Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹಚ್ಚುತ್ತಿದ್ದು ಅದರ ಜೊತೆಗೆ ಡೇಂಗು ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಇದೀಗ ಹಾಸನದಲ್ಲಿ ಕಳೆದ ನಾಲ್ಕು ದಿನಗಳಲ್ಲೇ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೌದು ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಸೋಕಿನಿಂದ ಮರಣ ಮೃದಂಗ ಬಾರಿಸುತ್ತಿದ್ದೂ, 4 ದಿನಗಳಲ್ಲಿ ಮಾರಕ ಡೆಂಗಿಗೆ 6 ಮಕ್ಕಳು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ 5 ಹಾಗೂ ಮೈಸೂರಲ್ಲಿ 1 ಮಗು ಸಾವನ್ನಪ್ಪಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕ್ಕಮಗಳೂರು ಮೂಲದ ಒಂದು ಮಗು ಸಾವನ್ನಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿರುವ ಹಾಸನ ಜಿಲ್ಲೆಯ ಮತ್ತೊಂದು ಮಗು ಇದೀಗ ಮೃತಪಟ್ಟಿದೆ.ಹಾಸನ ಜಿಲ್ಲೆಯ 3 ಹೊರ ಜಿಲ್ಲೆಯ 2 ಮಕ್ಕಳು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಡೆಂಘಿ ಸೊಂಕಿನಿಂದ ಮರಣ ಮೃದಂಗ ಬಾರಿಸುತ್ತಿದೆ. ನಿನ್ನೆ ಹಾಸನದ ಸಮೃದ್ಧಿ ಎನ್ನುವ 8 ವರ್ಷದ ಮಗು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿತ್ತು ಇಂದು ಚಿಕಿತ್ಸೆ ಫಲಿಸದೇ ಸಾವನಪ್ಪಿದೆ. ಹಾಸನದಲ್ಲಿ ನಿರಂತರವಾಗಿ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ನಿಂತ ನೀರಿನ…
ಬೆಂಗಳೂರು : ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಹಿಳಾ ಟೆಕ್ಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪೂಜಾ (22) ಎಂದು ಹೇಳಲಾಗುತ್ತಿದ್ದು, ಎರಡು ವರ್ಷಗಳ ಹಿಂದೆ ಸುನಿಲ್ ಎನ್ನುವವನನ್ನು ಮದುವೆಯಾಗಿದ್ದರು. ವರದಕ್ಷಣೆಗೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಪೂಜಾ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನವರು ಎಂದು ಹೇಳಲಾಗುತ್ತಿದೆ ಎರಡು ವರ್ಷಗಳ ಹಿಂದೆ ಸುನಿಲ್ ಎನ್ನುವವರನ್ನು ಮದುವೆಯಾಗಿದ್ದರು. ಆದರೆ ಮನೆಯಲ್ಲಿ ಪತಿಯ ಹಾಗೂ ಮೈದುನ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಹೀಗಾಗಿ ಪತಿ ಹಾಗೂ ಮೈದುನನ ವಿರುದ್ಧ ಮೃತ ಪೂಜಾಳ ಕುಟುಂಬಸ್ಥರು ಗಂಗಮ್ಮನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿ ಕೊಂಡು ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಡೆಂಗು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನಲ್ಲಿ ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲಿ 153 ಪ್ರಕರಣಗಳು ಪತ್ತೆಯಾಗಿದ್ದು, ಅಲ್ಲದೆ ಇಂದು ಹಾಸನದಲ್ಲಿ 8 ವರ್ಷದ ಬಾಲಕಿ ಸಮೃದ್ಧಿ ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರು ನಗರದ 7 ಜೋನ್ ಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿವೆ. ಕಳೆದ 24 ಗಂಟೆಗಳಲ್ಲಿ 153 ಡೆಂಘಿ ಪ್ರಕರಣಗಳು ಪತ್ತೆಯಾಗಿದ್ದು,ಸದ್ಯದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 547 ಕ್ಕೆ ಡೆಂಘಿ ಪ್ರಕರಣಗಳು ಏರಿಕೆ ಕಂಡಿವೆ ಎಂದು ವರದಿಯಾಗಿದೆ. ಈಗಾಗಲೇ ರಾಜ್ಯ ಆರೋಗ್ಯ ಇಲಾಖೆಯು ಡೆಂಗ್ಯೂ ಸೋಂಕನ್ನು ತಡೆಗಟ್ಟಲು ಹಲವಾರು ರೀತಿಯಲ್ಲಿ ಕ್ರಮ ಕೈಗೊಂಡಿದ್ದು, ಶಶಿ ವಾದಿನೇಶ್ ಗುಂಡು ರಾವ್ ಅವರು ಕೂಡ ಜಿಲ್ಲಾಧಿಕಾರಿಗಳ ಜೊತೆಗೆ ಹಾಗೂ ಎಲ್ಲಾ ಜಿಲ್ಲೆಯ ಡಿ ಎಚ್ ಓ ಗಳ ಜೊತೆ ಹೇಗೆ ವಿಡಿಯೋ ಕಾನ್ಫರೆನ್ಸ್ ಗಳ ಮೂಲಕ ಸಭೆ ನಡೆಸಿ ರೋಗ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಮೈಸೂರು : ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಹಾಗೂ ಡಿಸಿಎಂ ವಿಷಯದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಈಗ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾದಿಂದ ಸೈಟು ಹಂಚಿಕೆ ಆಗಿರುವ ಕುರಿತು ಆರೋಪ ಕೇಳಿ ಬಂದಿದ್ದು ಈ ಕುರಿತಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಆರಂಭ ಮಾಡಿದ್ದು ಸಿಎಂ ಕುರ್ಚಿ ಗಾಗಿ ಮುಡಾ ಹಗರಣ ಹೊರಬಂದಿದೆ ಎಂದು ಆರೋಪಿಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಅವರ ಪಕ್ಷದವರೇ ಮುಡಾ ಹಗರಣ ಹೊರಗೆ ತಂದಿದ್ದಾರೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸ್ಪೋಟಕವಾದಂತ ಆರೋಪ ಮಾಡಿದ್ದಾರೆ. ಸಿಎಂ ಕುರ್ಚಿಗೆ ಟವೆಲ್ ಹಾಕುವ ವಿಚಾರದಲ್ಲಿ ಮೂಡ ಹಗರಣ ಹೊರಗೆ ಬಂದಿದೆ.ಅವರ ಪಕ್ಷದವರೇ ಮೂಡ ಹಗರಣವನ್ನು ಹೊರ ತಂದಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅಂತ ಏನು ಪೈಪೋಟಿ ಇದೆಯಲ್ಲ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಕುರ್ಚಿಗೆ ಆಸೆಪಟ್ಟು…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಡಿಯೋಕಾನ್ ಫೈರೆನ್ಸ್ ಮೂಲಕ ವಿಚಾರಣೆ ನಡೆಯಿಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ ಜುಲೈ 18 ವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸರಿಸಿ ಆದೇಶ ಹೊರಡಿಸಿತು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಒಬ್ಬನಿಗೆ ಹಣದ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಆರೋಪಿ ಪವಿತ್ರ ಗೌಡ ಸ್ನೇಹಿತೆ ಸಮತಾ ಸೇರಿದಂತೆ ಮೂವರಿಗೆ ವಿಚಾರಣೆಗೆ ಹಾಜರಾಗಿ ಎಂದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೇ ಸಂಬಂಧಸಿದಂತೆ ಪವಿತ್ರ ಸ್ನೇಹಿತೆ ಸಮತಾಗು ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿ ಒಬ್ಬನಿಗೆ ಹಣದ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ಪವಿತ್ರ ಗೌಡ ಸ್ನೇಹಿತೆ ಸಮತಾಗು ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇನ್ನೊಂದು ಕಡೆ ಪ್ರಭಾವಿ ಶಾಸಕರ ಕಾರು ಚಾಲಕನಿಗೂ ಕೂಡ ಪೊಲೀಸರು ಇದೀಗ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ಜಾರಿ ಮಾಡಿದಾರೆ.…
ಬೆಂಗಳೂರು : ರಾಜ್ಯದಲ್ಲಿ ಬಡವರಿಗಾಗಿಯೇ ಎಂದು ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ.ಆದರೆ ಕೆಲವು ಪ್ರಭಾವಿ ವ್ಯಕ್ತಿಗಳಿಂದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳ ಸಾಗಾಣಿಕೆ ಮೂಲಕ ಹೊರ ರಾಜ್ಯಗಳಿಗೂ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್ ಗಳಿಗೆ ಮಾರುವ ಆಯೋಗ್ಯರನ್ನು ಶಿಕ್ಷಿಸಿ ಎಂದು ಹೈಕೋರ್ಟ್ ಕಿಡಿ ಕಾರಿದೆ. ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ನೆಯ ಅಕ್ಕಿಯನ್ನು ಹೋಟೆಲ್‌ಗಳಿಗೆ ಮಾರುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ. ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯ ಮೂರ್ತಿ ವಿ.ಶ್ರೀಷಾನಂದ ಅವರ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮ ವಾಗಿ ಹೋಟೆಲ್‌ಗಳಿಗೆ ಮಾರಾಟ ಮಾಡುವ ಮಾಫಿಯಾ ಬಗ್ಗೆ ತೀವ್ರವಾಗಿ ಕಿಡಿಕಾರಿದರು. ಹೌದು ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಿಡಿಕಾರಿದ್ದು, ಕಳಸಾಗನೇ ಮೂಲಕ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಡಾನ್ ಗಳನ್ನು ರಾಜಕಾರಣಿಗಳು ರಕ್ಷಿಸುತ್ತಾರೆ.ಕಾನೂನನ್ನು ಎಷ್ಟೇ ಕಠಿಣಗೊಳಿಸಿದರು ಕೂಡ ನಿನ್ನ ಮೊಣಕೈಗೆ ಹತ್ತಿರುವ ಜೇನು ಯೋಜನೆ ನ್ಯಾಯಪೀಠ, ತುಪ್ಪವನ್ನು ನಾನು ನೆಕ್ಕುತ್ತೇನೆ, ನನ್ನ…
ಬೆಂಗಳೂರು : ಕನಕಪುರ ರಾಮನಗರ ಹಾಗೂ ಚನ್ನಪಟ್ಟಣವನ್ನು ಬೆಂಗಳೂರು ನಗರಕ್ಕೆ ಸೇರಿಸುವ ವಿಚಾರವಾಗಿ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ಯಾರು ಯಾವುದನ್ನು ಎಲ್ಲೂ ಸೇರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದನ್ನು ಎಲ್ಲಿಗೂ ಸೇರಿಸುವುದಿಲ್ಲ. ಕನಕಪುರ ಕನಕಪುರದಲ್ಲೇ ಇರುತ್ತೆ. ರಾಮನಗರ ರಾಮನಗರದಲ್ಲಿ ಇರುತ್ತದೆ. ಮಾಗಡಿ ಮಾಗಡಿಯಲ್ಲೇ ಇರುತ್ತದೆ. ಚನ್ನಪಟ್ಟಣ ಚನ್ನಪಟ್ಟಣದಲ್ಲಿ ಇರುತ್ತದೆ.ಯಾರು ಯಾವುದನ್ನು ಎಲ್ಲಿಗೂ ಸೇರಿಸುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.
ಉಡುಪಿ : ರಾಜ್ಯದಲ್ಲಿ ವರುಣನ ಅಬ್ಬರದಿಂದ ಅನೇಕ ಕಡೆಗೆ ಅವಾಂತರ ಸೃಷ್ಟಿಯಾಗಿದ್ದು, ಉತ್ತರ ಕನ್ನಡದಲ್ಲಿ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು. ಇತ್ತ ಉಡುಪಿಯಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಹೀಗಾಗಿ ಎರಡು ಜಿಲ್ಲೆಗಳ ಜಿಲ್ಲಾ ಆಡಳಿತವು ಹಲವು ಆಯ್ದ ತಾಲೂಕುಗಳಿಗೆ ರಜೆ ಘೋಷಿಸಿದೆ. ಉಡುಪಿಯ 3 ತಾಲೂಕಿಗಳಲ್ಲಿ ರಜೆ ಘೋಷಣೆ ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಳೆ ಕುಮಟಾ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ…
ಶಿವಮೊಗ್ಗ : ಇಂದು ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ಬಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಮಹಿಳೆ ಒಬ್ಬರು ಸಾವನ್ನಪ್ಪಿದ್ದರೆ. ಕಾಲು ಜಾರಿ ಹಳ್ಳಕ್ಕೆ ಬಿದ್ದು 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಾಲು ಸಂಕದ ಮೇಲೆ ಹೋಗುವಾಗ ಮಹಿಳೆ ಜಾರಿಬಿದ್ದು ಕಾಲೇಜ್ ಹೇಳಕ್ಕೆ ಬಿದ್ದು 43 ವರ್ಷದ ಶಶಿಕಲಾ ಎನ್ನುವ ಮಹಿಳೆ ಸಾವನ್ನಪ್ಪಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ ಉಡುಪಿಯಲ್ಲಿ ಮಣ್ಣು ಕೋಶದಿಂದ 55 ವರ್ಷದ ಮಹಿಳೆಯೊಬ್ಬರು ಕೂಡ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.
ಕೋಲಾರ : ಕೊಲೆ, ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನ ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಆಂಡ್ರಸನ್ ಪೇಟೆಯಲ್ಲಿ ನಡೆದಿದೆ. ಹೌದು ಬಂಧಿತ ಆರೋಪಿಯನ್ನ ಸ್ಟಾಲಿನ್ ಎಂದು ಹೇಳಲಾಗುತ್ತಿದ್ದು, ಈತನ ಮೇಲೆ ಕೊಲೆ, ಸುಲಿಗೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹಾಗಾಗಿ ಈತನನ್ನು ಇಂದು ಪೊಲೀಸರು ಬಂದಾಗ ಪೊಲೀಸ್ ಪೇದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮಚ್ಚಿನಿಂದ ಹಲ್ಲೆ ನಡೆಸಿದ್ದರಿಂದ ಪೊಲೀಸ್ ಪೇದೆ ಸುನಿಲ್ ಗಾಯಗೊಂಡಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಪೊಲೀಸರು ಕೂಡಲೇ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ. ಬಲಗಾಲಿಗೆ ಗುಂಡಿನೇಟು ತಗುಲಿ ಕುಸಿದು ಬಿದ್ದ ರೌಡಿಶೀಟರ್ ಸ್ಟಾಲಿನ್. ಸದ್ಯ ಆರೋಪಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.