇ…

Read More

ರಾಯಚೂರು : ಯುಗಾದಿ ಹಬ್ಬದ ಅಂಗವಾಗಿ ಕಾಡು ಪ್ರಾಣಿಗಳನ್ನು ಬೇಟಿಯಾಡಿ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪ ಇದೀಗ ಕಾಂಗ್ರೆಸ್ ಶಾಸಕನ ಪುತ್ರ ಮತ್ತು ಸಹೋದರ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಯುಗಾದಿ ಹಬ್ಬದ ಅಂಗವಾಗಿ ಶಾಸಕರ ಪುತ್ರ, ಸಹೋದರ ಕಾಡು ಪ್ರಾಣಿಗಳ ಬೇಟೆಯಾಡಿ, ಮೆರವಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಶಾಸಕರ ಪುತ್ರ ಮತ್ತು ಸಹೋದರ ಮೇಲೆ ಬಂದಿದ್ದು, ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಮೊಲಗಳ ಬೇಟೆಯಾಡಿ ಅವುಗಳನ್ನು ಕಟ್ಟಿಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಶಾಸಕರ ಪುತ್ರ ಮತ್ತು ಸಹೋದರನ ನೇತೃತ್ವದಲ್ಲಿ ಮೂಲಗಳ ಭೇಟಿ ಮತ್ತು ಮೆರವಣಿಗೆ ನಡೆದಿದೆ. ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಡಿ ಕಟ್ಟಿಗೆ ಕಟ್ಟಿ ಮೆರವಣಿಗೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಡಿದ್ದು ಅಲ್ಲದೆ ಅವುಗಳನ್ನು ಕಟ್ಟಿಗೆಗೆ…

Read More