Author: kannadanewsnow05

ಬೆಳಗಾವಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ವಿದ್ಯಾರ್ಥಿನಿ ದೀಪಿಕಾ ಬಡಿಗೇರ್ ಫೇಲ್ ಅಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾ.25ರಂದು ಎಸ್‌ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಕಡಿಮೆ ಅಂಕ ಬರಬಹುದು ಎಂಬ ಆತಂಕದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.ದೀಪಿಕ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ ಲಾಂಗ್ ಹಿಡಿದು ಸಾರ್ವಜನಿಕವಾಗಿ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಆರೋಪಿಗಳಾದಂತಹ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದಂತಹ ರಜತ್ ಕಿಶನ್ ಹಾಗೂ ವಿನಯ್ ಗೌಡನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೌದು ಆರೋಪಿಗಳಾದ ರಜತ್ ವಿನಯನನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಇದೀಗ ಕೋರ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Read More

ಹುಬ್ಬಳ್ಳಿ : ಬಡವರಿಗಾಗಿಯೇ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. ಆದರೆ ಕೆಲವರು ಸರ್ಕಾರದಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪಡೆದು ಅದನ್ನು ಮಾರಾಟ ಮಾಡುತ್ತಿದ್ದಾರೆ. ಈಗ ಹುಬ್ಬಳ್ಳಿಯಲ್ಲಿ ಕೆಲ ಮಹಿಳೆಯರು ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿ ಅಕ್ಕಿಯನ್ನು ಪಡೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡುವಾಗ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು 50 ಕೆಜಿ ಅಕ್ಕಿ ಮಾರಾಟ ಮಾಡಲು ಮಹಿಳೆಯರು ಮರುಕಟ್ಟೆಗೆ ಬಂದಿದ್ದರು. ಈ ವೇಳೆ ಅಧಿಕಾರಗಳ ಕೈಗೆ ಮಹಿಳೆಯರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಮಹಿಳೆಯರು ತೀವ್ರ ವಾಗ್ವಾದ ನಡೆಸಿದರು. ಹುಬ್ಬಳ್ಳಿಯಲ್ಲಿ ಬಡವರ ಅಕ್ಕಿಗೆ ದಂಧೆಕೋರರು ಕನ್ನ ಹಾಕಿದ್ದಾರೆ. ಈ ವೇಳೆ ಅಧಿಕಾರಿಗಳು 500 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಸೀಜ್ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ…

Read More

ಬೆಂಗಳೂರು : ಇತ್ತೀಚಿಗೆ ಪ್ಲಾಸ್ಟಿಕ್ ನಲ್ಲಿ ತಯಾರಿಸಿದ ಇಡ್ಲಿ ಆರೋಗ್ಯಕ್ಕೆ ಹಾನಿಕಾರಕ ಎಂದು ರಾಜ್ಯದಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿತ್ತು. ಬಳಿಕ ಬೆಲ್ಲದಲ್ಲಿ ಕೂಡ ಹಲವು ಹಾನಿಕಾರಕ ಅಂಶಗಳು ಪತ್ತೆಯಾಗಿತ್ತು. ಇದೀಗ ಆಹಾರ ಪ್ರೀಯರಿಗೆ ಬಿಗ್ ಶಾಕ್ ಎದುರಾಗಿದ್ದು, ಅದರಲ್ಲೂ ಪನ್ನೀರ್ ಇಷ್ಟಪಡುವವರು ಈ ಸುದ್ದಿಯನ್ನು ಓದಲೇಬೇಕು. ಹೌದು ಇತ್ತೀಚಿಗೆ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್​ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ. ಆ ಮೂಲಕ ಪನ್ನೀರ್​​​​​ ಪ್ರಿಯರಿಗೆ ಆಹಾರ ಇಲಾಖೆ ಶಾಕ್​ ನೀಡಿದೆ. ಉಳಿದ ಸ್ಯಾಂಪಲ್​​ಗಳ ವರದಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್​ ಸ್ಯಾಂಪಲ್ ಸಂಗ್ರಹಿಸಿ ಟೆಸ್ಟ್​ಗೆ ಕಳುಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದೀಗ ಲ್ಯಾಬ್ ರಿಪೋರ್ಟ್ ಆಹಾರ ಇಲಾಖೆ ಕೈಸೇರಿದೆ. ವರದಿಯಲ್ಲಿ ಅಸುರಕ್ಷಿತ ಅಂಶ ಇರೋದು ಪತ್ತೆ ಆಗಿದೆ. ಹೀಗಾಗಿ ಪನ್ನೀರ್​​​​​ ಪ್ರಿಯರಿಗೆ ಶಾಕ್​…

Read More

ಹಾವೇರಿ : ಜಮೀನು ವಿಚಾರವಾಗಿ ಸಂಬಂಧಪಟ್ಟಂತೆ ಗಲಾಟೆ ನಡೆದಿದ್ದು, ಈ ವೇಳೆ ಪಾಪಿ ಮಗನೋಬ್ಬ ನನ್ನ ಚಿಕ್ಕಪ್ಪನ ಮೇಲೆನೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಚಿಕ್ಕಪ್ಪನನ್ನೆ ಹತ್ಯೆಗೈಯಲು ಪಾಪಿ ಪುತ್ರನೊಬ್ಬ ಮುಂದಾಗಿದ್ದಾನೆ. ಹಾವೇರಿಯ ಅಕ್ಕಿಪೇಟೆ ಬಳಿ ಎಂಬಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಉಳಿವೆಪ್ಪ ಅಕ್ಕಿ (64) ಎನ್ನುವವರ ಮೇಲೆ ಬಸವರಾಜ ಎಂಬಾತನಿಂದ ಹಲ್ಲೆ ನಡೆದಿದೆ.ಮಚ್ಚಿನಿಂದ ಮಾರಣಾಂತಿಕವಾಗಿ ಬಸವರಾಜ್ ತನ್ನ ಚಿಕ್ಕಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಬಸವರಾಜ ಹಲ್ಲೆ ಮಾಡು ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಘಟನೆ ಸಂಬಂಧ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗು ಬಿಜೆಪಿ ಸಂಸದ ಸುಧಾಕರ್ ನಡುವೆ ಆಗಾಗ ಮುಸುಕಿನ ಗುದ್ದಾಟ ನಡೆಯುತ್ತಿರುತ್ತೆ. ಕಳೆದ 2024 ಸೆಪ್ಟೆಂಬರ್ ನಲ್ಲಿ ಚಿಕ್ಕಬಳ್ಳಾಪುರ ನಗರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿತ್ತು. ಸುಧಾಕರ್​ ಬೆಂಬಲಿತರೇ ಅಧ್ಯಕ್ಷ-ಉಧ್ಯಾಕ್ಷರಾಗಿ ಆಯ್ಕೆಯಾಗಿದ್ದರು.ಇದಕ್ಕೆ ಅಡ್ಡಮತದಾನ ಮಾಡುವ ಮೂಲಕ ಕಾಂಗ್ರೆಸ್ ಸದಸ್ಯರೇ ಸುಧಾಕರ್ ಬೆಂಬಲಿತರು ಅಧ್ಯಕ್ಷ, ಉಪಾದ್ಯಕ್ಷರಾಗುವಂತೆ ಮಾಡಿದ್ದರು . ಆದರೆ ಇದೀಗ ಅಧ್ಯಕ್ಷ-ಉಪಾದ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಕಾಂಗ್ರೆಸ್​​ನ 6 ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿಗಳ ನ್ಯಾಯಾಲದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 12 , 2024 ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ ಕೆ ಸುಧಾಕರ್ ಇಬ್ಬರು ಸಹ ಚಿಕ್ಕಬಳ್ಳಾಪುರ ನಗರಸಭೆಯ ಗದ್ದುಗೆ ನಮ್ಮವರೇ ಹಿಡಿಯಬೇಕು ಎಂದು ಪ್ರದೀಪ್ ಈಶ್ವರ್ ಸುಧಾಕರ್ ನಡುವೆ ತೀವ್ರ ಪೈಪೋಟಿ ಇತ್ತು. ಈ ವೇಳೆ ಕಾಂಗ್ರೆಸ್​​ನ 06 ಜನ ಸದಸ್ಯರೇ ಬಿಜೆಪಿ ಅಭ್ಯರ್ಥಿಗಳ…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹರಿದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೊಗಲಾ ಗ್ರಾಮದ ನಿವಾಸಿ ಚಂದ್ರಪ್ಪ ಮಲಕಪ್ಪ(45) ಎಂದು ಗುರುತಿಸಲಾಗಿದೆ.ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಎದರುಗಡೆ ಇಂದು ಮಧ್ಯಾಹ್ನ ನಡೆದಿದೆ. ಚಂದ್ರಪ್ಪ, ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಸುದ್ದಿ ತಿಳಿಯುತ್ತಿದ್ದಂತೆ ಚಿತ್ತಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ರೊಟಿನ್ ಚಕಪ್ ಗಾಗಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಮಂಡಿನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ರೊಟಿನ್ ಚೆಕಪ್ ಗಾಗಿ ತೆರಳಿದ್ದು, ಕಳೆದ ಒಂದು ತಿಂಗಳಿನಿಂದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಅನಾರೋಗ್ಯ ಕಾರಣದಿಂದ ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದ್ದಲ್ಲೆ ಇದ್ದರು.

Read More

ಚಿತ್ರದುರ್ಗ : ಸಾಲಕ್ಕಾಗಿ ರೈತರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲು ಡಿ.ಸಿ.ಸಿ. ಬ್ಯಾಂಕ್‌ನ ಮೇಲ್ವಿಚಾರಕ ರೈತರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಲೋಕಾಯುಕ್ತ ಪೊಲೀಸರು ಬ್ಯಾಂಕ್ ಮೇಲೆ ದಾಳಿ ಮಾಡಿ ಹಣ ಪಡೆಯುತ್ತಿದ್ದ ಮೇಲ್ವಿಚಾರಕ ನವೀನ್ ಎಂಬಾತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಾಡದಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಕುಮಾರ್ ಇವರು ರೈತರುಗಳು ಸಾಲಕ್ಕಾಗಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಹೊಸದುರ್ಗ ಶಾಖೆಗೆ ಪರಿಶೀಲನೆಗಾಗಿ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಮೇಲ್ವಿಚಾರಕ ನವೀನ್ ಅವರು 15 ಸಾವಿರ ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ. ನವೀನ್ ಲಂಚಕ್ಕೆ ಬೇಡಿಕೆ ಇಡುವ ವಿಡಿಯೋ ರೆಕಾರ್ಡ್ ಮಾಡಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿರುತ್ತಾರೆ.ದೂರಿನ ಮೇರೆಗೆ ಇಂದು ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ…

Read More

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬೆಂಗಳೂರಿನ ಸದಾಶಿವ ನಗರದಲ್ಲಿರೋ ಗೃಹ ಸಚಿವ ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಕೆ.ಎನ್ ರಾಜಣ್ಣ ಭೇಟಿ ನೀಡಿ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದರು. ಬಳಿಕ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವ ಕೆ.ಎನ್ ರಾಜಣ್ಣ ಮನವಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಭೇಟಿಯಾಗಿರುವ ಜಿ ಪರಮೇಶ್ವರ್, ಹನಿ ಟ್ರ್ಯಾಪ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಚಿವ ಕೆ.ಎನ್ ರಾಜಣ್ಣ ಜಿ ಪರಮೇಶ್ವರ್ ಅವರಿಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಭೇಟಿ ಇದೀಗ ಕುತೂಹಲ ಕೆರಳಿಸಿದೆ ಎನ್ನಲಾಗುತ್ತಿದೆ.

Read More