Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಬಿಐ ಎಂಟ್ರಿ ಆಗಿದ್ದು, ಕಳೆದ ವಾರವಷ್ಟೇ ಬಳ್ಳಾರಿಯಲಿರುವ ಉದ್ಯಮಿಗಳ ಮನೆ ಮೇಲೆ ಸಿಬಿಐ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಇವರನ್ನು ಶಾಸಕ ಬಿ.ನಾಗೇಂದ್ರ ಆಪ್ತರು ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಸಚಿವ ಸ್ಥಾನ ಇದುವರೆಗೂ ದೊರೆಯುವುದಕ್ಕೆ ಬಿ.ನಾಗೇಂದ್ರ ಅವರು ತಮ್ಮ ಆಪ್ತರ ಬಳಿ ಯಾರದೋ ಮಾಡಿದ ತಪ್ಪಿಗೆ ನನಗೆ ಯಾಕೆ ಈ ರಾಜಕೀಯ ಶಿಕ್ಷೆ ಅಂತ ಅಳಲು ತೋಡಿಕೊಂಡಿದ್ದಾರೆ. ಹೌದು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಮತ್ತೆ ನಿರಾಸೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಈಗ ಸಿಬಿಐ ಎಂಟ್ರಿ ಕೊಟ್ಟಿದ್ದು ಆಪ್ತರ ಮುಂದೆ ಶಾಸಕ ಬಿ. ನಾಗೇಂದ್ರ ಮತ್ತೆ ಬೇಸರ ತೋಡಿಕೊಂಡಿದ್ದಾರೆ. ಯಾರದೋ ತಪ್ಪಿಗೆ ನನಗೆ ರಾಜಕೀಯ ಶಿಕ್ಷೆ ಅಂತ ಅಳಲು ತೋಡಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ ವ್ಯವಹಾರದಲ್ಲಿ ಎಸ್ಐಟಿ ಇಡಿ ಬಳಿಕ ಎಂಟ್ರಿ…
ಬೆಂಗಳೂರು : ಬೆಂಗಳೂರು ರಸ್ತೆಗಳು ಇದೀಗ ಕೇವಲ ಗುಂಡಿಗಳಿಂದಲೇ ತುಂಬಿ ಹೋಗಿವೆ. ಇದರಿಂದ ಬೆಂಗಳೂರು ಜನತೆ ಸಾಕಷ್ಟು ತೊಂದರೆಗಳು ಅನುಭವಿಸುತ್ತಿದ್ದಾರೆ. ಅಲ್ಲದೆ ಕಂಪನಿಗಳು ಸಹ ಈ ಕುರಿತು ಆಕ್ರೋಶ ಹೊರ ಹಾಕಿದ್ದು ಈ ಹಿಂದೆ ಬೆಂಗಳೂರು ತೊರೆಯುವ ನಿರ್ಧಾರ ಕೈಗೊಂಡಿದ್ದ ಕಂಪನಿಗಳು ಇದೀಗ ಮತ್ತೆ ಯುಟರ್ನ್ ಹೊಡೆದು ಬೆಂಗಳೂರು ನಮ್ಮ ಮನೆ, ಬೆಂಗಳೂರನ್ನು ಬಿಟ್ಟು ಬೇರೆ ಕಡೆ ಎಲ್ಲೂ ಹೋಗಲ್ಲ ಎಂದು ಯುಟರ್ನ್ ಹೊಡೆದಿವೆ. ಹೌದು ರಸ್ತೆಗುಂಡಿಯಿಂದ ರೋಸಿ ಹೋಗಿರುವ ಐಟಿ ಕಂಪನಿಗಳು ಬೆಂಗಳೂರು ತೊರೆಯುವ ನಿರ್ಧಾರಕ್ಕೆ ಮುಂದಾಗಿದ್ದವು. ಈ ವಿಚಾರ ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಬ್ಲಾಕ್‌ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ ಟ್ವೀಟ್ ಮಾಡಿದ್ದು, ನಾವು ಬೆಂಗಳೂರು ತೊರೆಯುವುದಿಲ್ಲ, ಆದರೆ ಬೆಂಗಳೂರಿನಲ್ಲೇ ಬೇರೆಡೆ ಸ್ಥಳಾಂತರಗೊಳ್ಳುವುದಾಗಿ ಹೇಳಿದ್ದಾರೆ. ಈ ಬಗ್ಗೆ ರಾಜೇಶ್ ಯಾಬಾಜಿ ಟ್ವೀಟ್ ಮಾಡಿದ್ದು, 2015 ರಲ್ಲಿ ಬೆಂಗಳೂರಿನ ಕೋರಮಂಗಲದ ಸೋನಿ ಸಿಗ್ನಲ್ ಬಳಿ ಬ್ಲಾಕ್‌ಬಕ್ ತನ್ನ ಸಣ್ಣ ಕಂಪನಿಯೊಂದನ್ನು ಆರಂಭಿಸಿತು. ನಾವು ನಮ್ಮ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇಂದು ಆದೇಶ ಪ್ರಕಟಿಸಲಿದೆ. ದೋಷಾರೋಪ ಹೊರಿಸುವ ದಿನಾಂಕವನ್ನು ಕೂಡ ಇಂದು ಕೋರ್ಟ್ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ವಿಚಾರಣೆಯ ವೇಳೆ ದರ್ಶನ್ ಪರ ವಕೀಲರು ಸುಧೀರ್ಘವಾದ ವಾದ ಮಂಡನೆ ನಡೆಸಿದರು. ಪಕ್ಕದ ಸೆಲ್ ನಲ್ಲಿರುವ ಟೆರರಿಸ್ಟ್ ಗಳಿಗೆ ಕೇರಂ, ಟಿವಿ ಸೇರಿದಂತೆ ಎಲ್ಲಾ ಸೌಲಭ್ಯ ಒದಗಿಸಲಾಗಿದ್ದು ಕೇವಲ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ವಾದಿಸಿದ್ದರು.a
ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಿನ್ನೆ ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ 7 ಮಾನವನ ತಲೆ ಬುರುಡೆಗಳು ಸೇರಿದಂತೆ ಅಸ್ತಿಪಂಜರದ ಮೂಳೆಗಳು ದೊರೆತಿದ್ದವು. ಇವೆಲ್ಲವನ್ನು ಇದೀಗ ಎಸ್ಐಟಿ ಅಧಿಕಾರಿಗಳು FSL ಗೆ ಕಳುಹಿಸಿದ್ದಾರೆ. ಅಲ್ಲದೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಮತ್ತಷ್ಟು ಚುರುಕಾಗಿದ್ದು, ಬಂಗ್ಲೆಗುಡ್ಡ ಪ್ರದೇಶಗಳಲ್ಲಿ ನಿನ್ನೆ 7 ಸ್ಥಳಗಳಲ್ಲಿ 7 ತಲೆ ಬುರುಡೆಗಳು ಪತ್ತೆಯಾಗಿವೆ. ಇದೀಗ ವೈದ್ಯರು ತಲೆ ಬುರುಡೆಗಳು ಎಲ್ಲಾ ಪುರುಷರದ್ದು ಅಂತ ಹೇಳುತ್ತಿದ್ದಾರೆ ಮೇಲ್ನೋಟಕ್ಕೆ ಇದು ಪುರುಷರ ಬುರುಡೆಗಳು ಅಂತ ಹೇಳಿದ್ದಾರೆ ಮಹಜರು ವೇಳೆ ಎಸ್ಐಟಿ ತಂಡದಲ್ಲಿ ಬುರುಡೆ ಬಗ್ಗೆ ಸದ್ಯ ಪ್ರಾಥಮಿಕವಾಗಿ ಹೇಳಿಕೆ ನೀಡಿದ್ದಾರೆ ಆದರೆ ಎಲ್ಲವೂ ಎಫ್ ಎಸ್ ಎಲ್ ವರದಿಯಿಂದಲೇ ಬಯಲಾಗಬೇಕಾಗಿದೆ. ಇನ್ನು ನಿನ್ನೆ ಎಸ್ಐಟಿ ಅಧಿಕಾರಿಗಳು ಬಂಗ್ಲೆ ಗುಡ್ಡದಲ್ಲಿ ತಲೆಬುರುಡೆ ಅಸ್ತಿಪಂಜರದ ಜೊತೆಗೆ ಕೊಡಗು ಜಿಲ್ಲೆಯ ವಿರುದ್ಧ ಯುಬಿ ಅಯ್ಯಪ್ಪ ಅವರ ಐಡಿ ಕಾರ್ಡ್ ಸಿಕ್ಕಿತ್ತು. ಸಿಕ್ಕಿರೋದು ಎನ್ನಲಾಗುತ್ತಿದೆ ತಲೆಬುರುಡೆ…
ಹಾಸನ: ಹಾಸನದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಪಾರ್ಕ್ ನಲ್ಲಿ ಸ್ನೇಹಿತೆಯರ ಜೊತೆಗೆ ಕೈ ಹಿಡಿದುಕೊಂಡು ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹರಿಬಿಟ್ಟಿದ್ದಕ್ಕಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದಳು. ಈ ಬಗ್ಗೆ ಯುವತಿಯು ಸಾಕಷ್ಟು ಟೀಕೆ ಜೊತೆಗೆ ವ್ಯಂಗ್ಯ ಸಂಭಾಷಣೆ ಮಾಡಿ ವೀಡಿಯೋ ಅಪ್‌ಲೋಡ್ ಮಾಡಿದ್ದಳು. ಈ ವೀಡಿಯೋವನ್ನು ಪವನ್ ಸಹಪಾಠಿಗಳು ಸೇರಿದಂತೆ ಅನೇಕರು ವೀಕ್ಷಣೆ ಮಾಡಿದ್ದರು. ಇದರಿಂದ ನನ್ನೊಂದಿಗಿದ್ದ ಯುವತಿಯರಿಗೆ ಏನಾದರೂ ತೊಂದರೆ…
ಉತ್ತರಕನ್ನಡ / ಗದಗ : ರಾಜ್ಯದಲ್ಲಿ ಇಂದು ಪ್ರತ್ಯೇಕವಾಗಿ ಎರಡು ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಉತ್ತರ ಕನ್ನಡದಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಮಧ್ಯ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರೆ, ಇನ್ನೂ ಗದಗದಲ್ಲಿ ಕಾರಿಗೆ ಗೋವಾ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ. ಲಾರಿ-‘KSRTC’ ಬಸ್ ಮಧ್ಯ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು! ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಕಂಚಿನ ಬಾಗಿಲು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಎಂಬಲ್ಲಿ ಅಪಘಾತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ದಿಂದ ಲಾರಿ ಯಲ್ಲಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ KSRTC ಬಸ್ ಲಾರಿ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಬಸ್…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದರು. ಬಿಡಿಎ ಅಪಾರ್ಟ್ಮೆಂಟ್ ಟೆಂಡರ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು 8.41 ಕೋಟಿ ಹಣ ನಕಲಿ ಕಂಪನಿಗಳ ಮೂಲಕ ವರ್ಗಾವಣೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಬಿ ಎಸ್ ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಕಂಪನಿಗೆ ಈ ಒಂದು ಹಣ ವರ್ಗಾವಣೆ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ಕುರಿತು ಟಿಜಿ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಸಂಜಯ ಶ್ರೀ, ಚಂದ್ರಕಾಂತ್, ರಾಮಲಿಂಗಂ, ಎಸ್. ಟಿ ಸೋಮಶೇಖರ್, ಜಿ ಸಿ ಪ್ರಕಾಶ್, ಕೆ ರವಿ ಹಾಗೂ…
ಬೆಂಗಳೂರು : ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಯಲಿದ್ದು ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಅಲ್ಲದೇ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಕುರಿತು ಕೆಲ ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರಹಾಕಿದ್ದಾರೆ ಸಚಿವರ ಈ ಒಂದು ನಡೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಹೌದು ಜಾತಿ ಗಣತಿ ಸಮೀಕ್ಷೆ ಮುಂದೂಡುವ ವಿಚಾರವಾಗಿ ಇಂದು ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಸಿದ್ದರಾಮಯ್ಯ ಮಾತಿಗೂ ಕೂಡ ಅವಕಾಶ ನೀಡಿದಂತೆ ಸಚಿವರು ಆಕ್ರೋಶ ಹೊರ ಹಾಕಿದ್ದಾರೆ. ಜಾತಿ ಗಣತಿ ಗೊಂದಲದ ಕುರಿತು ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ಸಚಿವರ ಆಕ್ರೋಶಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸೀಟ್ ನಿಂದ ಗೆದ್ದು ಅತ್ತಿತ್ತ ಓಡಾಡಿದ್ದಾರೆ. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಂದೂ ಕೂಡ ಹೀಗೆ ಅದು ಓಡಾಡಿರಲಿಲ್ಲ. ಸಚಿವರ ಆಕ್ರೋಶದ ಅರಿವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ.…
ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಒಂದಕ್ಕೆ ಗೋವಾ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ರವಿ ನೆಲ್ಲೂರು ಅರ್ಜುನ್ ನೆಲ್ಲೂರು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಮೃತಪಟ್ಟವರು ಹಾವೇರಿ ಜಿಲ್ಲೆಯ ಹುನಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದ ಕುರಿತು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಕಂಚಿನ ಬಾಗಿಲು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಎಂಬಲ್ಲಿ ಅಪಘಾತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ದಿಂದ ಲಾರಿ ಯಲ್ಲಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ KSRTC ಬಸ್ ಲಾರಿ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಬಸ್ ನಲ್ಲಿ ಇದ್ದಂತ ಓರ್ವ ಪ್ರಯಾಣಿಕ ಸಾವನಪ್ಪಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲೂಕು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








