Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ಘೋರವಾದ ಘಟನೆ ಸಂಭವಿಸಿದ್ದು, ಬಿಬಿಎಂಪಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಬಳಿ ನಡೆದಿದೆ. ಐಮಾನ್ (10) ಮೃತ ಬಾಲಕ. ತಂದೆಯ ಜತೆ ಬಾಲಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೈಕ್ ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಎಂಬ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ರೊಚ್ಚಿಗೆದ್ದ ಸಾರ್ವಜನಿಕರು, ಕಸ ಎಲ್ಲರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚುತ್ತಿದ್ದಂತೆ ಚಾಲಕ ಕೆಳಗಿಳಿದಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಉಡುಪಿ : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಹಿತಿಯ ಮೇರೆಗೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಶಾರದಾ ನಗರದಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸತೀಶ್ ಎಂಬಾತ ಸಂತ್ರಸ್ಥೆಗೆ ಕೆಲಸ ಕೊಡುವುದಾಗಿ ಪುಸಲಾಯಿಸಿ ಮೂಡಬಿದ್ರೆಯಿಂದ ಶಾರದ ನಗರದಲ್ಲಿರುವ ಶ್ರೀಲತಾ ಎಂಬವರ ಮನೆಗೆ ಕಳುಹಿಸಿದ್ದನು.ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆ ಚಟುವಟಿಕೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ರೂಮಿನಲ್ಲಿ ಕೂತುಕೊಂಡು ಇರು ಎಂದು ಒತ್ತಾಯದಿಂದ ಇರಿಸಿಕೊಂಡಿರುವುದಾಗಿ ದೂರಲಾಗಿದೆ. ಈ ಕುರಿತು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ಥೆಯನ್ನು ರಕ್ಷಿಸಿದರು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಬೀದರ್ ನಲ್ಲಿ ಭೀಕರವಾದ ಕೊಲೆ ನಡೆದಿದ್ದು, ತಂಗಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಯುವತಿಯ ಸಹೋದರರು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಜರುಗಿದೆ. ಕೊಲೆಯಾದ ಯುವಕನನ್ನು ಪ್ರಶಾಂತ್ ಬಿರಾದರ್ (25) ಎಂದು ತಿಳಿದುಬಂದಿದೆ.ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಕೊಲೆ ಆರೋಪಿಗಳು ಎನ್ನಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆಗೆ ನಿರಗೂಡಿ ಗ್ರಾಮದಲ್ಲಿ ಪ್ರಶಾಂತ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಪ್ರಶಾಂತ್ ತಲೆ ಮೇಲೆ ಯುವತಿಯ ಸಹೋದರರು ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬೆಂಗಳೂರು : ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ಇದುವರೆಗೂ 1,600 ಜನರು ಈ ಒಂದು ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ಅಲ್ಲದೆ 3000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ಎಂದು ಬ್ಯಾಂಕಾಕ್ ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕನ್ನಡಿಗರು ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಇನ್ನು ಬ್ಯಾಂಕಾಕ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಕನ್ನಡಿಗರ ಪೈಕಿ ರೋಹಿತ್ ಎನ್ನುವವರು ಪತ್ನಿ ಮಕ್ಕಳ ಜೊತೆಗೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿದ್ದರು. ಹೋಟೆಲ್ ನಲ್ಲಿ ಮಧ್ಯಾಹ್ನ ಊಟದ ವೇಳೆ ಭೂಕಂಪವಾಗಿತ್ತು. ಊಟ ಮಾಡದಿದ್ದಕ್ಕೆ ತಲೆ ತಿರುಗುವ ಅನುಭವವಾಗುತ್ತಿದೆ ಅಂದುಕೊಂಡಿದ್ವಿ. ಎಲ್ಲರಿಗೂ ಅದೇ ಅನುಭವ ಆದಾಗ ಭೂಕಂಪ ಎಂದು ಗೊತ್ತಾಯಿತು. ಹೋಟೆಲ್ ಸಿಬ್ಬಂದಿ ಕೊಡಲೇ ಎಲ್ಲರನ್ನು ಹೊರಗಡೆ ಕಳುಹಿಸಿದರು. ಸುಮಾರು 4 ಗಂಟೆಗಳ ಕಾಲ ಯಾರನ್ನು ಕಟ್ಟಡದ ಒಳಗೆ ಬಿಡಲಿಲ್ಲ. ಪತ್ನಿ ಮಕ್ಕಳು ಸಮೇತ ಎಲ್ಲರೂ ರಸ್ತೆಯಲ್ಲಿ ನಿಂತಿದ್ದೆವು. ಅಂಗಡಿ ಮುಂಗಟ್ಟುಗಳಿಂದ ಎಲ್ಲರೂ ಹೊರಗೆ ಓಡೋಡಿ ಬಂದಿದ್ರು.…
ಬೆಂಗಳೂರು : ಮಾರ್ಚ್ 31ರಿಂದ ಅಂದರೆ ನಾಳೆಯಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆ ನೀಡಿದೆ.ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ ಎಂದು ತಿಳಿಸಿದ್ದು, ಏಪ್ರಿಲ್ 4 & 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವವಿದೆ ಎಂದು ತಿಳಿಸಿದೆ. ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ.ಶನಿವಾರ ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮಾತ್ರ ಎಂದಿನಂತೆ ಒಣ ಹವೆ ಇತ್ತು. ಏಪ್ರಿಲ್ 4 ಮತ್ತು ಏಪ್ರಿಲ್ 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ : ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್ ಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಕೆಎಂಎಫ್ ಘಟಕದ ಮುಂದೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ನಷ್ಟದ ಮಾಹಿತಿ ನೀಡಿ ಅಧಿಕಾರಿಗಳು ಹಣ ಕಡಿತ ಮಾಡಿದ್ದರು. ಪ್ರತಿ ಲೀಟರ್ಗೆ 1 ರೂಪಾಯಿ 50 ಪೈಸೆ ಕಡಿತ ಮಾಡಿದ್ದ ರಾಬಕೋವಿ ಒಕ್ಕೂಟ. ಹಾಗಾಗಿ ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮುತ್ತಿಗೆ ಹಾಕಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಇದೀಗ ಮತ್ತೊಂದು ಜೀವ ಬಲಿಯಾಗಿದೆ. ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಬಳಿ ಈ ಒಂದು ಘಟನೆ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೈಕ್ ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಎಂಬ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ರೊಚ್ಚಿಗೆದ್ದ ಸಾರ್ವಜನಿಕರು, ಕಸ ಎಲ್ಲರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚುತ್ತಿದ್ದಂತೆ ಚಾಲಕ ಕೆಳಗಿಳಿದಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಮ್ಯಾನ್ಮಾರ್ : ನಿನ್ನೆ ಮ್ಯಾನ್ಮಾರ್ ಮತ್ತು ಬ್ಯಾಂಕ್ ಆಫ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಪರಿಣಾಮದಿಂದ ಅಲ್ಲಿನ ಜನರು ತತ್ತರಿಸಿ ಹೋಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೀಗ ಭೂಕಂಪದಿಂದ 1002ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 2,376 ಜನರಿಗೆ ಗಾಯಗಳಾಗಿವೆ. ಇನ್ನು 70ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬ್ಯಾಂಕ್ ಆಫ್ ನಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 1:20 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್ನ ಎರಡನೇ ಅತಿದೊಡ್ಡ ನಗರವಾದ ಮಾಂಡಲೆಯಿಂದ ಕೇವಲ 17.2 ಕಿ.ಮೀ ದೂರದಲ್ಲಿದೆ. ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ, ಮಾಂಡಲೆ, ಟೌಂಗೂ ಮತ್ತು ಆಂಗ್ಬಾನ್ ಅನೇಕ ಸಾವುನೋವುಗಳನ್ನು ವರದಿ ಮಾಡಿವೆ. ಗಾಯಗೊಂಡ ನೂರಾರು ಜನರನ್ನು ನೈಪಿಡಾವ್ ನ ಮುಖ್ಯ ಆಸ್ಪತ್ರೆಗೆ ಸಾಗಿಸಲಾಯಿತು, ರಚನಾತ್ಮಕ ಹಾನಿಯಿಂದಾಗಿ ರೋಗಿಗಳಿಗೆ ಹೊರಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯ ಮ್ಯಾನ್ಮಾರ್ ನಾದ್ಯಂತ ಕುಸಿದ ಮತ್ತು ಹಾನಿಗೊಳಗಾದ ಕಟ್ಟಡಗಳನ್ನು ಸಾಮಾಜಿಕ ಮಾಧ್ಯಮ ತುಣುಕುಗಳು ತೋರಿಸುತ್ತವೆ. ಮ್ಯಾನ್ಮಾರ್ನ ಭೂಪ್ರದೇಶದ ಕೆಲವು ಭಾಗಗಳು ಈಗಾಗಲೇ…
ದಾವಣಗೆರೆ : ಟಿಸಿ ದುರಸ್ತಿ ಮಾಡಲು ರೈತನಿಂದ 10 ಸಾವಿರ ಲಂಚ ಪಡೆಯುವ ವೇಳೆ ಬೆಸ್ಕಾಂ AE ಅಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರಲ್ಲಿ ನಡೆದಿದೆ. ಹೌದು ಲಂಚ ಪಡೆಯುವವಾಗಲೆ ಬೆಸ್ಕಾಂ ಸಹಾಯಕ ಇಂಜಿನಿಯರ್ ಮೋಹನ್ ಕುಮಾರ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರು ವಿಭಾಗದ ಬೆಸ್ಕಾಂ ಎ.ಇ ಮೋಹನ್ ಕುಮಾರ್, ಕೆಟ್ಟು ಹೋದ ಟಿಸಿಯನ್ನು ದುರಸ್ತಿ ಮಾಡಿಕೊಡಲು ಮೋಹನ್ ಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಲ್ಲಾಪುರ ರೈತ ಬಿ ಎಂ ಮಂಜುನಾಥ ಎಂಬುವವರಿಂದ ಬೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ಸಾವಿರ ಲಂಚ ಸ್ವೀಕರಿಸುವಾಗ ಮೋಹನ್ ಕುಮಾರ್ ನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು : ಯುಗಾದಿ ಹಬ್ಬದಂದೆ ಘೋರವಾದ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಹಸುಗಳನ್ನು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ಘಟನೆ ಸಂಭವಿಸಿದೆ ಮುದ್ದೇಗೌಡ (48) ಬಸವಗೌಡ (45) ಮತ್ತು ವಿನೋದ್ (17) ಮೃತರು ಎಂದು ತಿಳಿದುಬಂದಿದೆ. ಹಬ್ಬ ಹಿನ್ನೆಲೆಯಲ್ಲಿ ಹಸುಗಳನ್ನು ತೊಳೆಯಲು ವಿನೋದ್ ಎನ್ನುವವರು ಕೆರೆಗೆ ಹೋಗಿದ್ದರು. ಈ ವೇಳೆ ಹಸು ವಿನೋದ್ನನ್ನು ಕೆರೆಯ ಮಧ್ಯದಲ್ಲಿ ಎಳೆದೊಯ್ದಿದೆ. ಇದನ್ನು ನೋಡಿದ ಮುದ್ದೇಗೌಡ ಮತ್ತು ಬಸವೇಗೌಡ ತಕ್ಷಣ ವಿನೋದ ರಕ್ಷಣೆಗೆ ಕೆರೆಗೆ ಇಳಿದಿದ್ದಾರೆ. ಈಜು ಬಾರದೆ ನೀರಿನಲ್ಲಿ ಮುಳುಗಿ ಮೂವರು ದುರಂತವಾಗಿ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













