Author: kannadanewsnow05

ಚಾಮರಾಜನಗರ : ರಾಜ್ಯದಲ್ಲಿ ಮತ್ತೆ ಮತಾಂತರ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಚಾಮರಾಜನಗರದಲ್ಲಿ ಆಘಾತಕಾರಿ ಘಟನೆ ಒಂದು ನಡೆದಿದ್ದು HUDA ಖಾಸಗಿ ಶಾಲೆಯೊಂದರಲ್ಲಿ ವಸ್ತು ಪ್ರದರ್ಶನದ ವೇಳೆ ವಿದ್ಯಾರ್ಥಿನಿ, ಬುರ್ಖಾ ಧರಿಸಿದರೆ ಸತ್ತ ಮೇಲೆ ನಮಗೆ ಏನು ಆಗಲ್ಲ. ಆದರೆ ತುಂಡು ಬಟ್ಟೆ ಧರಿಸಿದರೆ ನಾವು ಸತ್ತ ಮೇಲೆ ನರಕಕ್ಕೆ ಹೋಗುತ್ತೇವೆ. ಹಾವು ಚೇಳುಗಳು ನಮ್ಮ ದೇಹವನ್ನು ತಿನ್ನುತ್ತವೆ ಎಂದು ಹೇಳಿಕೆ ನೀಡಿದ್ದಾಳೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹೌದು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಘಾತಕಾರಿ ಘಟನೆ ಬೆಳಗೆಗೆ ಬಂದಿದೆ. ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ವೇಳೆ, ಬುರ್ಖಾ ಧರಿಸಿದರೆ ಸತ್ತ ಮೇಲೆ ನಮಗೆ ಏನು ಆಗಲ್ಲ. ತುಂಡು ಉಡುಗೆ ಕೊಟ್ಟರೆ ನರಗಕ್ಕೆ ಹೋಗುತ್ತಾರೆ ನಿಮ್ಮ ದೇಹವನ್ನು ಹಾವು ಚೇಳು ತಿನ್ನುತ್ತವೆ ಎಂದು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿನಿ ಈ ರೀತಿ ಹೇಳಿಕೆ ನೀಡಿದ್ದಾಳೆ. ಮಕ್ಕಳು…

Read More

ನವದೆಹಲಿ : ದೇಶದಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಗಳು, ತರಬೇತಿ ಸಂಸ್ಥೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಇದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಿದೆ. ಕಳೆದ ಎರಡು ತಿಂಗಳಲ್ಲಿ ಲೈಂಗಿಕ ಕಿರುಕುಳ, ರ‍್ಯಾಗಿಂಗ್, ತಾರತಮ್ಯ ಮತ್ತು ಇತರ ಕಾರಣಗಳಿಂದ ಅನೇಕ ವಿದ್ಯಾರ್ಥಿಗಳು ಕಾಲೇಜು ಸಭಾಂಗಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಅವರ ಪೀಠ ಹೇಳಿದೆ. ಮಾರ್ಚ್ 19 ರಂದು ಗುಜರಾತ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನ್ಯಾಯಾಲಯ ಹೇಳಿದೆ. ಕಳೆದ ತಿಂಗಳು ಐಐಟಿ ಪಾಟ್ನಾದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು ಎಂದು ಪೀಠ ಹೇಳಿದೆ. ಅಧ್ಯಯನದ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಒಡಿಶಾದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನೇಪಾಳಿ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಅವಳು ತನ್ನ ಸಹಪಾಠಿಯ ಮೇಲೆ ಲೈಂಗಿಕ ಶೋಷಣೆ ಮತ್ತು…

Read More

ವಿಜಯಪುರ : ಶಾರ್ಟ್ ಸರ್ಕ್ಯೂಟ್ ನಿಂದ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಸುಟ್ಟು ಬಸ್ಮವಾಗಿರುವ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯಪುರ ಗಾಂಧಿ ಚೌಕ್ ಹಿಂಭಾಗದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಅಪಘಾತ ಮತ್ತು ಇತರೆ ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಬೆಂಕಿಯ ಕೆನ್ನಾಲಿಗೆಗೆ ವಾಹನಗಳ ಟೈರ್ ಗಳು ಸ್ಫೋಟಗೊಳ್ಳುತ್ತಿವೆ. ಇತರೆ ವಾಹನಗಳಿಗೂ ಕೂಡ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ನಾನು ಸೇರಿದಂತೆ ವಿರೋಧ ಪಕ್ಷದ ಎಲ್ಲಾ ನಾಯಕರ ಫೋನ್ ಟ್ಯಾಪಿಂಗ್ ನಡೆಯುತ್ತಿದೆ.ರಾಜ್ಯದಲ್ಲಿ ಫೋಣ್ ಕದ್ದಾಲಿಕೆ ಆಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಫೋಟಕವಾದ ಹೇಳಿಕೆ ನೀಡಿದರು. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ನನ್ನ ಮತ್ತು ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ, ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಸಿಎಂ ಸಿದ್ದರಾಮ್ಮಯ್ಯ ಕುಮ್ಮಕ್ಕಿನಿಂದಲೇ ಹನಿಟ್ರ್ಯಾಪ್ ನಡೆದಿದೆ. ನಾವು ತನಿಖೆ ನಡೆಸಿ ಎಂದು ಪ್ರತಿಭಟನೆ ನಡೆಸಿದೆವು. ಸದನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನಮ್ಮ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ, ರಾಜ್ಯದಲ್ಲಿ ವಿರೋಧ ಪಕ್ಷಗಳ ಎಲ್ಲಾ ನಾಯಕರು, ಎಲ್ಲಾ ಶಾಸಕರುಮ ನನ್ನ ಫೋನ್ ಕರೆಗಳನ್ನು ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ…

Read More

ಬೆಂಗಳೂರು : ಮಾರ್ಚ್ 22 ರಂದು ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆ ನಡೆದಿತ್ತು. ಆದರೆ ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟಿದ್ದ ಅತ್ತೆಯೇ ಅಳಿಯನನ್ನು ಬರ್ಬರವಾಗಿ ಕೊಲೆ ಮಾಡಿರುವ ರಹಸ್ಯ ಬಯಲಾಗಿದೆ. ಮಾರ್ಚ್ 22 ರಂದು ಲೋಕನಾಥ್ ಸಿಂಗ್ ಭೀಕರವಾಗಿ ಕೊಲೆಯಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆಯಿಂದಲೇ ಅಳಿಯನ ಭೀಕರ ಕೊಲೆಯಾಗಿದೆ. ಹೌದು ಲೋಕನಾಥ್ ಸಿಂಗ್ ನನ್ನು ನಿನ್ನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಬಿಜಾಡಿಯ ಗ್ರಾಮದ ಬಿಜಿಎಸ್ ಲೇಔಟ್​​ನಲ್ಲಿ ನಿನ್ನೆ ಸಂಜೆ ರಿಯಲ್ ಎಸ್ಟೇಟ್ ಯುವ ಉದ್ಯಮಿ ಲೋಕನಾಥ್‌ ಸಿಂಗ್​ ಹತ್ಯೆಯಾಗಿದೆ. ತಾನು ತಂದಿದ್ದ ಕಾರಿನಲ್ಲೇ ಲೋಕನಾಥ್ ಸಿಂಗ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಕಾರಿನಿಂದ ಓಡಿ ಬಂದ ಲೋಕನಾಥ್ 1000 ಮೀಟರ್ ದೂರದಲ್ಲಿದ್ದ ಆಟೋ ಹತ್ತಿ ಪ್ರಾಣ ಬಿಟ್ಟಿದ್ದ. ಕೊಲೆ ನಡೆದದ್ದು ಹೇಗೆ? ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್…

Read More

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು ನೀಡಿದ್ದು, ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಹೌದು ಬಸವೇಶ್ವರ ಠಾಣೆಯಲ್ಲಿ ಆರ್ಮ್ ಆಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ. ಬಸವೇಶ್ವರನಗರ ಪಿಎಸ್ಐ ಭಾನುಪ್ರಕಾಶ್ ದೂರು ಆಧರಿಸಿ ರೀಲ್ಸ್ ಮಾಡುವಾಗ ಕೈಯಲ್ಲಿ ಲಾಂಗ್ ಹಿಡಿದುಕೊಂಡು ಪೋಸ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಜತ್ ಕೈಯಲ್ಲಿ ಲಾಂಗ್ ಹಿಡಿದು ಪೋಸ್ ಕೊಟ್ಟು ರಿಲ್ಸ್ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ. ಲಾಂಗ್ ಹಿಡಿದು ಬರೆದ ವಾತಾವರಣ ಸೃಷ್ಟಿಯಾಗುವಂತೆ ರಜತ್ ರಿಲೀಸ್ ಮಾಡಿದ್ದ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ ಹಾಳು ಮಾಡುವ ರೀತಿ ದುರ್ವರ್ತನೆ ತೋರಿದ್ದರಿಂದ 18 ಸೆಕೆಂಡ್ ಗಳ ವಿಡಿಯೋ ಲಿಂಕ್ ಮೂಲಕ ದೂರು ದಾಖಲಾಗಿದೆ.…

Read More

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಕೇಶ್ ಅಗ್ನಿಹೋತ್ರಿ ಅವರು ಇಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಅವರು ಪ್ರಯಾಣಿಸುತ್ತಿದ್ದ ಅಲೈಯನ್ಸ್ ಏರ್ಲೈನ್ಸ್ ವಿಮಾನ ತುರ್ತು ಭೂಸ್ಪರ್ಶವಾಯಿತು. ಹೌದು ಹಿಮಾಚಲ ಪ್ರದೇಶ ಡಿಸಿಎಂ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಶಿಮ್ಲಾ ಏರ್ಪೋರ್ಟ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಅಲೈಯನ್ಸ್ ಏರ್ಲೈನ್ಸ್ ವಿಮಾನ ತುರ್ತು ಭೂ ಸ್ಪರ್ಶವಾಗಿದೆ. ಹಿಮಾಚಲ ಪ್ರದೇಶ ಡಿಸಿಎಂ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಮುಖೇಶ್ ಅಗ್ನಿಹೋದ್ರಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಮುಕೇಶ್ ಅಗ್ನಿಹೊತ್ರಿ ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಚಿಕ್ಕಮಗಳೂರು : ಸುಡು ಬೇಸಿಗೆಯಿಂದ ಬಳಲಿದ್ದ ಚಿಕ್ಕಮಂಗಳೂರು ಜಿಲ್ಲೆಗೆ ವರುಣ ಇಂದು ತಂಪೆರೆದಿದ್ದಾನೆ ಗುಡುಗು ಸಹಿತ ಇಂದು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಅಲ್ಲದೆ ಇನ್ನೊಂದು ದುರಂತ ಒಂದು ಕೂಡ ಸಂಭವಿಸಿದೆ ಸಿಡಿಲು ಬಡಿದು ಓರ್ವ ಮಹಿಳೆ ಕೂಡ ಇಂದು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಎಂದು ತಿಳಿದು ಬಂದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಮೃಪಟ್ಟಿದ್ದಾರೆ.ಹೊಲದಲ್ಲಿ ಕೆಲಸ ಮಾಡುತ್ತಿದ್ದ ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸಂಚಲನ ಸೃಷ್ಠಿಸಿದ ಬೆನ್ನಲ್ಲೇ, ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ದಿಢೀರ್ ಬೆಳವಣಿಗೆ ಎನ್ನುವಂತೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅದಕ್ಕೆ ಈಗ ಸಭಾಪತಿ ಬಸವರಾಜ್ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ವೈರಲ್ ಆದ ಪತ್ರದಲ್ಲಿ ಸಹಿ ಇಲ್ಲ. ಸಹಿ ಮಾಡಿದ ಪತ್ರ ಲಾಕರ್ ನಲ್ಲಿದೆ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ. ಆದರೆ ಸಚಿವರು ಸೇರಿದಂತೆ ಬಹಳ ಜನ ನನಗೆ ಕರೆ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಅಂತ ಹೇಳುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ. ಪತ್ರ ಇನ್ನೂ ಲಾಕರ್ ನಲ್ಲಿದೆ ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಮಾಡಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ…

Read More

ಕೋಲಾರ : ಕೋಲಾರದಲ್ಲಿ ಭೀಕರವಾದ ಕೊಲೆ ನಡೆದಿದ್ದು, ರೌಡಿಶೀಟರ್ ಒಬ್ಬ ತನ್ನ ಪ್ರಿಯತಮೇ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಸಿಕ್ಕ ಸಿಕ್ಕಲ್ಲಿ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನಲ್ಲಿ ನಡೆದಿದೆ. ಹತ್ಯೆಯಾದ ರೌಡಿಶೀಟರ್ ನನ್ನು ಶಿವಕುಮಾರ್ ಅಲಿಯಾಸ್ ತೇನ್ ಕೊಲೆಯಾದವ ಎಂದು ತಿಳಿದುಬಂದಿದೆ. ಮಾರಿಕೊಪ್ಪಂನ ರಿವೀಟರ್ಸ್ ಲೈನ್ ನಿವಾಸಿ ಶಿವಕುಮಾರ್ ನನ್ನು ಹತ್ಯೆ ಮಾಡಲಾಗಿದೆ. ಪ್ರಿಯತಮೆ ಜೊತೆ ಕಾಮಸಮುದ್ರಕ್ಕೆ ಹೋಗುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕುರಿತು ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ರೌಡಿಶೀಟರ್ ಜೊತೆಗಿದ್ದ ಪ್ರಿಯತಮೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊಲೆಯಾದ ಶಿವಕುಮಾರ್ ಆಂಡರ್ಸನ್ ಪೇಟೆ ಠಾಣೆಯ ರೌಡಿಶೀಟರ್ ಎಂದು ತಿಳಿದುಬಂದಿದೆ. ಶಿವಕುಮಾರ್ ವಿರುದ್ಧ 3 ಕೊಲೆ ಮತ್ತು ಹಲ್ಲೆ ಪ್ರಕರಣಗಳು ಇದ್ದವು.

Read More