Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಡಲಾಗಿದೆ. ಈ ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಮಾತನಾಡಿ ಬಹುಶಹ ಮುಂದಿನ ವಾರ ಸೀಟು ಹಂಚಿಕೆ ಕುರಿತು ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಮನೆಗೆ ಬಂದಾಗ ಪ್ರಜ್ಚಲ್ ಅವರೇ ಸ್ವಾಗತ ಮಾಡಿದರು. ಹಿಂದೆ ನಾವು ಹಾಗು ಬಿಜೆಪಿ ಹೋರಾಟ ಮಾಡಿರಬಹುದು. ಆದರೆ ಈಗ ಒಂದಾಗಿ ಹೋಗುತ್ತೇವೆ. ಬಹುಶಃ ಮುಂದಿನ ವಾರದಲ್ಲಿ ಸೀಟು ಹಂಚಿಕೆ ತೀರ್ಮಾನ ಆಗಬಹುದು. ಕುಮಾರಸ್ವಾಮಿ ಅವರು ಬಿಜೆಪಿಯ ಕೆಲ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಸೀಟು ಹಂಚಿಕೆ ವಿಚಾರದಲ್ಲಿ ಕುಮಾರಸ್ವಾಮಿ ತೀರ್ಮಾನದ ಬಗ್ಗೆ ನಾನು ಮಧ್ಯಪ್ರವೇಶ ಮಾಡಲ್ಲ. ನಮಗೆ ಮಂಡ್ಯ ಕೋಲಾರ, ತುಮಕೂರು ಎಂದು ಊಹಾಪೋಹಗಳಿವೆ. ಹಾಸನದಲ್ಲಿ ಹಾಲಿ ಸಂಸದರು ನಮ್ಮವರೇ ಇದ್ದಾರೆ. ಅನೇಕರು ದೇವೇಗೌಡರು ಇಲ್ಲಿಂದ…

Read More

ಬೆಂಗಳೂರು : ಇನ್ನೇನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಕರ್ನಾಟಕದಲ್ಲಿ ಯಾವ ಕ್ಷೇತ್ರಗಳಿಗೆ ಯಾವ ಅಭ್ಯರ್ಥಿ ಕಣಕ್ಕೆ ಇಳಿಸಬೇಕೆಂಬುದು ಇನ್ನೇನು ಅಂತಿಮವಾಗಲಿದೆ. ಈ ಒಂದು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಗೆ ಯಾವ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸಬೇಕೆಂಬ ಎಂಬುದರ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮಾತನಾಡಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕೆಂಬ ಒತ್ತಾಯವಿದೆ. ಕುಮಾರಸ್ವಾಮಿ ಅವರು ಒಪ್ಪಿದರೆ ನಿಖಿಲ್ ಅವರು ಮಂಡ್ಯದಲ್ಲಿ ಸ್ಪರ್ಧಿಸುತ್ತಾರೆ.ನಿಖಿಲ್ ಸ್ಪರ್ಧೆ ಕುರಿತು ಎಚ್ ಡಿ ಕುಮಾರಸ್ವಾಮಿ ತೀರ್ಮಾನಿಸಬೇಕು ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಿಳಿಸಿದರು. ಎಚ್ ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುವ ವದಂತಿ ಕೇಳಿಬಂದಿದ್ದು ಈ ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮಾತನಾಡಿದ್ದು ಪ್ರಧಾನಿ ಮೋದಿಯವರು ಏನು ಹೇಳುತ್ತಾರೋ…

Read More

ಮೈಸೂರು : ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಕಾಂಗ್ರೆಸ್ ನಲ್ಲಿ ಗೊಂದಲ ನಿವಾರಣೆ ಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ನಡುವೆ ಜಟಾಪಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡುವುದಕ್ಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ತಿಳಿಬಂದಿದೆ. ಹೈಕಮಾಂಡ್ ಅವರ ಈ ಒಂದು ನಡೆಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಇಡೀ ಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.ಹೈಕಮಾಂಡ್ ಒಪ್ಪಿಗೆ ನೀಡಿದ ಕೂಡಲೇ ನಿಗಮ ಮಂಡಳಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ಪಟ್ಟಿ ವರಿಷ್ಠರಿಗೆ ಕಳುಹಿಸಿದ್ದೇವೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನು ಎಂಎಲ್ಸಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರ ಬಿಜೆಪಿಗೆ ಹೋಗುವುದಿಲ್ಲ ಎಂದು ಈಗಾಗಲೇ ಜಗದೀಶ್ ಶೆಟ್ಟರ್…

Read More

ಬೆಂಗಳೂರು : ಬಿಜೆಪಿ ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳಿಗೆ ತೆರಳಿರುವ ನಾಯಕರು ಹಾಗೂ ಮುಖಂಡರನ್ನು ಮತ್ತೆ ಪಕ್ಷಕ್ಕೆ ಕರೆತರುವ ವಿಚಾರವಾಗಿ ಹೈಕಮಾಂಡ್ ನಿರ್ಧರಿಸುತ್ತದೆ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಒಟ್ಟಾಗಿ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಸೇರಿ ಪಕ್ಷ ಬಿಟ್ಟವರನ್ನು ಮರಳಿ ಪಕ್ಷಕ್ಕೆ ಕರೆದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಶಾಸಕ ಅನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆ ತರುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಜಗದೀಶ್ ಶೆಟ್ಟರ್ ಜೊತೆ ಹೈಕಮಾಂಡ್ ನಾಯಕರು ಮಾತನಾಡುತ್ತಾರೆ. ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಕರೆತರುವ ಕೆಲಸವನ್ನು ಮಾಡುತ್ತೇವೆ. ಎಲ್ಲರನ್ನೂ ಕರೆತಂದು ಒಟ್ಟಾಗಿ ಹೋಗುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು

Read More

ಬೆಂಗಳೂರು : ಬಿಗ್ ಬಾಸ್ ಸ್ಪರ್ಧೆ ಡ್ರೋಣ್ ಪ್ರತಾಪ್ ವಿರುದ್ಧ ಇದೀಗ ಮತ್ತೊಂದು ವಂಚನೆ ಆರೋಪ ಕೇಳಿ ಬಂದಿದ್ದು ಮಹಾರಾಷ್ಟ್ರ ಮೂಲದ ವ್ಯಕ್ತಿ ಒಬ್ಬರಿಂದ ಸುಮಾರು 35 ಲಕ್ಷ 75,000 ಹಣ ಪಡೆದು ಕ್ವಾಲಿಟಿ ಹಾಗೂ ಸರಿಯಾಗಿ ಕೆಲಸ ನಿರ್ವಹಿಸಿದಂತಹ ಡ್ರೋನ್ ಗಳನ್ನು ನೀಡಿ ಮೋಸ ಮಾಡಿದ್ದಾರೆ ಎಂದು ಬಿಸಿನೆಸ್ ಪಾರ್ಟ್ನರ್ ಸಾರಂಗ್ ಮಾನ್ ಎನ್ನುವವರು ಇದೀಗ ಗಂಭೀರವಾದ ಆರೋಪ ಮಾಡಿದ್ದಾರೆ. ಬುಸಿನೆಸ್ ಪಾರ್ಟನರ್ ಸಾರಂಗ್ ಮಾನಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಲಕ್ಷ,ಲಕ್ಷ ಕೊಟ್ಟು ಡ್ರೋನ್ ತೆಗೆದುಕೊಂಡಿದ್ದು, ಕ್ವಾಲಿಟಿ ಇಲ್ಲದಿರುವದು ಎಂದು ಆರೋಪ ಮಾಡಲಾಗುತ್ತಿದೆ. ಎಂಟು ತಿಂಗಳ ಹಿಂದೆ ಪ್ರತಾಪ್ಗೆ 35, 75,000 ನೀಡಿದ್ದೆ ಎಂದು ಸಾರಂಗ ಮಾನ್ ಅವರು ಆರೋಪಿಸುತ್ತಿದ್ದಾರೆ. ಹಣ ನೀಡಿದ ನಂತರ ಒತ್ತಾಯ. ಮಾಡಿದ ಮೇಲೆ ಎರಡು ತಿಂಗಳ ಬಳಿಕ 4 ಡ್ರೋನ್ ಗಳನ್ನು ಪ್ರತಾಪ್ ನೀಡಿದ್ದ ಆ ನಾಲ್ಕು ಡ್ರೋನ್ಗಳು ಕೆಲಸ ಮಾಡುತ್ತಿಲ್ಲ ಬ್ಯಾಟರಿ ಕೂಡ ಸರಿ ಇಲ್ಲ ಎಂದು ಸಾರಂಗ ಮಾನ್…

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಒಳ ಜಗಳ ತಾರಕಕ್ಕೆ ಏರಿದ್ದು, ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಯ ಇತ್ತೀಚಿಗೆ ಹೇಳಿಕೆಗಳನ್ನು ನೀಡುತ್ತಿದ್ದರು. ಈ ಕುರಿತು ದಾವಣಗೆರೆ ಜಿಲ್ಲೆಯ 40 ಬಿಜೆಪಿ ಮುಖಂಡರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಒಳ ಜಗಳ ತಾರಕಕ್ಕೇರಿದೆ ಎಂದು ತಿಳಿದುಬಂದಿದ್ದು, ಸ್ವಪಕ್ಷದವರ ವಿರುದ್ಧವೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಎಂಪಿ ರೇಣುಕಾಚಾರ್ಯಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ರೇಣುಕಾಚಾರ್ಯಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಚಾರ್ಯ ವಿರುದ್ಧ 40 ಮುಖಂಡರು ದೂರು ಸಲ್ಲಿಸಿದ್ದರು. ಹರಿಹರ ಶಾಸಕ ಬಿಪಿ ಹರೀಶ್ ನೇತೃತ್ವದಲ್ಲಿ ಬಿಎಸ್ ಯಡಿಯೂರಪ್ಪಗೆ ದೂರು ಸಲ್ಲಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಸ್ವಪಕ್ಷದವರ ವಿರುದ್ಧ ಹೇಳಿಕೆ ನೀಡಿದಂತೆ ಇದೀಗ ಬಿಎಸ್ ಯಡಿಯೂರಪ್ಪ ಎಂಪಿ ರೇಣುಕಾಚಾರ್ಯಗೆ ತಾಕಿದು ಮಾಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ತುರಿಮಣೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೋರಿ ಬೆಲೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಗೋರಿಬೆಲೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಪತ್ನಿ ಭಾಗ್ಯಮ್ಮಗಳನ್ನು ಪತಿ ರಮೇಶ್ ಬರ್ಬರವಾಗಿ ತುರಿಮಣೆಯಿಂದ ಹತ್ಯೆ ಗೈದಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವೇಳೆ ಪೊಲೀಸ್ ಅಧಿಕಾರಿಗಳು ಮಳೆಯನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ರಕ್ತದ ಕಲೆಯನ್ನು ನೋಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಘಟನೆ ಕುರಿತಂತೆ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಇದೇ ಜನವರಿ 31ರಂದು ಹಿಂದುಳಿದ ಆಯೋಗದ ಅಧ್ಯಕ್ಷರಾಗಿರುವ ಜಯಪ್ರಕಾಶ್ ಹೆಗಡೆ  ನಿವೃತ್ತಿಯಾಗಲಿದ್ದು ಒಂದು ವಾರದೊಳಗೆ ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು. ಇದಕ್ಕೆ ಈಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ.. ಜಾತಿ ಗಣತಿ ವರದಿಗೆ ಬಿಜೆಪಿ ಶಾಸಕ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದು, ವರದಿ ಸಲ್ಲಿಕೆ ಮಾಡಬಾರದು ಎಂದು ಶಾಸಕ ಯತ್ನಾಳ್ ವಿರೋಧಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಬಸನಗೌಡ ಪಾಟೀಲ ವರದಿ ಸಲ್ಲಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಪ್ರಕಾಶ್ ಹೆಗಡೆಯವರ ವರದಿ ಅಪೂರ್ಣವಾದದ್ದು ವರದಿಯ ಮೂಲ ಪ್ರತಿ ಕಳುವಾಗಿದ್ದರೂ ಕೂಡ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ತರಾತುರಿಯಲ್ಲಿ ಹೊರಗಿನ ಸಲ್ಲಿಸಲು ಆಯೋಗ ಸಿದ್ದತೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ 70% ಭಾಗಗಳಲ್ಲಿ ಜಾತಿ ಗಣತಿ ವರದಿಗಾಗಿ ಸಮೀಕ್ಷೆಯೇ ನಡೆದಿಲ್ಲವೆಂದು ಹಲವಾರು ಜನಪ್ರತಿನಿಧಿಗಳು, ಸಾರ್ವಜನಿಕರು ಹೇಳಿದ್ದರೂ ಹಾಗು ಕಾಂಗ್ರೆಸ್ ಸರ್ಕಾರದ ಮಂತ್ರಿಗಳೇ ಈ ವರದಿಯನ್ನು ಅವೈಜ್ಞಾನಿಕವೆಂದು ಜರದಿದ್ದರೂ ಸಿದ್ದರಾಮಯ್ಯನವರಿಗೆ ಈ ತರಾತುರಿ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಕಾಂತರಾಜು…

Read More

ವಿಜಯಪುರ : ವಿಜಯಪುರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಯುವತಿಗೆ ಪ್ರೀತಿ ಹೆಸರು ಹೇಳಿ ಅವಳ ಜೊತೆ ದೈಹಿಕ ಸಂಪರ್ಕವನ್ನು ಕೂಡ ಬೆಳೆಸಿ ಇದೀಗ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕಾನ್ಸ್ಟೇಬಲ್ ಒಬ್ಬ ಯುವತಿಗೆ ವಂಚಿಸಿದ ಘಟನೆ ನಡೆದಿದ್ದು, ಯುವತಿಗೆ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಎನ್ನುವ ವ್ಯಕ್ತಿ ವಂಚಿಸಿದ್ದಾನೆ. ಕಾನ್ಸ್ಟೇಬಲ್ ವಿನಾಯಕ್ ಟಕ್ಕಳಕಿ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಮದುವೆ ಆಗುತ್ತೇನೆ ಎಂದು ಕಾನ್ಸ್ಟೇಬಲ್ ದಹಿಕ ಸಂಪರ್ಕ ಮಾಡಿದ್ದ ಆದರೆ ಇದೀಗ ಮದುವೆಗೆ ವಿನಾಯಕ ವಿರೋಧಿಸುತ್ತಿದ್ದಾನೆ. ಕಾನ್ಸ್ಟೇಬಲ್ ವಿನಾಯಕ ವಿರೋಧ ವ್ಯಕ್ತಪಡಿಸಿದ್ದ. ಎಂದು ಯುವತಿಯು ಆರೋಪಿಸಿದ್ದಾಳೆ. ವಿಜಯಪುರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ 20 ದಿನಗಳಿಂದ ಸೇವೆಗೆ ವಿನಾಯಕ್ ಬಂದಿಲ್ಲ ಎಂದು ತಿಳಿದು ಬಂದಿದೆ.

Read More

ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಎಂಸಿ ಮೇರಿ ಕೋಮ್ ತಮ್ಮ ಬಾಕ್ಸಿಂಗ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಬುಧವಾರ ರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಮೇರಿ ತಮ್ಮ ನಿವೃತ್ತಿ ಘೋಷಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಕ್ಕೆ ಇದೀಗ ಮೇರಿ ಕೊಮ್ ಅವರೇ ಸ್ಪಷ್ಟನೆ ನೀಡಿದ್ದು ನಾನು ಬಾಕ್ಸಿಂಗ್ ನಿವೃತ್ತಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಮೇರಿ ಕೋಮ್‌, ನನಗೆ ಇನ್ನೂ ಬಾಕ್ಸಿಂಗ್‌ ಆಡಲು ಆದೆ ಇದೆ ಆದರೆ ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ, ನಾನು ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎನ್ನುವ ತುದಿ ಹರಿಗಾಡಿತು ಇದೀಗ ಮೇರಿ ಕುಮಾರ್ ಸ್ಪಷ್ಟಣೆ ನೀಡಿದ್ದು ಯಾವುದೇ ರೀತಿಯಾಗಿ ನಿವೃತ್ತಿ ಹೊಂದಿಲ್ಲ ಎಂದು ತಿಳಿಸಿದ್ದಾರೆ. 6 ಬಾರಿ ವಿಶ್ವ ಚಾಂಪಿಯನ್: ಮೇರಿ ಕೋಮ್ 6 ಬಾರಿ ವಿಶ್ವ ಚಾಂಪಿಯನ್​ ಕಿರೀಟ ತಮ್ಮದಾಗಿಸಿಕೊಂಡಿದ್ದರು. ನಿಖರ ಪಂಚ್​ಗಳಿಗೆ ಹೆಸರುವಾಸಿಯಾಗಿದ್ದ ಕೋಮ್ ಈ ಸಾಧನೆ ಮಾಡಿದ ಏಕೈಕ ಮಹಿಳಾ ಬಾಕ್ಸರ್ ಎಂಬುದು ವಿಶೇಷ. ಇದಲ್ಲದೆ 5 ಬಾರಿ…

Read More