Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಈಗಾಗಲೇ ವರ್ಷದ ಆರಂಭದಲ್ಲಿ ಕೆಎಸ್ಆರ್ಟಿಸಿ ಟಿಕೆಟ್, ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿತು ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಇನ್ನೂ ಐದು ತಿಂಗಳಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 5ರಷ್ಟು ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ಇತ್ತೀಚೆಗೆ ತಾನೇ ಮೆಟ್ರೋ ಪ್ರಯಾಣ ದರು ಏರಿಕೆ ಮಾಡಲಾಗಿದೆ. ಬರೋಬ್ಬರಿ ಶೇಕಡಾ 71ರಷ್ಟು ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಈ ದರ ಏರಿಕೆಯಿಂದ ಪ್ರಯಾಣಿಕ ಇನ್ನು ಚೇತರಿಸಿಕೊಂಡಿಲ್ಲ. ಇದರ ಬೆನ್ನಲ್ಲೇ ಮೆಟ್ರೋ ಮತ್ತೊಂದು ದರ ಏರಿಕೆ ನಿರ್ಧಾರ ಮಾಡಿದೆ. ಇನ್ನು ಮುಂದೆ ಮೆಟ್ರೋ ಪ್ರಯಾಣ ದರ ಪ್ರತಿ ವರ್ಷ ಏರಿಕೆಯಾಗಲಿದೆ. ಇನ್ನು ಮುಂದೆ ಮೆಟ್ರೋ ಪ್ರಯಾಣ ದರ ಪ್ರತಿ ವರ್ಷ ಏರಿಕೆಯಾಗಲಿದೆ. ದರ ಏರಿಕೆ ಸಮಿತಿ ಶಿಫಾರಸ್ಸಿನಂತೆ ಪ್ರತಿ ವರ್ಷವೂ ಮೆಟ್ರೋ ಪ್ರಯಾಣ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದೀಗ ಪ್ರತಿ ವರ್ಷ…
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಮ್ಮಲಪಲ್ಲಿ ಗ್ರಾಮದಲ್ಲಿ ವೃದ್ದೆಯ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೊಮ್ಮಲಪಲ್ಲಿ ಗ್ರಾಮದಲ್ಲಿ ಅತ್ತೆ ಮೇಲೆ ಹಲ್ಲೆಗೈದಿದ್ದ ಸೊಸೆ ರೇಖಾ ಹಾಗೂ ಆಕೆಯ ಪ್ರಿಯಕರನನ್ನು ಅರೆಸ್ಟ್ ಮಾಡಲಾಗಿದೆ. ಅತ್ತೆ ರಮಣಮ್ಮ ಮೇಲೆ ಸೊಸೆ ರೇಖಾ ಹಲ್ಲೇ ಮಾಡಿದ್ದಾಳೆ. ಪ್ರಿಯಕರ ಶಶಿಕುಮಾರ್ ಜೊತೆಗೆ ಸೇರಿಕೊಂಡು ಅತ್ತೆ ರಮಣಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಏಳು ವರ್ಷಗಳ ಹಿಂದೆ ಪ್ರೀತಿಸಿ ಆಂಧ್ರ ಮೂಲದ ರೇಖಾ ಮದುವೆಯಾಗಿದ್ದಳು. ತುಂಬಲಪಲ್ಲಿಯ ಮಂಜುನಾಥ ರೆಡ್ಡಿ ಯನ್ನು ಪ್ರೀತಿಸಿ ವಿವಾಹವಾಗಿದ್ದಳು.ಅತ್ತೆ ರಮಣಮ್ಮಗೆ ಸೊಸೆಯ ಅಕ್ರಮ ಸಂಬಂಧದ ವಿಷಯ ತಿಳಿದಿತ್ತು. ಹೀಗಾಗಿ ಪ್ರಿಯಕರ ಶಶಿಕುಮಾರ್ ಜೊತೆಗೆ ಸೇರಿ ಸೊಸೆ ರೇಖಾ ರಮಣಮ್ಮನ ಮೇಲೆ ಹಲ್ಲೆ ಮಾಡಿದ್ದಾಳೆ ರೇಖಾ ಮತ್ತು ಶಶಿಕುಮಾರ್ ನನ್ನ ರಾಯಲ್ಪಾಡು ತಡೆ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ.ಘಟನೆ ಕೋರಿದಂತೆ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರು ಸಾವನ್ನುಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೆಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಮೃತರನ್ನು ದೊಡ್ಡತಮ್ಮನಹಳ್ಳಿಯ ಬಾಲು (22) ಹಾಗೂ ಮಿಟ್ಟ ಹಳ್ಳಿಯ ಮಲ್ಲೇಶ್ (32) ಎಂದು ತಿಳಿದುಬಂದಿದೆ. ಘಟನೆ ಸಂಭಂದ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಸಾಮಾಜಿಕ ಹೋರಾಟಗಾರ ಸ್ನೇಹ ಮೈ ಕೃಷ್ಣ ಸೌಜನ್ಯ ಅಳಮಾವ ವಿಠಲ ಗೌಡನೇ ಈ ಒಂದು ಕೊಲೆ ಮಾಡಿದ್ದ ಎಂಬ ಗಂಭೀರವಾದ ಆರೋಪ ಮಾಡಿದ್ದರು. ಈ ವಿಚಾರವಾಗಿ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಟ ವಿರುದ್ಧ ಇದೀಗ ದೂರು ದಾಖಲಾಗಿದೆ. ವೆಂಕಪ್ಪ ಕೋಟ್ಯಾನ್ ಎಂವುವರಿಂದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಾಗಿದೆ. ಸೌಜನ್ಯಳನ್ನು ಮಾವ ವಿಠ್ಠಲಗೌಡ ಕೊಂದಿದ್ದಾನೆ ಎಂದು ಸ್ನೇಹಮಯಿ ಕೃಷ್ಣ ಗಂಭೀರವಾಗಿ ಆರೋಪಿಸಿದ್ದರು. ಹಾಗಾಗಿ ವೆಂಕಪ್ಪ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಸೌಜನ್ಯಗಳಿಗೆ ನ್ಯಾಯ ಒದಗಿಸುವ ಹೋರಾಟದ ದಾರಿ ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ ಈ ರೀತಿಯ ಹೇಳಿಕೆ ಹಿಂದೆ ಯಾರಿದ್ದಾರೆ ಎಂಬುವುದರ ಬಗ್ಗೆ ತನಿಖೆಯಾಗಬೇಕು ಸ್ನೇಹಮಯಿ ಕೃಷ್ಣ ಅವರನ್ನು ಕರೆಸಿ ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು : ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆಪ್ಟಂಬರ್ 15ರಿಂದ ಆರಂಭಿಸಿ, 45 ಕಚೇರಿ ಕೆಲಸದ ದಿನಗಳಲ್ಲಿ ಮುಕ್ತಾಯಗೊಳಿಸಲಾಗುತ್ತದೆ. ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದ್ದು, ಮೊಬೈಲ್ ಆ್ಯಪ್ ಮೂಲಕ ಟ್ರಾನ್ಸ್ಜೆಂಡರ್ಸ್ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ KARMANI ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಗೆ ಸೇವಾ ಸಿಂಧು ಮೂಲಕ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ವೆಬ್ ಅಪ್ಲಿಕೇಶನ್ ರೆಡಿ ಮಾಡಲಾಗಿದೆ. ಈ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಸಮೀಕ್ಷೆ ನಡೆಯಲಿದೆ.…
ಹಾಸನ : ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರಾದೃಷ್ಟಕರ. ಟ್ರಕ್ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದರು. ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲಾ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ಸಮಯದಲ್ಲಿ ಟ್ರಕ್ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಸಹ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದ…
ಮೈಸೂರು : ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು. ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಸತ್ತವರು ಹೆಚ್ಚಾಗಿ…
ಮೈಸೂರು : ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ದೂರು ಠಾಣೆಯಲ್ಲಿ ಬಿಜೆಪಿ ನಾಯಕರು ವಿರುದ್ಧ ಎಫ್‌ಐಆರ್ ದಾಖಲು ಮಾಡಿರುವ ವಿಚಾರವಾಗಿ ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯಶೋದನಕಾರಿ ಭಾಷಣ ಮಾಡಿದವರನ್ನು ಸುಮ್ಮನೆ ಬಿಡಬೇಕಾ ಅಂತ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ದಾಖಲಿಸಿರುವುದು ಹಿಂದೂಗಳ ಟಾರ್ಗೆಟ್ ಅಲ್ಲ. ನಾನು ಕೂಡ ಹಿಂದೂ ನನ್ನ ಹೆಸರಿನಲ್ಲೇ ಎರಡು ದೇವರು ಇವೆ. ಸಿದ್ದ ಎಂದರೆ ಈಶ್ವರ ರಾಮ ಎಂದರೆ ವಿಷ್ಣು. ಪ್ರಚೊಧನಕಾರಿ ಭಾಷಣ ಮಾಡಿದವರನ್ನು ಸುಮ್ಮನೆ ಬಿಡಲಾಗುತ್ತದಾ? ಸಮಾಜದ ಶಾಂತಿಗೆ ಭಂಗ ತಂದವರ ವಿರುದ್ಧ ಕ್ರಮ ಕೈಗೊಳ್ಳುವುದು ತಪ್ಪಲ್ಲ. ಪೊಲೀಸರು ನಿಯಮದ ಪ್ರಕಾರ ಅವರ ಮೇಲೆ ಕೇಸ್ ಹಾಕಿದ್ದಾರೆ ಇದರಲ್ಲಿ ರಾಜಕೀಯ ಎಲ್ಲಿದೆ ಹಿಂದುಗಳ ಟಾರ್ಗೆಟ್ ಅಂದರೆ ಹೇಗೆ ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನು ಹಾಸನದಲ್ಲಿ ಗಣಪತಿ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ಹಾಸನ : ನಿನ್ನೆ ತಡರಾತ್ರಿ ಹಾಸನ ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿ 373 ರ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನ ಮೃತಪಟ್ಟಿದ್ದಾರೆ. ದುರಂತಕ್ಕೆ ಟ್ರಕ್ ಚಾಲಕ ಭುವನ್ ಅವರ ಬೇಜವಾಬ್ದಾರಿ ತನವೇ ಕಾರಣ. ಅಲ್ಲದೆ, ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ, ಹೀಗಾಗಿ ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರೂ ಸಹ ಪತ್ರ ಬರೆಯಲಿದ್ದಾರೆ. ಅಲ್ಲದೆ, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆ ಪತ್ರದಲ್ಲಿ ಒತ್ತಾಯಿಸಲಾಗುತ್ತೆ ಎಂದು ತಿಳಿದುಬಂದಿದೆ. ಈಗಾಗಲೇ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆದಂತಹ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿದ್ದಾರೆ ಈ ವೇಳೆ ಸ್ಥಳೀಯರು ಭಟ್ಟವರು ಎಲ್ಲರೂ ಕೂಡ ಬಡವರಾಗಿದ್ದು…
ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ಮೊದಲ ದಿನವೇ ದುರಂತವೊಂದು ಸಂಭವಿಸಿದೆ. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಅವಘಡ ನಡೆದು ಓರ್ವ ಮೃತಪಟ್ಟಿದ್ದಾನೆ. ತುಮಕೂರು ಮೂಲದ ಪರಶುರಾಮ (32) ಮೃತ ವ್ಯಕ್ತಿ. ಇಂದಿನಿಂದ ನಡೆಯುವ ಕೃಷಿ ಮೇಳದ ಪ್ರದರ್ಶನಕ್ಕೆ ಟ್ರ್ಯಾಕ್ಟರ್ ತಂದಿದ್ದರು. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ನಿಯಂತ್ರಣ ತಪ್ಪಿ ಪರಶುರಾಮನ ಮೈಮೇಲೆ ಬಿದ್ದು, ಸ್ಥಳದಲ್ಲೇ ಅಸುನೀಗಿದ್ದಾನೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.











