Author: kannadanewsnow05

ಬೆಂಗಳೂರು, ಜುಲೈ 29 : ಮುಂದಿನ ಎರಡೂವರೆ ವರ್ಷಗಳಲ್ಲಿ ಕ್ಷೇತ್ರವಾರು ಏನೆಲ್ಲ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಕರೆದಿರುವ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಇಂದಿನಿಂದ ನಮ್ಮ ಪಕ್ಷದ ಶಾಸಕರುಗಳ ಜೊತೆ ಜಿಲ್ಲಾವಾರು ಕರೆದು ಸಭೆ ನಡೆಸಲಿದ್ದಾರೆ. ಶಾಸಕರುಗಳಿಗೆ 50 ಕೋಟಿ ರೂ. ಅನುದಾನ ನೀಡಲು ತೀರ್ಮಾನ ಮಾಡಿದ್ದಾರೆ. ಬೇರೆ ಅಭಿವೃದ್ಧಿ ಕಾರ್ಯಗಳು, ಪಕ್ಷದ ಸಂಘಟನೆಯ ಬಗ್ಗೆ ಮಾತನಾಡುತ್ತಾರೆ. ಇದು ಹೊಸದೇನು ಅಲ್ಲ. ಹಿಂದೆಯೂ ಕೂಡ 2013 ರಿಂದ 2018ರವರೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ಮಾಡಿದ್ದರು. ನಾನು ಆಗ ಅಧ್ಯಕ್ಷನಾಗಿದ್ದೆ. ನಾವೆಲ್ಲ ಶಾಸಕರುಗಳ ಜೊತೆ ಸಮಸ್ಯೆಗಳನ್ನು ಆಲಿಸಿದ್ದೇವು ಎಂದು ಹೇಳಿದರು. ಐದು ವರ್ಷದ ಅವಧಿಯಲ್ಲಿ ಮಧ್ಯಕ್ಕೆ ಬಂದಿದ್ದೇವೆ. ಬಹಳ ಮುಖ್ಯವಾಗುತ್ತದೆ. ಮುಂದಿನ ಎರಡುವರೆ ವರ್ಷಗಳಲ್ಲಿ ಕ್ಷೇತ್ರವಾರು ಏನೆಲ್ಲ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದು ಚರ್ಚೆ ಮಾಡಲಾಗುತ್ತದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್…

Read More

ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಅನುದಾನ ನೀಡಿರುವ ವಿಚಾರವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ 28 ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಸಕರ ಜೊತೆಗೆ ಸಭೆ ಮಾಡಲಿದ್ದಾರೆ.ಆದರೆ ಈ ಒಂದು ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಿಲ್ಲ. ಈ ವಿಚಾರವಾಗಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಸಿಎಂ ಆಗಿರುವವರಿಗೆ ಏನು ಅಧಿಕಾರಿಯೋ ಅದನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರ ಸಮಸ್ಯೆ ಕೇಳುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು ಶಾಸಕರ ಸಮಸ್ಯೆ ಕೇಳೋಕೆ ಸಿಎಂ ಮುಂದಾಗಿದ್ದಾರೆ. ಅವರಿಗೆ ಇರುವ ಅಧಿಕಾರವನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಸುರ್ಜೆವಾಲಾ ಸಾಹೇಬ್ರು ಅನೇಕ ವಿಚಾರ ಹೇಳಿದ್ದಾರೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ಅವರು ತಂದಿದ್ದಾರೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.

Read More

ಬೆಂಗಳೂರು : ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ನಟಿ ರಮ್ಯಾ ಬೆಂಗಳೂರು ಕಮಿಷನರ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ 43 ದರ್ಶನ್ ಫ್ಯಾನ್ಸ್ ಪೇಜುಗಳ ಮೇಲೆ ಎಫ್ಐಆರ್ ಕೂಡ ದಾಖಲಾಗಿದ್ದು ಈ ವಿಚಾರವಾಗಿ ಬೆಂಗಳೂರು ಕಮಿಷನರ್ ಸೀಮಂತ್ ಸಿಂಗ್ ಮಾತನಾಡಿ, ನಾವು ಈ ಒಂದು ದೂರನ್ನು ಸಿಸಿಬಿಗೆ ಕೊಟ್ಟಿದ್ದೇವೆ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಿಸಿಬಿ ಸೈಬರ್ ಠಾಣೆಗೆ ನಟಿ ರಮ್ಯಾ ದೂರು ಕೊಟ್ಟಿದ್ದೇವೆ. ಅಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ದೂರಿನ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾರೆ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದರ ಬಗ್ಗೆ ಸಿಸಿಬಿ ಜಾಯಿಂಟ್ ಕಮಿಷನರ್ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

Read More

ಬೆಂಗಳೂರು : ಲವರ್ಸ್ ಜೊತೆ ಮೋಜು ಮಸ್ತಿ ಮಾಡಲು ಕಳ್ಳತನ ಮಾಡಿದ್ದವರ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂವರು ವಿದ್ಯಾರ್ಥಿಗಳನ್ನು ಇದೀಗ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಿಕಾಂ ಪದವಿ ಓದುತ್ತಿದ್ದ ಯಶವಂತ ರಮೇಶ್ ಮತ್ತು ತನುಷ್ ಬಂಧಿತರು ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಈ ಮೂವರು ಬಿಕಾಂ ಪದವಿ ಓದುತ್ತಿದ್ದರು ಲವರ್ಸ್ ಜೊತೆಗೆ ಗೋವಾಕ್ಕೆ ಹೋಗುವುದಕ್ಕೆ ಇವರ ಬಳಿ ಹಣ ಇರಲಿಲ್ಲ. ಹಾಗಾಗಿ ಮೂರು ವಿದ್ಯಾರ್ಥಿಗಳು ಮನೆಗಳ್ಳತನದ ಹಾದಿ ಹಿಡಿದಿದ್ದರು. ಪರಿಚಯಸ್ಥ ಶ್ರೀನಿವಾಸ್ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ.ಕಳ್ಳತನ ಮಾಡಿ ಲವರ್ಸ್ ಜೊತೆಗೆ ಹೋಗಿದ್ದರು. ಗೋವಾ ಪಾರ್ಟಿ ಮುಗಿಸಿ ಬರುತ್ತಿದ್ದಂತೆ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ ಕೊತ್ತನೂರು ಠಾಣೆ ಪೋಲಿ ಹೆಸರಿಂದ ಮೂವರು ವಿದ್ಯಾರ್ಥಿಗಳ ಬಂಧನವಾಗಿದೆ.ಬಂದಿತರಿಂದ ಅರ್ಧ ಕೆಜಿಗು ಹೆಚ್ಚು ಚಿನ್ನಾಭರಣ ಮತ್ತು 10 ಲಕ್ಷ ರೂಪಾಯಿ ನಗದು ಜಪ್ತಿ ಮಾಡಿಕೊಳ್ಳಲಾಗಿದೆ.

Read More

ಬೆಂಗಳೂರು : ನಟಿ ರಮ್ಯಾ ಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜಿ ಕಳುಹಿಸಿದ್ದಕ್ಕೆ ಈಗಾಗಲೇ ನಿನ್ನೆ ನಟಿ ರಮ್ಯಾ ಕಮಿಷನರ್ ಗೆ ದೂರು ನೀಡಿದ್ದಾರೆ. ಇತ್ತ ನಟ ಪ್ರಥಮ್ ಗೆ ರೌಡಿಶೀಟರ್ ಬೇಕರಿ ರಘು ಕೊಲೆ ಬೆದರಿಕೆ ಹಾಕಿದ್ದು ವಿಚಾರವಾಗಿ ದರ್ಶನ್ ಫ್ಯಾನ್ಸ್ ಗಳನ್ನು ನಟ ಪ್ರಥಮ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಟ್ವೀಟ್ ನಲ್ಲಿ, ನನ್ನ ಟ್ರಿಗರ್ ಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ ಎಂದು ಪೋಸ್ಟ್ ಹಾಕಿದ್ದು ತೀವ್ರ ಕುತೂಹಲ ಕೆರಳಿಸಿದೆ. ಟ್ವೀಟ್ ನಲ್ಲಿ ಎಲ್ಲರೂ ನೆನ್ನೆ ನೆಮ್ಮದಿಯಾಗಿ ಮಲಗಿದ್ದು ಎದ್ರಾ?ಸಂತೋಷ!ಇನ್ಮೇಲೆ ಸ್ವಲ್ಪ ನಿದ್ರೆ ಕಷ್ಟ ಆಗ್ಬೋದು! ಸ್ವಲ್ಪ ಹೊತ್ತಲ್ಲೇ ಗೊತ್ತಾಗುತ್ತೆ ಈ ಸಲ ತಗೊಳೋ step complaintಥರ ಇರಲ್ಲ! ನನ್ನ triggerಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ! ಸ್ವಲ್ಪ ಸಮಯ ಕೊಡಿ,ನಾವು ಬಾಡಿಗೆ ಕಟ್ಟುತೀವಾ ಇಲ್ಲಾ ಕಟ್ಟುಸ್ತೀವಾ ಎಲ್ಲಾ ಗೊತ್ತಾಗುತ್ತೆ! ಇನ್ನು ನಿನ್ನೆಯೂ ಸಹ ಪ್ರಥಮ್ ಅವರು ಟ್ವೀಟ್ ನಲ್ಲಿ ನಾಳೆ ದೊಡ್ಡದಾಗಿ ಅಗುತ್ತೆ! ತುಂಬಾ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಆಸ್ತಿಯ ವಿವಾದ ಹಿನ್ನೆಲೆಯಲ್ಲಿ ಪತಿಯೊಬ್ಬ ಮಗನ ಜೊತೆ ಸೇರಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ, ಕನಕಪುರ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕುರುಬರ ದೊಡ್ಡಿಯಲ್ಲಿ, ಜಮೀನಿನಲ್ಲಿ ಮಾರಕಾಸುರದಿಂದ ಹೊಡೆದು ಗೌರಮ್ಮ (45) ಎನ್ನುವ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಹಲವು ವರ್ಷಗಳಿಂದ ಪತಿ ಮತ್ತು ಮಗನಿಂದ ಗೌರಮ್ಮ ದೂರ ಇದ್ದರು. ತನ್ನ ಹೆಸರಿನಲ್ಲಿದ್ದ ಜಮೀನು, ಮಾರಾಟಕ್ಕೆ ಗೌರಮ್ಮ ಮುಂದಾಗಿದ್ದರು. ಇದೇ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಜಗಳ ಆಗಿತ್ತು. ಗೌರಮ್ಮ ಪತಿ ಶಿವರಾಜು (48) ಮತ್ತು ಮಗ ಸಿದ್ದರಾಜು (28) ನನ್ನು ಕನಕಪುರ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಬೆಳಗಾವಿಯಲ್ಲಿ ನಿರಂತರ ಮಳೆಗೆ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಘಡದಲ್ಲಿ ಈ ಒಂದು ಘಟನೆ ನಡೆದಿದೆ. ಶಾಲೆ ಆರಂಭಕ್ಕೂ ಮುನ್ನ ಮರ ಬಿದ್ದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೃಹತ್ ಗಾತ್ರದ ಮಾವಿನ ಮರ ಬಿದ್ದಿದ್ದರಿಂದ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಹಾನಿಗೆ ಒಳಗಾಗಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಮತ್ತು ಶಾಲಾ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಚಾರವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ, ಕಾಂಗ್ರೆಸ್ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿರುವ ವಿಚಾರವಾಗಿ ಬಿಬಿಎಂಪಿಯ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು ಶಾಸಕರನ್ನು ಹೊರತುಪಡಿಸಿ ಉಳಿದ ಶಾಸಕರ ಜೊತೆಗೆ ಮಾತ್ರ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಹೌದು ಬೆಂಗಳೂರು ಶಾಸಕರಿಗೆ ಬಿಬಿಎಂಪಿ ಮೂಲಕ ಅನುದಾನ ನೀಡಲು ಇದೀಗ ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಬೆಂಗಳೂರಿನ 28 ಶಾಸಕರಿಗೂ ಅನುದಾನ ನೀಡುವ ಹೊಣೆ ಡಿಕೆ ಶಿವಕುಮಾರ್ ಅವರ ಹೆಗಲಿಗಿದೆ. ಈ ಬಗ್ಗೆ ಮಾಹಿತಿ ನೀಡದೆ ಉಳಿದ ಶಾಸಕರ ಜೊತೆಗೆ ಮಾತ್ರ ಸಿಎಂ ಸಿದ್ದರಾಮಯ್ಯ ಸಭೆ ಮಾಡುತ್ತಿದ್ದಾರೆ.ಬಿಬಿಎಂಪಿ ವ್ಯಾಪ್ತಿಯ ಶಾಸಕರಿಗೆ ಸಮಾಧಾನ ಮಾಡಬೇಕಾದ ಹೊಣೆ ಸದ್ಯ ಡಿಕೆ ಶಿವಕುಮಾರ್ ಹೆಗಲಿಗೆ ಇದೆ. ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ಬೇಸರಗೊಂಡಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.

Read More

ಬೆಂಗಳೂರು : ನಟಿ ರಮ್ಯಾ ಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್ ವಿಚಾರವಾಗಿ ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಗೆ ಕೆಪಿಸಿಸಿ ಮಹಿಳಾ ಘಟಕ ದೂರು ನೀಡಿದೆ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೇ ಸೌಮ್ಯ ರೆಡ್ಡಿ ಈ ಕುರಿತು ದೂರು ನೀಡಿದ್ದಾರೆ. ಹೌದು ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದರ ಕುರಿತು ಸದ್ಯ ಭಾರಿ ಚರ್ಚೆ ಆಗುತ್ತಿದ್ದು, ರಮ್ಯಾ ಅವರು ಕೂಡ ನಿನ್ನೆ ಕಮಿಷನರ್ ಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವಹೇಳನಕಾರಿ ಸಂದೇಶಗಳನ್ನು ಪರಿಶೀಲಿಸಬೇಕು ಸರಿಯಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

Read More

ಬೆಂಗಳೂರು : ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ದೂರು ನೀಡಿರುವ ವಿಚಾರವಾಗಿ ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ಆಗಬಾರದು. ಅಧಿಕಾರಿಗಳಿಗೆ ನಾನು ಯಾವುದೇ ಸೂಚನೆಯನ್ನು ಕೊಟ್ಟಿಲ್ಲ. ಪೊಲೀಸ್ ಕಮಿಷನರ್ ಈ ಕುರಿತು ಕ್ರಮ ತೆಗೆದುಕೊಳ್ಳುತ್ತಾರೆಎಂದು ಗೃಹ ಜಿ. ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯಲ್ಲಿ ಯಾವುದೇ ತಪ್ಪು ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹುದ್ದೆಗಳಿಗೂ ಸಮರ್ಥರು ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಯಾರು ಸಿಎಂ ಆಗಬೇಕು ಎಂದು ನಿರ್ಧಾರ ಮಾಡುವುದೇ ಮಲ್ಲಿಕಾರ್ಜುನ್ ಖರ್ಗೆ. ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದರೆ ತಪ್ಪು ಭಾವಿಸುವ ಅಗತ್ಯ ಇಲ್ಲ ಖರ್ಗೆ ಏನಾದರೂ ಹೇಳಿದಾಗ ತಪ್ಪಾಗಿ ಭಾವಿಸುವ ಅಗತ್ಯವೇ ಇಲ್ಲ. ಎಂದು ಬೆಂಗಳೂರಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ವಿಜಯಪುರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಕಷ್ಟಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದು ನಾನು ಆದರೆ ಮುಖ್ಯಮಂತ್ರಿಯಾದದ್ದು ಎಸ್ಎಂ ಕೃಷ್ಣ…

Read More