Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪಸಿದ್ದು, ನುಗ್ಗೆಕಾಯಿ ಕೆಜಿಗೆ 500-600 ರೂ.ಗೆ ಮಾರಾಟವಾಗುತ್ತಿದೆ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಯಾವ ತರಕಾರಿ ಬೆಲೆ ಎಷ್ಟು ಏರಿಕೆ ಹಸಿರು ಬಟಾಣಿ ಪ್ರತಿ ಕೆಜಿಗೆ 250 ರೂ. ಬೀನ್ಸ್ 60-80 ರೂ. ತೊಂಡೆಕಾಯಿ 80-100 ರೂ. ತೊಗರಿಕಾಯಿ 60-70 ರೂ. ಕ್ಯಾರೆಟ್ 60-80 ರೂ. ಬೀಟ್ರೂಟ್ 60-70 ರೂ. ಕ್ಯಾಪ್ಸಿಕಮ್ 50-60 ರೂ.…
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡುಯೂರಪ್ಪನವರಿಗೆ ಹೊಸ ಸಂಕಷ್ಟ ಎದುರಾಗಿದೆ. ಡಿಸೆಂಬರ್ 2ರಂದು ಅಂದರೆ ಇಂದು ಖುದ್ದು ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್ನ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಎಸ್ಪಿಪಿ ಅಶೋಕ್ ನಾಯ್ಕ್ ಅವರು ಅರ್ಜಿ ಸಲ್ಲಿಸಿದ್ದರು. ಅದರಂತೆ ಬಿಎಸ್ ಯಡಿಯೂರಪ್ಪನವರ ಜೊತೆಗೆ ಇತರೆ ಮೂವರು ಆರೋಪಿಗಳಾದ ವೈ.ಎಂ. ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ. ಪೋಕ್ಸೋ ಕೇಸ್ ಹಿನ್ನೆಲೆ ಸಮನ್ಸ್ ರದ್ದು ಕೋರಿದ್ದ ಬಿ.ಎಸ್ ಯಡಿಯೂರಪ್ಪ ಅರ್ಜಿ ಹೈಕೋರ್ಟ್ ನಿಂದ ವಜಾ ಹಿನ್ನೆಲೆ ಇಂದು ಕೋರ್ಟ್ ಗೆ ಯಡಿಯೂರಪ್ಪ ಖುದ್ದು ಹಾಜರಾಗಬೇಕಾಗಿದೆ. 1ನೇ ತ್ವರಿತ ಕೋರ್ಟ್ ಸಮನ್ಸ್ ಜಾರಿಗೋಳಿಸಿತ್ತು. ವೈ.ಎಂ ಅರುಣ್, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿಗೂ ಸಮನ್ಸ್ ನೀಡಲಾಗಿತ್ತು. ಹಾಗಾಗಿ ಇಂದು ಯಡಿಯೂರಪ್ಪ ಸೇರಿ ಇವರೆಲ್ಲರೂ ಕೋರ್ಟ್ ಗೆ ಹಾಜರಾಗಬೇಕು. ಏನಿದು ಪ್ರಕರಣ? 2024ರಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ…
ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಪ್ರಸಿದ್ಧ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಹಿನ್ನೆಲೆಯಲ್ಲಿ, ಸಂಪೂರ್ಣ ಹಿಂದೂ ಪೀಠಕ್ಕೆ ಆಗ್ರಹಿಸಿ ದತ್ತ ಜಯಂತಿ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರು ಜಿಲ್ಲೆಯಾದಂತ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಜನತಾ ಈಗಾಗಲೇ 28 ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಮಾಡಲಾಗಿದೆ ಜಿಲ್ಲೆಗೆ ಪ್ರವೇಶಿಸುವ ಪ್ರತಿಯೊಂದು ವಾಹನಗಳ ತಪಾಸಣೆ ನಡೆಯಲಿದೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬದ್ಧತೆ ನಿಯೋಜನೆಗೊಳಿಸಲಾಗಿದೆ. ಕೊಟ್ಟಿಗೆಹಾರ ಬಳಿ ಸುಮಾರು 20ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜಿಸಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಹಾರದಲ್ಲಿ ಭದ್ರತೆ ನಿಯೋಜಿಸಲಾಗಿದೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿ ನಡೆಯುತ್ತಿರುವಾಗಲೇ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದ ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಿದ್ದರು.ಇದೀಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಮನೆಗೆ ಬ್ರೇಕ್ ಫಾಸ್ಟ್ ಗೆ ಇಂದು ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಡಿಸಿಎಂ ಹಾಗೂ ಸಿಎಂ ಇಬ್ಬರು ಒಟ್ಟಿಗೆ ಉಪಹಾರ ಮಾಡಿ ತಮ್ಮ ಮಧ್ಯ ಭಿನ್ನಾಭಿಪ್ರಾಯ ಇಲ್ಲ. ತಾವು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ತಿಳಿಸಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದರು. ಅದರ ಬೆನ್ನಲ್ಲೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಮನೆಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ…
ಬೆಂಗಳೂರು : ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದಾಗ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೋಯುವಾಗ ಸಾವನ್ನಪ್ಪಿದ್ದರೆ. ಇಂದು ಕೆ.ಆರ್ ಪೇಟೆಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಜೆಸಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಕನಕಪುರದ ಸೋಮನಹಳ್ಳಿ ತೋಟದ ಮನೆಯ ಬಳಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಬೆಂಗಳೂರಿನ ಚಾಮರಾಜಪೇಟೆ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಆರ್.ವಿ. ದೇವರಾಜ್ ಸೋಮವಾರ ಕುಟುಂಬ ಸದಸ್ಯರೊಂದಿಗೆ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 3ರಂದು ದೇವರಾಜ್ ಅವರ 68ನೇ ಹುಟ್ಟುಹಬ್ಬ ಇತ್ತು. ನಾಳೆಯೇ ಅಂತ್ಯಕ್ರಿಯೆ ನಡೆಯಲಿದೆ.
ಗದಗ : ಇತ್ತೀಚಿಗೆ ಗೋವುಗಳ ಮೇಲೆ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದು ಈ ಹಿಂದೆ ಹಲವು ಘಟನೆಗಳು ನಡೆದಿದ್ದವು. ಇದೀಗ ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವು ಸ್ಥಳೀಯರಲ್ಲಿ ತೀವ್ರ ಗೊಂದಲ ಮೂಡಿಸಿದ್ದು, ಒಂದೆಡೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಚಿರತೆ ದಾಳಿಯಿಂದ ಕರು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಈ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಚಿರತೆಯು ಕೊಂದ ನಂತರ…
ನವದೆಹಲಿ : ದೇಶದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಕುರಿತು ಏಕೀಕೃತ ತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ. ಜತೆಗೆ, ಸಿಬಿಐ ತನಿಖೆಗೆ ಸಮ್ಮತಿ ನೀಡಬೇಕೆಂದು ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಾದ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೂ ನಿರ್ದೇಶನ ನೀಡಿದೆ. ಡಿಜಿಟಲ್ ಅರೆಸ್ಟ್, ಹೂಡಿಕೆ ಹಗರಣ ಮತ್ತು ಪಾರ್ಟ್ ಟೈಂ ಜಾಬ್ ಹೀಗೆ ಆನ್‌ಲೈನ್ ಮೂಲಕ ಮೂರು ರೀತಿ ಜನರನ್ನು ವಂಚಿಸಿ ಕೋಟ್ಯಂತರ ರುಪಾಯಿ ಲೂಟಿ ಮಾಡಲಾಗುತ್ತಿದೆ. ಇವುಗಳಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಸಿಬಿಐ ಆದ್ಯತೆ ಮೇಲೆ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ಸಿಬಿಐ ಮೊದಲಿಗೆ ಡಿಜಿಟಲ್ ಅರೆಸ್ಟ್ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಬೇಕು. ನಂತರ ಉಳಿದ 2 ವಿಷಯಗಳ ಬಗ್ಗೆ ತನಿಖೆ ನಡೆಸಬೇಕು. ಈ ಕುರಿತ ತನಿಖೆಗೆ ಅಗತ್ಯಬಿದ್ದರೆ ಇಂಟರ್‌ಪೋಲ್ ನೆರವನ್ನೂ ಪಡೆಯಬೇಕು ಎಂದು ಸೂಚಿಸಿತು. ಪ್ರಕರಣ ಏನು? ಹರ್ಯಾಣದ ಹಿರಿಯ ದಂಪತಿ ಸೈಬರ್ ಕ್ರಿಮಿನಲ್‌ಗಳಿಂದಾಗಿ ಜೀವಮಾನವಿಡೀ ದುಡಿದ ಹಣ ಕಳೆದುಕೊಂಡ ಪ್ರಕರಣ ಪ್ರಕರಂಣದ ವಿಚಾರಣೆ…
ಬೆಂಗಳೂರು : ರಾಜ್ಯ ಇಂಧನ ಇಲಾಖೆಯಲ್ಲಿ ಟ್ರಾನ್ಸ್‌ಫಾರ್ಮರ್ ಹಂಚಿಕೆ ವೇಳೆ ಸುಮಾರು 80 ರಿಂದ 90 ಕೋಟಿ ರು. ಮೊತ್ತದ ಅಕ್ರಮ ನಡೆಸಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ. ಹೌದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯಲ್ಲಿ ಈ ಹಗರಣ ನಡೆದಿದ್ದು, ಟ್ರಾನ್ಸ್‌ಫಾರ್ಮರ್ ವಿತರಣೆಯಲ್ಲಿ ಕೆಲ ಹೆಸ್ಕಾಂ ಅಧಿಕಾರಿಗಳು ಭಾರೀ ಕೈ ಚಳಕ ತೋರಿಸಿದ್ದಾರೆ. ನಗರ ಭಾಗದ ಲೆಕ್ಕ ಕೇಳಿದರೆ ಗ್ರಾಮೀಣ ಭಾಗದ ಕಡೆಗೆ, ಕೃಷಿಕರಿಗೆ ವಿತರಿಸಿದ ಟ್ರಾನ್ಸ್‌ಫಾರ್ಮರ್‌ಗಳ ವಿವರಣೆ ಕೇಳಿದರೆ ನಗರದ ಲೆಕ್ಕ ಕೊಟ್ಟು ಇಲಾಖೆಗೆ ಅಧಿಕಾರಿಗಳು ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. 9ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳ ಜತೆ ಹೆಸ್ಕಾಂನ ದಾಸ್ತಾನು ವಿಭಾಗದ ಮೇಲ್ವಿಚಾರಕ ಸೇರಿ ಹಿರಿಯ ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿತ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿಐಡಿ ತನಿಖೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಟ್ರಾನ್ಸ್‌ಫಾರ್ಮರ್ ಹಗರಣದ ಕುರಿತು…
ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್ವಿ ದೇವರಾಜ್ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಡಿಸಿಎಂ ಡಿಕೆಶಿ ಸಂತಾಪ ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿ ನಡೆಯುತ್ತಿರುವಾಗಲೇ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದ ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಿದ್ದರು.ಇದೀಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಮನೆಗೆ ಬ್ರೇಕ್ ಫಾಸ್ಟ್ ಗೆ ಇಂದು ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಡಿಸಿಎಂ ಹಾಗೂ ಸಿಎಂ ಇಬ್ಬರು ಒಟ್ಟಿಗೆ ಉಪಹಾರ ಮಾಡಿ ತಮ್ಮ ಮಧ್ಯ ಭಿನ್ನಾಭಿಪ್ರಾಯ ಇಲ್ಲ. ತಾವು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ತಿಳಿಸಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದರು. ಅದರ ಬೆನ್ನಲ್ಲೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಮನೆಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನಗೆ ಬರುವುದಾಗಿ ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ…












