Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳು ಆರೋಪಿಗಳಾದ ಪದ್ಮನಾಭ ಹಾಗೂ ಪರಶುರಾಮ್ ರನ್ನು ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 3ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕರಾದಂತಹ ಚಂದ್ರಶೇಖರನ್ ಅವರು ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 3ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿ ಶಿವಮೊಗ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಕೇಸಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅವ್ಯವಹಾರ ನಡೆದಿತ್ತು. ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾಗಿದ್ದರು.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.ನಾಲ್ವರು ಆರೋಪಿಗಳನ್ನು ಸ್ಥಳಾಂತರಿಸಲು 24ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಲು ಕೋರ್ಟ್ ಆದೇಶಿಸಿದೆ. ನಟಿ ಪವಿತ್ರಾಗೌಡಗೆ ಅಶ್ಲೀಲ ಕಾಮೆಂಟ್ ಮಾಡಿದ್ದಾನೆಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಿತ್ತು.ಕೊಲೆ ಘಟನೆ ಬೆನ್ನಲ್ಲಿಯೇ ನಟ ದರ್ಶನ್‌ನಿಂದ 30 ಲಕ್ಷ ರೂ. ಹಣವನ್ನು ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದರು. ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ A8- ರವಿ, A15-ಕಾರ್ತಿಕ್, A16- ಕೇಶವ ಮೂರ್ತಿ A17-ನಿಖಿಲ್ ನಾಯಕ್ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಕೊಲೆ ಕೇಸಿನಲ್ಲಿ ಮೊದಲು ಕಾರ್ತೀಕ್, ಕೇಶವ್ ಹಾಗೂ ನಿಖಿಲ್ ಮೊದಲು ಪೊಲೀಸರ ಮುಂದೆ…
ಬೆಂಗಳೂರು : ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಮೂಲದ ಪ್ರಿಯತಮೆ ಹೇಮಾವತಿ (35) ಎನ್ನುವವಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಾಲ್ಕು ತಿಂಗಳ ಹಿಂದೆ ವೇಣು ಹೇಮಾವತಿಯನ್ನು ಹೊಸಕೋಟೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಇರಿಸಿದ್ದ ಎನ್ನಲಾಗಿದೆ. ಹೇಮಾವತಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು ಹೇಮಾವತಿ ಮನೆಗೆ ಬಂದು ಇದ್ದು ಹೋಗುತ್ತಿದ್ದ. ಆದರೆ ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಮುಂಜಾನೆ ಅಲ್ಲಿಂದ ಪರಾರಿಯಾಗಿದ್ದಾನೆ.ಚಿಂತಾಮಣಿಗೆ ಹೋಗಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತಿದ್ದಾನೆ ಅಸ್ವಸ್ಥ ವೇಣುನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ರಾಜ್ಯದ ಬಡ ಜನತೆಯ ಒಳಿತಿಗಾಗಿ ಗ್ಯಾರಂಟಿ ನೀಡುತ್ತಿದ್ದೇವೆ. ಹೊರತು ರಾಜಕೀಯ ಲಾಭಕ್ಕಾಗಿ ಅಲ್ಲ. ಇನ್ನು ಐದು ವರ್ಷಗಳ ಕಾಲ ನಾವು ಯಾವುದೇ ಗ್ಯಾರಂಟಿಯ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ.ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿರುವ ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ನರೇಂದ್ರ ಮೋದಿ ಬರೀ ಸುಳ್ಳು ಹೇಳುತ್ತಾ ಬಂದಿದ್ದಾರೆ. ಈಗ ಚುನಾವಣೆಯಲ್ಲಿ ಮತ್ತೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯವರ ಸುಳ್ಳು ಭರವಸೆಗಳಿಗೆ ಮೋಸ ಹೋಗಬಾರದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ಬಡವರು, ದೀನ ದಲಿತರು, ಹೆಣ್ಣುಮಕ್ಕಳು ನೆಮ್ಮದಿಯ ಬದುಕು ಕಂಡುಕೊಂಡಿದ್ದಾರೆ ಎಂದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಆದೇಶವನ್ನು ಕಾಯ್ದಿರಿಸಿದ್ದು, ಜೂನ್ 26ಕ್ಕೆ ಜಾಮೀನು ಅರ್ಜಿ ಕುರಿತು ಆದೇಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಅರ್ಜುನ ವಿಚಾರಿಸಿದ ನ್ಯಾಯಾಲಯವು ಈ ಒಂದು ಅರ್ಜಿಯ ಆದೇಶವನ್ನು ಜೂನ್ 26ಕ್ಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ತಮ್ಮ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ…
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಚನ್ನಪಟ್ಟಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ಒಂದು ಉಪಚುನಾವಣೆಗೆ ಈಗಾಗಲೇ ಕಮಿಟಿ ಒಂದನ್ನು ರಚನೆ ಮಾಡಿದ್ದೇವೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಗಾಗಿ ಈಗಾಗಲೇ ಕಮಿಟಿಯನ್ನು ರಚಿಸಿದ್ದೇವೆ. ಕಮಿಟಿಯಲ್ಲಿ ಸಾಕಷ್ಟು ಸಚಿವರು ಶಾಸಕರು ಇದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎಲ್ಲರೂ ಸೇರಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು. ಈ ಒಂದು ಕಮಿಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಸೇರಿದಂತೆ ಹಲವರು ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತೇವೆ. ನನ್ನ ಸ್ಪರ್ಧೆ ಬಗ್ಗೆಯೂ ಕಮಿಟಿ ತೀರ್ಮಾನ ಮಾಡುತ್ತೆ.ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ತುಮಕೂರು : ಕಳ್ಳತನದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಬಳಿ ನಡೆದಿದೆ. ಕಳ್ಳತನದ ಆರೋಪಿ ರಿಜ್ವಾನ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದಾರೆ.ಈ ವೇಳೆ ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬವನಿಗೆ ಗುಂಡೆಟ್ಟು ತಗುಲಿದೆ. ಹಲವು ಕಳ್ಳತನ ಕೇಸ್ಗಳಲ್ಲಿ ಆರೋಪಿ ಬೇಕಾಗಿದ್ದ ಎನ್ನಲಾಗಿದೆ.ಈ ವೇಳೆ ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಮಧುಗಿರಿ ಸಿಪಿಐ ಹನುಮಂತರಾಯಪ್ಪರಿಂದ ರಿಜ್ವಾನ್ ಮೇಲೆ ರೈಡಿಂಗ್ ಮಾಡಿದ್ದಾರೆ. ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಈಜಿಹಳ್ಳಿ ಬಳಿ ಆರೋಪಿ ರಿಜ್ವನ್ ನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಆರೋಪಿ ರಿಜ್ವಾನ್ ಮೇಲೆ ಮಧುಗಿರಿ ಸಿಪಿಐ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಧುಗಿರಿ ಸಿಪಿಐ ಹನುಮಂತರಾಯಪ್ಪರಿಂದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು ಬಿದ್ದಿದೆ.
ಮೈಸೂರು : ಮಂಗಳಮುಖಿಯರು ಗುಂಪಾಗಿ ಬಂದು ಕಿರುಕುಳ ನೀಡಿದ್ದಾರೆಂದು ಬೇಸತ್ತ ಬಾಲಕನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಹೌದು ಮೃತ ಬಾಲಕನನ್ನು ರಾಹುಲ್ ಮೌರ್ಯ(17) ಎಂದು ಗುರುತಿಸಲಾಗಿದೆ.ಕಳೆದ ನಾಲ್ಕು ತಿಂಗಳಿನಿಂದ ರಾಹುಲ್ ಮೌರ್ಯ ನಾಪತ್ತೆಯಾಗಿದ್ದನು.ಇತ್ತೀಚಿಗೆ ಮನೆಗೆ ವಾಪಾಸ್ ಬಂದಿದ್ದ. ಈ ವೇಳೆ ಜೂನ್ 23ರಂದು ಕೆಲವು ಮಂಗಳಮುಖಿಯರಿಂದ ರಾಹುಲ್ ಮೌರ್ಯ ಕುಟುಂಬಸ್ಥರ ಜೊತೆ ಜಗಳವೂ ಉಂಟಾಗಿತ್ತು. ನೀವು ನಿಮ್ಮ ಹುಡುಗನನ್ನು ನಮ್ಮೊಂದಿಗೆ ಕಳಿಸಿಕೊಡಿ ಎಂದು ಗಲಾಟೆ ಮಾಡಿದ್ದರು. ಜೊತೆಗೆ, ನಿಮ್ಮ ಮಗನೇ ನಮ್ಮ ಹುಡುಗಿಯನ್ನು ಕರೆದೊಯ್ದಿದ್ದಾನೆಂದು ಆರೋಪಿಸಿ ಮಂಗಳಮುಖಿಯರು ಊರಿನಲ್ಲಿ ಬಂದು ಜೋರಾಗಿ ಗಲಾಟೆಯನ್ನೂ ಮಾಡಿದ್ದರು.ಮಂಗಳಮುಖಿಯರು ಮನೆಯ ಬಳಿ ಗಲಾಟೆ ಮಾಡಿದ ದಿನ ಸಂಜೆ 5 ಗಂಟೆಗೆ ಹೆಜ್ಜೂರು ಗ್ರಾಮದ ಜಮೀನಿನಲ್ಲಿರುವ ಶೆಡ್ ನಲ್ಲಿ ರಾಹುಲ್ ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ…
ಶಿವಮೊಗ್ಗ : ಬೆಂಗಳೂರಿನಿಂದ ಶಿವಮೊಗ್ಗದ ಅಬ್ಬಿ ಜಲಪಾತಕ್ಕೆ ಪ್ರವಾಸಕ್ಕೆ ಎಂದು ತೆರಳಿದ್ದ 12 ಜನರ ಯುವಕರ ಗುಂಪೋಂದು, ಅಬ್ಬಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಜಲಪಾತದಲ್ಲಿ ಸೆಲ್ಫಿ ಕ್ರೇಜಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಪ್ರವಾಸಿಗನೊಬ್ಬ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ವಿನೋದ್ (26) ನೀರು ಪಾಲಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಈ ದುರ್ಘಟನೆ ಸಂಭವಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಪ್ರವಾಸಿಗ ಮೃತಪಟ್ಟಿದ್ದಾನೆ. ಜಲಪಾತ ನೋಡಲು 12 ಯುವಕರು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದರು ನೀರು ಪಾಲಾಗಿರುವ ಯುವಕ ವಿನೋದ್ ಮೂಲತಃ ಬಳ್ಳಾರಿಯವರು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು ಮೃತ ದೇಹಕ್ಕಾಗಿ ಶೋಧ ಕಾರ್ಯ ಈಗ ಮುಂದುವರೆದಿದೆ.ಹೊಸನಗರ ಪೊಲೀಸ್ ಠಾಣಾ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಪಾಲಾಗಿದ್ದು ಇಂದು ಅವರನ್ನು ನಟ ವಿನೋದ್ ಪ್ರಭಾಕರ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ದರ್ಶನ್ ಭೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಅವರನ್ನು ಭೇಟಿ ಆದಾಗ ಏನ್ ಟೈಗರ್ ಅಂದ್ರು ನನ್ನ ಬಳಿ ಮಾತನಾಡಿದರು ಅಷ್ಟೇ. ಅವರ ಮುಖ ನೋಡಿ ಶೇಕ್ ಹ್ಯಾಂಡ್ ಮಾಡಿ ಬಂದೆ ಎಂದು ಭೇಟಿಯ ಬಳಿಕ ವಿನೋದ್ ಪ್ರಭಾಕರ್ ಅವರು ಹೇಳಿಕೆ ನೀಡಿದರು. ರೇಣುಕಾ ಸ್ವಾಮಿ ಕುಟುಂಬ ಕಣ್ಣೀರಿನಲ್ಲಿ ಕೈ ತೊಳಿತ ಇದೆ ಇತ್ತ ದರ್ಶನ ಕುಟುಂಬದವರು ಕೂಡ ನೋವಿನಲ್ಲಿ ಇದ್ದಾರೆ. ಯಾರಿಗೆ ಸಾಂತ್ವನ ಹೇಳ್ಬೇಕು ಅಂತ ತಿಳಿಯಲಿಲ್ಲ ದರ್ಶನ್ ಬೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು ಎಂದರು. ರೇಣುಕಾ ಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕು ಅವರ ಕುಟುಂಬಕ್ಕೆ, ಅವರ ತಂದೆಯಾಗಲಿ ತಾಯಿಯಾಗಲಿ ಅವರ ಹೆಂಡತಿ ಆಗಿರಬಹುದು, ಎಲ್ಲರಿಗೂ ಭಗವಂತ…