Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಶಿವಮೊಗ್ಗ : ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಲೋಕಕ್ಕೆ ಮತ್ತೊಂದು ಭರಿಸಲಾಗದ ಆಘಾತ ಎದುರಾಗಿದೆ. ಇತ್ತೀಚೆಗಷ್ಟೇ ಖ್ಯಾತ ನಟ, ನಿರ್ದೇಶಕ ದಿಲೀಪ್ ರಾಜ್ ಅವರ ನಿಧನದ Shockನಿಂದ ಹೊರಬರುವ ಮುನ್ನವೇ, ಸ್ಯಾಂಡಲ್‌ವುಡ್ ಮತ್ತೊಬ್ಬ ಪ್ರತಿಭಾವಂತ ತಂತ್ರಜ್ಞನನ್ನು ಕಳೆದುಕೊಂಡಿದೆ. ಕನ್ನಡದ ಯುವ ಬರಹಗಾರ ಹಾಗೂ ಸಹ ನಿರ್ದೇಶಕರಾಗಿದ್ದ ನಂದೀಶ್ ಜಿ.ಟಿ (37) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೂಲಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದ ವೇಳೆಯೇ ನಂದೀಶ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೇವಲ 37ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿರುವುದು ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ನಂದೀಶ್ ಅವರು ಕನ್ನಡ ಸಿನಿಮಾ ಹಾಗೂ ಧಾರಾವಾಹಿ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ಕಥೆ, ಚಿತ್ರಕಥೆ ಮತ್ತು ಚುರುಕಾದ ಸಂಭಾಷಣೆ ಬರೆಯುವುದರಲ್ಲಿ ಸೈ ಎನಿಸಿಕೊಂಡಿದ್ದ ಇವರು, ಚಿತ್ರರಂಗದಲ್ಲಿ ಭರವಸೆಯ ತಂತ್ರಜ್ಞನಾಗಿ ಗುರುತಿಸಿಕೊಂಡಿದ್ದರು. ಹಲವಾರು ಜನಪ್ರಿಯ…
ನವದೆಹಲಿ: ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅಭಿನಯದ ಮುಂಬರುವ ಚಿತ್ರ ‘ಧುರಂಧರ್: ದಿ ರಿವೆಂಜ್’ ಬಿಡುಗಡೆಗೂ ಮುನ್ನವೇ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಸಶಸ್ತ್ರ ಪಡೆಗಳ ಅತ್ಯಂತ ಸೂಕ್ಷ್ಮ ಕಾರ್ಯಾಚರಣೆಗಳ ರಹಸ್ಯ ವಿವರಗಳನ್ನು ಈ ಸಿನಿಮಾದಲ್ಲಿ ಬಹಿರಂಗಪಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಚಿತ್ರದ ವಿಷಯ ವಸ್ತುವನ್ನು ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸೆನ್ಸಾರ್ ಮಂಡಳಿ) ದೆಹಲಿ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಸಶಸ್ತ್ರ ಸೀಮಾ ಬಲದ (SSB) ಹೆಡ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ದೀಪಕ್ ಕುಮಾರ್ ಎಂಬುವರು ಈ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ವಿಷಯದ ಗಾಂಭೀರ್ಯತೆಯನ್ನು ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ…
ವಿಜಯಪುರ : ಮಳೆಯಿಂದ ನೆನೆದಿದ್ದ ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಡುಗುಂದಿ ಪಟ್ಟಣದಲ್ಲಿ ಇಂದು ಮುಂಜಾನೆ ಈ ಒಂದು ದುರಂತ ನಡೆದಿದೆ. ಗೌರೀಶ್ವರ ದೇವಸ್ಥಾನ ಬೆಳೆಯ ನಿವಾಸಿ ಮಹದೇವಿ (55) ಸಾವನಪ್ಪಿದ್ದಾರೆ. ಮೊನ್ನೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಹಳೆಯ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ನೆನೆದಿತ್ತು. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದಾಗ ಮೇಲ್ಚಾವಣಿ ಕುಸಿದು ಮಹದೇವಿ ಸಾವನಪ್ಪಿದ್ದಾರೆ. ಮನೆಯ ಹೊರಗಡೆ ಮಲಗಿದ್ದ ಪತಿ ಶಿವಾನಂದ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ತೀವ್ರ ಆಘಾತಕಾರಿ ಮತ್ತು ಮನನೊಂದುವ ಘಟನೆಯೊಂದು ಸಂಭವಿಸಿದೆ. ಆಟವಾಡಲು ಹೋದ ಒಂಬತ್ತು ವರ್ಷದ ಬಾಲಕನೊಬ್ಬ ಪಿಲ್ಲರ್ ಹಾಕಲು ತೋಡಲಾಗಿದ್ದ ಆಳವಾದ ಗುಂಡಿಗೆ ಬಿದ್ದು ದುರಂತ ಅಂತ್ಯ ಕಂಡಿದ್ದಾನೆ. ಈ ಘಟನೆಯು ಹುಬ್ಬಳ್ಳಿಯ ವಿಜಯನಗರ ಪ್ರದೇಶದಲ್ಲಿ ನಡೆದಿದ್ದು, ಕೇಶ್ವಾಪುರದ ಆಜಾದ್ ನಗರ ನಿವಾಸಿ ಬಾಲಾಜಿ (9) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ಮೃತ ಬಾಲಾಜಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಾ ವಿಜಯನಗರದ ಕಡೆಗೆ ಬಂದಿದ್ದನು. ಈ ವೇಳೆ ಅಲ್ಲಿನ ಕಾಂಪೌಂಡ್‌ವೊಂದರ ಒಳಗಡೆ ತೆಂಗಿನಕಾಯಿ ಬಿದ್ದಿರುವುದನ್ನು ಗಮನಿಸಿದ ಬಾಲಕ, ಅದನ್ನು ತೆಗೆದುಕೊಳ್ಳಲು ಒಳಗೆ ಹೋಗಿದ್ದಾನೆ. ಆದರೆ ಅಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಪಿಲ್ಲರ್ ಹಾಕಲು ಆಳವಾದ ಗುಂಡಿಯನ್ನು ತೋಡಲಾಗಿತ್ತು. ದುರದೃಷ್ಟವಶಾತ್, ಆ ಗುಂಡಿಯಲ್ಲಿ ನೀರು ತುಂಬಿದ್ದರಿಂದ, ಆಯತಪ್ಪಿ ಬಿದ್ದ ಬಾಲಾಜಿ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಇದೇ ವೇಳೆ ಬಾಲಕ ಗುಂಡಿಗೆ ಬೀಳುತ್ತಿದ್ದಂತೆ ಜೊತೆಯಲ್ಲಿದ್ದ ಆತನ ಸ್ನೇಹಿತರು ತೀವ್ರವಾಗಿ ಹೆದರಿದ್ದಾರೆ. ಭಯಭೀತರಾದ ಇಬ್ಬರು ಬಾಲಕರು ಅಲ್ಲಿಂದ ತಕ್ಷಣವೇ ಪರಾರಿಯಾಗಿದ್ದಾರೆ. ಅಷ್ಟೇ…
ಬೆಂಗಳೂರು: ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಏರೊಸ್ಪೇಸ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್, ರಾಜ್ಯದಲ್ಲಿ ₹6,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬುಧವಾರ ಖನಿಜ ಭವನದಲ್ಲಿ ಕಂಪೆನಿಯ ಉನ್ನತಾಧಿಕಾರಿಗಳ ಜೊತೆಗೆ ನಡೆದ ವಿಸ್ತೃತ ಸಮಾಲೋಚನೆಯ ಬಳಿಕ ಮಾಹಿತಿ ನೀಡಿದ ಸಚಿವರು, 200 ಎಕರೆ ಪ್ರದೇಶದಲ್ಲಿ ವೈಮಾಂತರಿಕ್ಷ, ರಕ್ಷಣೆ, ಸೆಮಿಕಂಡಕ್ಟರ್ ಹಾಗೂ ಕೃತಕ ಬುದ್ಧಿಮತ್ತೆ (ಎಐ) ನಾವೀನ್ಯತೆ ಕ್ಷೇತ್ರಗಳಲ್ಲಿ ಉತ್ಪಾದನೆ, ಪರೀಕ್ಷೆ ಮತ್ತು ನಿರ್ವಹಣೆಯ ಸಮಗ್ರ ಕೇಂದ್ರ ಸ್ಥಾಪಿಸುವುದು ಆ್ಯಕ್ಸಿಸ್‌ಕೇಡ್ಸ್ ಏರೊಸ್ಪೇಸ್‌ನ ಮುಖ್ಯ ಉದ್ದೇಶವಾಗಿದೆ. ಕಂಪನಿಯು ಜಾಗತಿಕ ಪಾಲುದಾರಿಕೆಯಡಿ ದೇಶೀಯವಾಗಿ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವನ್ನೂ ಸ್ಥಾಪಿಸಲಿದೆ ಎಂದು ತಿಳಿಸಿದರು. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದಲ್ಲಿ ಹೆಸರುವಾಸಿಯಾಗಿರುವ ಬೆಂಗಳೂರು ಮೂಲದ ಆ್ಯಕ್ಸಿಸ್ ಕೇಡ್ಸ್ ಏರೊಸ್ಪೇಸ್ ಇನ್ ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಉನ್ನತಾಧಿಕಾರಿಗಳೊಂದಿಗೆ ಈ ದಿನ ವಿಸ್ತೃತ ಸಭೆ ನಡೆಸಿದೆ.…
ಬೆಂಗಳೂರು: ಸ್ವಂತ ಇಚ್ಛೆಯಿಂದ ಪ್ರೇಮಿಯೊಂದಿಗೆ ವಾಸಿಸುತ್ತಿರುವ ವಯಸ್ಕ ಮಹಿಳೆಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತದ ಮಾನಸಿಕ ತಪಾಸಣೆಗೆ ಒಳಪಡಿಸಲು ಆದೇಶಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮುಸ್ಲಿಂ ಯುವಕನೊಂದಿಗೆ ವಾಸಿಸುತ್ತಿರುವ ತನ್ನ 21 ವರ್ಷದ ಮಗಳಿಗೆ ಮಾನಸಿಕ ತಪಾಸಣೆ ನಡೆಸಬೇಕು ಎಂದು ಕೋರಿ ಸಿಖ್ ಸಮುದಾಯದ ತಾಯಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ನ್ಯಾಯಪೀಠದ ಕಟ್ಟುನಿಟ್ಟಿನ ನಿಲುವು: ತಾಯಿ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೊವಿಂದರಾಜು ಮತ್ತು ನ್ಯಾಯಮೂರ್ತಿ ಕೆ. ಮನ್ಮಧರಾವ್ ಅವರಿದ್ದ ವಿಭಾಗೀಯ ನ್ಯಾಯಪೀಠವು ನಡೆಸಿತು. ವಿಚಾರಣೆ ವೇಳೆ ಯುವತಿಗೆ ಈಗಾಗಲೇ 21 ವರ್ಷ ತುಂಬಿದ್ದು, ಆಕೆ ಕಾನೂನುಬದ್ಧವಾಗಿ ವಯಸ್ಕಳಾಗಿದ್ದಾಳೆ ಎಂಬುದನ್ನು ನ್ಯಾಯಪೀಠ ಪ್ರಮುಖವಾಗಿ ಪರಿಗಣಿಸಿತು. ಆಕೆ ತನ್ನ ಸ್ವಂತ ನಿರ್ಧಾರದಂತೆ ಪ್ರೇಮಿಯೊಂದಿಗೆ ಇರಲು ಬಯಸಿರುವುದರಿಂದ, ಆಕೆಯ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ಹಸ್ತಕ್ಷೇಪ ಮಾಡಲು ಯಾರಿಗೂ ಹಕ್ಕಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕಾನೂನು ಪ್ರಕ್ರಿಯೆಯ ಉಲ್ಲೇಖ: ಕೇವಲ ಪೋಷಕರು ಅಥವಾ ಬೇರೆ ಯಾರೋ ಕೇಳಿಕೊಂಡರು ಎಂಬ ಕಾರಣಕ್ಕೆ…
ಗದಗ : ಕ್ಷುಲಕ ಕಾರಣಕ್ಕೆ ಪತಿ ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಕಬ್ಬಿಣದ ರಾಡಿನಿಂದ ಹೊಡೆದು ಪತಿಯನ್ನೇ ಪತ್ನಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೆಡ್ಡರನಾಗನೂರು ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ ಹಾದಿಮನಿ (28) ಎನ್ನುವ ಪತಿಯನ್ನು ಪತ್ನಿ ಕವಿತಾ ರಾಡಿಂದ ಹೊಡೆದು ಕೊಲೆ ಮಾಡಿದ್ದಾಳೆ. ಬೆಡ್ ರೂಮ್ನಲ್ಲಿ ಕಬ್ಬಿಣದ ರೋಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾಳೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. 2022 ಫೆಬ್ರವರಿ ತಿಂಗಳಲ್ಲಿ ಮನೆಯಲ್ಲಿ ಒಪ್ಪಿಸಿ ಮದುವೆಯಾಗಿದ್ದರು ವಿಶ್ವನಾಥ ಕವಿತಾ ದಂಪತಿಗೆ ಮೂರು ವರ್ಷದ ಗಂಡು ಮಗು ಸಹ ಇದೆ ಆದರೆ ಮದುವೆಯಾದ ಮೇಲೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಹಾಗಾಗಿ ಕಳೆದ ಮೂರು ವರ್ಷಗಳಿಂದ ಕವಿತಾ ತವರು ಮನೆಯಲ್ಲಿ ಇದ್ದಳು. ಇತ್ತೀಚಿಗೆ ವಿಶ್ವನಾಥ ಸಹೋದರಿಯ ಮದುವೆ ಸಲುವಾಗಿ ಕವಿತಾ ಮರಳಿ ಗಂಡನ ಮನೆಗೆ ಬಂದಿದ್ದಳು. ಮತ್ತೆ ಮನೆಯಲ್ಲಿ ಇಬ್ಬರ ಮಧ್ಯೆ…
ಕೊಪ್ಪಳ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 25 ವರ್ಷದ ಯುವ ವಕೀಲ ಸಾವನಪ್ಪಿದ್ದಾನೆ. ಗಂಗಾವತಿ ನ್ಯಾಯಾಲಯದ ಆವರಣದಲ್ಲಿ 25 ವರ್ಷದ ಯುವ ವಕೀಲರೊಬ್ಬರು ಹೃದಯಾಘಾತದಿಂದ ದಿಢೀರ್ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮೃತರನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಚಿಕ್ಕಮಾದಿನಾಳ ಗ್ರಾಮದ ನಿವಾಸಿ ಕನಕೇಶ್ (25) ಎಂದು ಗುರುತಿಸಲಾಗಿದೆ. ವಕೀಲ ವೃತ್ತಿ ಆರಂಭಿಸಿ ಭವಿಷ್ಯದ ಬಗ್ಗೆ ಹತ್ತಾರು ಕನಸುಗಳನ್ನು ಕಂಡಿದ್ದ ಯುವಕ ಹೀಗೆ ಅರ್ಧಕ್ಕೇ ಇಹಲೋಕ ತ್ಯಜಿಸಿರುವುದು ಅವರ ಕುಟುಂಬಸ್ಥರು ಹಾಗೂ ವಕೀಲರ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ. ಯಾರೂ ಊಹಿಸದ ರೀತಿಯಲ್ಲಿ ಈ ದುರಂತ ಸಂಭವಿಸಿದೆ. ಎಂದಿನಂತೆ ಕನಕೇಶ್ ಅವರು ಗಂಗಾವತಿ ನ್ಯಾಯಾಲಯದ ಕಲಾಪಗಳಲ್ಲಿ ಪಾಲ್ಗೊಳ್ಳಲು ಕೋರ್ಟ್ ಆವರಣಕ್ಕೆ ಆಗಮಿಸಿದ್ದರು. ಆದರೆ, ನ್ಯಾಯಾಲಯದ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಪ್ರಜ್ಞೆ ತಪ್ಪಿ ಕೆಳಗೆ ಕುಸಿದು ಬಿದ್ದಿದ್ದಾರೆ. ಕನಕೇಶ್ ಅವರು ಕೋರ್ಟ್ ಆವರಣದಲ್ಲೇ ದಿಢೀರ್ ಕುಸಿದು ಬೀಳುತ್ತಿದ್ದಂತೆ ತಲ್ಲಣಗೊಂಡ ಅಲ್ಲಿದ್ದ ಸಹೋದ್ಯೋಗಿ ವಕೀಲರು…
‘NEET’ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆ : ಈ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ!
ಬೆಂಗಳೂರು: ನೀಟ್ (NEET) ಪರೀಕ್ಷೆ ಅಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ವತಿಯಿಂದ ನಾಳೆ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11 ಗಂಟೆಗೆ ನಗರದ ಪ್ರಸಿದ್ಧ ಫ್ರೀಡಂ ಪಾರ್ಕ್‌ನಲ್ಲಿ ಈ ಬೃಹತ್ ಧರಣಿ ಸತ್ಯಾಗ್ರಹ ನಡೆಯಲಿದ್ದು, ರಾಜ್ಯದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಂಟಿಯಾಗಿ ಆಕ್ರೋಶ ಹೊರಹಾಕಲಿದ್ದಾರೆ. ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ: ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಂಖ್ಯೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸೇರುವ ನಿರೀಕ್ಷೆ ಇರುವುದರಿಂದ, ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಬೆಂಗಳೂರು ಸಂಚಾರಿ ಪೊಲೀಸರು ಸುತ್ತಮುತ್ತಲಿನ ರಸ್ತೆಗಳಲ್ಲಿ ಕೆಲ ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ. ಗುರುವಾರ ಬೆಳಿಗ್ಗೆ 07:30 ರಿಂದ ಸಂಜೆ 04:00 ಗಂಟೆಯವರೆಗೆ ಈ ಹೊಸ ಟ್ರಾಫಿಕ್ ನಿಯಮಗಳು ಜಾರಿಯಲ್ಲಿರಲಿವೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವ ರಸ್ತೆ…
ಬೆಂಗಳೂರು: ರಾಜ್ಯದ ಸರ್ಕಾರಿ ಶೈಕ್ಷಣಿಕ ವಲಯದಲ್ಲಿ ಅಭೂತಪೂರ್ವ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ಯೋಜನೆಗೆ ಜೂನ್ 1 ರಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು, ಶಿಕ್ಷಣ ವ್ಯವಸ್ಥೆಯ ಸುಧಾರಣೆ ಹಾಗೂ ಇತ್ತೀಚಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಅದ್ಧೂರಿ ಚಾಲನೆ; ಒಂದೇ ಸೂರಿನಡಿ ಎಲ್‌ಕೆಜಿಯಿಂದ ಪಿಯುಸಿ ಜೂನ್ 1 ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಭವ್ಯ ಸಮಾರಂಭದಲ್ಲಿ ಈ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಉನ್ನತ ಮಟ್ಟದ ಶಿಕ್ಷಣ ನೀಡುವುದು ಈ ಯೋಜನೆಯ ಆಶಯವಾಗಿದೆ. ಈ ವಿಶೇಷ ಯೋಜನೆಯಡಿ, ಒಂದೇ ಸೂರಿನಡಿ ಎಲ್‌ಕೆಜಿಯಿಂದ (LKG) ಪಿಯುಸಿವರೆಗೆ ಶಿಕ್ಷಣ ಒದಗಿಸಲಾಗುತ್ತದೆ.…














