Author: kannadanewsnow05

ಬೆಂಗಳೂರು : ಸೋಮವಾರದಿಂದ ಅಂದರೆ ನಾಳೆಯಿಂದ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆ ಶೇ. 12ರಿಂದ ಶೇ. 5ಕ್ಕೆ ಇಳಿಕೆ ಮಾಡಲಾಗಿದ್ದು, ಇದರ ಲಾಭವನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ನಂದಿನಿ ತುಪ್ಪ, ಬೆಣ್ಣೆ, ಚೀಸ್ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ. ಆದೇಶದಲ್ಲಿ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆಯಿಂದಾಗಿ ‘ನಂದಿನಿ’ ಹಾಲಿನ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಿರುವ ಬಗ್ಗೆ.ಕೇಂದ್ರಸರ್ಕಾರವು ಸಾರ್ವಜನಿಕರ ದೈನಂದಿನ ಬಳಕೆಯ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ(Goods and Services Tax-GST) ಯನ್ನು ಇಳಿಕೆ ಮಾಡಿದ್ದು ದಿನಾಂಕ: 22.09.2025 ರಿಂದ ಕಡ್ಡಾಯವಾಗಿ ಎಲ್ಲಾ ಆಹಾರ ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳು ಜಾರಿಗೊಳಿಸುವಂತೆ ತಿಳಿಸಲಾಗಿದೆ. ಅದರಂತೆ ಕೆಎಂಎಫ್ ಸಂಸ್ಥೆಯ ನಂದಿನಿ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಲಾಗಿದ್ದು, ವಿವರಗಳು ಈ ಕೆಳಕಂಡಂತಿದೆ. 1000 ಮಿಲಿ ಲೀಟರ್ ತುಪ್ಪ ಹಳೆಯ ದರ 650 ಇದ್ದರೆ, ಹೊಸ ದರ 610 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಇನ್ನು 500 ಮಿಲಿ ಲೀಟರ್…

Read More

ಬೆಂಗಳೂರು, ಸೆ. 20: “ಅಕ್ಟೊಬರ್ 31ರ ಒಳಗಾಗಿ ಬೆಂಗಳೂರಿನ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ 750 ಕೋಟಿ ರೂ. ಅನುದಾನ ಕೊಡುವ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ರಸ್ತೆಗಳ ಸುಧಾರಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕುರಿತು ಸಿಎಂ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ತಾವು ಜಿಬಿಎ ಅಧಿಕಾರಿಗಳ ಸಭೆ ಮಾಡಿದ್ದೇವೆ. ನಮ್ಮ ಅಧಿಕಾರಿಗಳು, ಪೊಲೀಸರು ಹಾಗೂ ಸಾರ್ವಜನಿಕರ ಸಹಕಾರದಿಂದ ನಾವು ನಗರದಲ್ಲಿ 10 ಸಾವಿರ ರಸ್ತೆ ಗುಂಡಿ ಪತ್ತೆ ಮಾಡಿದ್ದೇವೆ. ಇವುಗಳನ್ನು ಸರಿಪಡಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ” ಎಂದು ಹೇಳಿದರು. “ರಸ್ತೆಗುಂಡಿಗಳ ಪಟ್ಟಿ ಮಾಡಿ ಮಾಹಿತಿ ನೀಡುವಂತೆ…

Read More

ಸಾಗರ : ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ ಹಿರೇನಾಯ್ಕ್ (91), ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಶನಿವಾರ ನಿಧನ ಹೊಂದಿದರು. ಇಂದು ಮದ್ಯಾಹ್ನ 2 ಗಂಟೆಗೆ ಸೊರಬ ತಾಲ್ಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

Read More

ಬೆಂಗಳೂರು : ಕೆಲಸಕ್ಕೆ ಹೋಗು ಅಂದಿದ್ದಕ್ಕೆ ತಂದೆಯನ್ನೇ ಭೀಕರವಾಗಿ ಮಗ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಸಪ್ಟೆಂಬರ್ ಮೂರರಂದು ನಡೆದಿದ್ದು ಇದೀಗ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ಭೇದಿಸಿದ್ದಾರೆ. ತಂದೆ ಮಂಜುನನ್ನು ಹತ್ಯೆಗೈದು ನನ್ನ ತಂದೆ ಹೇಗೆ ಮಲಗಿದ್ದಾರೆ ಎಂದು ಮಗ ಮನೋಜ್ ನಾಟಕವಾಡಿದ್ದಾನೆ. ತಂದೆಯ ಶವದ ಮುಂದೆ ಕೂತು ಕಣ್ಣೀರು ಹಾಕಿದ್ದಾನೆ. ಹತ್ಯೆಯ ಬಳಿಕ ಮನೋಜ್ ಎನ್ನುವ ಯುವಕ ಕಣ್ಣೀರು ಹಾಕಿ ನಾಟಕ ಮಾಡಿದ್ದಾನೆ. ಇನ್ನು ಕೊಲೆಯಾದ ವ್ಯಕ್ತಿಯನ್ನು ಮಂಜು ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 3ರಂದು ದಾಸರಹಳ್ಳಿಯಲ್ಲಿ ತಂದೆ ಮಂಜು ಸಾವನಪ್ಪಿದ್ದರು. ಮಗ ಮನೋಜನಿಂದ ತಂದೆ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನೋಜ್ ಪೊಲೀಸ್ರಿಗೆ ಮಾಹಿತಿ ನೀಡಿದ್ದಾನೆ. ಸೋಫಾ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಮಂಜು ಶವ ಪತ್ತೆಯಾಗಿತ್ತು. ತನಿಖೆ ವೇಳೆ ಮಂಜು ಸಾವಿನ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಮಂಜು ಮನೆಗೆ ಮಗನ ಸ್ನೇಹಿತ ಬಂದು ಹೋಗಿದ್ದ ಮಗನ ಸ್ನೇಹಿತ…

Read More

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಲಿದ್ದು, ಇದರ ಮಧ್ಯ ಕ್ರಿಶ್ಚಿಯನ್ ಜಾತಿ ಪಟ್ಟಿಯಲ್ಲಿ, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಲಿಂಗಾಯತ ಕ್ರಿಶ್ಚಿಯನ್ ಸೇರ್ಪಡೆ ಕುರಿತು ಇದೀಗ ರಾಜ್ಯಪಾಲ ಥಾವರ ಚೆಂದ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮರುಪರಿಶೀಲನೆ ಮಾಡಿ ಎಂದು ತಿಳಿಸಿದ್ದಾರೆ. ಜಾತಿ ಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿದಂತೆ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಗೆಹ್ಲೊಟ್ ಹತ್ರ ಬರೆದಿದ್ದಾರೆ. ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಮತ್ತು ದೀರ್ಘಾವಧಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಾಮಾಜಿಕ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಮರುಪರಿಶೀಲಿಸುವಂತೆ ಇದೀಗ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Read More

ಗದಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಜಾತಿಗಣತಿ ಸಮೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಸಚಿವರೇ ಕೆಲವು ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ ಧರ್ಮ ಜಾತಿ ಹೇಳಬೇಕು ಕುರುಬರಲ್ಲಿ ಅನೇಕ ಜಾತಿಗಳಿವೆ ಅವೆಲ್ಲ ಬರೆಸಬೇಡಿ ಕುರುಬ ಅಂತ ಮಾತ್ರ ಬರೆಸಿ ಅಂತ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಗದಗ ನಗರದಲ್ಲಿ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮ, ಜಾತಿ ಹೇಳಬೇಕು. ಇನ್ನು ಕುರುಬರಲ್ಲಿ ಅನೇಕ ಜಾತಿಗಳಿವೆ. ಆದರೆ ಕಾಲಂನಲ್ಲಿ ಅವೆಲ್ಲ ಬರೆಸಬೇಡಿ, ಕೇವಲ ಕುರುಬ ಅಂತ ಮಾತ್ರ ಬರೆಸಿ ಅಂತ ಕರೆ ನೀಡಿದರು.

Read More

ದಾವಣಗೆರೆ : ದಾವಣಗೆರೆಯಲ್ಲಿ ಹಾಡ ಹಗಲೇ ಕೋರ್ಟ್ ಆವರಣದಲ್ಲೆ ಪತ್ನಿಗೆ ಚಾಕುವಿನಿಂದ ಇರಿದು ಪತಿ, ಕೊಲೆಗೆ ಯತ್ನಿಸಿರುವ ಘಟನೆ ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಪತ್ನಿಗೆ ಚಾಕು ಇರಿದ ಬಳಿಕ ಪತಿ ತಾನು ಸಹ ಕೈ ಕೊಯ್ದುಕೊಂಡಿದ್ದಾನೆ. ಪತ್ನಿ ಪವಿತ್ರ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಸದ್ಯ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಪತಿ ಪ್ರವೀಣ್ ಹಾಗೂ ಪತ್ನಿ ಪವಿತ್ರಾಗೆ ಇಬ್ಬರಿಗೂ ನೀಡಲಾಗುತ್ತಿದೆ. ದಾವಣಗೆರೆಯ ಜಾಲಿ ನಗರದ ನಿವಾಸಿಯಾಗಿರುವ ಪ್ರವೀಣ್ ಬೆಂಗಳೂರು ಮೂಲದ ಪವಿತ್ರ ಜೊತೆಗೆ ಮದುವೆಯಾಗಿದ್ದ. ಪರಸ್ಪರ ಪ್ರೀತಿಸಿ ಇಬ್ಬರು ಅಂತರ್ಜಾತಿ ವಿವಾಹವಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಪತ್ನಿ ಪತಿಯನ್ನು ತೊರೆದು ಹೋಗಿದ್ದಳು. ಇಂದು ನ್ಯಾಯಾಲಯದಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಇಬ್ಬರೂ ಬಂದಿದ್ದರು. ಪತ್ನಿಯ ನಡತೆಯ ಮೇಲೆ ಪತಿ ಪ್ರವೀಣ್ ಶಂಕೆ ವ್ಯಕ್ತಪಡಿಸುತ್ತಿದ್ದ.

Read More

ತುಮಕೂರು : ತುಮಕೂರಲ್ಲಿ ಭೀಕರ ಅಪಘಾತ ಸಂಭ ವಿಸಿದ್ದು, ಟ್ಯೂಷನ್ಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಈಚರ್ ವಾಹನ ಒಂದು ಹರಿದಿದೆ. ಘಟನೆಯಲ್ಲಿ ಪಿಯು ವಿದ್ಯಾರ್ಥಿನಿ ಪ್ರೀತಿ (16) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಸ್ಕೂಟಿ ಮೇಲೆ ಸ್ನೇಹಿತೆಯರು ಟ್ಯೂಷನ್ಗೆ ತೆರಳುತ್ತಿದ್ದರು. ಸ್ನೇಹಿತೆ ಪ್ರೇರಣಾ ಜೊತೆಗೆ ಪ್ರೀತಿ ಸಹ ತೆರಳುತ್ತಿದ್ದಳು. ಈ ವೇಳೆ ದ್ವಿಚಕ್ರ ವಾಹನಕ್ಕೆ ಈಚರ ವಾಹನ ಡಿಕ್ಕಿ ಹೊಡೆದ ಪರಿಣಾಮ ಈಚರ್ ವಾಹನ ಬಾಲಕಿಯ ಮೇಲೆ ಹರಿದು ಸ್ಥಳದಲ್ಲೇ ಪ್ರೀತಿ ಸಾವನಪ್ಪಿದ್ದಾಳೆ. ಅಪಘಾತದ ಬಳಿಕ ಈಚರ್ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನಿನ್ನೆ ಸಂಜೆ 5:00ಗೆ ಈ ಒಂದು ಅಪಘಾತ ಸಂಭವಿಸಿದೆ. ಪಾವಗಡ ಟೌನ್ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಯುವತಿಯೊಬ್ಬಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿಯಾಗಿರುವ ಶಹಾ ಜಹಾನ್ (36) ಎಂಬ ಯುವತಿಯನ್ನು ಬಂಧಿಸಲಾಗಿದೆ. ವೈರಲ್ ವಿಡಿಯೋ, ಫೋಟೋ, ಸುದ್ದಿಗಳನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಶಹಾ ಜಹಾನ್ ಅದೇ ರೀತಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಹಳೆಯ ಘಟನೆಯೊಂದರ ವಿಡಿಯೋವನ್ನು ‘ಬೆಂಗಳೂರಿನಲ್ಲಿ ರೌಡಿಗಳ ಪುಂಡಹಾಸ’ ಎಂಬ ಶೀರ್ಷಿಕೆಯಡಿ ಸೆಪ್ಟಂಬರ್ 6ರಂದು ಹಂಚಿಕೊಂಡಿದ್ದರು. ವಿಡಿಯೋವನ್ನು ಲಕ್ಷಾಂತರ ಜನ ವೀಕ್ಷಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಹಾ ಜಹಾನ್‌ಳನ್ನು ಪತ್ತೆಹಚ್ಚಿದ್ದ ಪೊಲೀಸರು ವಿವರಣೆ ಕೇಳಿದಾಗ ಆಕೆ ಪರಿಶೀಲಿಸದೇ ಹಳೆಯ ಘಟನೆಯ ವಿಡಿಯೋವನ್ನು ಬೆಂಗಳೂರಿನಲ್ಲಿ ನಡೆದಿದೆ ಎಂದು ಹಂಚಿಕೊಂಡಿರುವುದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡು ಶಹಾ ಜಹಾನ್‌ಳನ್ನು ಬಂಧಿಸಿದ್ದ ಪೊಲೀಸರು ಎಚ್ಚರಿಕೆ ನೀಡಿ, ಜಾಮೀನಿನನ್ವಯ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದ್ದಾರೆ.

Read More

ಬೆಂಗಳೂರು : ತಡರಾತ್ರಿ ಬೆಂಗಳೂರು ನಗರದಾದ್ಯಂತ ಸುಮಾರು 1,500ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಅಪರಾಧದ ಕೃತ್ಯದಲ್ಲಿ ಭಾಗಿಯಾಗದಂತೆ ಪೊಲೀಸರು ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಸೇರಿದಂತೆ ಸಣ್ಣ-ಪುಟ್ಟ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮೇಲೆ ನಿಗಾ ವಹಿಸಲು ಶುಕ್ರವಾರ ತಡರಾತ್ರಿ ನಗರದಾದ್ಯಂತ ಹಲವು ರೌಡಿಶೀಟರ್‌ಗಳ ಮನೆಗಳ ಮೇಲೆ ಬೆಂಗಳೂರು ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಹಲಸೂರು, ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿನಗರ, ಭಾರತಿನಗರ, ಶಿವಾಜಿನಗರ, ಆಡುಗೋಡಿ, ಕುಮಾರಸ್ವಾಮಿ ಲೇಔಟ್​, ತಿಲಕ್ ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ಈ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Read More