Author: kannadanewsnow05

ಶಿವಮೊಗ್ಗ : ಎದುರಿಗೆ ಬಂದಂತಹ ಬೈಕ್ ಗೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು 40 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಮಗೋಡು ಎಂಬಲ್ಲಿ ನಡೆದಿದೆ. ಹೌದು ಬೆಂಗಳೂರಿನಿಂದ ಹೊಸನಗರ ಮಾರ್ಗವಾಗಿ ಭಟ್ಕಳಕ್ಕೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದಂತ ಬೈಕ್ ಗೆ ಸೈಡ್ ಕೊಡಲು ಹೋಗಿ 40 ಅಡಿ ಆಳದ ಕಂದಕಕ್ಕೆ ಕೆಎಸ್ಆರ್ಟಿಸಿ ಬಸ್ ಉರುಳಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಬಳಿ ಈ ಒಂದು ದುರಂತ ಸಂಭವಿಸಿದೆ. ಎದುರಿಗೆ ಬಂದ ವಾಹನಕ್ಕೆ ಸೈಡ್ ಕೊಡುವಾಗ ಕಂದಕಕ್ಕೆ ಬಸ್ ಉರುಳಿದೆ. ಸುಮಾರು 40 ಅಡಿ ಆಳದಲ್ಲಿ ಮರಕ್ಕೆ ಸಿಲುಕಿ ತಲೆ ಕೆಳಗಾಗಿ ಬಸ್ ನಿಂತಿದೆ. ಮರ ತಡೆಯದಿದ್ದರೆ ಇನ್ನೂ 100 ಅಡಿ ಆಳದ ಒಳಗೆ ಬೀಳುತ್ತಿತ್ತು ಎನ್ನಲಾಗುತ್ತಿದೆ ಬಸ್ನಲ್ಲಿ ಮಹಿಳೆಯರು ಮಕ್ಕಳು ಸೇರಿ, 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪ್ರಾಣಾಪಾಯದಿಂದ…

Read More

ಚಿಕ್ಕಮಗಳೂರು : ಲೋಕಸಭೆಯಲ್ಲಿ ಹಿಂದುತ್ವದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಚಿಕ್ಕಮಂಗಳೂರಲ್ಲಿ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿಟಿ ರವಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ವಿಪಕ್ಷ ನಾಯಕ ಅನ್ನೋ ಜವಾಬ್ದಾರಿಯನ್ನು ಮರೆತಿದ್ದಾರೆ. ತಮ್ಮ ಅಯೋಗ್ಯತನವನ್ನ ಪ್ರದರ್ಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿಪಕ್ಷ ನಾಯಕ ಅನ್ನೋ ಜವಾಬ್ದಾರಿ ಮರೆತಿದ್ದಾರೆ. ಹಿಂದೂಗಳ ಮನಸ್ಸಿನಲ್ಲಿ ದ್ವೇಷ ಭಾವನೆ ಬಿತ್ತುವವರು ಇವರಾಗಿದ್ದಾರೆ. ಹಿಂದೂ ಧರ್ಮ ಸರ್ವೇ ಜನ ಸುಖಿನೋಭವಂತು ಅನ್ನೋದನ್ನ ಪ್ರತಿಪಾದಿಸಿದೆ. ಹಿಂದೂ ಅನ್ನೋದು ವಿಶ್ವವೇ ಒಂದು ಕುಟುಂಬ ಅಂತ ಭಾವಿಸೋದು ಎಂದಿದ್ದಾರೆ. ಅನ್ನ ಬೆಂದಿದೆಯಾ ಅಂತ ನೋಡೋಕೆ ಎಲ್ಲಾ ಅಕ್ಕಿಯನ್ನ ಮುಟ್ಟಿ ನೋಡಬೇಕಿಲ್ಲ. ರಾಹುಲ್ ಗಾಂಧಿ ತಮ್ಮ ಚೊಚ್ಚಲ ಭಾಷಣದಲ್ಲಿಯೇ ನಾನು ಆ ಸ್ಥಾನಕ್ಕೆ ಯೋಗ್ಯನಲ್ಲ ಎಂಬುದನ್ನು ಪ್ರದರ್ಶನ ಮಾಡಿದ್ದಾರೆ. ನನಗೆ ಭಾರತ, ಭಾರತೀಯತೆ, ಹಿಂದೂ, ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎಂದು ಟ್ವೀಟ್ ಮಾಡಿಸಿದ್ದಾರೆ ಎನಿಸುತ್ತದೆ. ಸಂಸತ್ತಿನ ಕಲಾಪದಲ್ಲಿ ಮಾತನಾಡುವ…

Read More

ಮಂಗಳೂರು : ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಂಗಳೂರು ಕರಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಬಡಿದಾಟ ನಡೆದಿರುವ ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ಬೆಳಗಾವಿ : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯದಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಿಂದ 13 ಯುವಕರು ಪ್ರವಾಸಕ್ಕೆ ಎಂದು ಮಹಾರಾಷ್ಟಕ್ಕೆ ತೆರಳಿದ್ದರು. ನಿಪ್ಪಾಣಿಯ ಗಣೇಶ ಕದಂ, ಹಾಗೂ ಪ್ರತೀಕ್ ಪಾಟೀಲ್ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ನೀರು ಪಾಲಾದ ಯುವಕರಿಗಾಗಿ ಅಗ್ನಿಶಾಮಕದಳ ಸಿಬ್ಬಂದಿಗಳು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.

Read More

ಮೈಸೂರು : ಮೈಸೂರಲ್ಲಿ ವೈದ್ಯರ ನಿರ್ಲಕ್ಷಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಹೌದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಹಾಗಾಗಿ ಸೇಂಟ್ ಮೇರಿಸ್ ಆರೋಗ್ಯ ಕೇಂದ್ರದ ವೈದ್ಯರ ವಿರುದ್ಧ ಇದೀಗ ನಿರ್ಲಕ್ಷ ಆರೋಪ ಕೇಳಿ ಬಂದಿದ್ದು, ಬೆಳಗನಹಳ್ಳಿಯ ಶಿವರಾಜ್ ಎಂಬುವವರ ಪುತ್ರಿ ತನುಷ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿಬಂದಿದೆ. ನಿನ್ನೆ ಬಾಲಕಿಗೆ ವಾಂತಿ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.ರಾತ್ರಿ ಪಾಳಿಯ ವೈದ್ಯರು ಬಾಲಕಿ ತನುಷಾಗೆ ಚಿಕಿತ್ಸೆ ನೀಡಿದ್ದರು. ಇಂದು ಬೆಳಿಗ್ಗೆ ಚೆನ್ನಾಗೇ ಇದ್ದ ಬಾಲಕಿ ತನುಷ ದಿಢೀರನೆ ಸಾವನಪ್ಪಿದ್ದಾಳೆ. ತನುಷ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಪೋಷಕರು ಇದೀಗ ಆರೋಪಿಸುತ್ತಿದ್ದು, ಆರೋಗ್ಯ ಕೇಂದ್ರಕ್ಕೆ ಟಿ ಎಚ್ ಓ ಡಾ. ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More

ಕಲಬುರ್ಗಿ : ಇತ್ತೀಚಿಗೆ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಉಪಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಇದರ ಬೆನ್ನಲ್ಲೇ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಹೌದು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳನ್ನು ಕೊಲ್ಲೂರಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ವಾಂತಿ ಮತ್ತು ತಲೆ ಸುತ್ತುವಿಕೆ ಕಂಡುಬಂದಿದೆ ಎನ್ನಲಾಗಿದ್ದು, ಶಾಲಾ ಆಡಳಿತದ ವಿರುದ್ಧ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಸತಿ ನೀಲಯದಲ್ಲೂ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಇದೀಗ ಕಲ್ಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ನಡೆದಿದೆ.…

Read More

ಬೆಂಗಳೂರು : ರಾಜರ ಕಾಲದಲ್ಲೂ ನಾಣ್ಯ ಮತ್ತು ತೆರಿಗೆ ವಸೂಲಿ ಮಾಡ್ತಿದ್ರು. ರಾಜ್ಯ ನಡೆಸಲು ತೆರಿಗೆ ಬೇಕೇ ಬೇಕು. ರಾಜರು ಆಗಲಿ, ರಾಜ್ಯ ಮತ್ತು ಕೇಂದ್ರ ಆಗಲಿ ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸುವುದು.ಇಂದಿಗೆ GST ಜಾರಿಗೆ ಬಂದು 7 ವರ್ಷ ಆಗಿದೆ. ತೆರಿಗೆ ಹೆಚ್ಚು ಶೇಖರಣೆ ಮಾಡಿದವರಿಗೆ ಪ್ರಶಸ್ತಿ ಕೊಟ್ಟಿದ್ದೇವೆ‌‌. ಅವರೆಲ್ಲರಿಗೂ ಸರ್ಕಾರದಿಂದ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್‌ಟಿ ದಿನಾಚರಣೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂವಿಧಾನದ ಮೂಲಕ ರಾಜ್ಯ ಮತ್ತು ಕೇಂದ್ರ ತೆರಿಗೆ ಅಧಿಕಾರ ವಿಧಿಸುವ ಅಧಿಕಾರ ಪಡೆಯಿತು‌. ಈ ಸಂವಿಧಾನದಲ್ಲಿ ವಿವರವಾಗಿದೆ ರಾಜ್ಯ ಮತ್ತು ಕೇಂದ್ರ ಯಾವ ಯಾವುದರ ಮೇಲೆ ತೆರಿಗೆ ವಿಧಿಸಬೇಕು ಅಂತ ಇದೆ. ಕರ್ನಾಟಕ ಸರ್ಕಾರ GST‌ ಬರುವುದಕ್ಕಿಂತ ಮುಂಚೆಯೂ ತೆರಿಗೆ ವಸೂಲಿ ಮಾಡ್ತಿದ್ರು. ಎರಡು ವಿಧ ಇದೆ.. ತೆರಿಗೆ ವಸೂಲಿಯಲ್ಲಿ ಪರೋಕ್ಷ ಮತ್ತು ನೇರ ಅಂತ ಇದೆ ಎಂದು ತಿಳಿಸಿದರು. ನಾವು…

Read More

ಬೆಂಗಳೂರು : ಒಂದು ಕಾಲದಲ್ಲಿ ನಾನು ಸಿಗರೇಟ್ ಹೆಚ್ಚು ಸೇದುತ್ತಿದ್ದೆ. ಆದರೆ ಸಿಗರೇಟ್ ಹೆಚ್ಚು ಸೇದುವುದರಿಂದ ಆಯಸ್ಸು ಕಡಿಮೆ ಆಗುತ್ತದೆಂದು ತಿಳಿದು ಸಿಗರೇಟ್ ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಂಗು ಸಿಗರೇಟ್ ಸೇದುವ ಅಭ್ಯಾಸವಿತ್ತು. ಹಾರ್ಟ್ ಸಮಸ್ಯೆ ಬಂತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದೆ ಎಂದು ಅವರ ಅನುಭವ ಸ್ಮರಿಸಿದರು. ಸಿಗರೇಟ್ ಆರೋಗ್ಯಕ್ಕೆ ಮಾರಕ, ಕ್ಯಾನ್ಸರ್ ಬರುತ್ತದೆ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು ನಮ್ಮ ಜೀವನ ಶೈಲಿಯ ಜೊತೆಗೆ ಆಹಾರ ಪದ್ಧತಿ ಬದಲಾಯಿಸಿಕೊಳ್ಳಿ, ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ರೋಗಿಯ ಪ್ರಾಣ ಉಳಿಸಿದರೆ…

Read More

ಬೆಂಗಳೂರು : ಗೌರವ ಇಲ್ಲದ ಕಡೆ ನಾವು ಯಾಕೆ ಇರಬೇಕು. ರಾಜೀನಾಮೆ ಕೊಡುವುದಕ್ಕೂ ಹಿಂದೆಮುಂದೆ ನೋಡುವುದಿಲ್ಲ ಎಂದು ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಸೇರಿದರೆ ಅವರು ಸಚಿವರು‌. ಅವರೇನು ಮೇಲಿಂದ ಬಂದಿಲ್ಲ. ಸಚಿವರು ಮೊದಲು ಶಾಸಕರೇ ಅಲ್ವಾ? ಅದನ್ನು ಅರ್ಥ ಮಾಡಿಕೊಳ್ಳಿ ಅವರಿಗೂ ನೋಟಿಸ್​ ಕೊಡಲೇಬೇಕಾಗುತ್ತದೆ. ಪ್ರಸಂಗ ಬಂದರೆ ದಾಖಲೆ ಕೊಡುತ್ತೇನೆ. ನಾನು ಭಯಪಡುವುದಿಲ್ಲ ಬಹಿರಂಗವಾಗಿಯೇ ಹೇಳುತ್ತೇನೆ. ಗೌರವ ಇಲ್ಲದ ಕಡೆ ನಾವು ಯಾಕೆ ಇರಬೇಕು ಎಂದು ಭೈರತಿ ಸುರೇಶ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಅನುದಾನ ಸಂಬಂಧ ಸಚಿವ ಬೈರತಿ ಸುರೇಶ್ ಜೊತೆಗೆ ಉಂಟಾಗಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಸಮಾಧಾನ ವ್ಯಕ್ತಪಡಿಸಿಲ್ಲ, ಪ್ರಸಂಗ ಬಂದರೆ ವ್ಯಕ್ತಪಡಿಸುತ್ತೇನೆ. ನಾನು ದುರಾಡಳಿತವನ್ನು ಸಹಿಸೋದಿಲ್ಲ. ನಮ್ಮ ಬೋರ್ಡ್​​ನಲ್ಲಿ ದುರಾಡಳಿತ ನಡೆಯುತ್ತಿದೆ. ಆ ಬೋರ್ಡ್​​ಗೆ ನಾನು ಹೆಡ್. ಆದರೆ ಅಲ್ಲಿ ವ್ಯವಸ್ಥೆ ಸರಿಯಿಲ್ಲ ಎಂದು ವಾಗ್ದಾಳಿ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತೆ ಮತ್ತೊಂದು ಘಟನೆ ನಡೆದಿದ್ದು, ಜ್ಯೂಸ್ ಕುಡಿದು ಪಿಜಿಗೆ ವಾಪಸ್ ಆಗುತ್ತಿದ್ದ ವೇಳೆ ದುರುಳರು ಯುವತಿಯ ಮೈಮುಟ್ಟಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯದ ಎಚ್ ಎಂ ಟಿ ಲೇಔಟ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಬೆಂಗಳೂರಲ್ಲಿ ಇತ್ತೀಚ್ಚಿಗೆ ರೋಡ್ ರೋಮಿಯೋ ಗಳ ಹುಚ್ಚಾಟಕ್ಕೆ ಯುವತಿಯರು ಬೆಚ್ಚಿ ಬಿದ್ದಿದರೆ. ಬೆಂಗಳೂರಿನ ಪಿನ್ಯಾದ ಹೆಚ್ ಎಂ ಟಿ ಲೇಔಟ್ ನಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ. ಜ್ಯೂಸ್ ಕುಡಿದು ವಾಪಸ್ ಆಗುತ್ತಿದ್ದ ಯುವತಿಯ ವೈ ಮುಟ್ಟಿ ವಿಕೃತಿ ಮೆರೆದಿದ್ದಾರೆ. ಹೌದು ಕಾಲೇಜು ಮುಗಿಸಿಕೊಂಡು ಯುವತಿಯ ಜ್ಯೂಸ್ ಕುಡಿದು ವಾಪಸ್ ಆಗುತ್ತಿದ್ದ ಯುವತಿಯ ಮೈಮುಟ್ಟಿ ದುರುಳರು ವಿಕೃತಿ ಮೆರೆದಿದ್ದಾರೆ.ಯುವತಿ 8ನೇ ಮೈಲಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಯುವತಿ ಬಿಬಿಎ ಓದುತ್ತಿದ್ದಾಳೆ. ಜ್ಯೂಸ್ ಕುಡಿದು ವಾಪಸ್ ಪಿಜಿಗೆ ತೆರಳುವಾಗ ಈ ಒಂದು ಘಟನೆ ನಡೆದಿದೆ.ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ನಂತರ ಯುವತಿ ಜೋರಾಗಿ ಕಿರುಚಿಕೊಂಡಿದ್ದಾಳೆ. ವಿಕೃತಿ ಮೆರೆದು ಬೈಕ್ ನಲ್ಲಿ ಪರಾರಿಯಾದ…

Read More