Author: kannadanewsnow05

ದಾವಣಗೆರೆ : ಗ್ರಂಥಾಲಯ ಸಿಬ್ಬಂದಿ ಅಮಾನತು ಆದೇಶ ರದ್ದುಪಡಿಸಲು ಆತನಿಂದಲೇ 50,000 ರೂ ಲಂಚ ಸ್ವೀಕರಿಸುತ್ತಿದ್ದಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಪಂಚಾಯತಿ ಇಒ ವಾಹನ ಚಾಲಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಶ್ಯಾಮ್ ಕುಮಾರ್ ತಾಲೂಕ ಪಂಚಾಯಿತಿ ಇಒ ಉತ್ತಮ ಅವರ ವಾಹನ ಚಾಲಕನಾಗಿದ್ದು, ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ವಾಹನ ಚಾಲಕ ಬಲೆಗೆ ಬಿದ್ದಿದ್ದಾನೆ. ಗ್ರಂಥಾಲಯ ಇಲಾಖೆ ಸಿಬ್ಬಂದಿ ಶಫಿಉಲ್ಲ ಬಳಿ ಲಂಚ ಸ್ವೀಕರಿಸುತ್ತಿದ್ದ. ಬೆಳ್ಳಿಗನೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯ ಸಿಬ್ಬಂದಿ ಶಫಿಉಲ್ಲಾ ಅಮಾನತು ಆದೇಶ ರದ್ದುಪಡಿಸಲು ಆತನಿಂದ 50,000 ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗಿದೆ.ಶಫಿಉಲ್ಲಾ ಅಮಾನತು ಆದೇಶ ರದ್ದು ಪಡಿಸುವುದಾಗಿ ನಂಬಿಸಿದ್ದ ಶ್ಯಾಮ್ ಶಫೀಉಲ್ಲಾನಿಂದ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಶಾಮಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚನ್ನಗಿರಿ ತಾಲೂಕು ಪಂಚಾಯತ್ ಇಒ, ಉತ್ತಮ ಕೂಡ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗರ್ಭಿಣಿಯರಿಗೆ ಉಡಿ ತುಂಬಿ ಹರಸಿದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ವೇದಿಕೆ ಮೇಲೆ ಗರ್ಭಿಣಿಯರನ್ನು ಕೂರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೀರೆ, ಕಂಕಣ ಕೊಟ್ಟು, ಬಳೆ ತೊಡಿಸಿ, ತೆಂಗಿನಕಾಯಿ ಉಡುಗರೆಯಾಗಿ ಕೊಟ್ಟರು. ಬಳಿಕ‌ ಪುಷ್ಪವೃಷ್ಟಿಗೈದು, ಆರತಿ ಬೆಳಗಿದರು. ಇದೇ ವೇಳೆ ಗರ್ಭಿಣಿಯರು ಹೆಬ್ಬಾಳ್ಕರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಬಳಿಕ ಎಲ್ಲರಿಗೂ…

Read More

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಐದು ಮಹಾನಗರ ಪಾಲಿಕೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಈ ಕುರಿತು ಮಾಹಿತಿ ನೀಡಿದರು. ಈ ವರ್ಷದಲ್ಲೇ ಮೈಸೂರು ಶಿವಮೊಗ್ಗ ದಾವಣಗೆರೆ ತುಮಕೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು. ರಾಜ್ಯ ಚುನಾವಣೆ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆ ನೀಡಿದರು. ಸರ್ಕಾರ ಮೀಸಲಾತಿ ಪಟ್ಟಿ ಕೊಡದಿದ್ದರೂ ಚುನಾವಣೆ ನಡೆಸೆ ನಡೆಸುತ್ತೇವೆ. ಹೈಕೋರ್ಟ್ ಗೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೆವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಿದ್ಧವಾಗಿದೆ. ಮೈಸೂರು ಮಹಾನಗರ ಪಾಲಿಕೆ, ಶಿವಮೊಗ್ಗ, ದಾವಣಗೆರೆ, ತುಮಕೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ. ರಾಜ್ಯ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಅಂತ ಅನಿಸುವುದಿಲ್ಲ. ಸರ್ಕಾರಕ್ಕೆ ತನ್ನದೇ ಆದಂತಹ ಜವಾಬ್ದಾರಿ ಇರುತ್ತದೆ.…

Read More

ಕೊಡಗು / ವಿಯಪುರ : ಮಾರ್ಚ್ ಆರಂಭದಲ್ಲೇ ರಾಜ್ಯದಲ್ಲಿ ಸೂರ್ಯನ ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದರು ಆದರೆ ಇತ್ತೀಚಿಗೆ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿರುವುದರಿಂದ ಜನ ಸ್ವಲ್ಪಮಟ್ಟಿಗೆ ಸೂರ್ಯನ ಶಾಖದಿಂದ ದೂರ ಉಳಿದಂತೆ ಆಗಿದೆ. ಇದೀಗ ಕೊಡಗು ಮತ್ತು ವಿಜಯಪುರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಹೌದು ಕೊಡಗು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗಿದ್ದು, ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಮಡಿಕೇರಿ ನಗರ ಸೇರಿದಂತೆ ಹಲವಡೆ ಆಲಿಕಲ್ಲು ಮಳೆಯಾಗಿದೆ. ಉತ್ತಮ ಮಳೆಯಿಂದ ಕಾಫಿ ಬೆಳೆಗಾರರಲ್ಲಿ ಇದೀಗ ಮಂದಹಾಸ ಮೂಡಿದೆ. ಇನ್ನು ಎಚ್ಎಸ್ ಸಂಗಾಪುರ ದಲ್ಲೂ ಕೂಡ ಆಲಿಕಲು ಸಹಿತ ಮಳೆಯಾಗಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರದಲ್ಲಿ ಗುಡುಗು ಮಿಂಚು ಸಹಿತ ಅರ್ಧ ಗಂಟೆವರೆಗೂ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನ ಜಳದಿಂದ ಕಂಗೆಟ್ಟಿದ್ದ ಜನರಿಗೆ ಇದೀಗ ಮಳೆರಾಯ ತಂಪೆರೆದಿದ್ದಾನೆ. ಆಲಿಕಲ್ಲು ಮಳೆಯಿಂದ ತೋಟಗಾರಿಗೆ ಬೆಳೆಗೆ ಹಾನಿ ಹಾಗೂ ಆತಂಕ ಎದುರಾಗಿದೆ. ದ್ರಾಕ್ಷಿ,…

Read More

ಧಾರವಾಡ : ನಮ್ಮ ಭಾರತದ ಹಿಂದೂ ಸಂಪ್ರದಾಯದಲ್ಲಿ ಅತ್ತಿಗೆಗೆ ತಾಯಿಯ ಸ್ಥಾನ ನೀಡಲಾಗಿದೆ. ಆದರೆ ಇತ್ತೀಚಿಗೆ ದಿನಗಳಲ್ಲಿ ಅಂತೂ ಯಾವುದೇ ಸಂಬಂಧಕ್ಕೂ ಕೂಡ ಬೆಲೆ ಇಲ್ಲದಂತಾಗಿದೆ. ಇದೀಗ ವ್ಯಕ್ತಿಯೊಬ್ಬ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಅತ್ತಿಗೆ ಮೇಲೆ ಹಲ್ಲೆ ಮಾಡಿ ಕಚ್ಚಿ ಗಾಯಗೋಳಿಸಿರುವ ಕಾಮುಕನನ್ನು ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಎಂದು ತಿಳಿದುಬಂದಿದೆ. ರಮೇಶನಿಗೆ ಈಗಾಗಲೇ ಮದುವೆಯಾಗಿದೆ.ಮದುವೆಯಾದರೂ ಅಣ್ಣನ ಹೆಂಡತಿ‌ ಮೇಲೆ ಕಣ್ಣು ಹಾಕಿದ್ದ. ಅಣ್ಣನ ಹೆಂಡತಿ ಇದು ಸರಿ ಅಲ್ಲ ಅಂದರೂ ಕೇಳಿರಲಿಲ್ಲ.ನೀನೇ ಬೇಕೇ ಬೇಕು ಎಂದು ಪಟ್ಟು ಹಿಡದಿದ್ದ. ಅತ್ತಿಗೆಯನ್ನ ಮಂಚಕ್ಕೆ ಕರೆದವ ಕಾಮುಕನಂತೆ ವರ್ತಿಸಿದ್ದಾನೆ. ಸ್ವಂತ ಅತ್ತಿಗೆಯನ್ನ ರಮೇಶ್ ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ…

Read More

ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗೋಸ್ಕರ 18 ಸೆಕೆಂಡ್ ಗಳ ಕಾಲ ಲಾಂಗ್ ಪ್ರದರ್ಶಿಸಿ ಸಾರ್ವಜನಿಕವಾಗಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಿಚಾರಣೆಗೆ ಬುಲಾವ್ ನೀಡಿದ್ದರು. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಶಸ್ತ್ರಸ್ತ್ರ ಕಾಯ್ದೆಯ ಅಡಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹಿನ್ನೆಲೆ? ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು ನೀಡಿದ್ದು, ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಹೌದು ಬಸವೇಶ್ವರ ಠಾಣೆಯಲ್ಲಿ ಆರ್ಮ್ ಆಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ. ಬಸವೇಶ್ವರನಗರ ಪಿಎಸ್ಐ ಭಾನುಪ್ರಕಾಶ್ ದೂರು ಆಧರಿಸಿ ರೀಲ್ಸ್ ಮಾಡುವಾಗ ಕೈಯಲ್ಲಿ ಲಾಂಗ್ ಹಿಡಿದುಕೊಂಡು ಪೋಸ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕೇಸ್ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಹೊಸ ತಿರುವು ಎನ್ನುವಂತೆ ತನ್ನ ಕೇಸ್ ತಾನೇ ಇಂದು ದೂರುದಾರ ಸ್ನೇಹಮಯಿ ಕೃಷ್ಣ ವಾದಿಸಲಿದ್ದಾರೆ. ಈಗಾಗಲೇ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ತಕರಾರು ಅರ್ಜಿ ವಿಚಾರಣೆ ಆರಂಭವಾದಾಗ, ಜಮೀನ ಮಾಲೀಕರು ಯಾರು ಎಂಬುದನ್ನು ತನಿಖೆ ಮಾಡಿಲ್ಲ. ಡಿನೋಟಿಫಿಕೇಶನ್ ಆದ ಮೇಲೆ ಬಡಾವಣೆ ರಚನೆ ಹೇಗೆ ಮಾಡಿದರು? ಡಿ ನೋಟಿಫಿಕೇಶನ್ ಪರಕ್ರಿಗೆ ಸಂಬಂಧಿಸಿದ ದಾಖಲೆಗಳೇ ಇಲ್ಲ. ಬಡಾವಣೆಯನ್ನು ಕೃಷಿ ಜಮೀನು ಎಂದು ಮಾರಾಟ ಮಾಡಿದ್ದಾರೆ. 2024ರಲ್ಲಿ ದೇವನೂರು ಬಡಾವಣೆಯಲ್ಲಿ 369 ನಿವೇಶನಗಳಿದ್ದವು. ಹೀಗಾಗಿಯೇ ದೇವನೂರು ಬಡಾವಣೆ ಎಂದು ಬರೆದಿದ್ದ ಪತ್ರಕ್ಕೆ ವೈಟ್ನರ್ ಹಾಕಿದ್ದಾರೆ. ದೇವನೂರು ಬಡಾವಣೆಯಲ್ಲಿ ನಿವೇಶನವಿದ್ದರೂ ದುಬಾರಿ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ದೇವನೂರಲ್ಲಿ ನಿವೇಶನವಿದ್ದರೂ ದುಬಾರಿ ಬಡಾವಣೆಯಲ್ಲಿ ಹಂಚಿಕೆ ಎಂದು ವಾದ ಮಂಡಿಸಿದರು. ಈ…

Read More

ಬೆಂಗಳೂರು : ರಸ್ತೆ ಬದಿ ವ್ಯಾಪಾರಿಗಳಿಗೆ ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಂಡವರಿಗೆ ತಳ್ಳು ಗಾಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ ಎಂದು ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಇನ್ನು ಮುಂದೆ ಯಾರೂ ರಸ್ತೆ ಬದಿ ವ್ಯಾಪಾರ ಮಾಡುವಂತಿಲ್ಲ, ಅವರು ಬಿಬಿಎಂಪಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡರೆ ತಳ್ಳುವ ಗಾಡಿಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುವುದು, ಮೋಟಾರರ ವಾಹನಗಳು ಸೇರಿದಂತೆ 4-5 ಬಗೆಯ ವಾಹನಗಳನ್ನು ವ್ಯಾಪಾರಿಗಳಿಗೆ ನೀಡುವ ನಿರ್ಧಾರ ಮಾಡಲಾಗಿದೆ, ವ್ಯಾಪಾರಿಗಳು ತಮಗಿಷ್ಟ ಬರುವ ಗಾಡಿಯನ್ನು ಆರಿಸಿಕೊಳ್ಳಬಹುದು ಎಂದು ಹೇಳಿದರು.

Read More

ಬೆಂಗಳೂರು : ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇದೀಗ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಹಕಾರಿ ಸಚಿವ ಕೆ.ಎನ್ ರಾಜಣ್ಣ, ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಬಾಲಚಂದ್ರ ಜಾರಕಿಹೊಳಿ ಹಾಗು ಜಿಲ್ಲಾ ಒಕ್ಕೂಟದ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ದರ ರೂ.5 ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾಪ ಇಟ್ಟಿದೆ. ಹಾಲಿನ ದರ ಏರಿಕೆ ಹಾಗೂ ಪಶುಗಳಿಗೆ ಆಹಾರ ಸೇರಿ ಹಲವು ವಿಚಾರಗಳು ಈ ಒಂದು ಸಭೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ರಾಜ್ಯದ ಜನತೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ, ಮೆಟ್ರೋ ಟಿಕೆಟ್ ದರ ಏರಿಕೆ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಇದರ ಬೆನ್ನಲ್ಲೆ ಹಾಲಿನ ದರ ಏರಿಕೆ ಮಾಡಿದರೆ, ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ.

Read More

ನವದೆಹಲಿ : ಡಿಕೆ ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಮಾತನಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನ ರಕ್ಷಕರು ಎಂದು ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್‌ನ ನಿಜವಾದ ಮುಖವಾಡ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ದೂರಿದ್ದರು. ಹೌದು ಡಿಕೆ ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುವುದರ ಕುರಿತು ಹೇಳಿಕೆ ನೀಡಿದ ವಿಚಾರವಾಗಿ, ಇಂದು ಲೋಕಸಭೆಯಲ್ಲಿ ಗದ್ದಲ ಸೃಷ್ಟಿಯಾಗಿತ್ತು. ಮುಸ್ಲಿಮರಿಗೆ ಶೇಖಡ ನಾಲ್ಕರಷ್ಟು ಮೀಸಲಾತಿ ಸಂಬಂಧ ಸಂವಿಧಾನ ಬದಲಾವಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿತ್ತು. ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜುಗೆ ಹಕ್ಕುಚ್ಯುತಿ ಮಂಡನೆ ನೋಟಿಸ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಹಕ್ಕುಚ್ಯುತಿ ನೋಟಿಸ್ ಜಾರಿ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಸದನವನ್ನು ತಪ್ಪು…

Read More