Subscribe to Updates
Get the latest creative news from FooBar about art, design and business.
Author: kannadanewsnow05
BREAKING : ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿ, ಮತಾಂತರಕ್ಕೆ ಯತ್ನ : ಇಬ್ಬರು ಅರೆಸ್ಟ್!
ಹಾವೇರಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇಳಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೌದು ಅಪ್ರಾಪ್ತ ಬಾಲಕಿಗೆ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಅಪ್ರಾಪ್ತ ಬಾಲಕಿಗೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಲೈಂಗಿಕ ದೌರ್ಜನ್ಯ ಎಸಗಿ, ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಆರೋಪಿ ಮದುವೆ ಆಗುತ್ತೇನೆ ಅಂತ ಬೆದರಿಕೆ ಹಾಕಿದ ಆರೋಪ ಕೂಡ ಕೇಳಿಬಂದಿದೆ. ಈ ಕುರಿತಂತೆ ಕರ್ಜಗಿ ಗ್ರಾಮದ ಇಬ್ಬರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು, ಮಹಬೂಬ್ ಅಲಿ (28) ಹಾಗೂ ಸೋಯಲ್ ಸಾಬ್ (20) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್…
ಬೆಂಗಳೂರು : ಹೊಸ ವರ್ಷಕ್ಕೆ ಸಂಪುಟ ಪುನರಚನೆ ಆಗುತ್ತಾ ಎನ್ನುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದು, ಸಚಿವ ಸಂಪುಟ ಪುನಾರಚಣೆ ಕುರಿತಂತೆ ಹೈ ಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದು ತಿಳಿಸಿದರು. ಈ ಮೂಲಕ ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಕ್ಕೆ ಸಂಪುಟದಲ್ಲಿ ಸರ್ಜರಿ ಮಾಡುತ್ತೀರಾ, ಸಂಪುಟ ಪುನಾರಚನೆ ಆಗುತ್ತಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟ ಪುನರ್ ರಚನೆ ಕುರಿತಂತೆ ಹೈಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು. ಹಾಗಾಗಿ ಸಿಎಂ ಹೇಳಿಕೆಯಿಂದ ಇದೀಗ ಸಂಪುಟ ಸಭೆ ಪುನಾರಚನೆ ಮತ್ತೆ ಜೀವ ಪಡೆದಿದೆ. ಹೊಸ ವರ್ಷದಲ್ಲಿ ಹೊಸ ತಂಡ ಕಟ್ಟುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಸಂಪುಟ ಪುನರಚನೆ ಬಗ್ಗೆ ಬೆಳವಣಿಗೆ ಆಗಿದ್ದು, ಕೆಲ ಪ್ರಭಾವಿ ನಾಯಕರು ತಡೆದಿಂದಾಗಿ ಈ ಒಂದು…
ಬೆಂಗಳೂರು : ಹೊಸ ವರ್ಷದ ಶುಭಾಶಯ ತಿಳಿಸಲು ಐಪಿಎಸ್, ಐಎಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ವರ್ಗ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುವಜನತೆ ನಮ್ಮ ಆಸ್ತಿ, ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು. ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಭೇಟಿಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದು, ಹೊಸ ವರ್ಷದ ಶುಭಾಶಯ ತಿಳಿಸಲು ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದರು. ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ. ಪ್ರಾದೇಶಿಕ ಅಸಮತೋಲನ ಅಸಮಾನತೆ ತೊಡೆಯಲು ಸಹಕಾರ ಬೇಕು. ಈ ವರ್ಷದ ಕಾರ್ಯ ಕ್ಷಮತೆ ಹೆಚ್ಚಿಸಿಕೊಳ್ಳೋಣ ಯುವಜನತೆ ನಮ್ಮ ಆಸ್ತಿ ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು. ಬದುಕಿನಲ್ಲಿ ಏಳು ಬೀಳು ಸಹಜ. ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ…
ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ…
ನವದೆಹಲಿ : ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ನವದೆಹಲಿಯಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿದ್ದು, ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೇಕರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ.ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ಪುನೀತ್ ಖುರಾನ್, ಬೇಕರಿ ಮಾಲೀಕತ್ವದ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆತ್ಮಹತ್ಯೆಗೂ ಮುನ್ನ ಪುನೀತ್ ಖುರಾನ್ ಗೆ ಪತ್ನಿ ಕರೆ ಮಾಡಿದ್ದಳು. ತನಗೆ ಮತ್ತು ತನ್ನ ಕುಟುಂಬವನ್ನು ಅವಮಾನಿಸಿದ್ದಾನೆ ಎಂದು ಆರೋಪಿಸಿರುವ ಆಕೆ, ಮೊಬೈಲ್ ನಲ್ಲಿ ಮಾತನಾಡುವ ವೇಳೆ ತನ್ನ ಹಾಗೂ ಪುನೀತ್…
ರಾಮನಗರ : ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಭಾರಿ ದುರಂತ ಒಂದು ತಪ್ಪಿದ್ದು 110 ಪ್ರಯಾಣಿಕರನ್ನು ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ, ಪ್ರಪಾತಕ್ಕೆ ಬೀಳುವ ಮುನ್ನ ಕೂದಲಿ ಅಂತರದಲ್ಲಿ ಪಾರಾಗಿರುವ ಘಟನೆ, ಕನಕಪುರದ ಸಂಗಮ ಘಾಟ್ ಬಳಿ ನಡೆದಿದೆ. ಹೌದು ಹೊಸ ವರ್ಷದ ದಿನ ಭಾರಿ ದುರಂತ ತಪ್ಪಿದೆ. ಕನಕಪುರದ ಸಂಗಮ ಘಾಟ್ ಬಳಿ ಬಸ್ ಬ್ರೇಕ್ ಫೇಲ್ ಆಗಿದೆ. ಬಸ್ ನಲ್ಲಿದ್ದ 110 ಪ್ರಯಾಣಿಕರು ಜಸ್ಟ್ ಮಿಸ್ ಆಗಿದ್ದಾರೆ. ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಪಾತಕ್ಕೆ ಬೀಳುತ್ತಿದ್ದ ಬಸ್ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ತಡೆಗೋಡೆಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಅದೃಷ್ಟವಶಾತ್ 110 ಪ್ರಯಾಣಿಕರು ಬಚಾವ್ ಆಗಿದ್ದಾರೆ.
ಯಾದಗಿರಿ : ಹೊಸ ವರ್ಷಾಚರಣೆಯ ಸಂಭ್ರಮದ ಹೊತ್ತಲ್ಲೇ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಭೀಕರ ವಾದಂತಹ ಕೊಲೆಯಾಗಿದ್ದು, ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಚಗುಂಡಾಳ್ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಸುರಪುರ ತಾಲೂಕಿನ ಮಾಚಗುಂಡಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಶರಣಪ್ಪ ಮೇಟಿ (28) ಎನ್ನುವ ವ್ಯಕ್ತಿಯ ಬರ್ಬರ ಕೊಲೆಯಾಗಿದೆ.ಶರಣಪ್ಪಗೆ ಚಾಕುವಿನಿಂದ ಮನಬಂದಂತೆ ಇರಿದು ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಕುತ್ತಿಗೆ ಬಳಿಗೆ ಚಾಕು ಬಿಟ್ಟು ಪಾತಕಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಒಂದು ಕೊಲೆಗೆ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತಂತೆ ಸುರಪುರ ಠಾಣೆ ಪೊಲೀಸರು, ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ರಾಯಚೂರು : ಕಳೆದ ವರ್ಷ ಬಳ್ಳಾರಿ, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಿತ್ತು. ಇದೀಗ ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು, ನಿನ್ನೆ ಕೊಪ್ಪಳದಲ್ಲಿ ಓರ್ವ ಬಾಣಂತಿ ಸಾವನಪ್ಪಿದ್ದರೆ, ಇಂದು ನಸುಕಿನ ವೇಳೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಮತ್ತೋರ್ವ ಬಾಣಂತಿ ಹಾಗೂ ಮಗು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಿವಲಿಂಗಮ್ಮ ಎನ್ನುವ ಬಾಣಂತಿ ಸಾವನಪ್ಪಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮಗು ಹಾಗು ಬಾಣಂತಿ ಶಿವಲಿಂಗಮ್ಮ (21) ಸಾವನ್ನಪ್ಪಿದ್ದಾ. ಜಿಲ್ಲೆಯಲ್ಲಿ ಅಕ್ಟೋಬರ್ ನಿಂದ ಇದುವರೆಗೂ 11 ಬಾಣಂತಿಯ ಸಾವಾಗಿದೆ. ದೇವದುರ್ಗ ತಾಲೂಕಿನ ಮಸದಾಪುರ ಗ್ರಾಮದ ನಿವಾಸಿ ಶಿವಲಿಂಗಮ್ಮ ಡಿಸೆಂಬರ್ 27 ರಂದು ಸಿಜೇರಿಯನ್ ಮೂಲಕ ಶಿವಲಿಂಗಮ್ಮಗೆ ಹೆರಿಗೆ ಆಗಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಶಿವಲಿಂಗಮ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ 5 ಗಂಟೆಗೆ ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗು ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷದಿಂದಲೇ ಬಾಣಂತಿ ಶಿವಲಿಂಗಮ್ಮ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗುತ್ತಿದೆ.…
ಬೆಂಗಳೂರು : ಕ್ಯಾನ್ಸರ್ ಹಿನ್ನೆಲೆಯಲ್ಲಿ ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ಶಸ್ತ್ರಚಿಕಿತ್ಸೆಗೆ ಎಂದು ತೆರಳಿದ್ದರು. ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ನಟ ಶಿವರಾಜಕುಮಾರ್ ಅವರು ಮಾರಕ ಕಾಯಿಲೆಯಾದ ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ. ಈ ಕುರಿತು ಅವರ ಪತ್ನಿ ಗೀತಾ ಅವರು ಮಾಹಿತಿ ಹಂಚಿಕೊಂಡಿದ್ದು, ಶಿವರಾಜಕುಮಾರ್ ಅವರ ಎಲ್ಲಾ ಹೆಲ್ತ್ ರಿಪೋರ್ಟ್ ನೆಗೆಟಿವ್ ಆಗಿದ್ದು ಕ್ಯಾನ್ಸರ್ ಫ್ರೀ ಎಂದು ವರದಿ ಬಂದಿದೆ. ಕ್ಯಾನ್ಸರ್ ಫ್ರೀ ಎಂದು ಶಿವಣ್ಣ ಪತ್ನಿ ಗೀತಾ ಶಿವರಾಜಕುಮಾರ್ ಮಾಹಿತಿ ನೀಡಿದ್ದಾರೆ ಇದೆ ವೇಳೆ ಶಿವರಾಜ್ ಕುಮಾರ್ ಹೊಸ ವರ್ಷದ ಶುಭಾಶಯಗಳು ತಿಳಿಸಿದರು. ಶಸ್ತ್ರ ಚಿಕಿತ್ಸೆ ಬಳಿಕನಟ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಿಂದ ಹೊರಡುವಾಗ ನಾನು ಸ್ವಲ್ಪ ತಮೋಶನಲ್ ಆಗಿದೆ ಭಯ ಎನ್ನುವುದು ಮನುಷ್ಯನಿಗೆ ಇರುತ್ತದೆ. ಭಯಣಿಗಿಸುವ ಅಭಿಮಾನಿಗಳು ಸಹಕಲಾವಿದರು ಇದ್ದಾರೆ ಕೆಲವರು ಸ್ನೇಹಿತರು ಸಂಬಂಧಿಕರು ಡಾಕ್ಟರ್ಸ್ ಇರುತ್ತಾರೆ. ಕಿಮೋ ತೆರಪಿಯಲ್ಲಿ 45 ಸಿನಿಮಾ ಶೂಟ್ ಮಾಡಿರುವುದು ಗೀತಾ…
ಮೈಸೂರು : ವಿದ್ಯಾರ್ಥಿಗಳಿಗೆ ತಾಯಿಯೇ ಮೊದಲ ಗುರುವಾದರೆ, ಇನ್ನು ಶಿಕ್ಷಣ ನೀಡುವ ಶಿಕ್ಷಕ ಎರಡನೇ ಗುರು ಎಂದು ಹೇಳಲಾಗುತ್ತದೆ. ಆದರೆ ಇನ್ನೊಬ್ಬ ಶಿಕ್ಷಕ ತಾನು ಪಾಠ ಮಾಡಬೇಕಿದ್ದ ವಿದ್ಯಾರ್ಥಿನಿಗೆ ಪ್ರೇಮ ಪಾಠ ಹೇಳಿ ಹಾಗೆನೇ ಪ್ರೀತಿಸಿ ಮದುವೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹೌದು ನಗರದ ಖಾಸಗಿ ಬಿಎಡ್ ಉಪನ್ಯಾಸಕರಾಗಿದ್ದ ತಾಲೂಕಿನ ಬೆಂಕಿಪುರ ನಿವಾಸಿ ಯಶೋಧ್ ಕುಮಾರ್ ಹಾಗೂ ನಗರಕ್ಕೆ ಸಮೀಪದ ಹಳೆಯೂರಿನ (ಚಿಕ್ಕಹುಣಸೂರು) ಸಜ್ಜೇಗೌಡರ ಪುತ್ರಿ ಪೂರ್ಣಿಮಾ ಮದುವೆ ಮಾಡಿಕೊಂಡಿದ್ದಾರೆ. ಅಲ್ಲದೆ ರಕ್ಷಣೆಗಾಗಿ ಪೊಲೀಸರ ಮೊರೆಗೆ ಹೋಗಿದ್ದಾರೆ. ಮಗಳನ್ನು ಶಿಕ್ಷಕಿಯನ್ನಾಗಿಸಬೇಕೆಂಬ ಆಸೆಯಿಂದ ಬೀದಿ ಬದಿ ಸೊಪ್ಪು ವ್ಯಾಪಾರ ಮಾಡಿ, ಜೀವನ ನಡೆಸುತ್ತಿದ್ದ ಸಜ್ಜೇಗೌಡ, ಸಾಲ ಮಾಡಿ ಪೂರ್ಣಿಮಾಳನ್ನು ನಗರದ ಖಾಸಗಿ ಡಿಎಡ್ ಕಾಲೇಜಿಗೆ ದಾಖಲಿಸಿದ್ದರು. ಪೂರ್ಣಿಮಾ ಬಿಎಡ್ ಮುಗಿಸಿ ಮನೆಯಲ್ಲಿದ್ದಳು. ವ್ಯಾಸಂಗ ಮಾಡುತ್ತಿದ್ದಾಗಲೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಮಾಹಿತಿ ತಿಳಿದ ಪೋಷಕರು, ಮಗಳಿಗೆ ತಿಳಿಹೇಳಿ ಎಚ್ಚರಿಸಿದ್ದರಲ್ಲದೆ ವಿರೋಧ ವ್ಯಕ್ತಪಡಿಸಿದ್ದರು. ಡಿ.26ರ ಗುರುವಾರ ಕಾಲೇಜಿನಿಂದ ಸರ್ಟಿಫಿಕೇಟ್ ತರುವುದಾಗಿ ಹೇಳಿ ಹೋದ…