Subscribe to Updates
Get the latest creative news from FooBar about art, design and business.
Author: kannadanewsnow05
ಮಹಾರಾಷ್ಟ್ರ : ಪ್ರಧಾನಿಯಾಗಿ 11ವರ್ಷ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕೇಂದ್ರ ಕಚೇರಿಗೆ ಇಂದು ಭೇಟಿ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ ಆರ್‌ಎಸ್‌ಎಸ್ ಕೇಂದ್ರ ಕಚೇರಿಗೆ ಒಂದು ಬಾರಿ ಹೋಗಿದ್ದ ಮೋದಿ ಅದಾದ 13 ವರ್ಷ ಬಳಿಕ ಮತ್ತೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಹೆಡ್ಗೆವಾರ್ ಸ್ಮೃತಿ ಭವನಕ್ಕೆ ಭೇಟಿ ನೀಡಿದ್ದಾರೆ. ಹಿಂದೂ ಹೊಸ ವರ್ಷದ ಆರಂಭವನ್ನು ಗುರುತಿಸುವ ಆರ್‌ಎಸ್‌ಎಸ್ ಪ್ರತಿಪದ ಕಾರ್ಯಕ್ರಮ ಮತ್ತು ಮರಾಠಿ ಹೊಸ ವರ್ಷವಾದ ಗುಡಿ ಪಾಡ್ವದಲ್ಲಿ ಭಾಗಿಯಾಗಲಿದ್ದಾರೆ. RSS ಮುಖ್ಯಸ್ಥ ಮೋಹನ್ ಭಾಗವತ್ ಜೊತೆ ಪ್ರಧಾನಿಯವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಮೃತಿ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರದ ನಾಥಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ. ಆರ್ ಎಸ್ ಎಸ್ ಸಂಸ್ಥಾಪಕ ಡಾ.ಕೆ…
ಶನಿ ಸಂಚಾರದ ಪ್ರಯೋಜನಗಳು ಶನಿ ಸಂಚಾರ ಫಲಗಳು 2025 – 2027 ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ,…
ತೆಲಂಗಾಣ : ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಪುರ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ತೆಲಂಗಾಣದಲ್ಲಿ ಕೆರೆಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ನಾಲ್ವರು ಮುಳಗಿ ಸಾವನಪ್ಪಿದ್ದಾರೆ. ದುರಂತದಲ್ಲಿ ತಾಯಿ, ಇಬ್ಬರು ಪುತ್ರರು ಹಾಗೂ ಪುತ್ರಿ ಸಾವನಪ್ಪಿದ್ದಾರೆ ಎಂದು ಮಾಹಿತಿ ಬಂದಿದೆ. ಯಲ್ಲಾರೆಡ್ಡಿ ತಾಲೂಕಿನ ವೆಂಕಟಪುರ ಬಳಿ ಈ ಒಂದು ಘಟನೆ ನಡೆದಿದೆ. ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದಾಗ ಈ ಒಂದು ದುರಂತ ಸಂಭವಿಸಿದೆ.
ಮ್ಯಾನ್ಮಾರ್ : ಕಳೆದ ಎರಡು ದಿನಗಳ ಹಿಂದೆ ಮ್ಯಾನ್ಮಾರ್ ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ಈ ಒಂದು ಘಟನೆಯಲ್ಲಿ ಇದುವರೆಗೂ ಮ್ಯಾನ್ಮಾರ್ ನಲ್ಲಿ 1600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದು 3000ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಇದೀಗ ವರದಿಯಾಗಿದೆ ಹೌದು ಭೂ ಕಂಪನದಲ್ಲಿ ಮೃತ ಪಟ್ಟವರ ಸಂಖ್ಯೆ 1,644ಕ್ಕೆ ಏರಿಕೆಯಾಗಿದ್ದು, 3408 ಜನರಿಗೆ ಗಾಯಗಳಾಗಿದ್ದು ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಭೀಕರವಾದ ಭೂಕಂಪದಿಂದ ನಲುಗಿ ಹೋದ ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ಗೆ ಇದೀಗ ಭಾರತ ಆಹಾರ ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನೆ ಮಾಡಲಾಗಿದೆ. ಭಾರತೀಯ ವಾಯುಪಡೆಯ C-17 ವಿಮಾನಗಳಲ್ಲಿ ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಈಗ ರವಾನಿಸಲಾಗಿದೆ. 60 ಟನ್ ಗಳಷ್ಟು ಪರಿಹಾರ ಸಾಮಗ್ರಿಗಳನ್ನು ಭಾರತ ಮ್ಯಾನ್ಮಾರ್ ಗೆ ಕಳುಹಿಸಿದೆ. ಬೆಂಗಳೂರಿನಿಂದ ಬ್ಯಾಂಕಾಕ್ ಪ್ರವಾಸಕ್ಕೆ ಎಂದು ತೆರಳಿದ್ದ ಕನ್ನಡಿಗರು ಇಂದು ಸುರಕ್ಷಿತವಾಗಿ ತಾಯ್ನಾಡಿಗೆ…
ಮೈಸೂರು : ನಿನ್ನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ಹಾಗೂ ಲೆಖಿತ್ ಗಾಗಿ ಇದೀಗ ಶೋಧ ಕಾರ್ಯ ಮುಂದುವರಿದಿದೆ. ಟಿ ನರಸೀಪುರ ತಾಲೂಕಿನ ಮೇದಿನಿ ಎಲ್ಲಿ ನಿನ್ನೆ ಈ ಒಂದು ಘಟನೆ ಸಂಭವಿಸಿತ್ತು. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನೀರುಪಾಲಾಗಿರುವವರು ಕೊಳ್ಳೇಗಾಲ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೇದಿನಿ ಗ್ರಾಮದ ರಾಮಕಟ್ಟೆ ಬಳಿ ಐವರು ಯುವಕರು ಈಜಲು ಬಂದಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಭರತ್ ಮತ್ತು ಲಿಖಿತ್ ಕೊಚ್ಚಿ ಹೋಗಿದ್ದರು. ಉಳಿದ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭರತ್ ಮತ್ತು ಲಿಖಿತ್ ಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ಮುಂದುವರೆದಿದೆ. ಘಟನೆ ಸಂಭಂದ ತಲಕಾಡು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಲಬುರ್ಗಿ : ಚಲಿಸುತ್ತಿರುವ ಬಸ್ ನಲ್ಲಿ ಏಕಾಏಕಿ ಕಂಡಕ್ಟರ್ ಒಬ್ಬರು ಕುಸಿದು ಬಿದ್ದು ಶ್ರವಣಪರ್ವ ಘಟನೆ ಕಲ್ಬುರ್ಗಿ ಜಿಲ್ಲೆಯ ಫರತಾಬಾದ್ ಬಳಿ ನಿನ್ನೆ ಈ ಒಂದು ಘಟನೆ ಸಂಭವಿಸಿದೆ.ಹೌದು ಕಲ್ಬುರ್ಗಿ ಜಿಲ್ಲೆಯ ಫರತಾತಾಬಾದ್ ಬಳಿ ನಿನ್ನೆ ಸಂಜೆ ಏಕೈಕ ಕುಸಿದು ಬಿದ್ದು ಕಂಡಕ್ಟರ್ ಕಾಶಿನಾಥ್ ಸಾವನ್ನಪ್ಪಿದ್ದಾರೆ. ಮೃತಕಾಶಿನಾಥ್ ಯಡ್ರಾಮಿ ತಾಲೂಕಿನ ಜವಳಗ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಲ್ಬುರ್ಗಿಯಿಂದ ಬಸ್ ಜೇವರ್ಗಿ ಕಡೆಗೆ ಹೊರಟಿತ್ತು. ಫರತಾಬಾದ ಬಳಿ ಏಕಾಏಕಿ ಕಂಡಕ್ಟರ್ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಕಂಡಕ್ಟರ್ ಕಾಶಿನಾಥ್ ಮೃತಪಟ್ಟಿದ್ದಾರೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲಬುರ್ಗಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಸೇರಿ ಮೂವರ ವಿರುದ್ದ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರದ ಸಿದ್ಧಾರ್ಥ ನಗರದ ರಸ್ತೆಯಲ್ಲಿ ಸಾರ್ವಜನಿಕರು, ಆನಂದ ಚಲಾಯಿಸುತ್ತಿದ್ದ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮಣಿಕಂಠ ರಾಠೋಡ, ಚಾಲಕ ಆನಂದ ಹಾಗೂ ಪ್ರಭು ಕೆರೆಗಳ್ಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೋಲಿಸರು, 57 ಸಾವಿರ ಮೌಲ್ಯದ 16 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ವಾಹನ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಚಾಲಕ ಮಣಿಕಂಠ ರಾಠೋಡ್ ಹೆಸರು ಹೇಳಿದ್ದ, ಪುಡ್ ಇನ್ಸ್ಪೆಕ್ಟರ್ ಯಲ್ಲಾಲಿಂಗ ಅವರು ನೀಡಿದ ದೂರಿನ ಅನ್ವಯ ಅಶೋಕ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಕೂಡ ಹಲವು ಪ್ರಕರಣಗಳಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ FIR ದಾಖಲಾಗಿತ್ತು.
ಹುಬ್ಬಳ್ಳಿ : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಹುಬ್ಬಳ್ಳಿ-ವಿಜಯಪುರ, ಸೋಲಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಹುಬ್ಬಳಿಯಿಂದ ಮಂಟೂರಿಗೆ ತೆರಳುತ್ತಿದ್ದ ಬಸ್ನ ಇಂಜಿನ್ನಲ್ಲಿ ಹೊಗೆ ಕಾಣಿಸಿದಾಗ ನಂತರ ಬೆಂಕಿ ಸಣ್ಣ ಪ್ರಮಾಣದಲ್ಲಿ ಆವರಿಸಿದೆ. ಕೂಡಲೇ ಚಾಲಕ, ಕಂಡಕ್ಟರ್ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬೆಂಕಿಯ ತೀವ್ರತೆಗೆ ಬಸ್ ನ ಒಳ ಭಾಗವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟು ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಹಳೆ ಬಸ್ ಆಗಿದ್ದರಿಂದ ಶಾರ್ಟ್ ಸರ್ಕ್ಯೂಟ್ನಿಂದಲೇ ಇಂತಹ ಅನಾಹುತ ಆಗುತ್ತಿವೆ. ಗ್ರಾಮಾಂತರ ಭಾಗದಲ್ಲಿ ಹಳೆ ಬಸ್ ಮತ್ತು ಅವಧಿ ಮುಗಿದ ಬಸ್ಗಳನ್ನು ಸರ್ಕಾರ ಒಡಿಸಬಾರದು ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಸೊಸೈಟಿ ಚುನಾವಣೆಯಲ್ಲೂ ಕೂಡ ಇದೀಗ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ವೈರತ್ವಕ್ಕೆ ಯುವತಿಯ ಮೇಲೆ ಇದೀಗ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚೋಳೇನಹಳ್ಳಿ ಗ್ರಾಮದಲ್ಲಿ ಯುವತಿಯ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆದಿದೆ. ಹೌದು ಮಂಡ್ಯದಲ್ಲಿ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಗೆ ವೋಟ್ ಹಾಕಿಸಿದ್ದಕ್ಕಾಗಿ ಯುವತಿಯ ಮೇಲೆ ಹಲ್ಲೆ ನಡೆಸಲಾಗಿದೆ. ನಾಗಮಂಗಲ ತಾಲೂಕಿನ ಚೋಳೇನಹಳ್ಳಿ ಈ ಒಂದು ಘಟನೆ ನಡೆದಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ವೈರತ್ವದ ನಡುವೆ ಯುವತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಪರಿಣಾಮ ಯುವತಿಯ ತುಟಿ ಕಟ್ಟಾಗಿದ್ದು, ಹಲ್ಲುಗಳು ಮುರಿದಿದ್ದು ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಿಸಿದ್ದಕ್ಕೆ ಜೆಡಿಎಸ್ ಪುಂಡರು ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಜೆಡಿಎಸ್ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಶಾಂತ್ ಮತ್ತು ಗ್ಯಾಂಗ್ ಗುಂಡಾಗಿರಿ ನಡೆಸಿದೆ. ಪ್ರಶಾಂತ್ ಮತ್ತು ಗ್ಯಾಂಗ್ ನ ಗುಂಡಾಗಿರಿಯಿಂದ ಕುಟುಂಬ ಇದೀಗ ಜೀವ…
ಬೆಂಗಳೂರು : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಮತ್ತು ಅವಶೇಷಗಳ ಕಾಯ್ದೆ, 1958 ರ ಅಡಿಯಲ್ಲಿ “ರಾಷ್ಟ್ರೀಯ ಮಹತ್ವದ ಸ್ಮಾರಕ” ಎಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಅವರು, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ. ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ…














