Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು ಸೆ13: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ. ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ. ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ…
ಹಾಸನ : ನಿನ್ನೆ ಹಾಸನದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಗಣೇಶ ಮೆರವಣಿಗೆಯ ವೇಳೆ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಒಂದು ಏಕಾಏಕಿ ನುಗ್ಗಿದೆ ಈ ಒಂದು ಘಟನೆ ಹಿನ್ನೆಲೆ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದರಲ್ಲೂ ಮೃತಪಟ್ಟರಲ್ಲಿ ಆರು ಜನ ವಿದ್ಯಾರ್ಥಿಗಳೇ ಆಗಿದ್ದು, ಇನ್ನು ಉಳಿದ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ 17 ಜನರಿಗೆ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟರ್ ಹರಿದ ಘಟನೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿದ್ದಾರೆ. ಶಾಂತಿಗ್ರಾಮದಿಂದ ದುರಂತ ನಡೆದ ಸ್ಥಳಕ್ಕೆ ಕೃಷ್ಣಭರೇಗೌಡ ಭೇಟಿ ನೀಡಿದ್ದು ದುರಂತ ನಡೆದ ಸ್ಥಳವನ್ನು ಸಚಿವರು ಪರಿಶೀಲನೆ ಮಾಡಿದರು. ಪರಿಶೀಲನೆಯ ಬಳಿಕ ಸಚಿವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಹಾಸನ : ಗಣಪತಿ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ ರಾಜೇಶ್ ಸಾವನ ಪ್ರವಹಿನಲೆಯಲ್ಲಿ ಮೊಸಳೆ ಹೊಸಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗೆ ಪ್ರಯ ಘೋಷಣೆ ಮಾಡಲಾಗಿದೆ. ತಡರಾತ್ರಿ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಒಂದು ಅಪಘಾತ ಸಂಭವಿಸಿತ್ತು. ಬಿಎ ವಿದ್ಯಾರ್ಥಿ ವಿ ರಾಜೇಶ್ ಗೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನಿನ್ನೆ ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಡ್ಯಾನ್ಸ್ ಮಾಡುವಾಗ ಏಕಾಏಕಿ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಒಂದು ನುಗ್ಗಿದೆ. ಈ ಒಂದು ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಜೇಶ್ ಸಾವಿಗೆ ಉಪನ್ಯಾಸಕರು ಹಾಗೂ ಸಹಪಾಠಿಗಳು ಇದೀಗ ಕಂಪನಿ ಮಡಿದಿದ್ದಾರೆ.
ಹಾಸನ : ಗಣೇಶ ಮೆರವಣಿಗೆ ವೇಳೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. 17ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಇನ್ನು ಮೃತರ ಪೈಕಿ ಬಹುತೇಕರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಾವನ್ನಪ್ಪಿದವರ ವಿವರ ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ…
ಹಾಸನ : ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಭೀಕರ ಬಹಾರ ಸಂಭವಿಸಿದ್ದು ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದು, ಇದೊಂದು ಹೃದಯವಿದ್ರಾವಕ ಘಟನೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರದಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ. ಪಿಎಂ ರಾಷ್ಟೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.
BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಆಟೋಗೆ ಲಾರಿ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ದುರ್ಮರಣ!
ಬೆಂಗಳೂರು : ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಸುಮ್ಮನಹಳ್ಳಿಯ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ. ಆಟೋ, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆಟೋದಲ್ಲಿದ್ದ ಡಿಯೇಸು ಹಾಗೂ ಜನಿಫರ್ ಅವರು ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೂ ಕಾರಿನಲ್ಲಿ ಇದ್ದವರಿಗೆ ಗಂಭೀರವಾದ ಗಾಯಗಳಾಗಿವೆ. ಕೊಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್ ಡಿಕ್ಕಿ ಆದ ರಭಸಕ್ಕೆ ಆಟೋ ಎರಡು ತುಂಡುಗಳಾಗಿದ್ದು, ಲಾರಿ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಹಾಸನ : ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ನೆನ್ನೆ ರಾತ್ರಿ ಘೋರ ದುರಂತ ಒಂದು ಸಂಭವಿಸಿದ್ದು ಗಣೇಶ ಮೆರವಣಿಗೆ ವೇಳೆ ಏಕಾಏಕಿ ಕ್ಯಾಂಟರ್ ನುಗ್ಗಿ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಕ್ಯಾಂಟರ್ ಚಾಲಕ ಭುವನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಗೊರೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇನ್ನ ಈ ಒಂದು ಘಟನೆಯಲ್ಲಿ ಕ್ಯಾಂಟರ್ ಚಾಲಕ ಭುವನ್ಗು ಸಹ ಗಂಭೀರವಾದ ಗಾಯಗಳಾಗಿವೆ. ಈ ಹಿನ್ನೆಲೆ ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಾಲಕ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬುದು ಗೊತ್ತಿಲ್ಲ. ಆ ಬಗ್ಗೆ ಪೊಲೀಸರು ಗೌಪ್ಯತೆ ಕಾಪಾಡಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದೆ. ಆದರೆ ಪೊಲೀಸರೇ ಇದೀಗ ಡ್ರಗ್ ಪೆಡ್ಲರ್ಸ್ ಗಳ ಜೊತೆಗೆ ನೇರವಾಗಿ ನಂಟು ಹೊಂದಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಎರಡು ಠಾಣೆಗಳ ಒಟ್ಟು 11 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಹೌದು ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದ್ದು ಅದರ ಪೊಲೀಸರು ಡ್ರಗ್ಸ್ ಪೆಡ್ಲರುಗಳ ಜೊತೆಗೆ ನೇರವಾಗಿ ನೆಂಟರು ಹೊಂದಿದ್ದಾರೆ ಜೊತೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಾರ್ಟಿ ಸಹ ಮಾಡಿದ್ದಾರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡಲು ಪೊಲೀಸರೇ ಶ್ರೀರಕ್ಷೆ ಆಗಿದ್ದಾರೆ. ತಿಂಗಳಿಗೆ 1.5 ರಿಂದ 2 ಲಕ್ಷದವರೆಗೆ ಮಾಮೂಲಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಚಾಮರಾಜಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ ಮಂಜಣ್ಣ ಹೆಡ್ ಕಾನ್ಸೆಪ್ಟ್ಗಳಾದ ರಮೇಶ್ ಶಿವರಾಜ್ ಪಿಸಿ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ, ಆನಂದ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ಜಯನಗರ ಠಾಣೆಯ ಎ ಎಸ್ ಐ ಕುಮಾರ್…
ಹಾಸನ : ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಬೀಕರ ಅಪಘಾತ ಸಂಬಂಧಪಟ್ಟಂತೆ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಜನರು ಸಾವನಪ್ಪಿದ್ದು, ಇದೇ ವೇಳೆ ಬಿಇ ವಿದ್ಯಾರ್ಥಿ ಮಿಥುನ್ (23) ಎನ್ನುವ ಯುವಕ ಸಹ ದುರಂತವಾಗಿ ಸಾವು ಕಂಡಿದ್ದಾನೆ. ಹುಟ್ಟು ಹಬ್ಬದ ದಿನದಂದೆ ಬಿಇ ವಿದ್ಯಾರ್ಥಿ ಮಿಥುನ್ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಗವಿಗಂಗಾಪುರದ ನಿವಾಸಿಯಾಗಿರುವ ಮಿಥುನ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ. ಮಿಥುನ ನಿನ್ನೆ ನಡೆದ ಅಪಘಾತದಲ್ಲಿ ಸಾವನಪ್ಪಿದ್ದಾನೆ. ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ಮತ್ತು ದುರಂತವಾಗಿ ಸಾವನ್ನಪ್ಪಿದ್ದಾನೆ. ಮೊಸಳೆಹಳ್ಳಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈತ ಬಿಇ ಓದುತ್ತಿದ್ದ ಹಾಸ್ಟೆಲ್ ನಲ್ಲಿ ಸ್ನೇಹಿತರ ಜೊತೆಗೆ ಮಿಥುನ ಹುಟ್ಟುಹಬ್ಬ ಆಚರಿಸಿದ್ದ. ಹುಟ್ಟುಹಬ್ಬ ಮನೆಯಲ್ಲಿ ನಿನ್ನೆ ಗಣೇಶ ವಿಸರ್ಜನೆಯಲ್ಲಿ ಭಾಗಿಯಾಗಿದ್ದಾನೆ. ಆದರೆ ಟ್ರಕ್ ಹರಿದು ವಿದ್ಯಾರ್ಥಿ ಮಿಥುನ್ ಹುಟ್ಟುಹಬ್ಬದ ದಿನದಂದೇ ದುರಂತವಾಗಿ ಸಾವನ್ನಪ್ಪಿದ್ದಾನೆ.
ಬೆಂಗಳೂರು : ರಾಜ್ಯದ ಹಲವೆಡೆ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಬಳಿಕ ಘಟ್ಟಪ್ರದೇಶಗಳಲ್ಲಿ ಸೆ.16ರಿಂದ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಸಿದೆ. ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬೀದರ್, ವಿಜಯಪುರ, ಬೀದರ್ ಸೇರಿ ರಾಜ್ಯದ ವಿವಿಧ ಸ್ಥಳಗಳಲ್ಲಿ ಶುಕ್ರವಾರ ಮಿಂಚು, ಬಿರುಗಾಳಿ ಸಹಿತ ವರ್ಷಧಾರೆಯಾಯಿತು. ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 3 ದಿನ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರಿನಲ್ಲಿ ಸೆ.13ರಂದು ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಳಗಾವಿಯಲ್ಲಿ ಸೆ.14ರಿಂದ 2 ದಿನ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರದಲ್ಲಿ ಸೆ.16, 17ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ವೇಳೆ ದೇಶದಲ್ಲಿ ಈ ಬಾರಿಯ ಮಾನ್ಸೂನ್ ಸೆ.15 ರ ಬಳಿಕ ಕ್ಷೀಣಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.













