Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಪ್ರಮುಖ ಯೋಜನೆಗಳಲ್ಲಿ ಒಂದಾದಂತಹ ಅನ್ನ ಭಾಗ್ಯ ಯೋಜನೆ ಬಡವರಿಗೆ ಅನುಕೂಲವಾಗಲಿ ಹಾಗೂ ಬಡವರು ಯಾವತ್ತು ಹಸಿವಿನಿಂದ ಬಳಲಬಾರದು ಎನ್ನುವ ಕಾರಣಕ್ಕಾಗಿ ಈ ಒಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಹಿನ್ನೆಲೆಯಲ್ಲಿ ಇದೀಗ ಈ ಒಂದು ಯೋಜನೆಯ ಅಡಿಯಲ್ಲಿ ಸಿನಿಮಾ ತಯಾರಿಸಲು ನಿರ್ಧಾರ ಮಾಡಲಾಗಿದ್ದು ಮುಂದಿನ ವರ್ಷ ಅಂದರೆ 2025 ಫೆಬ್ರವರಿ 2ರಂದು ‘ಅನ್ನಭಾಗ್ಯ’ ಯೋಜನೆ ಕುರಿತು ಚಿತ್ರೀಕರಣ ಆರಂಭವಾಗಲಿದೆ. ಹೌದು ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧರಿಸಿದ್ದು, 2025 ಫೆಬ್ರವರಿ 2ರಂದು ಸಿನಿಮಾ ಚಿತ್ರಣ ಆರಂಭ ಮಾಡಲಾಗುತ್ತಿದೆ. ಶೂಟಿಂಗ್ ಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ನೀಡಲಾಗಿದೆ. ಬಾ.ಮಾ ಹರೀಶ್ ಹಾಗೂ ಪಡಿತರ ವಿತರಕರ ಸಂಘಟನೆ ರಾಷ್ಟ್ರೀಯ ಅಧ್ಯಕ್ಷ ಟಿ ಕೃಷ್ಣಪ್ಪ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ ನೀಡಲಾಗಿದೆ.
ಹೈದ್ರಾಬಾದ್ : ಪುಷ್ಪ-2 ಸಿನಿಮಾ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೊಲೀಸರು ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಿದ್ದಾರೆ. ಹೌದು ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈ ವೇಳೆ ಅಲ್ಲು ಅರ್ಜುನ್ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ನಟ ಅಲ್ಲು ಅರ್ಜುನ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ನಟ ಅಲ್ಲು ಅರ್ಜುನ್ ಅವರು ಹೈಕೋರ್ಟಿಗೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ನಟ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕೊಡಗು : ಮದುವೆಯಾಗಿ ಕೇವಲ 7 ತಿಂಗಳ ಕಳೆಯುವ ಅಷ್ಟರಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಮನನೊಂದ ಆಕೆ ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಣ್ಣೀರುಹಳ್ಳ ನಡೆದಿದೆ. ನೇಣಿಗೆ ಶರಣಾದ ಗೃಹಿಣಿಯನ್ನು ಸವಿತಾ (22) ಎಂದು ತಿಳಿದುಬಂದಿದೆ. ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ತವರು ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಳೆದ ಮೇ ತಿಂಗಳಂದು ಮೈಸೂರು ಜಿಲ್ಲೆಯ ಇಲವಾಲದ ಗುಂಗ್ರಾಲ್ ಛತ್ರ ಗ್ರಾಮದ ಶಶಿಕುಮಾರ್ ಅವರ ಜೊತೆ ಸವಿತಾ ವಿವಾಹ ನೆರವೇರಿತ್ತು. ಸವಿತಾ ಮೂರು ತಿಂಗಳು ಗರ್ಭಿಣಿಯಾಗಿದ್ದಾಗ, ಪತಿ ಕಿರುಕುಳ ನೀಡುತ್ತಿರುವ ಕುರಿತು ನನಗೆ ಕರೆ ಮಾಡಿ ತಿಳಿಸಿದ್ದಳು. ಬಳಿಕ ಆಕೆಗೆ ಗರ್ಭಪಾತವಾದಾಗ ಮನೆಯಲ್ಲಿಯೆ ಆಕೆಯ ಆರೈಕೆ ಮಾಡುತ್ತಿದ್ದೆವು. ಪತಿಯ ಕಿರುಕುಳಕ್ಕೆ ಮನನೊಂದು ಇದೀಗ ಸವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ನಾಗ ಅವರು ಸೋಮವಾರ ಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು, ಬೈಕ್ ಗೆ ಸರ್ಕಾರಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ 8 ವರ್ಷದ ಬಾಲಕಿ ಕೆಳಗೆ ಬಿದ್ದು ಬಸ್ ಅಡಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ. ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಯಲಬುರ್ಗಾದ ಜನತಾ ಕಾಲೋನಿಯ ನಿವಾಸಿಯಾದಂತಹ ಸಾನ್ವಿ (8) ಸಂಬಂಧಿ ಜೊತೆಗೆ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಈ ಒಂದು ಘಟನೆ ನಡೆದಿದೆ. ಸರ್ಕಾರಿ ಬಸ್ ಡಿಕ್ಕಿ ಹೊಡೆದಾಗ ಸಾನ್ವಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾಳೆ. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಟೈಯರ್ ಗೆ ಸಿಲುಕಿ ವಿದ್ಯಾರ್ಥಿನಿ ಸಾನ್ವಿ ಸಾವನ್ನಪ್ಪಿದ್ದಾಳೆ. ಘಟನೆ ಕುರಿದಂತೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಜಿಮ್ ಗೆ ನುಗ್ಗಿ ಗ್ಯಾಂಗ್ ಒಂದು ವ್ಯಕ್ತಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದು ಕೊಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಹೆಚ್ ರಸ್ತೆಯಲ್ಲಿರುವ ಸ್ಮಾರ್ಟ್ ಫಿಟ್ನೆಸ್ ಜಿಮ್ ನಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಿಂದ ಸಹಜವಾಗಿ ಸ್ಥಳೀಯ ಜನ ಬೆಚ್ಚಿಬಿದ್ದಿದ್ದಾರೆ. ಇಂದು ಭದ್ರಾವತಿಯ ಬಿ ಹೆಚ್ ರಸ್ತೆಯ ಸ್ಮಾರ್ಟ್ ಫಿಟ್ನೆಸ್ ಜಿಮ್ ನಲ್ಲಿ ಈ ಒಂದು ಘಟನೆ ನಡೆದಿದೆ. ಯುವಕ ಜೋಯಲ್ ಥಾಮ್ಸನ್ ಮೇಲೆ ಮಚ್ಚು ಮತ್ತು ಲಾಂಗ್ ನಿಂದ ದಾಳಿ ನಡೆದಿದೆ. ವಿಶ್ವ ಅಲಿಯಾಸ್ ಮುದ್ದೆ, ಕೋಟೇಶ್ ಅಲಿಯಾಸ್ ಕೋಟಿ, ನವೀನ ಅಲಿಯಾಸ್ ಡಿಂಗ ಸೇರಿದಂತೆ 6 ಜನರ ಗ್ಯಾಂಗ್ನಿಂದ ಈ ಒಂದು ದಾಳಿ ನಡೆದಿದೆ. ದಾಳಿ ಮಾಡಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಗ್ಯಾಂಗ್ ತಕ್ಷಣ ಅಲ್ಲಿಂದ ಪರಾರಿಯಾಗಿದೆ. ಗಾಯಾಳು ಜೋಯಲ್ ಥಾಮ್ಸನ್ ಗೆ ತಾಲೂಕು ಆಸ್ಪತ್ರೆಗೆ ದಾಖಲಿಸಿ…
ಬೆಂಗಳೂರು : ರಾಜ್ಯದಲ್ಲಿ ಸುಮಾರು 20 ತಾಲೂಕುಗಳಲ್ಲಿರುವ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದೂ, 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಇದೀಗ ರಾಜ್ಯ ಸರ್ಕಾರ ತೀರ್ಮಾನಿಸಿದೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಬಾಡಿಗೆ ಹಾಗೂ ಶಿಥಿಲಾವಸ್ಥೆಯಲ್ಲಿರುವ ಪಶು ಆಸ್ಪತ್ರೆಗಳನ್ನು ಮರು ನಿರ್ಮಾಣ ಮಾಡಲು ಮೇಲ್ದರ್ಜೆಗೆ ಏರಿಸಲಾಗಿದೆ. ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ.
ಬೆಂಗಳೂರು : ಕಳೆದ ಡಿಸೆಂಬರ್ 10 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಮನೆಗೆ ನಟ ಯಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹೌದು ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ನಿಧನರಾದ ದಿನದಂದು ನಟ ಯಶ್ ಅವರು ಮುಂಬೈ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಹಾಗಾಗಿ ಇಂದು ಎಸ್ಎಂ ಕೃಷ್ಣ ಅವರ ಮನೆಗೆ ನಟ ಯಶ್ ಹಾಗೂ ಪತ್ನಿ ರಾಧಿಕಾ ಅವರು ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಎಸ್ ಎಂ ಕೃಷ್ಣ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಎಸ್ಎಂ ಕೃಷ್ಣ ಅವರದ್ದು ಧೀಮಂತ ವ್ಯಕ್ತಿತ್ವ. ಅವರು ನಿಧನರಾದಾಗ ನಾವು…
ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧೆ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟದ ಪ್ರಯೋಗ ಮಾಡಿದ್ದರು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಈ ಒಂದು ಸ್ಪೋಟ ಪ್ರಯೋಗ ಮಾಡಿದ್ದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಎಂಬ ಗ್ರಾಮದಲ್ಲಿ ಸ್ಪೋಟ ನಡೆಸಿದ್ದರು. ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್ ಮಾಡಿದ್ದರು. ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಬಳಿಕ ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಕೋರ್ಟ್ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹಾಗಾಗಿ ಇದೀಗ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ನಾಳೆ ಜೈಲಿನಿಂದ ಡ್ರೋನ್…
ಬೆಳಗಾವಿ : ಇತ್ತೀಚಿಗೆ ಕಲ್ಬುರ್ಗಿಯ ಕೇಂದ್ರ ಕಾರಾಗೃಹ ಜೈಲಿನಲ್ಲಿ ಕೈದಿಗಳು ಸಿಗರೇಟ್ ಸೇದುತ್ತಾ ಗುಟ್ಕಾ ಹಾಗೂ ಮದ್ಯ ಸೇವಿಸುತ್ತಾ ಇಸ್ಪೀಟ್ ಆಡುತ್ತಿರುವ ಫೋಟೋ ವಿಡಿಯೋ ವೈರಲ್ ಆಗಿದ್ದವು. ಬಳಿಕ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೂಡ ಕೈದಿಗಳು ಆರಾಮಾಗಿ ಇಸ್ಪೀಟ್ ಆಡುತ್ತಾ ಸಿಗರೇಟ್ ಹಾಗೂ ಮಧ್ಯ ಸೇವಿಸುತ್ತಿರುವ ಫೋಟೋ ವೈರಲ್ ಆಗಿತ್ತು. ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಪಿಎಸ್ಐ ಕೊಲೆ ಮಾಡಿದ ಆರೋಪ ಪ್ರಕರಣದಲ್ಲಿ ಕೈದಿಗೆ ಊಟಕ್ಕೆ ಜೈಲಿನ ಸಿಬ್ಬಂದಿಗಳೇ ಕಾರವಾರದ ಫಿಶ್ ಸರಬರಾಜು ಮಾಡುತ್ತಿರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ. ಹೌದು ಇದು ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಇದೀಗ ಬಯಲಾಗಿದೆ. ಜೈಲಿನ ಅಧಿಕಾರಿಗಳಿಗೆ ದುಡ್ಡು ಕೊಟ್ಟರೆ ಸಾಕು ಯಾವುದೇ ರೆಸ್ಟೋರೆಂಟ್ಗಳಲ್ಲಿನ ಸೌಲಭ್ಯಗಳಂತೆ ಕಮ್ಮಿ ಇಲ್ಲ ಎನ್ನುವಂತೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಹಿಂಡಲಗಾ ಜೈಲಿನ ಕೆಲವು ಅಧಿಕಾರಿಗಳು ಕೈದಿಗಳಿಂದ ಹಣ ಪಡೆಯುವುದು ಅವರಿಗೆ ಬೇಕಾದಂತಹ ವಸ್ತುಗಳನ್ನು ನೀಡುತ್ತಿರುವುದು ಬೆಳಕಿಗೆ ಬಂದಿದೆ. ಆದರೂ ಕೂಡ ಸರ್ಕಾರ ಹಾಗೂ ಪೊಲೀಸ್ ಇಲಾಖೆ…
ಬೆಂಗಳೂರು : ಈಗಾಗಲೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಮೊದಲ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆಯ ವೇಲ್ ಎಳದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಆಯೋಗಕ್ಕೆ ಮಂಡ್ಯದ ಜಿಲ್ಲಾ ಬಿಜೆಪಿ ವಕ್ತಾರ ಸಿಟಿ ಮಂಜುನಾಥ್ ಅವರು ದೂರು ನೀಡಿದ್ದಾರೆ. ಹೌದು 6 ವರ್ಷಗಳ ಹಿಂದಿನ ಘಟನೆ ಸಂಭಂದ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲಾಗಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ದೂರು ಸಲ್ಲಿಸಲಾಗಿದೆ. ಮಂಡ್ಯದ ಜಿಲ್ಲಾ ಬಿಜೆಪಿ ವಕ್ತಾರ ಸಿಟಿ ಮಂಜುನಾಥ್ ಅವರಿಂದ ದೂರು ದಾಖಲಾಗಿದೆ. ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆಂದು ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಮಹಿಳೆಯ ವೇಲ್ ಎಳೆದು ಅಪಮಾನಿಸಿದ್ದಾರೆ.ಆ ಮಹಿಳೆ…