Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ ಸೇರಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮತ್ತೆ ಒಂದು ಸಲ ಕುಳಿತು ಮಾತನಾಡುತ್ತಾರೆ ಎಂದರು. ಜನೆವರಿ, ಫೆಬ್ರವರಿ ಬದಲಾವಣೆ ಆಗಬಹುದು. ಎಲ್ಲರು ಕುಳಿತು ಮಾತನಾಡುತ್ತಾರೆ. ಆದರೆ ಈಗ ತೊಂದರೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿಎಂ ಡಿಸಿಎಂ ಪ್ರೆಸ್ ಮೀಟ್ ಮಾಡಿದ್ದಾರೆ. ಅಂದ್ರೆ ತೊಂದರೆ ಇಲ್ಲ ಎಂದರು. ಆದರೆ ಈ ಸಿಎಂ ಖರ್ಚಿ ಫೈಟ್ ನಡುವೆ ಶಾಸಕ ಅಜಯ್ ಸಿಂಗ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.…
ಬೆಂಗಳೂರು : ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಇ – ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಹಾಗೂ 2023 – 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲಾವಾರು ವ್ಯಾಪ್ತಿಯ ಗ್ರಾ.ಪಂ.ಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳೊಂದಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. ಕಾಂಗ್ರೆಸ್ ಪಕ್ಷ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ಅವರು ದೇಶಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಿಮ್ಮ ಮನೆ ಬಾಗಿಲಿಗೆ ಇ – ಸ್ವತ್ತು ಮೂಲಕ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ರೂಪಿಸಿದೆ. ಆಸ್ತಿಗಳ ದಾಖಲೆಗಾಗಿ ‘ಇ – ಸ್ವತ್ತು’ ಯೋಜನೆಯಡಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ – ಖಾತಾ ವಿತರಿಸಲಾಗುತ್ತಿದೆ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಆನ್‌ಲೈನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಇ – ಖಾತಾಕ್ಕಾಗಿ ಅರ್ಜಿ ಸಲ್ಲಿಸುವ…
ಬೆಂಗಳೂರು : ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು, ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯವು 5 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ತಕ್ಷಣ ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಅವರು ಸೂಚನೆ ನೀಡಿದ್ದು, ಸಾಗಣೆ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ”ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗಲು ರಾಜ್ಯ ಸರಕಾರ ಸಾಧ್ಯವಿರುವ ಎಲ್ಲಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರಕಾರ ನಿಗದಿಪಡಿಸಿರುವ 2400 ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕು ಎಂದು ಸೂಚನೆ ನೀಡಿದರು. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಕುಸಿತದಿಂದ ತೊಂದರೆಗೆ ಸಿಲುಕಿರುವ ರೈತರಿಗೆ ನೆರವಾಗುವ ದೃಷ್ಟಿಯಿಂದ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಡಿಸ್ಟಿಲರಿಗಳು 7…
ಬೆಂಗಳೂರು : ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇಂದಿರಾ ಕಿಟ್‌ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ? ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಅಂದಾಜಿಸಲಾಗಿದೆ. ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗ ಚಾಲನೆಯಿಂದ ರಸ್ತೆ ಮಧ್ಯೆಯೇ ಟಿಟಿ ವಾಹನ ಪಲ್ಟಿಯಾಗಿದೆ. ರಾಯಸಂದ್ರ ಬಳಿ ತಿರುವಿನಲ್ಲಿ ಮೂರು ಬಾರಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ ಟಿಟಿ ವಾಹನಗಳ ಚಾಲಕರ ಪೈಪೋಟಿಯಿಂದ ಅಪಘಾತ ಸಂಭವಿಸಿದೆ ಅದೃಷ್ಟ ವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ರಾಜ್ಯದಲ್ಲಿ ಸಿಎಂ ಕುರ್ಚಿ ಜಟಾಪಟಿ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದು ಎಲ್ಲದಕ್ಕೂ ತೆರೆ ಎಳೆದರು. ಇದೀಗ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿದ್ದಾರೆ. ಕರ್ನಾಟಕದ ಕುರ್ಚಿ ಕಿತ್ತಾಟಕ್ಕೆ ಈಗ ಬ್ರೇಕ್ ಬಿದ್ದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬದಲಾವಣೆ ವಿಷಯ ಪಕ್ಷದ ಮುಂದೆಯೇ ಇಲ್ಲ. ಅಂತೆ ಕಂತೆ ಮಾತುಗಳು ಈಗ ಯಾಕೆ? ಯಾವುದೇ ಗೊಂದಲ ಇರಬಾರದು ಎಂದು ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ ಎಂದರು. ನಮ್ಮ ಸರ್ಕಾರ ಸ್ಥಿರವಾಗಿದ್ದು ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಬಿಜೆಪಿಯವರು ವಿಧಾನಸೌಧದಲ್ಲಿ ಕಾಂಗ್ರೆಸ್‌ನವರು ಶಾಸಕರ ಖರೀದಿ ಕೇಂದ್ರ ಮಾಡಿದ್ದಾರೆ ಎಂದು ಅರೋಪ ಮಾಡುತ್ತಾರೆ. ಅವರು ಹೇಗೆ ಅಧಿಕಾರಕ್ಕೆ ಬಂದರು ಎಂಬುದನ್ನು ಹೇಳಲಿ. ಅವರೇನು ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದಾರಾ? ಕನ್ನೇರಿ ಶ್ರೀಗಳು ಏನ್ ಹೇಳಿಕೆ ನೀಡುತ್ತಾರೆ ಎನ್ನುವುದು ಗೊತ್ತಿಲ್ಲ.…
ಬೆಂಗಳೂರು : ನಗರದ ಟ್ರಾಫಿಕ್ ಸಮಸ್ಯೆ ಮತ್ತೋಮ್ಮೆ ಸುದ್ದಿಯಾಗಿದೆ. ಇಲ್ಲಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಬೆಂಗಳೂರು ಟ್ರಾಫಿಕ್ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬರುವಾಗ ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದ ರೈ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬೆಂಗಳೂರಿನ ಸಂಚಾರ ನಿರ್ವಹಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳೇ ಕ್ಷಮಿಸಿ, ನೀವು ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆಯನ್ನು ಹೊಂದಿದ್ದೀರಿ” ಎಂದು ಪೋಸ್ಟ್ ಮಾಡಿದ್ದಾರೆ. ಪೊಲೀಸರು ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಸ್ಕ್ರೀನ್‌ಶಾಟ್ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ.…
ಉಡುಪಿ : ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವಾ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದರ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿರುವುದು ನನಗೆ ನನಗೆ ತುಂಬಾ ಸಂತೋಷ ತಂದಿದೆ. ಈ ಸಂದರ್ಭದಲ್ಲಿ ನನಗೂ ಭಾಗವಹಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೆ. ಕಾರಣಾಂತರದಿಂದ ನನಗೆ ಅವಕಾಶ ತಪ್ಪಿ ಹೋಗಿದೆ. ಇದನ್ನು ಯಾರು ತಪ್ಪಿಸಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ನಾಯಕರು ಪ್ರಮೋದ್ ಮಧ್ವರಾಜ್ ಅವರ ಜೊತೆಯಾಗಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಎಲ್ಲ ಊಹಾಪೋಹಗಳಿಗೂ ಮಾಜಿ ಸಚಿವರು ಉತ್ತರಿಸಿದ್ದಾರೆ.ತಮ್ಮ ಹಿಂದಿನ ಹೇಳಿಕೆಗಳಲ್ಲಿ ಅಸಮಾಧಾನದ ಭಾವನೆ ಇರಲಿಲ್ಲ. ನನ್ನ ಸೇವೆಯನ್ನು ಪ್ರಧಾನಿ ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ಎಂದು ಅವರು ಪುನರುಚ್ಛರಿಸಿದ್ದಾರೆ. ಮಠದವರಾಗಲಿ, ಜಿಲ್ಲಾ ಬಿಜೆಪಿ ನಾಯಕರಾಗಲಿ ಯಾರೂ ಕೂಡ ನನ್ನ ಕಡೆಗಣಿಸಿದ್ದಾರೆ ಎನಿಸುತ್ತಿಲ್ಲ. ಅದನ್ನು ಹುಡುಕುವ ಪ್ರಯತ್ನವನ್ನೂ ನಾನು ಮಾಡಿಲ್ಲ ಎಂದಿದ್ದಾರೆ. ಇದನ್ನು ಯಾರು…
ಬೆಂಗಳೂರು : ಬೆಂಗಳೂರಲ್ಲಿ ಅತೀ ದೊಡ್ಡ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಎಲ್ಲ 9 ಆರೋಪಿಗಳನ್ನು ಪೊಲೀಸರು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ.ಇಂದು ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆರೋಪಿಗಳನ್ನು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆಗೆ ಎಂದು ಮತ್ತೆ ಕಸ್ಟಡಿಗೆ ಪಡೆದುಕ್ಕೊಂಡಿದ್ದಾರೆ. 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ತನಿಖೆ, ಮಹಜರು, ವಿಚಾರಣೆ ಹಿನ್ನೆಲೆಯಲ್ಲಿ ಮತ್ತಷ್ಟು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಅನ್ನ ಭಾಗ್ಯ ಯೋಜನೆ ಅಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ಪ್ರತಿ ತಿಂಗಳು 10 ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಹೆಚ್ಚುರಿಯಾಗಿ ನೀಡುತ್ತಿರುವ 5 ಕೆಜಿ ಅಕ್ಕಿ ಬದಲು ತೊಗರಿಬೇಳೆ ಸೂರ್ಯಕಾಂತಿ ಎಣ್ಣೆ ಸಕ್ಕರೆ, ಉಪ್ಪು ವಿತರಿಸಲು ನಿರ್ಧರಿಸಲಾಯಿತು. ಪ್ರತಿ ತಿಂಗಳು 1,25,08,262 ಇಂದಿರಾ ಫುಡ್ ಕಿಟ್ ಅಗತ್ಯವಿದೆ. ಪ್ರತಿ ತಿಂಗಳು 466 ಕೋಟಿ ರೂಪಾಯಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಪ್ರತಿ ತಿಂಗಳು 18,628 ಮೆಟ್ರಿಕ್ ಟೆನ್ ತೊಗರಿ ಬೆಳೆ,12,419 ಮೆಟ್ರಿಕ್ ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು…













