Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಮಾಜಿಕ ಜ್ವರ ತಂಡದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಪತ್ನಿ ಸಿಟಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಸಿಬಿ ಮುಖ್ಯಸ್ಥ ಅಜಯ್ ಹಿಲೋರಿಗೆ ದೂರು ನೀಡಿದ್ದಾರೆ.ದರ್ಶನ್ ಪತ್ನಿ ವಿಜಯಲಕ್ಷ್ಮಿ ದೂರು ಸೀಕರಿಸಿರುವ ACP ಉಮೇಶ್ 15ಕ್ಕೂ ಹೆಚ್ಚು ಇನ್ಸ್ಟಾಗ್ರಾಮ್ ಖಾತೆಗಳು ಮಾಹಿತಿ ನೀಡಿದ್ದಾರೆ. ಐಟಿ ಆಕ್ಟ್, ಮಹಿಳೆ ಗೌರವಕ್ಕೆ ಧಕ್ಕೆ, ನಿಂದನೆ & ಬೆದರಿಕೆ ಹಿನ್ನೆಲೆ ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲು ಬಳಿಕ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಲಿದ್ದಾರೆ.
ಬೆಂಗಳೂರು : ಚಾಮರಾಜನಗರ, ಚಿಕ್ಕಮಂಗಳೂರು, ಹಾಸನ, ಮಂಡ್ಯ ಭಾಗದಲ್ಲಿ ಹೆಚ್ಚು ಕಾಡಾನೆ ಹಾವಳಿ ಹೆಚ್ಚಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲೂ ಕೂಡ ಕಾಡಾನೆ ಹಾವಳಿ ಹೆಚ್ಚಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ಕಾಡಾನೆ ಏಕಾಏಕಿ ನುಗ್ಗಿ ಬಂದಿದೆ. ದೊಡ್ಡ ಹಾಲಹಳ್ಳಿ ಬಳಿಯ ಮೊರಾರ್ಜಿ ವಸತಿ ವಸತಿ ಶಾಲೆಗೆ ಕಾಡಾನೆ ಬಂದಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಬರಿ ಬಳಿ ಇರುವ ಮೊರಾರ್ಜಿ ವಸತಿ ಶಾಲೆಯ ಬಳಿ ಒಂಟಿ ಸಲಗ ಕಂಡು ಶಾಲೆಯಲ್ಲಿ ಇದ್ದಂತಹ ಮಕ್ಕಳು ಆತಂಕಕ್ಕೆ ಒಳಗಾಗಿದ್ದರು. ಎರಡು ದಿನಗಳ ಹಿಂದೆ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಡಾನೆ ಶಾಲೆ ಆವರಣಕ್ಕೆ ನುಗ್ಗಿದ್ದ ವಿಡಿಯೋ ವೈರಲ್ ಆಗಿದೆ
ಬೆಂಗಳೂರು : 30 ಸಾವಿರ ಸ್ವೀಕರಿಸುವಾಗ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿಯೇ ಎಸಿಪಿ ಕೃಷ್ಣಮೂರ್ತಿ 30 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಸಾಗರ್ ಹೋಟೆಲ್ ಮಾಲೀಕರ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಪ್ರತಿ ತಿಂಗಳು 32 ಸಾವಿರ ರೂಪಾಯಿ ಕೊಡಬೇಕು ಎಂದು ಎಸಿಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸಾಗರ ಹೋಟೆಲ್ ಮಾಲೀಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು ಇಂದು 30 ಸಾವಿರ ಲಂಚ ಸ್ವೀಕರಿಸುವಾಗ ಎಸಿಪಿ ಕೃಷ್ಣಮೂರ್ತಿ ಬಲೆಗೆ ಬಿದ್ದಿದ್ದಾರೆ. ಎಸಿಪಿ ಕೃಷ್ಣಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ಸಹ ಲಭ್ಯವಾಗಿತ್ತು.
ಕಲಬುರ್ಗಿ : ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶರಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಇದೀಗ ಅರೆಸ್ಟ್ ಆಗಿದ್ದಾರೆ. ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಗ್ರಾಮಸ್ಥರು ಹಾಗೂ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಠಾಧೀಶರ ವರ್ತನೆ ಹಾಗೂ ಅನ್ಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಶಾಂತಲಿಂಗ ಸ್ವಾಮೀಜಿಯವರು ಪೀಠಾಧಿಪತಿ ಸ್ಥಾನದಲ್ಲಿ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಮದ್ಯ ಸೇವನೆ, ಕೆಟ್ಟ ಶಬ್ದಗಳ ಬಳಕೆ, ಕೆಟ್ಟ ಕೆಲಸಗಳ ಮೂಲಕ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ. ಎಂಟು ತಿಂಗಳ ಹಿಂದೆ, ಸ್ವಾಮೀಜಿ ವಿಜಯಪುರ ಜಿಲ್ಲೆಯಲ್ಲಿ ಮದ್ಯ ಸೇವಿಸಿ ಕಾರು ಅಪಘಾತ ಮಾಡಿದಲ್ಲದೆ, ಕುಡಿದ ಅಮಲಿನಲ್ಲಿ ಊರಿನ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ.
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಿರುಸಾಗಿದ್ದು, ಇದರ ಮಧ್ಯ 2028 ರವರೆಗೆ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ ಎಂದು ಜಮೀರ್ ಅಹ್ಮದ್ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ. 2028 ರವರೆಗೆ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ತಿಳಿಸಿದರು.
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಕೆರೆಗೆ ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕನೆಕೊಪ್ಪ ಹೊಸೂರು ಬಳಿ ನಡೆದಿದೆ. ಅಪಘಾತದಲ್ಲಿ ಪುನೆದಹಳ್ಳಿ ಗ್ರಾಮದ ನವೀನ್ (21) ರಾಮಚಂದ್ರ (37) ಸಾವನ್ನಪ್ಪಿದ್ದಾರೆ. ಇನ್ನು ರುದ್ರೇಶ್ (26) ಮಂಜುನಾಥ್ (21) ಪ್ರಾಣಾಪಯದಿಂದ ಪಾರಾಗಿದ್ದಾರೆ. ಶಿಕಾರಿಪುರ ಆನವಟ್ಟಿ ಕಡೆಗೆ ಇಕೋ ಕಾರಿನಲ್ಲಿ ಹೊರಟಿದ್ದರು. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಶವಗಳನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಆನವಟ್ಟಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಅಯೋಧ್ಯೆಗೆ 30 ಕೋಟಿ ರೂ. ವಜ್ರಖಚಿತ ರಾಮನ ವಿಗ್ರಹವನ್ನು ಕರ್ನಾಟಕ ಮೂಲದ ವ್ಯಕ್ತಿ ದಾನ ನೀಡಿದ್ದಾರೆ ಎನ್ನಲಾಗಿದೆ. ಅಯೋಧ್ಯೆಯು ರಾಮಲಲ್ಲಾ ದೇವಾಲಯದ ಆವರಣದಲ್ಲಿ ಭವ್ಯವಾದ ಚಿನ್ನದ ಬಣ್ಣದ ಪ್ರತಿಮೆಯನ್ನು ಸ್ಥಾಪಿಸಲು ಸಜ್ಜಾಗಿದೆ. ವಜ್ರ, ಪಚ್ಚೆ ಮತ್ತಿತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಪ್ರತಿಮೆಯನ್ನು ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಕೊಡುಗೆಯಾಗಿ ನೀಡಿ ಮಂಗಳವಾರ ಸಂಜೆ ನಗರಕ್ಕೆ ತರಲಾಯಿತು ಎನ್ನಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯು ಅಂದಾಜು ₹25–30 ಕೋಟಿ ಮೌಲ್ಯದ್ದಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯ ಡಾ.ಅನಿಲ್ ಮಿಶ್ರಾ ಮಾಹಿತಿ ನೀಡಿದ್ದು, ದಾನಿಗಳ ಗುರುತು ಇನ್ನೂ ತಿಳಿದಿಲ್ಲ. ಪ್ರತಿಮೆಯ ತೂಕವನ್ನು ಅಳೆಯಲಾಗುತ್ತಿದೆ, ಆದರೂ ಪ್ರಾಥಮಿಕ ಅಂದಾಜಿನ ಪ್ರಕಾರ ಇದನ್ನು ಐದು ಕ್ವಿಂಟಾಲ್ಗಳಷ್ಟಿದೆ. ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಸಂತ ತುಳಸಿದಾಸ ದೇವಸ್ಥಾನದ ಬಳಿ ಇರುವ ಅಂಗದ್ ಟೀಲಾದಲ್ಲಿ ಪ್ರತಿಮೆಯನ್ನು ಸ್ಥಾಪಿಸುವ…
ಬಳ್ಳಾರಿ : ಬಳ್ಳಾರಿಯಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ದೇವಿನಗರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಇಂದ್ ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ (75), ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಅವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗಿ ಬರುವಾಗ ಅಪಘಾತ ಸಂಭವಿಸಿದೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ…
ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಮಾತನಾಡಿ, ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಕ್ಷಣವೇ ತಹಶೀಲ್ದಾರ್ ಗಳಿಗೆ ಭೇಟಿ ಮಾಡಿ. ಹೊಸದಾಗಿ ಅರ್ಜಿ ಹಾಕಿದರೆ 15 ದಿನಗಳಿಗೆ ಪಡಿತರ ಕಾರ್ಡ್ ನೀಡುತ್ತೇವೆ ಇನ್ನು ಆಸ್ತಿ ಇರುವವರು ಕೂಡ ಬಿಪಿಎಲ್ ಕಾರ್ಡ್ ಹೊಂದಿರುವ ವಿಚಾರವಾಗಿ ಅದನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಗೆ ಪಡಿತರ ಅಕ್ಕಿ ಕಳ್ಳ ಸಾಗಾಣಿ ವಿಚಾರವಾಗಿ ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಿದ್ದೇವೆ ಈಗಾಗಲೇ ವಿವಿಧಡೆ 574 ಜನರನ್ನು ಅರೆಸ್ಟ್ ಮಾಡಲಾಗಿದೆ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ ಇನ್ನು ಮುಂದೆ ಹಾಗೆ ನಡೆಯಲ್ಲ ಎಂದರು. ಅಲ್ಲದೇ ಇಂದಿರಾ ಕಿಟ್ ವಿಚಾರವಾಗಿ ಮಾತನಾಡಿದ ಅವರು, ಅಕ್ಕಿ ಹೆಚ್ಚಾಯಿತು ಎಂಬ ಭಾವನೆ ಇದೆ ಹಾಗಾಗಿ ಹೊಸ ಯೋಜನೆ ಜಾರಿ ಮಾಡಿದ್ದೇವೆ. ಇಂದಿರಾ ಕಿಟ್ ಅಂತ ಹೊಸ ಯೋಜನೆ ಜಾರಿ ಮಾಡಿದ್ದೇವೆ ಜನವರಿ ಅಥವಾ ಫೆಬ್ರವರಿಯಲ್ಲಿ ಬೇಳೆ,…
ಕೋಲಾರ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಪೇಯಿಂಟ್ ನಲ್ಲಿ ಮಿಕ್ಸ್ ಮಾಡುವ ಥಿನ್ನರ್ ಕುಡಿದು ಬಾಲಕಿ ಸಾವನಪ್ಪಿದ್ದಾಳೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಈ ಒಂದು ದುರಂತ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ಜಾನು ಎಂಬ ಬಾಲಕಿ ಥಿನ್ನರ್ ಕುಡಿದು ಅಸ್ವಸ್ಥಳಾಗಿದ್ದಳು. ಕುಡಿಯುವ ನೀರು ಎಂದು ಭಾವಿಸಿ ಬಾಲಕಿ ಥಿನ್ನರ್ ಕುಡಿದಿದ್ದಾಳೆ. ತಕ್ಷಣ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಇಂದು ಜಾನ್ಸಿ ಅಲಿಯಾಸ್ ಜಾನು (3) ಸಾವನ್ನಪ್ಪಿದ್ದಾಳೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














