Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದವರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಓರ್ವ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರಿನಲ್ಲಿ ನಡೆದಿದೆ. ಮೃತರನ್ನು ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿರುವ ಮನ್ವಿತ್ ಎಂಬವರನ್ನು ರಕ್ಷಿಸಲಾಗಿದೆ.ಶುಭಾ ಮತ್ತು ಮನ್ವಿತ್ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಕುಂತೂರು ಕೆರೆಗೆ ಉರುಳಿದೆ. ಕಾರು ಉರುಳಿದಾಗ ಪ್ರಾಣಾಪಾಯದಿಂದ ಪಾರಾಗಿದ್ದ ಮನ್ವಿತ್ ಜೋರಾಗಿ ಕೂಗಿದಾಗ ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ.ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮನಿತ್ನನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆದರೆ ಶುಭಾ ಹಾಗೂ ಊರ್ಜಿತ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೀದರ್ : ಚಲಿಸುತ್ತಿದ್ದ ವಾಹನದಿಂದ ಬಿದ್ದು ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಆತನ ಜೊತೆಯಲ್ಲಿದ್ದಂತಹ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾಮು ನಗರ್ ತಾಂಡಾದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾಮು ನಗರ ತಾಂಡಾದ ನಿವಾಸಿ ಕೈಲಾಸ್ (14) ಎಂದು ತಿಳಿದು ಬಂದಿದೆ. ಮೃತ ಕೈಲಾಸ್ ಮುಡಬಿ ಗ್ರಾಮದಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ. ಶಾಲೆಗೆ ಕ್ರೂಸರ್ ವಾಹನದಲ್ಲಿ ಹಾಮು ನಗರ ತಾಂಡಾದಿಂದ ಮುಡಬಿ ಗ್ರಾಮಕ್ಕೆ ತೆರಳುತ್ತಿದ್ದ. ಈ ವೇಳೆ ಕ್ರೂಸರಲ್ಲಿ ಹಿಂಬದಿ ಸೀಟಿನಲ್ಲಿ ಕೈಲಾಸ್ ಕೂತಿದ್ದ. ಏಕಾಏಕಿ ವಾಹನದ ಬಾಗಿಲು ಓಪನ್ ಆಗಿದ ಕೂಡಲೇ ಆತ ಆಯತಪ್ಪಿ ಕೆಳಗೆ ಬಿದ್ದಿದ್ದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಇನ್ನು ಆತನ ಜೊತೆಯಲ್ಲಿದ್ದಂತಹ ಇನೊಬ್ಬ ವಿದ್ಯಾರ್ಥಿ ದಿಲ್ಶ್ಯಾನ ಗಂಭೀರವಾಗಿ ಗಾಯಗೊಂಡಿದ್ದು ಘಟನೇ ಕುರಿತಂತೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ : ಕೌಟುಂಬಿಕ ಕಲಹದಿಂದ ಅಣ್ಣನಿಂದಲೇ ತಂಗಿಯ ಹತ್ಯೆಯಾಗಿದೆ. ಚಾಕುವಿನಿಂದ ಕುತ್ತಿಗೆ ಕೊಯ್ದು ಭೀಕರವಾಗಿ ಅಣ್ಣ ಎನ್ನುವ ನರಹಂತಕ ತಂಗಿಯನ್ನು ಕೊಂದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಐಮನ್ ಬಾನು ಎಂದು ತಿಳಿದುಬಂದಿದ್ದು, ಇನ್ನು ಹಂತಕ ಅಣ್ಣ ಫರ್ಮನ್ ಪಾಷಾ ಎಂದು ತಿಳಿದುಬಂದಿದೆ. ಅಲ್ಲದೇ ಆರೋಪಿ ತಂದೆ ಸೈಯದ್ ಪಾಷಾ ಹಾಗೂ ಅತ್ತಿಗೆ ತಸ್ಲೀಮ್ ಮೇಲೂ ಹಲ್ಲೆ ಮಾಡಿದ್ದಾನೆ.ಚಾಕು ಇರಿತದಿಂದ ಗಂಭೀರವಾಗಿ ತಂದೆ ಹಾಗೂ ಅತ್ತಿಗೆ ಗಾಯಗೊಂಡಿದ್ದಾರೆ. ಸದ್ಯ ಇಬ್ಬರೂ ಗಾಯಾಳುಗಳನ್ನು ಚಾಮರಾಜನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಬೀದರ್ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಂತ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಚಿನ್ ಪಂಚಾಳ ಗುತ್ತಿಗೆದಾರಣೆ ಅಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್ ಶೆಗಜಿ ಈ ಒಂದು ಹೇಳಿಕೆ ನೀಡಿದ್ದಾರೆ. ಹೌದು ಗುತ್ತಿಗೆದಾರರ ಸಂಘದ ಬೀದರ್ ಘಟಕದಿಂದಲೂ ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇತರೆ ಜಿಲ್ಲೆಗಳಿಂದಲೂ ಆತ ಗುತ್ತಿಗೆದಾರ ಅಲ್ಲವೆಂಬ ಮಾಹಿತಿ ತಿಳಿದು ಬಂದಿದೆ. ಧಾರವಾಡ ಇಂಜಿನಿಯರ್ ಕಚೇರಿಯಲ್ಲೂ ಗುತ್ತಿಗೆದಾರ ಎಂದು ಎಲ್ಲೂ ಕೂಡ ನೋಂದಣಿ ದಾಖಲೆ ಇಲ್ಲ. ಎರಡು ಕಚೇರಿಯಿಂದ ಮಾಹಿತಿಯನ್ನು ಗುತ್ತಿಗೆದಾರರ ಸಂಘ ಇದೀಗ ಪಡೆದುಕೊಂಡಿದೆ.ಆದರೆ ಎಲ್ಲೂ ಕೂಡ ಸಚಿನ್ ಪಂಚಾಳ್ ಹೆಸರು ಗುತ್ತಿಗೆದಾರ ಎಂದು ನಮೂದು ಆಗಿಲ್ಲ ಎನ್ನಲಾಗಿದೆ. ಡೆತ್ನೋಟ್ನಲ್ಲಿರುವ ಅಸಲಿ ವಿಚಾರವೇನು? ತಮ್ಮ ಸಾವಿಗೆ ರಾಜು ಕಪನೂರ್ ಮತ್ತು ಗ್ಯಾಂಗ್ ಕಾರಣ ಎಂದು ಉಲ್ಲೇಖಿಸಿರುವ ಸಚಿನ್ ಪಂಚಾಳ್, ಮುಂದುವರಿದು ಹಲವು ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ತಾವು ಸುಮಾರು ಎರಡು ವರ್ಷಗಳಿಂದ ಪ್ರಾಜೆಕ್ಟ್ ಇಂಜಿನಿಯರ್ ಆಗಿ…
ಬೆಂಗಳೂರು : ಮದ್ಯದ ಅಮಲಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪುತ್ರ ಕಿರಿಕ್ ಮಾಡಿದ್ದು, ಕುಣಿಗಲ್ ತಹಸೀಲ್ದಾರ್ ರಶ್ಮಿ ಕಾರಿಗೆ ಅಡ್ಡ ಬಂದು ಪುಂಡಾಟ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲ್ಯಾಂಕೋ ಟೋಲ್ ಬಳಿ ಈ ಒಂದು ಘಟನೆ ನಡೆದಿದೆ. ನೆಲಮಂಗಲದ ಉದ್ಯಮಿ ಡಾಬಾ ರಾಜಣ್ಣ ಪುತ್ರ ರವಿ ಗೌಡನಿಂದ ಈ ಒಂದು ಕೃತ್ಯ ನಡೆದಿದೆ. ರವಿಗೌಡನ ಪುಂಡಾಟ ನೋಡಿ ತಕ್ಷಣ 112ಕ್ಕೆ ಕರೆ ಮಾಡಿ ತಹಶೀಲ್ದಾರ್ ರಶ್ಮಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರವಿ ಗೌಡನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಹಶೀಲ್ದಾರ್ ರಶ್ಮಿ ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ನೆಲಮಂಗಲದಲ್ಲಿ ರವಿಗೌಡ ಈ ಕೃತ್ಯ ಎಸಗಿದ್ದಾನೆ. ಆರೋಪಿ ರವಿ ಗೌಡಗೆ ಸೇರಿದ ಕಾರನ್ನು ಇದೀಗ ನೆಲಮಂಗಲ ಠಾಣೆ ಪೋಲೀಸರು ಸೀಜ್ ಮಾಡಿದ್ದಾರೆ. KA 03 MW 1 ಡಿಫೆಕ್ಟಿವ್ ನಂಬರ್ ಪ್ಲೇಟ್ ಬಳಸುತ್ತಿದ್ದ. ತಮ್ಮ ಕಾರಿಗೆ ಟೆಂಟೆಡ್ ಗ್ಲಾಸ್ ಬಳಸಿ ಆರೋಪಿ ರವಿ ಗೌಡ ಅಡ್ಡಾಡುತ್ತಿದ್ದ.ಸರ್ಕಾರಿ…
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ KSRTC ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಶೇ.25 ರಷ್ಟು ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಸಂಕ್ರಾಂತಿ ನಂತರ ಟಿಕೆಟ್ ದರದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇಂದು ಬೆಂಗಳೂರಿನಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲ್ಲಸಂದ್ರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ರುಚಿತಾ (25) ಎಂದು ತಿಳಿದು ಬಂದಿದೆ. ರುಚಿತಾ ಬಯೋಕಾನ್ ಕಂಪನಿಯ ಜೂನಿಯರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಮಲ್ಲಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ರುಚಿತ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ರುಚಿತ ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಬೆಸ್ತರಹಳ್ಳಿ ನಿವಾಸಿ ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ರುಚಿತಾ ತಂದೆ ತಾಯಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗಳು ಫೋನ್ ಕಾಲ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನ ಕೊಂಡು ಮನೆಗೆ…
ಬೆಳಗಾವಿ : ಮನೆಯಲ್ಲಿ ಹೇಳದೆ ಕಾರು ತೆಗದುಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಘಟಪ್ರಭಾ ನದಿಗೆ ಕಾರಿನ ಸಮೇತ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತ ಕಿರಣ್ ನಾವಲಗಿ (45) ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದಂತ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ್ ನಾವಲಗಿ ಡಿಸೆಂಬರ್ 30ರಂದು ಮನೆಯಲ್ಲಿ ಯಾರಿಗೂ ತಿಳಿಸದೆ ಮನೆ ತೊರೆದಿದ್ದರು. ಕಿರಣ್ ಅವರಿಗೆ ಉದ್ಯಮದಲ್ಲಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಸ್ಯ ಕ್ರೇನ್ ಸಹಾಯದಿಂದ ನದಿಗೆ ಬಿದ್ದಂತಹ ಕಾರನ್ನು ಪೊಲೀಸರು ಮೇಲೆತ್ತಿದ್ದಾರೆ. ಘಟನೆ ಕುರಿತಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ನಿನ್ನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು. ಈ ವಿಚಾರವಾಗಿ ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಪೋಸ್ಟರ್ ಅಂಟಿಸಿದ ಬಿಜೆಪಿ ನಾಯಕರು ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದೆ. ಪಿಎಸ್ಐ ಶಶಿಧರ್ ವಣ್ಣೂರ್ ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಿ ಎಸ್ ಐ ಶಶಿಧರ…
BREAKING : ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿ, ಮತಾಂತರಕ್ಕೆ ಯತ್ನ : ಇಬ್ಬರು ಅರೆಸ್ಟ್!
ಹಾವೇರಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇಳಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೌದು ಅಪ್ರಾಪ್ತ ಬಾಲಕಿಗೆ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಅಪ್ರಾಪ್ತ ಬಾಲಕಿಗೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಲೈಂಗಿಕ ದೌರ್ಜನ್ಯ ಎಸಗಿ, ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಆರೋಪಿ ಮದುವೆ ಆಗುತ್ತೇನೆ ಅಂತ ಬೆದರಿಕೆ ಹಾಕಿದ ಆರೋಪ ಕೂಡ ಕೇಳಿಬಂದಿದೆ. ಈ ಕುರಿತಂತೆ ಕರ್ಜಗಿ ಗ್ರಾಮದ ಇಬ್ಬರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು, ಮಹಬೂಬ್ ಅಲಿ (28) ಹಾಗೂ ಸೋಯಲ್ ಸಾಬ್ (20) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್…